Romans · chapter 8 · verse 33
Romans 8:33 in Kannada
ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
Devaraadukondavara mele yaaru tappu horisaaru? Devare nammannu neetivantarendu nirnayisuvavanaagiddaane.
Romans 8:33 in English
- King James Version (KJV)
- Who shall lay any thing to the charge of God’s elect? [It is] God that justifieth.
- World English Bible (WEB)
- Who could bring a charge against God’s chosen ones? It is God who justifies.
- American Standard Version (ASV)
- Who shall lay anything to the charge of God’s elect? It is God that justifieth;
- Bible in Basic English (BBE)
- Who will say anything against the saints of God? It is God who makes us clear from evil;
- Darby Translation (DBY)
- Who shall bring an accusation against God's elect? [It is] God who justifies:
- Webster's Bible (WBS)
- Who will lay any thing to the charge of God's elect? [It is] God that justifieth:
- Young's Literal Translation (YLT)
- Who shall lay a charge against the choice ones of God? God [is] He that is declaring righteous,
Read in context
- 31ಹಾಗಾದರೆ ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಕಡೆ ಇದ್ದರೆ ನಮ್ಮನ್ನು ಎದುರಿಸುವವರು ಯಾರು?
- 32ದೇವರು ತನ್ನ ಸ್ವಂತ ಮಗನನ್ನು ಉಳಿಸಿಕೊಳ್ಳದೆ ಆತನನ್ನು ನಮ್ಮೆಲ್ಲರಿಗೊಸ್ಕರ ಒಪ್ಪಿಸಿಕೊಟ್ಟ ಮೇಲೆ ಆತನೊಂದಿಗೆ ಎಲ್ಲವುಗಳನ್ನು ಉಚಿತವಾಗಿ ನಮಗೆ ಕೊಡದೆ ಇರುವನೇ?
- 33ದೇವರಾದುಕೊಂಡವರ ಮೇಲೆ ಯಾರು ತಪ್ಪು ಹೊರಿಸಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವವನಾಗಿದ್ದಾನೆ.
- 34ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;
- 35ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
Cross references
- Revelation 12:10–11 ಪ್ರಕಟನೆ 12:10–11ಆಗ ಪರಲೋಕದಲ್ಲಿ ಮಹಾಶಬ್ದವನ್ನು ನಾನು ಕೇಳಿದೆನು. ಅದು--ಈಗ ರಕ್ಷಣೆಯೂ ಶಕ್ತಿಯೂ ನಮ್ಮ ದೇವರ ರಾಜ್ಯವೂ ಆತನ ಕ್ರಿಸ್ತನ ಅಧಿಕಾರವೂ ಬಂದವು; ಯಾಕಂದರೆ ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರು ಗಾರನು ದೊಬ್ಬಲ್ಪಟ್ಟಿದ್ದಾನೆ. ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.
- Isaiah 50:8–9 ಯೆಶಾಯ 50:8–9ನನಗೆ ನೀತಿ ನಿರ್ಣಯಿಸುವಾತನು ಸವಿಾಪದಲ್ಲಿಯೇ ಇದ್ದಾನೆ; ನನ್ನೊಂದಿಗೆ ಹೋರಾಡು ವವನು ಯಾರು? ನಾವು ಒಟ್ಟಿಗೆ ನಿಂತುಕೊಳ್ಳೋಣ, ನನ್ನ ಎದುರಾಳಿ ಯಾರು? ಅವನು ನನ್ನ ಸವಿಾಪಕ್ಕೆ ಬರಲಿ. ಇಗೋ, ಕರ್ತನಾದ ದೇವರು ನನಗೆ ಸಹಾಯ ಮಾಡುವನು; ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? ಇಗೋ, ಅವರೆಲ್ಲರೂ ಹಳೆಯ ಬಟ್ಟೆಯಂತಾಗುವರು; ಬಟ್ಟೆ ತಿನ್ನುವ ನುಸಿಯು ಅವರನ್ನು ತಿಂದುಬಿಡುವದು.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Romans 8:1 ರೋಮಾಪುರದವರಿಗೆ 8:1ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- 1 Thessalonians 1:4 1 ಥೆಸಲೊನೀಕದವರಿಗೆ 1:4ಪ್ರಿಯ ಸಹೋದರರೇ, ದೇವರು ನಿಮ್ಮನ್ನು ಆದುಕೊಂಡಿ ದ್ದಾನೆಂಬದ್ದನ್ನು ಬಲ್ಲೆವು.
- Zechariah 3:1–4 ಜೆಕರ್ಯ 3:1–4ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು.
- Romans 3:26 ರೋಮಾಪುರದವರಿಗೆ 3:26ತನ್ನ ನೀತಿಯನ್ನು ಈಗಿನ ಕಾಲದಲ್ಲಿ ಹೀಗೆ ತೋರಿಸಿ ತಾನು ನೀತಿವಂತನಾಗಿಯೂ ಯೇಸುವಿನಲ್ಲಿ ನಂಬಿಕೆಯಿಡುವವರನ್ನು ನೀತಿವಂತ ರೆಂದು ನಿರ್ಣಯಿಸುವವನಾಗಿಯೂ ಪ್ರಸಿದ್ಧಿಪಡಿಸಿ ಕೊಂಡನು.
