Romans · chapter 9 · verse 14
Romans 9:14 in Kannada
ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
Haagaadare naavu enu helona? Devaralli aneeti unto? Haage endigoo illa.
Romans 9:14 in English
- King James Version (KJV)
- What shall we say then? [Is there] unrighteousness with God? God forbid.
- World English Bible (WEB)
- What shall we say then? Is there unrighteousness with God? May it never be!
- American Standard Version (ASV)
- What shall we say then? Is there unrighteousness with God? God forbid.
- Bible in Basic English (BBE)
- What may we say then? is God not upright? let it not be said.
- Darby Translation (DBY)
- What shall we say then? [Is there] unrighteousness with God? Far be the thought.
- Webster's Bible (WBS)
- What shall we say then? [Is there] unrighteousness with God? By no means.
- Young's Literal Translation (YLT)
- What, then, shall we say? unrighteousness [is] with God? let it not be!
Read in context
- 12ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು ಎಂದು ಆಕೆಗೆ ಹೇಳಲ್ಪಟ್ಟಿದೆ.
- 13ಇದಕ್ಕನುಸಾರ-- ನಾನು ಯಾಕೋಬನನ್ನು ಪ್ರೀತಿಸಿದೆನು ಮತು ಏಸಾವನನ್ನು ಹಗೆಮಾಡಿದೆನು ಎಂದು ಬರೆಯಲ್ಪಟ್ಟಿದೆ.
- 14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- 15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- 16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
Cross references
- 2 Chronicles 19:7 2 ಪೂರ್ವಕಾಲವೃತ್ತಾಂತ 19:7ಆದಕಾರಣ ಕರ್ತನ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡಿಸಿರಿ. ನಮ್ಮ ಕರ್ತನಾದ ದೇವರ ಬಳಿಯಲ್ಲಿ ಅನ್ಯಾಯವಾದರೂ ಮುಖದಾಕ್ಷಿಣ್ಯ ವಾದರೂ ಲಂಚ ತೆಗೆದುಕೊಳ್ಳುವದಾದರೂ ಇಲ್ಲ ಅಂದನು.
- Psalm 145:17 ಕೀರ್ತನೆಗಳು 145:17ಕರ್ತನು ತನ್ನ ಎಲ್ಲಾ ಮಾರ್ಗಗಳಲ್ಲಿ ನೀತಿವಂತನೂ ತನ್ನ ಎಲ್ಲಾ ಕೆಲಸಗಳಲ್ಲಿ ಪರಿಶುದ್ಧನೂ ಆಗಿದ್ದಾನೆ.
- Deuteronomy 32:4 ಧರ್ಮೋಪದೇಶಕಾಂಡ 32:4ಆತನೇ ಬಂಡೆ. ಆತನ ಕಾರ್ಯವು ಸಂಪೂರ್ಣ ವಾದದ್ದು. ಆತನ ಮಾರ್ಗಗಳೆಲ್ಲಾ ನ್ಯಾಯವಾಗಿವೆ; ಆತನು ಸತ್ಯದ ಮತ್ತು ದೋಷರಹಿತನಾದ ದೇವರು, ಆತನು ನೀತಿವಂತನೂ ಯಥಾರ್ಥನೂ ಆಗಿದ್ದಾನೆ.
- Psalm 92:15 ಕೀರ್ತನೆಗಳು 92:15ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Job 34:10–12 ಯೋಬನು 34:10–12ಆದದರಿಂದ ತಿಳುವಳಿಕೆಯುಳ್ಳ ಜನರೇ, ನಾನು ಹೇಳುವದನ್ನು ಕೇಳಿರಿ, ದೇವರಿಗೆ ದುಷ್ಟತ್ವವೂ ಸರ್ವ ಶಕ್ತನಿಗೆ ಅನ್ಯಾಯವೂ ದೂರವಾಗಿರಲಿ. ಮನುಷ್ಯನ ಕೆಲಸಕ್ಕೆ ಆತನು ಮುಯ್ಯಿಕೊಡುತ್ತಾನೆ, ಮನುಷ್ಯನ ಮಾರ್ಗದ ಪ್ರಕಾರ ಅವನು ಕಂಡುಕೊಳ್ಳುವಂತೆ ಮಾಡುತ್ತಾನೆ. ಹೌದು, ನಿಶ್ಚಯವಾಗಿ ದೇವರು ದುಷ್ಟತ್ವವನ್ನು ಮಾಡುವದಿಲ್ಲ, ಇಲ್ಲವೆ ಸರ್ವಶಕ್ತನು ನ್ಯಾಯವನ್ನು ಡೊಂಕುಮಾಡುವದಿಲ್ಲ.
