Romans · chapter 9 · verse 2
Romans 9:2 in Kannada
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
Adenandare nanna hrudayadalli dodda bhaaravoo edebidada duhkhavoo untu.
Romans 9:2 in English
- King James Version (KJV)
- That I have great heaviness and continual sorrow in my heart.
- World English Bible (WEB)
- that I have great sorrow and unceasing pain in my heart.
- American Standard Version (ASV)
- that I have great sorrow and unceasing pain in my heart.
- Bible in Basic English (BBE)
- That I am full of sorrow and pain without end.
- Darby Translation (DBY)
- that I have great grief and uninterrupted pain in my heart,
- Webster's Bible (WBS)
- That I have great heaviness and continual sorrow in my heart.
- Young's Literal Translation (YLT)
- that I have great grief and unceasing pain in my heart —
Read in context
- 1ಈ ಮಾತನ್ನು ನಾನು ಸುಳ್ಳಾಡದೆ ಕ್ರಿಸ್ತನಲ್ಲಿ ಸತ್ಯವಾಗಿ ಹೇಳುತ್ತೇನೆ; ಪವಿ ತ್ರಾತ್ಮನಲ್ಲಿ ನನ್ನ ಮನಸ್ಸಾಕ್ಷಿಯು ನನಗೆ ಸಾಕ್ಷಿ ಕೊಡುತ್ತದೆ.
- 2ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
- 3ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು.
- 4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
Cross references
- Philippians 3:18 ಫಿಲಿಪ್ಪಿಯವರಿಗೆ 3:18(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
- Romans 10:1 ರೋಮಾಪುರದವರಿಗೆ 10:1ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
- Lamentations 3:51 ಪ್ರಲಾಪಗಳು 3:51ನನ್ನ ನಗರದ ಕುಮಾರ್ತೆಯರೆಲ್ಲರ ನಿಮಿತ್ತವಾಗಿ ನನ್ನ ಕಣ್ಣು ನನ್ನ ಹೃದಯವನ್ನು ಪೀಡಿಸಿದೆ.
- Jeremiah 13:17 ಯೆರೆಮೀಯ 13:17ಆದರೆ ನೀವು ಅದನ್ನು ಕೇಳದೆ ಹೋದರೆ ನನ್ನ ಪ್ರಾಣವು ನಿಮ್ಮ ಗರ್ವದ ನಿಮಿತ್ತ ಅಂತರಂಗದ ಸ್ಥಳಗಳಲ್ಲಿ ಅಳು ವದು. ನನ್ನ ಆತ್ಮವು ಬಹಳವಾಗಿ ದುಃಖಿಸುವದು; ಕಣ್ಣೀರು ಬಹಳವಾಗಿ ಸುರಿಸುವದು; ಕರ್ತನ ಮಂದೆಯು ಸೆರೆಯಾಗಿ ಒಯ್ಯಲ್ಪಟ್ಟಿದೆ.
- Psalm 119:136 ಕೀರ್ತನೆಗಳು 119:136ಅವರು ನಿನ್ನ ನ್ಯಾಯಪ್ರಮಾಣವನ್ನು ಕೈ ಕೊಳ್ಳದ ನಿಮಿತ್ತ ಹೊಳೆಗಳಂತೆ ನನ್ನ ಕಣ್ಣೀರು ಹರಿಯುತ್ತದೆ.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Ezekiel 9:4 ಯೆಹೆಜ್ಕೇಲನು 9:4ಕರ್ತನು ಅವನಿಗೆ ಹೇಳಿದ್ದೇನಂದರೆ--ಯೆರೂ ಸಲೇಮಿನ ಪಟ್ಟಣದ ಮಧ್ಯೆ ಹಾದುಹೋಗಿ ಅವರ ಮಧ್ಯೆ ನಡೆಯುವ ಎಲ್ಲಾ ಅಸಹ್ಯವಾದವುಗಳ ನಿಮಿತ್ತ ನಿಟ್ಟುಸಿರು ಬಿಡುತ್ತಾ ಅಳುತ್ತಿರುವವರೆಲ್ಲರ ಹಣೆಯ ಮೇಲೆ ಗುರುತು ಹಾಕು ಅಂದನು.
- Lamentations 3:48–49 ಪ್ರಲಾಪಗಳು 3:48–49ನನ್ನ ಜನರ ಕುಮಾರಿಯ ನಾಶನದ ನಿಮಿತ್ತವಾಗಿ ನನ್ನ ಕಣ್ಣಿನಿಂದ ನೀರು ನದಿಯಾಗಿ ಹರಿದುಹೋಗುತ್ತದೆ. ಕರ್ತನು ಕಟಾಕ್ಷಿಸಿ ಪರಲೋಕದಿಂದ ನೋಡುವ ತನಕ ನೇತ್ರವು ಎಡೆಬಿಡದೆ ಕಣ್ಣೀರು ಸುರಿಸುತ್ತದೆ;
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Lamentations 1:12 ಪ್ರಲಾಪಗಳು 1:12ಹಾದು ಹೋಗುವ ವರೆಲ್ಲರೇ, ಇದು ನಿಮಗೆ ಏನೂ ಅಲ್ಲವೋ? ಇಗೋ, ಕರ್ತನ ಕೋಪ ಉರಿಯುವ ದಿನದಲ್ಲಿ ನನ್ನನ್ನು ಸಂಕಟಪಡಿಸಿದ ನನ್ನ ದುಃಖದ ಹಾಗೆ ಬೇರೆ ಯಾವ ದುಃಖವಾದರೂ ಇದ್ದರೆ ನೋಡಿರಿ.
- 1 Samuel 15:35 1 ಸಮುವೇಲನು 15:35ಸಮುವೇಲನು ತಾನು ಸಾಯುವ ದಿವಸದ ವರೆಗೂ ಸೌಲನನ್ನು ತಿರಿಗಿ ನೋಡಲು ಬರಲಿಲ್ಲ. ಆದರೆ ಸಮುವೇಲನು ಅವನಿಗೋಸ್ಕರ ದುಃಖಪಟ್ಟನು. ಇದಲ್ಲದೆ ಅವನನ್ನು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿದ್ದ ಕೋಸ್ಕರ ಕರ್ತನು ಪಶ್ಚಾತ್ತಾಪಪಟ್ಟನು.
- Isaiah 66:10 ಯೆಶಾಯ 66:10ಯೆರೂಸಲೇಮಿನ ಸಂಗಡ ನೀವು ಸಂತೋಷಿ ಸಿರಿ, ಅವಳನ್ನು ಪ್ರೀತಿ ಮಾಡುವವರೆಲ್ಲರೇ, ಅವಳೊಂ ದಿಗೆ ಉಲ್ಲಾಸಪಡಿರಿ; ಅವಳಿಗೋಸ್ಕರ ದುಃಖಿಸಿದವ ರೆಲ್ಲರೇ, ಅವಳ ಸಂತೋಷಕ್ಕಾಗಿ ಆನಂದಪಡಿರಿ.