Romans · chapter 9 · verse 6
Romans 9:6 in Kannada
ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
Devara maatu nirarthakavaayitentalla; yaakandare israayelyarige sambandhapattava rellaroo israayelyaralla;
Romans 9:6 in English
- King James Version (KJV)
- Not as though the word of God hath taken none effect. For they [are] not all Israel, which are of Israel:
- World English Bible (WEB)
- But it is not as though the word of God has come to nothing. For they are not all Israel that are of Israel.
- American Standard Version (ASV)
- But [it is] not as though the word of God hath come to nought. For they are not all Israel, that are of Israel:
- Bible in Basic English (BBE)
- But it is not as if the word of God was without effect. For they are not all Israel, who are of Israel:
- Darby Translation (DBY)
- Not however as though the word of God had failed; for not all [are] Israel which [are] of Israel;
- Webster's Bible (WBS)
- Not as though the word of God hath taken no effect. For they [are] not all Israel, who are [descendants] from Israel?
- Young's Literal Translation (YLT)
- And it is not possible that the word of God hath failed; for not all who [are] of Israel are these Israel;
Read in context
- 4ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು.
- 5ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.
- 6ದೇವರ ಮಾತು ನಿರರ್ಥಕವಾಯಿತೆಂತಲ್ಲ; ಯಾಕಂದರೆ ಇಸ್ರಾಯೇಲ್ಯರಿಗೆ ಸಂಬಂಧಪಟ್ಟವ ರೆಲ್ಲರೂ ಇಸ್ರಾಯೇಲ್ಯರಲ್ಲ;
- 7ಇಲ್ಲವೆ ಅವರು ಅಬ್ರಹಾಮನ ಸಂತತಿಯವರಾದ ಕಾರಣ ಅವರೆ ಲ್ಲರೂ ಮಕ್ಕಳಲ್ಲ; ಆದರೆ--ಇಸಾಕನಲ್ಲಿಯೇ ನಿನ್ನ ಸಂತ ತಿಯು ಕರೆಯಲ್ಪಡುವದು ಎಂಬದೇ.
- 8ಅಂದರೆ--ಶರೀರ ಸಂಬಂಧವಾದ ಮಕ್ಕಳು ದೇವರ ಮಕ್ಕಳಲ್ಲ; ಆದರೆ ವಾಗ್ದಾನದ ಮಕ್ಕಳೇ ಆತನ ಸಂತತಿಯೆಂದು ಎಣಿಸಲ್ಪಟ್ಟಿದ್ದಾರೆ.
Cross references
- Galatians 6:16 ಗಲಾತ್ಯದವರಿಗೆ 6:16ಈ ಸೂತ್ರಕ್ಕೆ ಸರಿಯಾಗಿ ನಡೆಯುವವರೆಲ್ಲರ ಮೇಲೆ ಅಂದರೆ ದೇವರ ಇಸ್ರಾ ಯೇಲಿನ ಮೇಲೆ ಶಾಂತಿಯೂ ಕರುಣೆಯೂ ಇರಲಿ.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Romans 11:1–2 ರೋಮಾಪುರದವರಿಗೆ 11:1–2ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ. ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--