- Revelation 16:7 ಪ್ರಕಟನೆ 16:7ಆಮೇಲೆ ಯಜ್ಞವೇದಿಯೊಳಗಿಂದ ಮತ್ತೊಬ್ಬನು--ಹೌದು, ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ ಎಂದು ಹೇಳುವದನ್ನು ನಾನು ಕೇಳಿದೆನು.
- Job 8:3 ಯೋಬನು 8:3ದೇವರು ಅನ್ಯಾಯವಾದ ತೀರ್ಪುಮಾಡುತ್ತಾನೋ? ಸರ್ವಶಕ್ತನು ನೀತಿಗೆ ವಿರುದ್ಧವಾದದ್ದನ್ನು ಮಾಡು ವನೋ?
- Genesis 18:25 ಆದಿಕಾಂಡ 18:25ಆ ಪ್ರಕಾರ ಮಾಡಿ ನೀತಿವಂತರನ್ನು ದುಷ್ಟರ ಸಂಗಡ ಕೊಲ್ಲುವದು ನಿನಗೆ ದೂರವಾಗಿರಲಿ; ಹಾಗೆ ನೀತಿವಂತರನ್ನು ದುಷ್ಟರಿಗೆ ಸಮಾನಮಾಡುವದು ನಿನಗೆ ದೂರ ವಾಗಿರಲಿ; ಭೂಲೋಕಕ್ಕೆಲ್ಲಾ ನ್ಯಾಯಾಧಿಪತಿಯಾಗಿ ರುವಾತನು ನ್ಯಾಯವಾದದ್ದನ್ನು ಮಾಡದೆ ಇರುವನೇ ಅಂದನು.
- Romans 2:5 ರೋಮಾಪುರದವರಿಗೆ 2:5ಹೀಗೆ ನಿನ್ನ ಕಾಠಿಣ್ಯತೆ ಮತ್ತು ಪಶ್ಚಾತ್ತಾಪವಿಲ್ಲದ ಹೃದಯದಿಂದ ಉಗ್ರತೆಯ ದಿನಕ್ಕಾಗಿಯೂ ದೇವರ ನೀತಿಯುಳ್ಳ ನ್ಯಾಯತೀರ್ವಿಕೆಯ ಪ್ರತ್ಯಕ್ಷತೆಗಾಗಿಯೂ ದೇವರ ಕೋಪವನ್ನು ನಿನಗೋಸ್ಕರ ಕೂಡಿಸಿಟ್ಟುಕೊಳ್ಳುತ್ತಾ ಇದ್ಧೀ.
- Revelation 15:3–4 ಪ್ರಕಟನೆ 15:3–4ಅವರು ದೇವರ ಸೇವಕನಾದ ಮೋಶೆಯ ಹಾಡನ್ನೂ ಕುರಿಮರಿಯಾದಾತನ ಹಾಡನ್ನೂ ಹಾಡುತ್ತಾ--ಸರ್ವಶಕ್ತನಾಗಿರುವ ದೇವ ರಾದ ಕರ್ತನೇ, ನಿನ್ನ ಕ್ರಿಯೆಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಪರಿಶುದ್ಧರ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ. ಓ ಕರ್ತನೇ, ನಿನಗೆ ಭಯಪಡದವರೂ ನಿನ್ನ ನಾಮವನ್ನು ಮಹಿಮೆಪಡಿಸದವರೂ ಯಾರಿ ದ್ದಾರೆ? ಯಾಕಂದರೆ ನೀನೊಬ್ಬನೇ ಪರಿಶುದ್ಧನು; ನಿನ್ನ ತೀರ್ಪುಗಳು ಪ್ರಕಟವಾದದ್ದರಿಂದ ಎಲ್ಲಾ ಜನಾಂಗ ಗಳು ಬಂದು ನಿನ್ನ ಸನ್ನಿಧಾನದಲ್ಲಿ ಆರಾಧಿಸುವರು ಎಂದು ಹೇಳಿದರು.
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Romans 3:1 ರೋಮಾಪುರದವರಿಗೆ 3:1ಹಾಗಾದರೆ ಯೆಹೂದ್ಯರಿಗಿರುವ ಪ್ರಾಧಾ ನ್ಯತೆ ಏನು? ಇಲ್ಲವೆ ಸುನ್ನತಿಯಿಂದ ಲಾಭವೇನು?