Ruth · chapter 2 · verse 10
Ruth 2:10 in Kannada
ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
Aaga avalu saashtaanga biddu vandisi avanige naanu anyalaagiruvaaga neenu nannannu tilukondu nanna mele ninna krupe yannu torisiddu hege andalu.
Ruth 2:10 in English
- King James Version (KJV)
- Then she fell on her face, and bowed herself to the ground, and said unto him, Why have I found grace in thine eyes, that thou shouldest take knowledge of me, seeing I [am] a stranger?
- World English Bible (WEB)
- Then she fell on her face and bowed herself to the ground, and said to him, “Why have I found favor in your sight, that you should take knowledge of me, since I am a foreigner?”
- American Standard Version (ASV)
- Then she fell on her face, and bowed herself to the ground, and said unto him, Why have I found favor in thy sight, that thou shouldest take knowledge of me, seeing I am a foreigner?
- Bible in Basic English (BBE)
- Then she went down on her face to the earth, and said to him, Why have I grace in your eyes, that you give attention to me, seeing I am from a strange people?
- Darby Translation (DBY)
- Then she fell on her face, and bowed herself to the ground, and said to him, Why have I found favour in thine eyes, that thou shouldest regard me, seeing I am a foreigner?
- Webster's Bible (WBS)
- Then she fell on her face, and bowed herself to the ground, and said to him, Why have I found grace in thy eyes, that thou shouldst take knowledge of me, seeing I [am] a stranger?
- Young's Literal Translation (YLT)
- And she falleth on her face, and boweth herself to the earth, and saith unto him, 'Wherefore have I found grace in thine eyes, to discern me, and I a stranger?'
Read in context
- 8ಆಗ ಬೋವಜನು ರೂತಳಿಗೆ ನನ್ನ ಮಗಳೇ, ನನ್ನ ಮಾತು ಕೇಳುತ್ತೀಯಾ? ನೀನು ಹಕ್ಕಲಾದುಕೊಳ್ಳಲು ಅನ್ಯರ ಹೊಲಕ್ಕೆ ಹೋಗದೆ, ಈ ಸ್ಥಳವನ್ನು ಬಿಟ್ಟು ಹೊರಡದೆ, ಇಲ್ಲಿಯೇ ನನ್ನ ದಾಸಿಗಳ ಸಂಗಡ ಕೂಡಿಕೊಂಡಿರು.
- 9ನಿನ್ನ ಕಣ್ಣುಗಳು ಅವರು ಕೊಯ್ಯುವ ಹೊಲದ ಮೇಲೆ ಇರಲಿ; ಅವರ ಹಿಂದೆಯೇ ಹೋಗು, ಯಾವನಾದರೂ ನಿನ್ನನ್ನು ಮುಟ್ಟದ ಹಾಗೆ ಅವರಿಗೆ ಆಜ್ಞಾಪಿಸಿದೆನಲ್ಲಾ? ನಿನಗೆ ದಾಹವಾದರೆ ನೀನು ಪಾತ್ರೆಗಳ ಬಳಿಗೆ ಹೋಗಿ ಪ್ರಾಯಸ್ಥರು ಸೇದಿಟ್ಟ ನೀರನ್ನು ಕುಡಿ ಅಂದನು.
- 10ಆಗ ಅವಳು ಸಾಷ್ಟಾಂಗ ಬಿದ್ದು ವಂದಿಸಿ ಅವನಿಗೆ ನಾನು ಅನ್ಯಳಾಗಿರುವಾಗ ನೀನು ನನ್ನನ್ನು ತಿಳುಕೊಂಡು ನನ್ನ ಮೇಲೆ ನಿನ್ನ ಕೃಪೆ ಯನ್ನು ತೋರಿಸಿದ್ದು ಹೇಗೆ ಅಂದಳು.
- 11ಆಗ ಬೋವಜನು ಅವಳಿಗೆ ಪ್ರತ್ಯುತ್ತರವಾಗಿ ನಿನ್ನ ಗಂಡನು ಸತ್ತ ತರುವಾಯ ನೀನು ನಿನ್ನ ಅತ್ತೆಗೋಸ್ಕರ ಮಾಡಿ ದ್ದೆಲ್ಲವೂ ನಿನ್ನ ತಂದೆತಾಯಿಗಳನ್ನೂ ಹುಟ್ಟಿದ ದೇಶವನ್ನೂ ಎಂದಿಗೂ ಅರಿಯದ ಜನರ ಬಳಿಗೆ ಬಂದದ್ದೂ ನನಗೆ ಚೆನ್ನಾಗಿ ತಿಳಿಸಲ್ಪಟ್ಟಿದೆ.
