Romans · chapter 6 · verse 14
Romans 6:14 in Kannada
ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
Yaakandare paapavu nimma mele prabhutva nadisabaaradu; kaaranavenandare neevu nyaayapramaanaadheena ralla, krupege adheenaraagiddeeri.
Romans 6:14 in English
- King James Version (KJV)
- For sin shall not have dominion over you: for ye are not under the law, but under grace.
- World English Bible (WEB)
- For sin will not have dominion over you, for you are not under law, but under grace.
- American Standard Version (ASV)
- For sin shall not have dominion over you: for ye are not under law, but under grace.
- Bible in Basic English (BBE)
- For sin may not have rule over you: because you are not under law, but under grace.
- Darby Translation (DBY)
- For sin shall not have dominion over you, for ye are not under law but under grace.
- Webster's Bible (WBS)
- For sin shall not have dominion over you: for ye are not under the law, but under grace.
- Young's Literal Translation (YLT)
- for sin over you shall not have lordship, for ye are not under law, but under grace.
Read in context
- 12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- 13ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
- 14ಯಾಕಂದರೆ ಪಾಪವು ನಿಮ್ಮ ಮೇಲೆ ಪ್ರಭುತ್ವ ನಡಿಸಬಾರದು; ಕಾರಣವೇನಂದರೆ ನೀವು ನ್ಯಾಯಪ್ರಮಾಣಾಧೀನ ರಲ್ಲ, ಕೃಪೆಗೆ ಅಧೀನರಾಗಿದ್ದೀರಿ.
- 15ಹಾಗಾದರೇನು? ನಾವು ನ್ಯಾಯಪ್ರಮಾಣಾ ಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಹಾಗೆ ಎಂದಿಗೂ ಅಲ್ಲ.
- 16ನೀವು ಯಾರಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ಒಪ್ಪಿಸಿಕೊಡುತ್ತಿರೋ ಅವರಿಗೆ ದಾಸರಾಗಿಯೇ ವಿಧೇ ಯರಾಗಿರುವಿರೆಂಬದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ; ಇಲ್ಲವೆ ವಿಧೇಯತ್ವಕ್ಕೆ ದಾಸ ರಾದರೆ ನೀತಿಯೇ.
Cross references
- Galatians 5:18 ಗಲಾತ್ಯದವರಿಗೆ 5:18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ನ್ಯಾಯಪ್ರಮಾ ಣಕ್ಕೆ ಅಧೀನರಲ್ಲ.
