Romans · chapter 8 · verse 5
Romans 8:5 in Kannada
ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
Shareeravannu anusarisuvavaru adakke sambandha pattavugala mele manassiduttaare; aatmanannanusari suvavaraadaro aatmanige sambandhapattavugala mele manassiduttaare.
Romans 8:5 in English
- King James Version (KJV)
- For they that are after the flesh do mind the things of the flesh; but they that are after the Spirit the things of the Spirit.
- World English Bible (WEB)
- For those who live according to the flesh set their minds on the things of the flesh, but those who live according to the Spirit, the things of the Spirit.
- American Standard Version (ASV)
- For they that are after the flesh mind the things of the flesh; but they that are after the Spirit the things of the Spirit.
- Bible in Basic English (BBE)
- For those who are living in the way of the flesh give their minds to the things of the flesh, but those who go in the way of the Spirit, to the things of the Spirit.
- Darby Translation (DBY)
- For they that are according to flesh mind the things of the flesh; and they that are according to Spirit, the things of the Spirit.
- Webster's Bible (WBS)
- For they that are according to the flesh, do mind the things of the flesh: but they that are according to the Spirit, the things of the Spirit.
- Young's Literal Translation (YLT)
- For those who are according to the flesh, the things of the flesh do mind; and those according to the Spirit, the things of the Spirit;
Read in context
- 3ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
- 4ಹೀಗೆ ಶರೀರಕ್ಕನುಸಾರ ವಾಗಿ ನಡೆಯದೆ ಆತ್ಮನಿಗನುಸಾರವಾಗಿ ನಡೆಯುವವ ರಾದ ನಮ್ಮಲ್ಲಿ ನ್ಯಾಯಪ್ರಮಾಣದ ನೀತಿಯು ನೆರ ವೇರುವದು.
- 5ಶರೀರವನ್ನು ಅನುಸರಿಸುವವರು ಅದಕ್ಕೆ ಸಂಬಂಧ ಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ; ಆತ್ಮನನ್ನನುಸರಿ ಸುವವರಾದರೋ ಆತ್ಮನಿಗೆ ಸಂಬಂಧಪಟ್ಟವುಗಳ ಮೇಲೆ ಮನಸ್ಸಿಡುತ್ತಾರೆ.
- 6ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
- 7ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
Cross references
- 1 Corinthians 2:14 1 ಕೊರಿಂಥದವರಿಗೆ 2:14ಪ್ರಾಕೃತ ಮನುಷ್ಯನು ದೇವರಾತ್ಮನ ವಿಷಯಗಳನ್ನು ಅಂಗೀಕರಿಸುವದಿಲ್ಲ; ಅವು ಅವನಿಗೆ ಹುಚ್ಚುತನವಾಗಿ ತೋರುತ್ತವೆ; ಇಲ್ಲವೆ ಅವು ಆತ್ಮವಿಚಾರದಿಂದ ತಿಳಿಯತಕ್ಕವುಗಳಾಗಿರಲಾಗಿ ಅವನು ಅವುಗಳನ್ನು ಗ್ರಹಿಸ ಲಾರನು.
- Galatians 5:19–25 ಗಲಾತ್ಯದವರಿಗೆ 5:19–25ಶರೀರದ ಕೃತ್ಯಗಳು ಸ್ಪಷ್ಟವಾಗಿ ತೋರಿಬಂದಿವೆ; ಅವು ಯಾವವೆಂದರೆ--ವ್ಯಭಿಚಾರ ಜಾರತ್ವ ಅಶುದ್ಧತ್ವ ಬಂಡುತನ ವಿಗ್ರಹಾರಾಧನೆ ಮಾಟ ಹಗೆತನ ಮತಭೇದ ಹೊಟ್ಟೇಕಿಚ್ಚು ಸಿಟ್ಟು ಜಗಳ ಒಳಸಂಚು ಭಿನ್ನಾಭಿಪ್ರಾಯಗಳು ಅಸೂಯೆ ಗಳು ಕೊಲೆಗಳು ಕುಡುಕತನ ದುಂದೌತನ ಈ ಮೊದಲಾದವುಗಳೇ; ಇಂಥ ಕೃತ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ. ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ. ಕ್ರಿಸ್ತನವರು ತಮ್ಮ ಶರೀರವನ್ನು ಅದರ ಇಚ್ಛೆ ದುರಾಶೆ ಸಹಿತವಾಗಿ ಶಿಲುಬೆಗೆ ಹಾಕಿದ್ದಾರೆ. ನಾವು ಆತ್ಮನಲ್ಲಿ ಜೀವಿಸುವದಾದರೆ ನಾವು ಸಹ ಆತ್ಮನಲ್ಲಿ ನಡೆಯೋಣ.ನಾವು ವ್ಯರ್ಥವಾದ ಹೊಗಳಿಕೆಯನ್ನು ಅಪೇಕ್ಷಿಸದೆಯೂ ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಹೊಟ್ಟೇಕಿಚ್ಚು ಪಡದೆಯೂ ಇರೋಣ.
