Romans · chapter 8 · verse 16
Romans 8:16 in Kannada
ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
Naavu devara makkalaagiddevendu aatmanu taane namma aatmadondige saakshi heluttaane.
Romans 8:16 in English
- King James Version (KJV)
- The Spirit itself beareth witness with our spirit, that we are the children of God:
- World English Bible (WEB)
- The Spirit himself testifies with our spirit that we are children of God;
- American Standard Version (ASV)
- The Spirit himself beareth witness with our spirit, that we are children of God:
- Bible in Basic English (BBE)
- The Spirit is witness with our spirit that we are children of God:
- Darby Translation (DBY)
- The Spirit itself bears witness with our spirit, that we are children of God.
- Webster's Bible (WBS)
- The Spirit itself testifieth with our spirit, that we are the children of God:
- Young's Literal Translation (YLT)
- The Spirit himself doth testify with our spirit, that we are children of God;
Read in context
- 14ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- 15ನೀವು ತಿರಿಗಿ ಭಯವುಳ್ಳವರಾಗಿರುವಂತೆ ದಾಸನ ಭಾವವನ್ನು ಹೊಂದಿದವರಲ್ಲ; ಆದರೆ ದತ್ತುಪುತ್ರ ಸ್ವೀಕಾರದ ಆತ್ಮನನ್ನು ಹೊಂದಿರುವದರಿಂದ ದೇವರನ್ನು ನಾವು ಅಪ್ಪಾ, ತಂದೆಯೇ ಎಂದು ಕೂಗುತ್ತೇವೆ.
- 16ನಾವು ದೇವರ ಮಕ್ಕಳಾಗಿದ್ದೇವೆಂದು ಆತ್ಮನು ತಾನೇ ನಮ್ಮ ಆತ್ಮದೊಂದಿಗೆ ಸಾಕ್ಷಿ ಹೇಳುತ್ತಾನೆ.
- 17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
Cross references
- 1 John 4:13 1 ಯೋಹಾನನು 4:13ಆತನು ನಮಗೆ ತನ್ನ ಆತ್ಮದಲ್ಲಿ ಪಾಲನ್ನು ಅನುಗ್ರಹಿಸದ್ದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆಂತಲೂ ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂತಲೂ ತಿಳಿದುಕೊಳ್ಳು ತ್ತೇವೆ.
- 2 Corinthians 1:22 2 ಕೊರಿಂಥದವರಿಗೆ 1:22ಆತನು ನಮ್ಮ ಮೇಲೆ ಮುದ್ರೆಹಾಕಿ ನಮ್ಮ ಹೃದಯಗಳಲ್ಲಿ ಪವಿತ್ರಾತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- 2 Corinthians 5:5 2 ಕೊರಿಂಥದವರಿಗೆ 5:5ಅದಕ್ಕಾಗಿಯೇ ನಮ್ಮನ್ನು ಸಿದ್ಧಮಾಡಿದ ದೇವರು ತಾನೇ ನಮಗೆ ಆತ್ಮನನ್ನು ಸಂಚಕಾರವಾಗಿ ಅನುಗ್ರಹಿಸಿದ್ದಾನೆ.
- Ephesians 1:13 ಎಫೆಸದವರಿಗೆ 1:13ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
- Romans 8:26 ರೋಮಾಪುರದವರಿಗೆ 8:26ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
- 1 John 3:19–22 1 ಯೋಹಾನನು 3:19–22ಸತ್ಯಕ್ಕೆ ಸಂಬಂಧಪಟ್ಟವರೆಂಬದು ಇದರಿಂದಲೇ ನಮಗೆ ತಿಳಿಯುತ್ತದೆ; ಆತನ ಸಮಕ್ಷಮದಲ್ಲಿ ನಮ್ಮ ಹೃದಯಗಳನ್ನು ನಿಶ್ಚಯಪಡಿಸಿಕೊಳ್ಳುತ್ತೇವೆ. ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ದೇವರು ನಮ್ಮ ಹೃದಯಕ್ಕಿಂತ ದೊಡ್ಡವನಾಗಿದ್ದು ಎಲ್ಲವನ್ನೂ ಬಲ್ಲವ ನಾಗಿದ್ದಾನೆ. ಪ್ರಿಯರೇ, ನಮ್ಮ ಹೃದಯವು ನಮ್ಮನ್ನು ಖಂಡಿಸದಿದ್ದರೆ ನಮಗೆ ದೇವರ ವಿಷಯದಲ್ಲಿ ಭರವಸ ವುಂಟು. ನಾವು ಏನೇನು ಬೇಡಿಕೊಳ್ಳುತ್ತೇವೋ ಆತನಿಂದ ನಾವು ಹೊಂದಿಕೊಳ್ಳುತ್ತೇವೆ. ಯಾಕಂದರೆ ನಾವು ಆತನ ಆಜ್ಞೆಗಳನ್ನು ಕೈಕೊಂಡು ಆತನ ದೃಷ್ಟಿಯಲ್ಲಿ ಮೆಚ್ಚಿಕೆಯಾದವುಗಳನ್ನು ಮಾಡುವವರಾಗಿದ್ದೇವೆ.
- Ephesians 4:30 ಎಫೆಸದವರಿಗೆ 4:30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ; ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
- 2 Corinthians 1:12 2 ಕೊರಿಂಥದವರಿಗೆ 1:12ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 1 John 5:10 1 ಯೋಹಾನನು 5:10ದೇವರ ಮಗನಲ್ಲಿ ನಂಬಿಕೆ ಇಟ್ಟವನು ಆ ಸಾಕ್ಷಿಯನ್ನು ತನ್ನಲ್ಲೇ ಹೊಂದಿದ್ದಾನೆ. ದೇವರನ್ನು ನಂಬದವನು ಆತನನ್ನು ಸುಳ್ಳುಗಾರನನ್ನಾಗಿ ಮಾಡಿದ್ದಾನೆ; ಹೇಗೆಂದರೆ ದೇವರು ತನ್ನ ಮಗನ ವಿಷಯವಾಗಿ ಕೊಟ್ಟ ಸಾಕ್ಷಿಯಲ್ಲಿ ಅವನು ನಂಬಿಕೆಯಿಡಲಿಲ್ಲ.