- Romans 8:2 ರೋಮಾಪುರದವರಿಗೆ 8:2ಜೀವವನ್ನುಂಟು ಮಾಡುವ ಆತ್ಮನ ನಿಯಮವು ಕ್ರಿಸ್ತ ಯೇಸುವಿನಲ್ಲಿ ನನ್ನನ್ನು ಪಾಪ ಮರಣಗಳ ನಿಯಮ ದಿಂದ ಬಿಡಿಸಿತು.
- Romans 7:4–11 ರೋಮಾಪುರದವರಿಗೆ 7:4–11ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ನ್ಯಾಯಪ್ರಮಾಣದ ಪಾಲಿಗೆ ಸತ್ತಿರಿ. ದೇವರಿಗೆ ಫಲಫಲಿಸುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತುಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ. ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು. ಈಗಲಾದರೋ ನಮ್ಮನ್ನು ಹಿಡುಕೊಂಡಿದ್ದ ನ್ಯಾಯಪ್ರಮಾಣದ ಪಾಲಿಗೆ ನಾವು ಸತ್ತಕಾರಣ ಅದರಿಂದ ವಿಮುಕ್ತರಾಗಿದ್ದೇವೆ; ಹೀಗೆ ನಾವು ಅಕ್ಷರದ ಹಳೇ ರೀತಿಯಲ್ಲಿ ಆತನನ್ನು ಸೇವಿಸದೆ ಆತ್ಮನಿಂದ ಹೊಸ ರೀತಿಯಲ್ಲಿಯೇ ಸೇವಿಸುತ್ತೇವೆ. ಹಾಗಾದರೆ ನಾವು ಏನು ಹೇಳೋಣ? ನ್ಯಾಯ ಪ್ರಮಾಣವು ಪಾಪವೋ? ಹಾಗೆ ಎಂದಿಗೂ ಅಲ್ಲ; ನ್ಯಾಯಪ್ರಮಾಣದಿಂದಲೇ ಹೊರತು ಪಾಪವೆಂಬದು ಏನೋ ನನಗೆ ಗೊತ್ತಿರಲಿಲ್ಲ. ಯಾಕಂದರೆ--ನೀನು ಆಶಿಸಬಾರದು ಎಂದು ನ್ಯಾಯಪ್ರಮಾಣವು ಹೇಳ ದಿದ್ದರೆ ದುರಾಶೆಯೆಂದರೆ ಏನೋ ನನಗೆ ತಿಳಿಯು ತ್ತಿರಲಿಲ್ಲ. ಆದರೆ ಪಾಪವು ಈ ಆಜ್ಞೆಯಿಂದ ಅನುಕೂಲ ಹೊಂದಿ ಸಕಲ ವಿಧವಾದ ದುರಾಶೆಯನ್ನು ನನ್ನಲ್ಲಿ ಹುಟ್ಟಿಸಿತು. ನ್ಯಾಯಪ್ರಮಾಣವು ಇಲ್ಲದಿರು ವಾಗ ಪಾಪವು ಸತ್ತದ್ದಾಗಿದೆ. ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು. ಜೀವಿಸುವದಕ್ಕಾಗಿರುವ ಆಜ್ಞೆಯೇ ಮರಣಕ್ಕಾಯಿತೆಂದು ನಾನು ಕಂಡುಕೊಂಡೆನು. ಹೇಗಂದರೆ ಪಾಪವು ಆಜ್ಞೆಯಿಂದ ಅನುಕೂಲ ಹೊಂದಿ ನನ್ನನ್ನು ವಂಚಿಸಿ ಅದರ ಮೂಲಕವೇ ನನ್ನನು ಕೊಂದಿತು;
- Hebrews 8:10 ಇಬ್ರಿಯರಿಗೆ 8:10ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ
- Galatians 4:4–5 ಗಲಾತ್ಯದವರಿಗೆ 4:4–5ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಸ್ತ್ರೀಯಿಂದ ಹುಟ್ಟಿದವನನ್ನಾಗಿಯೂ ನ್ಯಾಯ ಪ್ರಮಾಣಕ್ಕೆ ಒಳಗಾದವನನ್ನಾಗಿಯೂ ಮಾಡಿ ಕಳುಹಿಸಿದ್ದಲ್ಲದೆ ನ್ಯಾಯಪ್ರಮಾಣಾಧೀನರನ್ನು ವಿಮೋಚಿಸುವದಕ್ಕೂ ನಾವು ದತ್ತುಪುತ್ರರ ಸ್ವೀಕಾರವನ್ನು ಹೊಂದುವಂತೆಯೂ ಕಳುಹಿಸಿಕೊಟ್ಟನು.
- Romans 6:12 ರೋಮಾಪುರದವರಿಗೆ 6:12ಹೀಗಿರುವದರಿಂದ ಸಾಯತಕ್ಕ ನಿಮ್ಮ ದೇಹದ ಮೇಲೆ ಪಾಪವನ್ನು ಆಳಗೊಡಿಸಿ ನೀವು ಅದರ ದುರಾಶೆಗಳಿಗೆ ಒಳಪಡಬೇಡಿರಿ;
- Romans 3:19–20 ರೋಮಾಪುರದವರಿಗೆ 3:19–20ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು. ಆದದರಿಂದ ನ್ಯಾಯಪ್ರಮಾಣದ ಕ್ರಿಯೆಗಳಿಂದ ಯಾವನೂ ಆತನ ದೃಷ್ಟಿಯಲ್ಲಿ ನೀತಿವಂತನೆಂದು ನಿರ್ಣ ಯಿಸಲ್ಪಡುವದಿಲ್ಲ. ಯಾಕಂದರೆ ನ್ಯಾಯಪ್ರಮಾಣ ದಿಂದಲೇ ಪಾಪದ ಅರುಹು ಉಂಟಾಗುತ್ತದೆ.