- 12ನೀನು ಮಾಡಿದ್ದಕ್ಕೆ ಕರ್ತನು ನಿನಗೆ ಬದಲು ಕೊಡಲಿ; ಇಸ್ರಾಯೇಲ್ ದೇವರಾದ ಕರ್ತನ ರೆಕ್ಕೆಗಳ ಕೆಳಗೆ ಆಶ್ರಯಿಸಿಕೊಳ್ಳಲು ಬಂದ ನಿನಗೆ ಆತನಿಂದ ಬರುವ ನಿನ್ನ ಬಹುಮಾನ ಪರಿಪೂರ್ಣವಾಗಿರಲಿ ಅಂದನು.
Cross references
- 1 Samuel 25:23 1 ಸಮುವೇಲನು 25:23ಅಬೀಗೈಲಳು ದಾವೀದನನ್ನು ನೋಡಿದ ಕೂಡಲೇ ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ ಅವನ ಮುಂದೆ ಬೋರಲು ಬಿದ್ದು ನೆಲಕ್ಕೆ ಎರಗಿ ಅವನ ಪಾದಗಳ ಮೇಲೆ ಬಿದ್ದು--ನನ್ನ ಒಡೆ ಯನೇ, ಈ ಅಕ್ರಮವು ನನ್ನ ಮೇಲೆಯೇ ಇರಲಿ.
- Ruth 2:13 ರೂತಳು 2:13ಅದಕ್ಕೆ ಅವಳು ನನ್ನ ಒಡೆಯನೇ, ನನಗೆ ನಿನ್ನ ದೃಷ್ಟಿಯಲ್ಲಿ ದಯೆದೊರಕಲಿ. ಯಾಕಂದರೆ ನನ್ನನ್ನು ನೀನು ಆದರಿಸಿದಿ; ನಾನು ನಿನ್ನ ದಾಸಿಗಳಲ್ಲಿ ಒಬ್ಬಳಲ್ಲ ದಿದ್ದರೂ ನನ್ನ ಕೂಡ ಸ್ನೇಹದಿಂದ ಮಾತನಾಡಿದಿಅಂದಳು.
- Luke 17:16–18 ಲೂಕನು 17:16–18ಆತನ ಪಾದಕ್ಕೆ ಅಡ್ಡಬಿದ್ದು ಆತನಿಗೆ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಿದನು; ಅವನು ಸಮಾರ್ಯದವನಾಗಿದ್ದನು. ಆದರೆ ಯೇಸು ಅವನಿಗೆ--ಹತ್ತು ಮಂದಿ ಶುದ್ಧರಾಗ ಲಿಲ್ಲವೇ. ಆದರೆ ಆ ಒಂಭತ್ತು ಮಂದಿ ಎಲ್ಲಿ? ದೇವ ರನ್ನು ಮಹಿಮೆಪಡಿಸುವದಕ್ಕೆ ಹಿಂದಿರುಗಿದವರಲ್ಲಿ ಈ ಅನ್ಯನ ಹೊರತು ಯಾರೂ ಕಾಣಿಸಲಿಲ್ಲ ಎಂದು ಹೇಳಿ
- Luke 1:43 ಲೂಕನು 1:43ನನ್ನ ಕರ್ತನ ತಾಯಿಯು ನನ್ನ ಬಳಿಗೆ ಬರುವದು ನನಗೆಲ್ಲಿಂದಾಯಿತು?
- Romans 12:10 ರೋಮಾಪುರದವರಿಗೆ 12:10ಸಹೋದರ ಪ್ರೀತಿಯಿಂದ ಒಬ್ಬರಿಗೊಬ್ಬರು ಕರುಣಾ ವಾತ್ಸಲ್ಯವುಳ್ಳ ವರಾಗಿರ್ರಿ; ಸನ್ಮಾನಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರ್ರಿ.
