Romans · chapter 9 · verse 16
Romans 9:16 in Kannada
ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
Heegiruvaaga adu ichchhisuvavanindaagalee prayaasapaduvavanindaagalee aagade karune tori suva devarindale aaguvadu.
Romans 9:16 in English
- King James Version (KJV)
- So then [it is] not of him that willeth, nor of him that runneth, but of God that sheweth mercy.
- World English Bible (WEB)
- So then it is not of him who wills, nor of him who runs, but of God who has mercy.
- American Standard Version (ASV)
- So then it is not of him that willeth, nor of him that runneth, but of God that hath mercy.
- Bible in Basic English (BBE)
- So then, it is not by the desire or by the attempt of man, but by the mercy of God.
- Darby Translation (DBY)
- So then [it is] not of him that wills, nor of him that runs, but of God that shews mercy.
- Webster's Bible (WBS)
- So then, [it is] not of him that willeth, nor of him that runneth, but of God that showeth mercy.
- Young's Literal Translation (YLT)
- so, then — not of him who is willing, nor of him who is running, but of God who is doing kindness:
Read in context
- 14ಹಾಗಾದರೆ ನಾವು ಏನು ಹೇಳೋಣ? ದೇವರಲ್ಲಿ ಅನೀತಿ ಉಂಟೋ? ಹಾಗೆ ಎಂದಿಗೂ ಇಲ್ಲ.
- 15ಆತನು ಮೋಶೆಗೆ--ಯಾವನ ಮೇಲೆ ನನಗೆ ಕರುಣೆ ಇದೆಯೋ ಅವನನ್ನು ಕರುಣಿಸುವೆನು ಮತ್ತು ಯಾವನ ಮೇಲೆ ನನಗೆ ದಯೆ ಇದೆಯೋ ಅವನಿಗೆ ದಯೆ ತೋರಿಸುವೆನು ಎಂದು ಹೇಳುತ್ತಾನೆ.
- 16ಹೀಗಿರುವಾಗ ಅದು ಇಚ್ಛಿಸುವವನಿಂದಾಗಲೀ ಪ್ರಯಾಸಪಡುವವನಿಂದಾಗಲೀ ಆಗದೆ ಕರುಣೆ ತೋರಿ ಸುವ ದೇವರಿಂದಲೇ ಆಗುವದು.
- 17ಬರಹವು ಫರೋ ಹನಿಗೆ--ನನ್ನ ಬಲವನ್ನು ನಿನ್ನಲ್ಲಿ ತೋರಿಸುವ ಹಾಗೆಯೂ ನನ್ನ ನಾಮವು ಭೂಮಿಯ ಎಲ್ಲಾ ಕಡೆಯಲ್ಲಿ ಪ್ರಸಿದ್ಧಿ ಹೊಂದಬೇಕೆಂಬ ಉದ್ದೇಶದಿಂದಲೂ ನಾನು ನಿನ್ನನ್ನು ಉನ್ನತ ಸ್ಥಿತಿಗೆ ತಂದಿದ್ದೇನೆ ಎಂದು ಹೇಳುತ್ತದೆ.
- 18ಆದದರಿಂದ ಆತನು ಯಾವನನ್ನು ಕರುಣಿಸಬೇಕೆಂದಿ ರುವನೋ ಅವನನ್ನು ಕರುಣಿಸುವನು; ಯಾವನನ್ನು ಕಠಿಣಪಡಿಸಬೇಕೆಂದಿರುವನೋ ಅವನನ್ನು ಕಠಿಣ ಪಡಿಸುವನು.
Cross references
- Ephesians 2:8 ಎಫೆಸದವರಿಗೆ 2:8ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
- Philippians 2:13 ಫಿಲಿಪ್ಪಿಯವರಿಗೆ 2:13ತನ್ನ ಸುಚಿತ್ತದ ಪ್ರಕಾರ ನಿಮ್ಮಲ್ಲಿ ಉದ್ದೇಶವನ್ನೂ ಕಾರ್ಯ ವನ್ನೂ ಸಾಧಿಸುವಾತನು ದೇವರೇ.
