Romans · chapter 5 · verse 20
Romans 5:20 in Kannada
ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Hegaadaroo aparaadhavu hechchaagi kandubaruva haage nyaayapramaanavu praveshisitu; aadare paapavu hechchidalle krupeyu eshto hechchaagi prabalavaayitu.heege paapavu maranavannuntu maaduvadakkaagi prabhutvavannu nadisida haageye krupeyu neetiya moolaka namma kartanaada yesu kristanindaada nityajeeva vannuntu maaduvadakke prabhutva nadisuvadu.
Romans 5:20 in English
- King James Version (KJV)
- Moreover the law entered, that the offence might abound. But where sin abounded, grace did much more abound:
- World English Bible (WEB)
- The law came in that the trespass might abound; but where sin abounded, grace abounded more exceedingly,
- American Standard Version (ASV)
- And the law came in besides, that the trespass might abound; but where sin abounded, grace did abound more exceedingly:
- Bible in Basic English (BBE)
- And the law came in addition, to make wrongdoing worse; but where there was much sin, there was much more grace:
- Darby Translation (DBY)
- But law came in, in order that the offence might abound; but where sin abounded grace has overabounded,
- Webster's Bible (WBS)
- Moreover the law entered, that the offense might abound. But where sin abounded, grace did much more abound:
- Young's Literal Translation (YLT)
- And law came in, that the offence might abound, and where the sin did abound, the grace did overabound,
Read in context
- 18ಹೀಗಿರಲಾಗಿ ಒಬ್ಬನ ಅಪರಾಧದಿಂದಲೇ ಎಲ್ಲಾ ಮನುಷ್ಯರಿಗೆ ಅಪರಾಧ ನಿರ್ಣಯವು ಹೇಗೆ ಬಂತೋ ಹಾಗೆಯೇ ಒಬ್ಬನ ನೀತಿಯಿಂದಲೇ ಉಚಿತಾರ್ಥವಾದ ದಾನವು ಎಲ್ಲಾ ಮನುಷ್ಯರಿಗೆ ಜೀವದ ನೀತಿ ನಿರ್ಣಯಕ್ಕಾಗಿ ಬಂದಿತು.
- 19ಒಬ್ಬ ಮನುಷ್ಯನ ಅವಿಧೇಯತ್ವದಿಂದ ಅನೇಕರು ಹೇಗೆ ಪಾಪಿಗಳಾ ದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಅನೇಕರು ನೀತಿವಂತರಾಗುವರು.
- 20ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- 21ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
Cross references
- Romans 6:14 ರೋಮಾಪುರದವರಿಗೆ 6:14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- Romans 6:1 ರೋಮಾಪುರದವರಿಗೆ 6:1ಹಾಗಾದರೆ ಏನು ಹೇಳೋಣ? ಕೃಪೆಯು ಹೆಚ್ಚಲಿ ಎಂದು ನಾವು ಪಾಪದಲ್ಲಿ ಇನ್ನೂ ಇರಬೇಕೋ?
- Psalm 25:11 ಕೀರ್ತನೆಗಳು 25:11ಓ ಕರ್ತನೇ, ನನ್ನ ಅಕ್ರಮವು ಬಹಳ ವಾಗಿದೆ. ನಿನ್ನ ಹೆಸರಿನ ನಿಮಿತ್ತ ಅದನ್ನು ಮನ್ನಿಸು;
- Titus 3:3–7 ತೀತನಿಗೆ 3:3–7ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು. ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ. ನಾವು ಹೀಗೆ ಆತನ ಕೃಪೆಯಿಂದ ನೀತಿವಂತ ರೆಂದು ನಿರ್ಣಯಿಸಲ್ಪಟ್ಟು ನಿತ್ಯಜೀವದ ನಿರೀಕ್ಷೆಗನು ಸಾರವಾಗಿ ಬಾಧ್ಯರಾದೆವು.
- Galatians 3:19–25 ಗಲಾತ್ಯದವರಿಗೆ 3:19–25ಹಾಗಾದರೆ ನ್ಯಾಯಪ್ರಮಾಣವು ಯಾತಕ್ಕೆ? ವಾಗ್ದಾನದ ಸಂತತಿಯಾದಾತನು ಬರುವತನಕ ದೇವರು ಇಂಥಿಂಥದ್ದು ಅಪರಾಧವೆಂದು ತೋರಿಸುವದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು. ಮಧ್ಯಸ್ಥನು ಒಬ್ಬನ ಮಧ್ಯಸ್ಥನಲ್ಲ; ಆದರೆ ದೇವರು ಒಬ್ಬನೇ. ಹಾಗಾದರೆ ನ್ಯಾಯಪ್ರಮಾಣವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಹೇಳಬಾರದು; ಕೊಡಲ್ಪಟ್ಟಿದ್ದ ನ್ಯಾಯಪ್ರಮಾಣವು ಬದುಕಿಸುವದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ ನಿಜವಾಗಿ ನ್ಯಾಯಪ್ರಮಾಣದಿಂದಲೇ ನೀತಿಯುಂಟಾಗುತ್ತಿತ್ತು. ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು. ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು. ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸಲ್ಪಡುವಂತೆ ನಮ್ಮನ್ನು ಕ್ರಿಸ್ತನ ಬಳಿಗೆ ತರುವದಕ್ಕಾಗಿ ನ್ಯಾಯಪ್ರಮಾಣವು ನಮ್ಮ ಉಪಾಧ್ಯಾಯನಂತಿತ್ತು. ಆದರೆ ನಂಬಿಕೆಯು ಬಂದಿರಲಾಗಿ ನಾವಿನ್ನು ಉಪಾಧ್ಯಾಯನ ಕೆಳಗೆ ಎಂದಿಗೂ ಇರುವವರಲ್ಲ.