- 2 Samuel 19:28 2 ಸಮುವೇಲನು 19:28ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಮಾಡು. ಅರಸನಾದ ನನ್ನ ಒಡೆಯನಿಗೆ ನನ್ನ ತಂದೆಯ ಮನೆಯವರೆಲ್ಲರು ಸತ್ತ ವರ ಹಾಗೆ ಇದ್ದಾಗ್ಯೂ ನಿನ್ನ ಮೇಜಿನಲ್ಲಿ ಭೋಜನ ಮಾಡುವವರೊಳಗೆ ನಿನ್ನ ಸೇವಕನನ್ನು ಇಟ್ಟಿ. ನಾನು ಇನ್ನು ಅರಸನಿಗೆ ಹೆಚ್ಚು ಮೊರೆಯಿಡುವದಕ್ಕೆ ಯೋಗ್ಯನೋ ಅಂದನು. ಆಗ ಅರಸನು ಅವನಿಗೆಇನ್ನು ನಿನ್ನ ಕಾರ್ಯಗಳನ್ನು ಕುರಿತು ಮಾತನಾಡು ವದೇನು?
- Luke 1:48 ಲೂಕನು 1:48ಆತನು ತನ್ನ ದಾಸಿಯ ದೀನಸ್ಥಿತಿಯನ್ನು ಲಕ್ಷಿಸಿದ್ದಾನೆ. ಇಗೋ, ಇಂದಿನಿಂದ ತಲತಲಾಂತರಗಳವರು ನನ್ನನ್ನು ಧನ್ಯಳೆಂದು ಕರೆಯುವರು.
- 2 Samuel 9:8 2 ಸಮುವೇಲನು 9:8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.
- Isaiah 56:3–8 ಯೆಶಾಯ 56:3–8ಇಲ್ಲವೆ ಕರ್ತನೊಂದಿಗೆ ಅನ್ಯನ ಮಗನು ಸೇರಿಕೊಂಡು--ಕರ್ತನು ತನ್ನ ಜನರಿಂದ ನನ್ನನ್ನು ಸಂಪೂರ್ಣವಾಗಿ ಅಗಲಿಸುವನು ಎಂದು ಮಾತಾಡ ದಿರಲಿ; ಅಥವಾ ನಪುಂಸಕನು--ಇಗೋ, ನಾನು ಒಣಗಿದ ಮರವೆಂದು ಹೇಳದಿರಲಿ. ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ-- ನನ್ನ ಆಲಯದ ಲ್ಲಿಯೂ ಗೋಡೆಗಳ ಬಳಿಗೂ ಕುಮಾರ ಕುಮಾರ್ತೆ ಯರಿಗಿಂತ ಉತ್ತಮವಾದ ಸ್ಥಳವನ್ನೂ ಹೆಸರನ್ನೂ ನಾನು ಕೊಡುತ್ತೇನೆ. ಎಂದಿಗೂ ಅಳಿಯದ ಶಾಶ್ವತ ವಾದ ಹೆಸರನ್ನು ಅವರಿಗೆ ನಾನು ಕೊಡುವೆನು ಎಂದು ಹೇಳುತ್ತಾನೆ. ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ ನನ್ನ ಪರಿಶುದ್ಧ ಪರ್ವತಕ್ಕೆ ತರುತ್ತೇನೆ; ನನ್ನ ಪ್ರಾರ್ಥನೆಯ ಆಲಯದಲ್ಲಿ ಅವರಿಗೆ ಆನಂದವ ನ್ನುಂಟು ಮಾಡುವೆನು; ನನ್ನ ಯಜ್ಞವೇದಿಯ ಮೇಲೆ ಅವರು ಅರ್ಪಿಸುವ ದಹನಬಲಿಗಳೂ, ಯಜ್ಞಗಳೂ ನನಗೆ ಒಪ್ಪಿಗೆಯಾಗುವವು; ಯಾಕಂದರೆ ನನ್ನ ಆಲ ಯವು ಸಮಸ್ತ ಜನಗಳಿಗೆ ಪ್ರಾರ್ಥನಾಲಯವು ಎಂದು ಕರೆಯಲ್ಪಡುವದು. ಇಸ್ರಾಯೇಲಿನ ತಳ್ಳಲ್ಪ ಟ್ಟವರನ್ನು ಕೂಡಿಸುವಂಥ ಕರ್ತನಾದ ದೇವರು ಹೇಳುವದೇನಂದರೆ--ನಾನು ಕೂಡಿಸಿದ ಇಸ್ರಾ ಯೇಲ್ಯರೊಂದಿಗೆ ಇನ್ನು ಹಲವರನ್ನು ಕೂಡಿಸುವೆನು ಎಂದು ಹೇಳುತ್ತಾನೆ.