- Matthew 11:25–26 ಮತ್ತಾಯನು 11:25–26ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಇದು ನಿನ್ನ ದೃಷ್ಟಿಯಲ್ಲಿ ಒಳ್ಳೆಯದಾಗಿ ತೋಚಿತು.
- Ephesians 2:4–5 ಎಫೆಸದವರಿಗೆ 2:4–5ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;)
- 1 Peter 2:9–10 1 ಪೇತ್ರನು 2:9–10ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ, ಈಗ ದೇವರ ಪ್ರಜೆ ಯಾಗಿದ್ದೀರಿ; ಮೊದಲು ಕರುಣೆ ಹೊಂದಿರಲಿಲ್ಲ, ಈಗ ಕರುಣೆ ಹೊಂದಿದವರಾಗಿದ್ದೀರಿ.
- Titus 3:3–5 ತೀತನಿಗೆ 3:3–5ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು. ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- Romans 9:11 ರೋಮಾಪುರದವರಿಗೆ 9:11(ಮಕ್ಕಳಿನ್ನೂ ಹುಟ್ಟದಿರುವಾಗ ಮತ್ತು ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಮಾಡದಿರು ವಾಗ ಆಯ್ಕೆಯ ಪ್ರಕಾರ ದೇವರ ಸಂಕಲ್ಪವು ಸ್ಥಿರಗೊಳ್ಳು ವಂತೆ ಕ್ರಿಯೆಗಳಿಂದಲ್ಲ, ಆದರೆ ಕರೆದಾತನಿಂದಲೇ)
- 1 Corinthians 1:26–31 1 ಕೊರಿಂಥದವರಿಗೆ 1:26–31ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ. ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ; ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ. ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು. ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
- Luke 10:21 ಲೂಕನು 10:21ಆ ಗಳಿಗೆಯಲ್ಲಿ ಯೇಸು ಆತ್ಮದಲ್ಲಿ ಉಲ್ಲಾಸ ಗೊಂಡು -- ಓ ತಂದೆಯೇ, ಪರಲೋಕ, ಭೂಲೋಕ ಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿ ಗಳಿಗೂ ಬುದ್ಧಿವಂತರಿಗೂ ಮರೆಮಾಡಿ ಕೂಸುಗಳಿಗೆ ಪ್ರಕಟಮಾಡಿರುವದರಿಂದ ನಿನ್ನನ್ನು ಕೊಂಡಾಡುತ್ತೇನೆ; ಹೌದು, ತಂದೆಯೇ, ಅದು ನಿನ್ನ ದೃ
- James 1:18 ಯಾಕೋಬನು 1:18ಆತನು ತನ್ನ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಿರಲಾಗಿ ನಾವು ಆತನ ಸೃಷ್ಟಿಗಳಲ್ಲಿ ಒಂದು ತರಹದ ಪ್ರಥಮ ಫಲ ಗಳಂತಾದೆವು.
- 2 Thessalonians 2:13–14 2 ಥೆಸಲೊನೀಕದವರಿಗೆ 2:13–14ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.
- Isaiah 65:1 ಯೆಶಾಯ 65:1ಕೇಳದವರಿಂದ ನಾನು ವಿಚಾರಿಸಲ್ಪಟ್ಟಿದ್ದೇನೆ, ನನ್ನನ್ನು ಹುಡುಕದವರಿಗೂ ಕಂಡು ಕೊಳ್ಳಲ್ಪಟ್ಟಿದ್ದೇನೆ; ನನ್ನ ಹೆಸರಿನಿಂದ ಕರೆಯಲ್ಪಡದ ಜನಾಂಗಕ್ಕೆ--ಇಗೋ, ಇದ್ದೇನೆ; ಇಗೋ, ಇದ್ದೇನೆ ಎಂದು ಹೇಳಿದೆನು.