Romans · chapter 8 · verse 31
Romans 8:31 in Kannada
ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
Haagaadare ee vishayagalalli naavu enu helona? Devaru namma kade iddare nammannu edurisuvavaru yaaru?
Romans 8:31 in English
- King James Version (KJV)
- What shall we then say to these things? If God [be] for us, who [can be] against us?
- World English Bible (WEB)
- What then shall we say about these things? If God is for us, who can be against us?
- American Standard Version (ASV)
- What then shall we say to these things? If God [is] for us, who [is] against us?
- Bible in Basic English (BBE)
- What may we say about these things? If God is for us, who is against us?
- Darby Translation (DBY)
- What shall we then say to these things? If God [be] for us, who against us?
- Webster's Bible (WBS)
- What shall we then say to these things? If God [is] for us, who [can be] against us?
- Young's Literal Translation (YLT)
- What, then, shall we say unto these things? if God [is] for us, who [is] against us?
Read in context
- 29ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
- 30ಇದಲ್ಲದೆ ಯಾರನ್ನು ಮೊದಲು ನೇಮಿಸಿ ದನೋ ಅವರನ್ನು ಕರೆದನು; ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು; ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮೆಪಡಿಸಿದನು.
- 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
Cross references
- Psalm 118:6 ಕೀರ್ತನೆಗಳು 118:6ಕರ್ತನು ನನ್ನ ಪರವಾಗಿದ್ದಾನೆ; ನಾನು ಭಯಪಡೆನು; ಮನುಷ್ಯನು ನನಗೆ ಏನು ಮಾಡುವನು?
- Jeremiah 1:19 ಯೆರೆಮೀಯ 1:19ಅವರು ನಿನಗೆ ವಿರೋಧವಾಗಿ ಯುದ್ಧ ಮಾಡುವರು; ಆದರೆ ನಿನ್ನನ್ನು ಗೆಲ್ಲುವದಿಲ್ಲ; ನಿನ್ನನ್ನು ತಪ್ಪಿಸುವದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ ಎಂದು ಕರ್ತನು ಅನ್ನುತ್ತಾನೆ.
- Psalm 56:11 ಕೀರ್ತನೆಗಳು 56:11ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯ ಪಡೆನು; ಮನುಷ್ಯನು ನನಗೆ ಏನು ಮಾಡಬಲ್ಲನು?
- 1 John 4:4 1 ಯೋಹಾನನು 4:4ಚಿಕ್ಕಮಕ್ಕಳೇ, ನೀವು ದೇವರಿಗೆ ಸಂಬಂಧಪಟ್ಟವರಾ ಗಿದ್ದೀರಿ. ಅವರನ್ನು ಜಯಿಸಿದ್ದೀರಿ. ನಿಮ್ಮಲ್ಲಿರುವಾತನು ಲೋಕದಲ್ಲಿ ಇರುವವನಿಗಿಂತ ದೊಡ್ಡವನಾಗಿದ್ದಾನೆ.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Jeremiah 20:11 ಯೆರೆಮೀಯ 20:11ಆದರೆ ಕರ್ತನು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾನೆ; ಆದದರಿಂದ ನನ್ನನ್ನು ಹಿಂಸಿಸು ವವರು ಎಡವುವರು, ಗೆಲ್ಲುವದಿಲ್ಲ; ಅನುಕೂಲ ವಾಗದೆ ಇದ್ದದರಿಂದ ಅವರು ಬಹಳ ನಾಚಿಕೆಪಡುವರು; ಅವರ ಗಲಿಬಿಲಿಯು ನಿತ್ಯವಾಗಿರುವದು. ಅದು ಮರೆತು ಹೋಗಲ್ಪಡುವದಿಲ್ಲ.
- Psalm 56:4 ಕೀರ್ತನೆಗಳು 56:4ದೇವರಲ್ಲಿ ಆತನ ವಾಕ್ಯವನ್ನು ನಾನು ಸ್ತುತಿಸುವೆನು; ದೇವರಲ್ಲಿ ನಾನು ಭರವಸವಿಟ್ಟಿದ್ದೇನೆ; ನಾನು ಭಯಪಡೆನು, ಮನುಷ್ಯನು ನನಗೆ ಏನು ಮಾಡಬಲ್ಲನು?
- Psalm 27:1–3 ಕೀರ್ತನೆಗಳು 27:1–3ಕರ್ತನು ನನ್ನ ಬೆಳಕೂ ರಕ್ಷಣೆಯೂ ಆಗಿದ್ದಾನೆ; ನಾನು ಯಾರಿಗೆ ಭಯಪಡು ವೆನು? ಕರ್ತನು ನನ್ನ ಜೀವದ ಬಲವಾಗಿದ್ದಾನೆ; ನಾನು ಯಾರಿಗೆ ಹೆದರುವೆನು? ನನ್ನ ಮಾಂಸವನ್ನು ತಿನ್ನಬೇಕೆಂದು ದುಷ್ಟರು ಅಂದರೆ ನನ್ನ ವೈರಿಗಳೂ ಶತ್ರುಗಳೂ ಬಂದಾಗ ಅವರು ಎಡವಿಬಿದ್ದರು. ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
- Psalm 84:11–12 ಕೀರ್ತನೆಗಳು 84:11–12ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು. ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Numbers 14:9 ಅರಣ್ಯಕಾಂಡ 14:9ನೀವಾ ದರೋ ಕರ್ತನಿಗೆ ವಿರೋಧವಾಗಿ ಬೀಳಬೇಡಿರಿ, ಆ ದೇಶದ ಜನರಿಗೆ ಭಯಪಡಬೇಡಿರಿ, ಅವರು ನಮಗೆ ರೊಟ್ಟಿಯಾಗುವರು; ಅವರಿಗಿದ್ದ ಆಶ್ರಯವು ಅವರ ಬಳಿಯಿಂದ ಹೋಯಿತು; ಕರ್ತನು ನಮ್ಮ ಸಂಗಡ ಇದ್ದಾನೆ; ಅವರಿಗೆ ಭಯಪಡಬೇಡಿರಿ ಅಂದನು.
- John 10:28–30 ಯೋಹಾನನು 10:28–30ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು. ಅವುಗಳನ್ನು ನನಗೆ ಕೊಟ್ಟ ನನ್ನ ತಂದೆಯು ಎಲ್ಲರಿಗಿಂತಲೂ ದೊಡ್ಡವನು; ನನ್ನ ತಂದೆಯ ಕೈಯೊಳ ಗಿಂದ ಅವುಗಳನ್ನು ಯಾವನೂ ಕಸಕೊಳ್ಳಲಾರನು. ನಾನು ಮತ್ತು ನನ್ನ ತಂದೆಯು ಒಂದಾಗಿದ್ದೇವೆ ಎಂದು ಉತ್ತರಕೊಟ್ಟನು.
- Isaiah 50:7–9 ಯೆಶಾಯ 50:7–9ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು. ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.