Romans · chapter 8 · verse 19
Romans 8:19 in Kannada
ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
Devaputrara pratyakshateyannu srushtiyu lavalavikeyinda eduru noduttaa ide.
Romans 8:19 in English
- King James Version (KJV)
- For the earnest expectation of the creature waiteth for the manifestation of the sons of God.
- World English Bible (WEB)
- For the creation waits with eager expectation for the children of God to be revealed.
- American Standard Version (ASV)
- For the earnest expectation of the creation waiteth for the revealing of the sons of God.
- Bible in Basic English (BBE)
- For the strong desire of every living thing is waiting for the revelation of the sons of God.
- Darby Translation (DBY)
- For the anxious looking out of the creature expects the revelation of the sons of God:
- Webster's Bible (WBS)
- For the earnest expectation of the creature waiteth for the manifestation of the sons of God.
- Young's Literal Translation (YLT)
- for the earnest looking out of the creation doth expect the revelation of the sons of God;
Read in context
- 17ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
- 18ನಮ್ಮಲ್ಲಿ ಪ್ರತ್ಯಕ್ಷವಾಗಲಿರುವ ಮಹಿಮೆಯೊಂದಿಗೆ ಈಗಿನ ಕಾಲದ ಶ್ರಮೆಗಳನ್ನು ಹೋಲಿಸುವದು ಯೋಗ್ಯ ವಲ್ಲವೆಂದು ನಾನು ಎಣಿಸುತ್ತೇನೆ.
- 19ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
- 20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- 21ಸೃಷ್ಟಿಯು ತಾನೇ ದೇವರ ಮಕ್ಕಳ ಮಹಿಮೆಯ ಸ್ವಾತಂತ್ರ್ಯತೆಯಲ್ಲಿ ಸೇರುವಂತೆ ನಾಶನದ ದಾಸತ್ವದಿಂದ ಬಿಡುಗಡೆ ಹೊಂದುವದು.
Cross references
- Malachi 3:17–18 ಮಲಾಕಿಯ 3:17–18ನಾನು ನನ್ನ ಆಭರಣಗಳನ್ನು ಕೂಡಿಸಿಕೊಳ್ಳುವ ಆ ದಿನದಲ್ಲಿ ಅವರು ನನ್ನವರಾಗಿರುವರೆಂದೂ ಒಬ್ಬನು ತನಗೆ ಸೇವೆ ಮಾಡುವ ತನ್ನ ಮಗನನ್ನು ಕನಿಕರಿಸುವ ಪ್ರಕಾರ ಅವರನ್ನು ಕನಿಕರಿಸುವೆನೆಂದೂ ಸೈನ್ಯಗಳ ಕರ್ತನು ಹೇಳುತ್ತಾನೆ.ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ. ಆಗ ನೀವು ತಿಳುಕೊಂಡು ನೀತಿವಂತ ನಿಗೂ ದುಷ್ಟನಿಗೂ ದೇವರ ಸೇವೆಮಾಡುವವನಿಗೂ ಮಾಡದವನಿಗೂ ಇರುವ ಹೆಚ್ಚುಕಡಿಮೆಯನ್ನು ತಿಳುಕೊಳ್ಳುವಿರಿ.
- Romans 8:23 ರೋಮಾಪುರದವರಿಗೆ 8:23ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- 1 John 3:2 1 ಯೋಹಾನನು 3:2ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
- 2 Peter 3:11–13 2 ಪೇತ್ರನು 3:11–13ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.
- Philippians 1:20 ಫಿಲಿಪ್ಪಿಯವರಿಗೆ 1:20ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
- Isaiah 65:17 ಯೆಶಾಯ 65:17ಇಗೋ, ನಾನು ಹೊಸ ಆಕಾಶವನ್ನೂ ಹೊಸ ಭೂಮಿಯನ್ನೂ ಸೃಷ್ಟಿಸುತ್ತೇನೆ. ಮುಂಚಿನವುಗಳು ಜ್ಞಾಪಕದಲ್ಲಿರುವದಿಲ್ಲ ಇಲ್ಲವೆ ಅದರ ಸ್ಮರಣೆಗೆ ಬರುವ ದಿಲ್ಲ.
- Revelation 21:1–5 ಪ್ರಕಟನೆ 21:1–5ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ. ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವದನ್ನು ಯೋಹಾನನೆಂಬ ನಾನು ಕಂಡೆನು; ಅದು ತನ್ನ ಮದಲಿಂಗನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಸಿದ್ಧವಾಗಿತ್ತು. ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು. ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.
- Acts 3:21 ಅಪೊಸ್ತಲರ ಕೃತ್ಯಗಳು 3:21ಲೋಕಾದಿಯಿಂದ ತನ್ನ ಎಲ್ಲಾ ಪರಿಶುದ್ಧ ಪ್ರವಾದಿ ಗಳ ಬಾಯಿಯ ಮುಖಾಂತರ ದೇವರು ತಿಳಿಸಿದ್ದೆ ಲ್ಲವುಗಳು ಯಥಾಸ್ಥಿತಿಗೆ ಬರುವ ಸಮಯದ ವರೆಗೆ ಪರಲೋಕದಲ್ಲಿ ಆತನು ಇರುವದು ಅವಶ್ಯವಾಗಿತ್ತು.