- Romans 4:12–16 ರೋಮಾಪುರದವರಿಗೆ 4:12–16ಇದಲ್ಲದೆ ಸುನ್ನತಿಯಿದ್ದವರಿಗೆ ತಂದೆಯಾದವನು ಸುನ್ನತಿಯವರಿಗೆ ಮಾತ್ರವಲ್ಲ, ಆದರೆ ಅಬ್ರಹಾಮನು ಸುನ್ನತಿ ಮಾಡಿಸಿಕೊಳ್ಳುವದಕ್ಕೆ ಮುಂಚೆ ನಡೆದ ನಂಬಿಕೆಯ ಹೆಜ್ಜೆಜಾಡಿನಲ್ಲಿ ನಡೆಯುತ್ತಿರುವ ಸುನ್ನತಿ ಯಿಲ್ಲದವರಿಗೂ ತಂದೆಯಾಗಿದ್ದಾನೆ. ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು. ನ್ಯಾಯ ಪ್ರಮಾಣವನ್ನನುಸರಿಸುವವರು ಬಾಧ್ಯರಾಗಿದ್ದರೆ ನಂಬಿ ಕೆಯು ವ್ಯರ್ಥವಾಯಿತು, ವಾಗ್ದಾನವೂ ನಿರರ್ಥಕ ವಾಯಿತು. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ; ಆದಕಾರಣ ಕೃಪೆ ಯಿಂದಲೇ ದೊರೆಯುವ ಆ ಬಾಧ್ಯತೆಯು ನಂಬಿಕೆಯ ಮುಖಾಂತರ ಸಿಕ್ಕುತ್ತದೆ. ಹೀಗೆ ಆ ವಾಗ್ದಾನವು ಅಬ್ರಹಾ ಮನ ಸಂತತಿಯವರೆಲ್ಲರಿಗೂ ಅಂದರೆ ನ್ಯಾಯ ಪ್ರಮಾಣವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರ ವಲ್ಲದೆ ನಮ್ಮೆಲ್ಲರಿಗೆ ತಂದೆಯಾಗಿರುವ ಅಬ್ರಹಾಮ ನಲ್ಲಿದ್ದಂಥ ನಂಬಿಕೆ
- Romans 3:3 ರೋಮಾಪುರದವರಿಗೆ 3:3ಕೆಲವರು ನಂಬದಿದ್ದರೆ ಏನು? ಅವರ ಅಪನಂಬಿಕೆಯು ದೇವರ ವಿಷಯವಾದ ನಂಬಿಕೆಯನ್ನು ನಿರರ್ಥಕ ಮಾಡುವದೋ?
- John 1:47 ಯೋಹಾನನು 1:47ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
- Numbers 23:19 ಅರಣ್ಯಕಾಂಡ 23:19ಸುಳ್ಳಾಡುವ ಹಾಗೆ ದೇವರು ಮನುಷ್ಯನಲ್ಲ, ಪಶ್ಚಾತ್ತಾಪಪಡುವ ಹಾಗೆ ನರಪುತ್ರನಲ್ಲ; ಆತನು ನುಡಿದದ್ದನ್ನು ಮಾಡದಿರುವನೇ? ಮಾತನಾಡಿದ್ದನ್ನು ಆತನು ಸ್ಥಾಪಿಸನೇ?
- John 10:35 ಯೋಹಾನನು 10:35ಹಾಗಾದರೆ ದೇವರವಾಕ್ಯವನ್ನು ಹೊಂದಿದವರು ದೇವರುಗಳೆಂದು ಆತನು ಕರೆದಿರುವಲ್ಲಿ ಬರಹವು ವ್ಯರ್ಥವಾಗಲಾರದಷ್ಟೆ.
- Hebrews 6:17–18 ಇಬ್ರಿಯರಿಗೆ 6:17–18ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು. ಆಶ್ರಯವನ್ನು ಹೊಂದುವದಕ್ಕೆ ಓಡಿ ಬಂದು ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡುಕೊಂಡವರಾದ ನಮಗೆ ಸುಳ್ಳಾಡದ ದೇವರ ಎರಡು ನಿಶ್ಚಲವಾದ ಆಧಾರಗಳಲ್ಲಿ ನಮಗೆ ಬಲವಾದ ಆದರಣೆ ಉಂಟಾ ಯಿತು.
- 2 Timothy 2:13 2 ತಿಮೊಥೆಯನಿಗೆ 2:13ನಾವು ಅಪನಂಬಿಕೆ ಯುಳ್ಳವರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು; ಆತನು ತನ್ನನ್ನು ತಾನು ಅಲ್ಲಗಳೆಯಲಾರನು.
- Isaiah 55:11 ಯೆಶಾಯ 55:11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- Matthew 24:35 ಮತ್ತಾಯನು 24:35ಆಕಾಶವೂ ಭೂಮಿಯೂ ಅಳಿದುಹೋಗುವವು; ಆದರೆ ನನ್ನ ಮಾತುಗಳು ಅಳಿದುಹೋಗುವದೇ ಇಲ್ಲ.