- Matthew 25:35 ಮತ್ತಾಯನು 25:35ಯಾಕಂದರೆ ನಾನು ಹಸಿದಿದ್ದೆನು, ನೀವು ನನಗೆ ಊಟವನ್ನು ಕೊಟ್ಟಿರಿ; ನಾನು ಬಾಯಾರಿದ್ದೆನು, ನೀವು ನನಗೆ ಕುಡಿಯುವದಕ್ಕೆ ಕೊಟ್ಟಿರಿ; ನಾನು ಪರದೇಶಿಯಾಗಿ ದ್ದೆನು, ನೀವು ನನ್ನನ್ನು ಒಳಕ್ಕೆ ಸೇರಿಸಿಕೊಂಡಿರಿ;
- Genesis 18:2 ಆದಿಕಾಂಡ 18:2ಆಗ ತನ್ನ ಕಣ್ಣುಗಳನ್ನೆತ್ತಿ ನೋಡಲು ಅಗೋ, ಮೂವರು ಪುರುಷರು ಅವನ ಪಕ್ಕದಲ್ಲಿ ನಿಂತಿದ್ದರು. ಅವನು ಅವರನ್ನು ನೋಡಿ ಅವರಿಗೆ ಎದುರಾಗಿ ಗುಡಾರದ ಬಾಗಲಿನಿಂದ ಓಡಿಬಂದು ನೆಲದ ವರೆಗೂ ಬೊಗ್ಗಿ--
- Matthew 15:22–28 ಮತ್ತಾಯನು 15:22–28ಆಗ ಇಗೋ, ಕಾನಾನ್ಯಳಾದ ಒಬ್ಬ ಸ್ತ್ರೀಯು ಅದೇ ಪ್ರಾಂತ್ಯಗಳಿಂದ ಬಂದು ಆತನಿಗೆ--ಓ ಕರ್ತನೇ, ದಾವೀದನ ಕುಮಾ ರನೇ, ನನ್ನ ಮೇಲೆ ಕರುಣೆಯಿಡು; ನನ್ನ ಮಗಳು ದೆವ್ವದಿಂದ ಬಹಳವಾಗಿ ಸಂಕಟಪಡುತ್ತಿದ್ದಾಳೆ ಎಂದು ಕೂಗಿಕೊಂಡಳು. ಆದರೆ ಆತನು ಆಕೆಗೆ ಒಂದು ಮಾತೂ ಉತ್ತರ ಕೊಡಲಿಲ್ಲ; ಆಗ ಆತನ ಶಿಷ್ಯರು ಬಂದು--ಆಕೆಯನ್ನು ಕಳುಹಿಸಿಬಿಡು, ಯಾಕಂದರೆ ಆಕೆಯು ನಮ್ಮ ಹಿಂದೆ ಕೂಗಿಕೊಂಡು ಬರುತ್ತಾಳೆ ಎಂದು ಆತನನ್ನು ಬೇಡಿಕೊಂಡರು. ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು. ಆಗ ಆಕೆಯು ಬಂದು ಆತನನ್ನು ಆರಾಧಿಸಿ--ಕರ್ತನೇ, ನನಗೆ ಸಹಾಯ ಮಾಡು ಎಂದು ಕೇಳಿಕೊಂಡಳು. ಆದರೆ ಆತನು ಪ್ರತ್ಯುತ್ತರವಾಗಿ--ಮಕ್ಕಳ ರೊಟ್ಟಿಯನ್ನು ತಕ್ಕೊಂಡು ನಾಯಿಗಳಿಗೆ ಹಾಕುವದು ಸರಿಯಲ್ಲ ಎಂದು ಹೇಳಿ ದನು. ಆಗ ಆಕೆಯು--ಕರ್ತನೇ, ಅದು ನಿಜವೇ; ಆದರೂ ನಾಯಿಗಳು ತಮ್ಮ ಯಜಮಾನರ ಮೇಜಿನಿಂದ ಬೀಳುವ ರೊಟ್ಟಿ ತುಂಡುಗಳನ್ನು ತಿನ್ನು ತ್ತವಲ್ಲಾ ಅಂದಳು. ಆಗ ಯೇಸು ಪ್ರತ್ಯುತ್ತರವಾಗಿ ಆಕೆಗೆ--ಓ ಸ್ತ್ರೀಯೇ, ನಿನ್ನ ನಂಬಿಕೆಯು ದೊಡ್ಡದು; ನೀನು ಇಷ್ಟಪಟ್ಟಂತೆಯೇ ನಿನಗಾಗಲಿ ಎಂದು ಹೇಳಿ ದನು. ಮತ್ತು ಆಕೆಯ ಮಗಳು ಅದೇ ಗಳಿಗೆಯಲ್ಲಿ ಸ್ವಸ್ಥಳಾದಳು.