- Matthew 25:31–46 ಮತ್ತಾಯನು 25:31–46ಮನುಷ್ಯಕುಮಾರನು ತನ್ನ ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವನು; ಮತ್ತು ಆತನ ಮುಂದೆ ಎಲ್ಲಾ ಜನಾಂಗಗಳವರು ಕೂಡಿಸಲ್ಪ ಡುವರು; ಆಗ ಕುರುಬನು ತನ್ನ ಕುರಿಗಳನ್ನು ಆಡುಗ ಳಿಂದ ಪ್ರತ್ಯೇಕಿಸುವಂತೆಯೇ ಆತನು ಅವರನ್ನು ಪ್ರತ್ಯೇ ಕಿಸುವನು; ಆತನು ಕುರಿಗಳನ್ನು ತನ್ನ ಬಲಗಡೆ ಯಲ್ಲಿಯೂ ಆಡುಗಳನ್ನು ತನ್ನ ಎಡಗಡೆಯಲ್ಲಿಯೂ ನಿಲ್ಲಿಸುವನು. ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ; ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ; ಬಟ್ಟೆಯಿಲ್ಲದವನಾಗಿದ್ದೆನು, ನೀವು ನನಗೆ ಉಡಿಸಿ ದಿರಿ; ನಾನು ಅಸ್ವಸ್ಥನಾಗಿದ್ದೆನು; ನೀವು ನನ್ನನ್ನು ಸಂಧಿಸಿ ದಿರಿ; ನಾನು ಸೆರೆಯಲ್ಲಿದ್ದೆನು, ನೀವು ನನ್ನ ಬಳಿಗೆ ಬಂದಿರಿ ಎಂದು ಹೇಳುವನು. ಆಗ ಆ ನೀತಿವಂತರು ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ಯಾವಾಗ ನೀನು ಹಸಿದದ್ದನ್ನು ನೋಡಿ ನಾವು ನಿನಗೆ ಉಣಿಸಿ ದೆವು? ಇಲ್ಲವೆ ಬಾಯಾರಿದ್ದಾಗ ನಿನಗೆ ಕುಡಿಯುವದಕ್ಕೆ ಕೊಟ್ಟೆವು? ಯಾವಾಗ ನೀನು ಪರದೇಶಿಯಾ ಗಿರುವದನ್ನು ನಾವು ನೋಡಿ ನಿನ್ನನ್ನು ಒಳಕ್ಕೆ ಸೇರಿಸಿ ಕೊಂಡೆವು? ಇಲ್ಲವೆ ಬಟ್ಟೆಯಿಲ್ಲದಿರುವಾಗ ನಿನಗೆ ಉಡಿಸಿದೆವು? ಯಾವಾಗ ನೀನು ಅಸ್ವಸ್ಥನಾಗಿ ಇಲ್ಲವೆ ಸೆರೆಯಲ್ಲಿದ್ದಾಗ ನಾವು ನಿನ್ನನ್ನು ನೋಡಿ ನಿನ್ನ ಬಳಿಗೆ ಬಂದೆವು ಎಂದು ಹೇಳುವರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ನಿಜವಾಗಿ ಹೇಳುತ್ತೇನೆ--ನೀವು ಈ ನನ್ನ ಸಹೋದರ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡಿದ್ದು ನನಗೂ ಮಾಡಿದಂತಾಯಿತು ಅಂದನು. ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ. ನಾನು ಹಸಿದವನಾಗಿದ್ದೆನು, ನೀವು ನನಗೆ ಊಟಕ್ಕೆ ಕೊಡಲಿಲ್ಲ; ನಾನು ಬಾಯಾರಿದವನಾಗಿದ್ದೆನು, ನೀವು ನನಗೆ ಕುಡಿ ಯುವದಕ್ಕೆ ಕೊಡಲಿಲ್ಲ. ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಗೆ ಸೇರಿಸಿಕೊಳ್ಳಲಿಲ್ಲ; ಬಟ್ಟೆಯಿಲ್ಲದವನಾಗಿದ್ದಾಗ ನೀವು ನನಗೆ ಉಡಿಸಲಿಲ್ಲ; ಅಸ್ವಸ್ಥನಾಗಿದ್ದೆನು, ಸೆರೆಮನೆಯಲ್ಲಿದ್ದೆನು, ನೀವು ನನ್ನನ್ನು ಸಂಧಿಸಲಿಲ್ಲ ಎಂದು ಹೇಳುವನು. ಆಗ ಅವರು ಸಹ ಪ್ರತ್ಯುತ್ತರವಾಗಿ ಆತನಿಗೆ--ಕರ್ತನೇ, ನೀನು ಯಾವಾಗ ಹಸಿದದ್ದನ್ನೂ ಬಾಯರಿದ್ದನ್ನೂ ಪರದೇಶಿ ಯಾದದ್ದನ್ನೂ ಬಟ್ಟೆಯಿಲ್ಲದವನಾಗಿದ್ದದ್ದನ್ನೂ ಅಸ್ವಸ್ಥ ನಾಗಿದ್ದದ್ದನ್ನೂ ಸೆರೆಯಲ್ಲಿದ್ದದ್ದನ್ನೂ ನಾವು ನೋಡಿ ನಿನಗೆ ಉಪಚಾರ ಮಾಡಲಿಲ್ಲ ಎಂದು ಹೇಳುವರು. ಆಗ ಆತನು ಅವರಿಗೆ ಪ್ರತ್ಯುತ್ತರವಾಗಿ--ನಾನು ನಿಮಗೆ ನಿಜವಾಗಿ ಹೇಳುವದೇನಂದರೆ, ನೀವು ಇವ ರಲ್ಲಿ ಅತ್ಯಲ್ಪನಾದವನೊಬ್ಬನಿಗೆ ಮಾಡದೆ ಹೋದ ದರಿಂದ ನನಗೂ ಮಾಡಲಿಲ್ಲ ಎಂದು ಹೇಳುವನು.ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು. ಇವರು ನಿತ್ಯವಾದ ಶಿಕ್ಷೆಗೆ ಹೋಗುವರು; ಆದರೆ ನೀತಿವಂತರು ನಿತ್ಯಜೀವಕ್ಕೆ ಹೋಗುವರು.