- 1 Peter 1:2 1 ಪೇತ್ರನು 1:2ಪವಿತ್ರಾತ್ಮನಿಂದ ಪ್ರತಿಷ್ಟಿಸಲ್ಪಟ್ಟವರಾಗಿ ವಿಧೇಯರಾ ಗುವದಕ್ಕೂ ಯೇಸು ಕ್ರಿಸ್ತನ ರಕ್ತದಿಂದ ಪ್ರೋಕ್ಷಿತರಾಗು ವದಕ್ಕೂ ತಂದೆಯಾದ ದೇವರ ಭವಿಷ್ಯದ್ ಜ್ಞಾನಾನು ಸಾರವಾಗಿ ಆರಿಸಿಕೊಳ್ಳಲ್ಪಟ್ಟವರಿಗೆ ಬರೆಯುವದೇ ನಂದರೆ--ನಿಮಗೆ ಕೃಪೆಯೂ ಶಾಂತಿಯೂ ಹೆಚ್ಚೆಚ್ಚಾಗಿ ದೊರೆಯಲಿ.
- Isaiah 42:1 ಯೆಶಾಯ 42:1ಇಗೋ, ನಾನು ಆಧಾರವಾಗಿರುವ ನನ್ನ ಸೇವಕನು; ನಾನು ಆದುಕೊಂಡವನಲ್ಲಿ ನನ್ನ ಆತ್ಮ ಆನಂದಿಸುವದು. ನನ್ನ ಆತ್ಮವನ್ನು ಅವನ ಮೇಲೆ ಇರಿಸಿದ್ದೇನೆ, ಅವನು ಅನ್ಯಜನಾಂಗಗಳಿಗೆ ನ್ಯಾಯತೀರ್ಪನ್ನು ತರುವನು.
- Job 42:7–9 ಯೋಬನು 42:7–9ಕರ್ತನು ಈ ಮಾತುಗಳನ್ನೆಲ್ಲಾ ಯೋಬನಿಗೆ ಹೇಳಿದ ಮೇಲೆ ಕರ್ತನು ತೇಮಾನ್ಯನಾದ ಎಲೀಫಜ ನಿಗೆ -- ನಿನ್ನ ಮೇಲೆಯೂ ನಿನ್ನ ಸ್ನೇಹಿತರಿಬ್ಬರ ಮೇಲೆಯೂ ಕೋಪಗೊಂಡಿದ್ದೇನೆ; ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾಡಲಿಲ್ಲ. ಹಾಗಾದರೆ ಈಗ ಏಳು ಎತ್ತುಗಳೂ ಏಳು ಹೋತಗಳೂ ನಿಮ ಗೋಸ್ಕರ ತಕ್ಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಬನ್ನಿರಿ; ಅವುಗಳನ್ನು ನಿಮಗೋಸ್ಕರ ದಹನ ಬಲಿಯಾಗಿ ಅರ್ಪಿಸಿರಿ; ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥನೆ ಮಾಡುವನು. ನಾನು ನಿಮ್ಮ ಬುದ್ಧಿಹೀನತೆಯ ಪ್ರಕಾರ ಮಾಡದ ಹಾಗೆ ಅವನ ಪ್ರಾರ್ಥನೆಯನ್ನು ಅಂಗೀಕರಿಸುವೆನು. ಯಾಕಂ ದರೆ ನೀವು ನನ್ನ ಸೇವಕನಾದ ಯೋಬನ ಪ್ರಕಾರ ನನ್ನ ವಿಷಯವಾಗಿ ಸರಿಯಾದವುಗಳನ್ನು ಮಾತಾ ಡಲಿಲ್ಲ. ತೇಮಾನ್ಯನಾದ ಎಲೀಫಜನೂ ಶೂಹ್ಯ ನಾದ ಬಿಲ್ದದನೂ ನಾಮಾಥ್ಯನಾದ ಚೋಫರನೂ ಹೋಗಿ ಕರ್ತನು ಅವರಿಗೆ ಹೇಳಿದ ಪ್ರಕಾರ ಮಾಡಿದರು. ಕರ್ತನು ಯೋಬನ ಪ್ರಾರ್ಥನೆಯನ್ನು ಅಂಗೀಕರಿಸಿದನು.
- Matthew 24:24 ಮತ್ತಾಯನು 24:24ಯಾಕಂದರೆ ಸುಳ್ಳು ಕ್ರಿಸ್ತರು ಮತ್ತು ಸುಳ್ಳು ಪ್ರವಾದಿಗಳು ಎದ್ದು ಸಾಧ್ಯವಾದರೆ ಆಯಲ್ಪಟ್ಟವರನ್ನು ಸಹ ಮೋಸಗೊಳಿಸುವಂತೆ ದೊಡ್ಡ ಸೂಚಕ ಕಾರ್ಯ ಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸು ವರು.