Romans · chapter 5 · verse 6
Romans 5:6 in Kannada
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
Naavu ashaktaraagiddaagale kristanu nemita kaala dalli bhaktiheenarigoskara praanakottanu.
Romans 5:6 in English
- King James Version (KJV)
- For when we were yet without strength, in due time Christ died for the ungodly.
- World English Bible (WEB)
- For while we were yet weak, at the right time Christ died for the ungodly.
- American Standard Version (ASV)
- For while we were yet weak, in due season Christ died for the ungodly.
- Bible in Basic English (BBE)
- For when we were still without strength, at the right time Christ gave his life for evil-doers.
- Darby Translation (DBY)
- for we being still without strength, in [the] due time Christ has died for [the] ungodly.
- Webster's Bible (WBS)
- For when we were yet without strength, in due time Christ died for the ungodly.
- Young's Literal Translation (YLT)
- For in our being still ailing, Christ in due time did die for the impious;
Read in context
- 4ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು.
- 5ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- 6ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.
- 7ನೀತಿ ವಂತನಿಗೋಸ್ಕರ ಯಾರಾದರೂ ಪ್ರಾಣ ಕೊಡುವದು ಅಪರೂಪ, ಒಳ್ಳೆಯವರಿಗೋಸ್ಕರ ಪ್ರಾಣಕೊಡು ವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು.
- 8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
Cross references
- Ephesians 2:1–5 ಎಫೆಸದವರಿಗೆ 2:1–5ಇದಲ್ಲದೆ ಅಪರಾಧಗಳ ಮತ್ತು ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಿಮ್ಮನ್ನು ಆತನು ಬದುಕಿಸಿದನು. ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು. ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- Romans 5:8 ರೋಮಾಪುರದವರಿಗೆ 5:8ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
- Colossians 2:13 ಕೊಲೊಸ್ಸೆಯವರಿಗೆ 2:13ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 5:10 ರೋಮಾಪುರದವರಿಗೆ 5:10ವೈರಿ ಗಳಾಗಿದ್ದ ನಾವು ದೇವರ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿದ್ದರೆ ಸಮಾಧಾನವಾದ ನಮಗೆ ಆತನ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.
- Romans 4:25 ರೋಮಾಪುರದವರಿಗೆ 4:25ನಮ್ಮ ಅಪ ರಾಧಗಳ ನಿಮಿತ್ತ ದೇವರು ಆತನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ಹಾಗೆ ಆತನನ್ನು ಜೀವದಿಂದ ಎಬ್ಬಿಸಿದನು.
- Titus 2:12 ತೀತನಿಗೆ 2:12ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು ಈಗಿನ ಲೋಕದಲ್ಲಿ ಸ್ವಸ್ಥಚಿತ್ತರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕ ಬೇಕೆಂದು ಅದು (ಅ ಕೃಪೆಯು) ನಮಗೆ ಬೋಧಿಸು ತ್ತದೆ.
- 1 Thessalonians 5:9 1 ಥೆಸಲೊನೀಕದವರಿಗೆ 5:9ಯಾಕಂದರೆ ದೇವರು ನಮ್ಮನ್ನು ಕೋಪಕ್ಕೆ ಗುರಿಯಾಗುವಂತೆ ನೇಮಿಸದೆ ನಾವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕವಾಗಿ ರಕ್ಷಣೆಯನ್ನು ಹೊಂದುವಂತೆ ನೇಮಿಸಿದನು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Romans 4:5 ರೋಮಾಪುರದವರಿಗೆ 4:5ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
- Galatians 4:4 ಗಲಾತ್ಯದವರಿಗೆ 4:4ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ
- 1 Timothy 1:9 1 ತಿಮೊಥೆಯನಿಗೆ 1:9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