- Psalm 130:7–8 ಕೀರ್ತನೆಗಳು 130:7–8ಇಸ್ರಾಯೇಲು ಕರ್ತನಲ್ಲಿ ನಿರೀಕ್ಷಿಸಲಿ; ಕರ್ತನ ಬಳಿಯಲ್ಲಿ ಕರುಣೆಯೂ ಆತನಲ್ಲಿ ವಿಮೋಚನೆಯೂ ಬಹಳವಾಗಿದೆ.ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು. ಆತನು ಇಸ್ರಾಯೇಲನ್ನು ಅದರ ಎಲ್ಲಾ ಅಕ್ರಮಗಳಿಂದ ವಿಮೋಚಿಸುವನು.
- John 8:36 ಯೋಹಾನನು 8:36ಆದದರಿಂದ ಮಗನು ನಿಮ್ಮನ್ನು ಬಿಡುಗಡೆ ಮಾಡಿದರೆ ನಿಜವಾಗಿಯೂ ನೀವು ಬಿಡುಗಡೆಯಾಗುವಿರಿ.
- 2 Corinthians 3:6–9 2 ಕೊರಿಂಥದವರಿಗೆ 3:6–9ಆತನು ನಮ್ಮನ್ನು ಸಹ ಹೊಸ ಒಡಂಬಡಿಕೆಗೆ ಸಮರ್ಥರಾದ ಸೇವಕರನ್ನಾಗಿ ಮಾಡಿದ್ದಾನೆ; ಅಕ್ಷರಕ್ಕನುಸಾರವಾಗಿ ಅಲ್ಲ; ಆತ್ಮನಿಗನು ಸಾರವಾಗಿಯೇ. ಯಾಕಂದರೆ ಅಕ್ಷರವು ಮರಣ ವನ್ನುಂಟು ಮಾಡುತ್ತದೆ; ಆತ್ಮವು ಜೀವವನ್ನುಂಟು ಮಾಡುತ್ತದೆ. ಆದರೆ ಮರಣದ ಸೇವೆಯು ಕಲ್ಲಿನ ಮೇಲೆ ಲಿಖಿತವಾದ ಅಕ್ಷರಗಳಲ್ಲಿದ್ದರೂ ಪ್ರಭಾವದಿಂದ ಕೂಡಿದ್ದಾಗಿತ್ತು; ಆ ಪ್ರಭಾವದಿಂದ ಮೋಶೆಯ ಮುಖಕ್ಕೆ ಬಂದ ಪ್ರಕಾಶವು ಕುಂದಿ ಹೋಗುವಂಥ ದ್ದಾಗಿದ್ದರೂ ಅದರ ನಿಮಿತ್ತ ಇಸ್ರಾಯೇಲ್ಯರು ಅವನ ಮುಖವನ್ನು ದೃಷ್ಟಿಸಿ ನೋಡಲಾರದೆ ಇದ್ದರು. ಹೀಗಿದ್ದ ಮೇಲೆ ಆತ್ಮ ಸಂಬಂಧವಾದ ಸೇವೆಯು ಎಷ್ಟೋ ಹೆಚ್ಚಾಗಿ ಪ್ರಭಾವದಿಂದಿರುವದಲ್ಲವೇ? ಅಪರಾಧ ನಿರ್ಣಯದ ಸೇವೆಯು ಪ್ರಭಾವದಿಂದಿರುವದಾದರೆ ನೀತಿಯ ಸೇವೆಯು ಎಷ್ಟೋ ಅಧಿಕವಾದ ಪ್ರಭಾವವುಳ್ಳದ್ದಾಗಿರಬೇಕು.
- John 1:17 ಯೋಹಾನನು 1:17ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು.
- Galatians 3:23 ಗಲಾತ್ಯದವರಿಗೆ 3:23ಆದರೆ ನಂಬಿಕೆ ಬರುವದಕ್ಕೆ ಮೊದಲು, ತರು ವಾಯ ಪ್ರಕಟವಾಗಲಿರುವ ಆ ನಂಬಿಕೆಗೆ ವಶವಾಗು ವದಕ್ಕಾಗಿ ನಾವು ನ್ಯಾಯಪ್ರಮಾಣದ ಅಧೀನದಲ್ಲಿ ಇರಿಸಲ್ಪಟ್ಟಿದ್ದೆವು.