- Romans 4:15 ರೋಮಾಪುರದವರಿಗೆ 4:15ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
- Luke 7:47 ಲೂಕನು 7:47ಆದದರಿಂದ ನಾನು ಹೇಳುವದೇ ನಂದರೆ--ಬಹಳವಾಗಿರುವ ಅವಳ ಪಾಪಗಳು ಕ್ಷಮಿಸ ಲ್ಪಟ್ಟಿವೆ. ಯಾಕಂದರೆ ಅವಳು ಬಹಳವಾಗಿ ಪ್ರೀತಿಸಿ ದಳು; ಆದರೆ ಯಾವನಿಗೆ ಸ್ವಲ್ಪವಾಗಿ ಕ್ಷಮಿಸಲ್ಪಡು ವದೋ ಅವನು ಸ್ವಲ್ಪವಾಗಿ ಪ್ರೀತಿಸುವನು.
- Isaiah 1:18 ಯೆಶಾಯ 1:18ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Ephesians 2:1–5 ಎಫೆಸದವರಿಗೆ 2:1–5ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Ezekiel 36:25–32 ಯೆಹೆಜ್ಕೇಲನು 36:25–32ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಚಿಮುಕಿಸುತ್ತೇನೆ ಮತ್ತು ನೀವು ಶುದ್ಧರಾಗುವಿರಿ; ಅಶುದ್ಧತ್ವಗಳಿಂದಲೂ ನಿಮ್ಮ ಎಲ್ಲಾ ವಿಗ್ರಹಗಳಿಂದಲೂ ನಿಮ್ಮನ್ನು ಶುದ್ಧೀಕರಿಸುವೆನು. ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ. ನಾನು ನಿಮ್ಮ ತಂದೆಗಳಿಗೆ ಕೊಟ್ಟ ದೇಶದಲ್ಲಿ ವಾಸಿ ಸುವಿರಿ; ನೀವು ನನ್ನ ಜನರಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು. ಅಲ್ಲದೆ ನಾನು ನಿಮ್ಮನ್ನು ನಿಮ್ಮ ಅಶುದ್ಧತ್ವಗಳಿಂದಲೂ ಸಹ ರಕ್ಷಿಸುವೆನು; ಬೆಳೆ ಬೆಳೆ ಯಲೆಂದು ಹೇಳಿ ಅದನ್ನು ಹೆಚ್ಚಿಸುವೆನು, ಕ್ಷಾಮವನ್ನು ನಿಮ್ಮ ಮೇಲೆ ಬರಮಾಡುವದಿಲ್ಲ. ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು. ಆಮೇಲೆ ನೀವು ನಿಮ್ಮ ದುರ್ಮಾರ್ಗ ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು ನಿಮ್ಮ ಅಪರಾಧಗಳ ಮತ್ತು ಅಸಹ್ಯ ಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ. ಇದು ನಿಮಗಾಗಿ ಮಾಡಲಿಲ್ಲವೆಂದು ನಿಮಗೆ ತಿಳಿದಿರಲಿ ಎಂದು ದೇವರಾದ ಕರ್ತನು ಹೇಳುತ್ತಾನೆ; ಓ ಇಸ್ರಾಯೇಲಿನ ಮನೆತನದವರೇ, ನಿಮ್ಮ ದುರ್ಮಾ ರ್ಗಗಳಿಗೆ ನಾಚಿಕೆ ಪಟ್ಟು ಲಜ್ಜೆಹೊಂದಿರಿ.
Original words (Greek)
- Moreover · G1161δέ dé
- law · G3551νόμος nómos
- entered · G3922παρεισέρχομαι pareisérchomai
- that · G2443ἵνα hína
- offence · G3900παράπτωμα paráptōma
- abound · G4121πλεονάζω pleonázō
- But · G1161δέ dé
- where · G3757οὗ hoû
- sin · G266ἁμαρτία hamartía
- abounded · G4121πλεονάζω pleonázō
- grace · G5485χάρις cháris
- abound · G5248ὑπερπερισσεύω hyperperisseúō