Romans · chapter 6 · verse 8
Romans 6:8 in Kannada
ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
Idallade naavu kristanodane satta pakshadalli aatanodane naavu saha jeevisuvevendu nambu tteve.
Romans 6:8 in English
- King James Version (KJV)
- Now if we be dead with Christ, we believe that we shall also live with him:
- World English Bible (WEB)
- But if we died with Christ, we believe that we will also live with him,
- American Standard Version (ASV)
- But if we died with Christ, we believe that we shall also live with him;
- Bible in Basic English (BBE)
- But if we are dead with Christ, we have faith that we will be living with him;
- Darby Translation (DBY)
- Now if we have died with Christ, we believe that we shall also live with him,
- Webster's Bible (WBS)
- Now if we are dead with Christ, we believe that we shall also live with him:
- Young's Literal Translation (YLT)
- And if we died with Christ, we believe that we also shall live with him,
Read in context
- 6ಪಾಪದ ಶರೀರವು ನಾಶ ವಾಗಿ ನಾವು ಇನ್ನೂ ಪಾಪಕ್ಕೆ ದಾಸರಾಗಿರದಂತೆ ನಮ್ಮ ಹಳೇ ಮನುಷ್ಯನು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟ ನೆಂದು ತಿಳಿದಿದ್ದೇವೆ.
- 7ಯಾಕಂದರೆ ಸತ್ತವನು ಪಾಪ ದಿಂದ ಬಿಡುಗಡೆ ಹೊಂದಿದ್ದಾನೆ.
- 8ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ನಾವು ಸಹ ಜೀವಿಸುವೆವೆಂದು ನಂಬು ತ್ತೇವೆ.
- 9ಯಾಕಂದರೆ ಕ್ರಿಸ್ತನು ಸತ್ತಮೇಲೆ ಜೀವಿತ ನಾಗಿ ಎದ್ದು ಬಂದದ್ದರಿಂದ ಆತನು ಇನ್ನು ಮುಂದೆ ಸಾಯತಕ್ಕವನಲ್ಲ; ಮರಣವು ಇನ್ನು ಮುಂದೆ ಆತ ನನ್ನು ಆಳುವದಿಲ್ಲವೆಂದು ನಮಗೆ ತಿಳಿದದೆ.
- 10ಆತನು ಸತ್ತಿದ್ದರಲ್ಲಿ ಪಾಪಕ್ಕಾಗಿ ಒಂದೇ ಸಾರಿ ಸತ್ತನು. ಆದರೆ ಆತನು ಜೀವಿಸುವದರಲ್ಲಿ ದೇವರಿಗಾಗಿ ಜೀವಿಸುತ್ತಾನೆ.
Cross references
- 2 Timothy 2:11–12 2 ತಿಮೊಥೆಯನಿಗೆ 2:11–12ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು. ನಾವು ಬಾಧೆಪಡುವವರಾಗಿದ್ದರೆ ಆತನೊಂದಿಗೆ ನಾವು ಸಹ ಆಳುವೆವು; ಆತನನ್ನು ಅಲ್ಲಗಳೆದರೆ ಆತನು ಸಹ ನಮ್ಮನ್ನು ಅಲ್ಲಗಳೆಯುವನು.