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.
- Colossians 3:1–3 ಕೊಲೊಸ್ಸೆಯವರಿಗೆ 3:1–3ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಮೇಲಿರು ವಂಥವುಗಳ ಮೇಲೆ ನಿಮ್ಮ ಮನಸ್ಸಿಡಿರಿ. ಭೂಸಂಬಂಧ ವಾದವುಗಳ ಮೇಲೆ ಇಡಬೇಡಿರಿ. ಯಾಕಂದರೆ ನೀವು ಸತ್ತಿರಲ್ಲಾ, ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿಟ್ಟದೆ.
- Romans 8:6–7 ರೋಮಾಪುರದವರಿಗೆ 8:6–7ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ. ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
- Philippians 3:18–19 ಫಿಲಿಪ್ಪಿಯವರಿಗೆ 3:18–19(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ. ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
- Romans 8:9 ರೋಮಾಪುರದವರಿಗೆ 8:9ನೀವಾ ದರೋ ನಿಮ್ಮಲ್ಲಿ ದೇವರಾತ್ಮನು ವಾಸವಾಗಿರುವದಾದರೆ ಶರೀರಾಧೀನರಲ್ಲ, ಆತ್ಮನಿಗೆ ಅಧೀನರಾಗಿದ್ದೀರಿ. ಯಾವ ನಿಗಾದರೂ ಕ್ರಿಸ್ತನ ಆತ್ಮನು ಇಲ್ಲದಿದ್ದರೆ ಅವನು ಕ್ರಿಸ್ತನವ ನಲ್ಲ.
- Mark 8:33 ಮಾರ್ಕನು 8:33ಆದರೆ ಆತನು ತಿರುಗಿಕೊಂಡು ತನ್ನ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ--ಸೈತಾನನೇ ನನ್ನ ಹಿಂದೆ ಹೋಗು; ಯಾಕಂದರೆ ನೀನು ಯೋಚಿಸುವಂಥದ್ದು ದೇವರವುಗಳಲ್ಲ, ಆದರೆ ಮನುಷ್ಯರವುಗಳೇ ಎಂದು ಹೇಳಿದನು.
- Romans 8:12–14 ರೋಮಾಪುರದವರಿಗೆ 8:12–14ಹೀಗಿರಲಾಗಿ ಸಹೋದರರೇ, ಶರೀರಕ್ಕನುಸಾರ ವಾಗಿ ಜೀವಿಸುವದಕ್ಕೆ ನಾವು ಶರೀರಕ್ಕೆ ಋಣಸ್ಥರಲ್ಲ. ನೀವು ಶರೀರಭಾವವನ್ನು ಅನುಸರಿಸಿದರೆ ಸಾಯುವಿರಿ; ಆದರೆ ನೀವು ಆತ್ಮನಿಂದ ದೇಹದ ಕ್ರಿಯೆಗಳನ್ನು ಸಾಯಿಸುವದಾದರೆ ಜೀವಿಸುವಿರಿ. ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
- 2 Corinthians 10:3 2 ಕೊರಿಂಥದವರಿಗೆ 10:3ನಾವು ಶರೀರದಲ್ಲಿ ನಡ ಕೊಳ್ಳುವವರಾದರೂ ಶರೀರ ಪ್ರಕಾರವಾಗಿ ಯುದ್ಧ ಮಾಡುವವರಲ್ಲ.
- 2 Peter 2:10 2 ಪೇತ್ರನು 2:10ಆದರೆ ಮುಖ್ಯವಾಗಿ ಬಂಡು ತನದ ದುರಾಶೆಯಲ್ಲಿ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವನು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ; ದುರಹಂಕಾರದಿಂದ ಗೌರವವುಳ್ಳವರನ್ನು ದೂಷಿಸುತ್ತಾರೆ.
- Ephesians 5:9 ಎಫೆಸದವರಿಗೆ 5:9ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.