- Colossians 3:3–4 ಕೊಲೊಸ್ಸೆಯವರಿಗೆ 3:3–4ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ. ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
- 2 Corinthians 4:10–14 2 ಕೊರಿಂಥದವರಿಗೆ 4:10–14ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ. ಯಾಕಂದರೆ ಯೇಸುವಿನ ಜೀವವು ಸಹ ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ. ಹೀಗೆ ನಮ್ಮಲ್ಲಿ ಮರಣವೂ ನಿಮ್ಮಲ್ಲಿ ಜೀವವೂ ಪ್ರವರ್ತಿಸುತ್ತದೆ. ಹೀಗಿದ್ದರೂ--ನಾನು ನಂಬಿದೆನು, ಆದದರಿಂದ ಮಾತನಾಡಿದೆನು ಎಂದು ಬರೆಯಲ್ಪಟ್ಟಿರುವ ಪ್ರಕಾರ ನಂಬಿಕೆಯ ಆತ್ಮವನ್ನೇ ಹೊಂದಿ ನಾವು ಸಹ ನಂಬುತ್ತೇವೆ; ಆದದರಿಂದ ಮಾತನಾಡುತ್ತೇವೆ. ಕರ್ತನಾದ ಯೇಸುವನ್ನು ಎಬ್ಬಿಸಿದಾತನು ನಮ್ಮನ್ನು ಸಹ ಯೇಸುವಿನ ಮುಖಾಂತರ ಎಬ್ಬಿಸಿ ನಿಮ್ಮ ಜೊತೆಯಲ್ಲಿ ನಿಲ್ಲಿಸುವನೆಂದು ತಿಳಿದವರಾಗಿದ್ದೇವೆ.
- 2 Corinthians 13:4 2 ಕೊರಿಂಥದವರಿಗೆ 13:4ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
- John 14:19 ಯೋಹಾನನು 14:19ಇನ್ನು ಸ್ವಲ್ಪ ಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ. ಆದರೆ ನೀವು ನನ್ನನ್ನು ನೋಡುವಿರಿ; ನಾನು ಜೀವಿಸುವ ದರಿಂದ ನೀವು ಸಹ ಜೀವಿಸುವಿರಿ.
- Romans 6:3–5 ರೋಮಾಪುರದವರಿಗೆ 6:3–5ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಬಾಪ್ತಿಸ್ಮ ಮಾಡಿಸಿ ಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗು ವದಕ್ಕೆ ಆತನೊಂದಿಗೆ ಹೂಣಲ್ಪಟ್ಟೆವು; ಕ್ರಿಸ್ತನು ತಂದೆಯ ಮಹಿಮೆಯಿಂದ ಹೇಗೆ ಸತ್ತವರೊಳಗಿಂದ ಎಬ್ಬಿಸಲ್ಪಟ್ಟನೋ ಹಾಗೆಯೇ ನಾವು ಕೂಡ ಜೀವ ದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗಂದರೆ ಆತನ ಮರಣದ ಹೋಲಿಕೆಯಲ್ಲಿ ನಾವು ಒಟ್ಟಾಗಿ ನೆಲೆಸಿದ್ದರೆ ಆತನ ಪುನರುತ್ಥಾನದ ಹೋಲಿಕೆ ಯಲ್ಲಿಯೂ ಇರುವೆವು.
- 1 Thessalonians 4:14–17 1 ಥೆಸಲೊನೀಕದವರಿಗೆ 4:14–17ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ. ನಾವು ಕರ್ತನ ಮಾತಿನ ಆಧಾರದಿಂದ ನಿಮಗೆ ಹೇಳುವದೇನಂದರೆ, ಕರ್ತನು ಪ್ರತ್ಯಕ್ಷನಾಗು ವವರೆಗೂ ಜೀವದಿಂದುಳಿದಿರುವ ನಾವು ನಿದ್ರೆಹೋದ ವರಿಗಿಂತ ಮುಂದಾಗುವದೇ ಇಲ್ಲ. ಕರ್ತನು ತಾನೇ ಆಜ್ಞಾಘೋಷದೊಡನೆಯೂ ಪ್ರಧಾನ ದೂತನ ಶಬ್ದದೊಡನೆಯೂ ದೇವರ ತುತೂರಿಯೊಡನೆಯೂ ಆಕಾಶದಿಂದ ಇಳಿದು ಬರುವನು; ಆಗ ಕ್ರಿಸ್ತನಲ್ಲಿರುವ ಸತ್ತವರು ಮೊದಲು ಎದ್ದು ಬರುವರು; ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.