Song of Solomon · chapter 1 · verse 10
Song of Solomon 1:10 in Kannada
ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
Ninna kennegalu aabharanagala saalinindaloo koralu kanthamaalegalindaloo ramyavaagive.
Song of Solomon 1:10 in English
- King James Version (KJV)
- Thy cheeks are comely with rows [of jewels], thy neck with chains [of gold].
- World English Bible (WEB)
- Your cheeks are beautiful with earrings, your neck with strings of jewels.
- American Standard Version (ASV)
- Thy cheeks are comely with plaits [of hair], Thy neck with strings of jewels.
- Bible in Basic English (BBE)
- Your face is a delight with rings of hair, your neck with chains of jewels.
- Darby Translation (DBY)
- Thy cheeks are comely with bead-rows, Thy neck with ornamental chains.
- Webster's Bible (WBS)
- Thy cheeks are comely with rows [of jewels] , thy neck with chains [of gold] .
- Young's Literal Translation (YLT)
- Comely have been thy cheeks with garlands, Thy neck with chains.
Read in context
- 8ಓ ಸ್ತ್ರೀಯರಲ್ಲಿ ಸೌಂದರ್ಯವಂತಳೇ, ನೀನು ತಿಳಿಯದೆ ಇದ್ದರೆ ನೀನು ಮಂದೆಯ ಜಾಡೆಯನ್ನು ಹಿಡಿದು ಹೊರಟುಹೋಗಿ ಕುರುಬರ ಗುಡಾರಗಳ ಬಳಿಯಲ್ಲಿ ನಿನ್ನ ಮೇಕೆಯ ಮರಿಗಳನ್ನು ಮೇಯಿಸು.
- 9ಓ ನನ್ನ ಪ್ರಿಯಳೇ, ಫರೋಹನ ರಥಗಳಲ್ಲಿರುವ ಕುದುರೆಗಳ ಗುಂಪಿಗೆ ನಿನ್ನನ್ನು ಹೋಲಿಸಿದ್ದೇನೆ.
- 10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
- 11ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
- 12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
Cross references
- Ezekiel 16:11–13 ಯೆಹೆಜ್ಕೇಲನು 16:11–13ನಾನು ಆಭರಣಗಳಿಂದಲೂ ನಿನ್ನನ್ನು ಅಲಂಕರಿಸಿದೆನು; ನಾನು ನಿನ್ನ ಕೈಗಳಿಗೆ ಕಡಗ ಗಳನ್ನು, ನಿನ್ನ ಕೊರಳಿಗೆ ಸರವನ್ನು ಹಾಕಿದೆನು. ನಿನ್ನ ಹಣೆಯ ಮೇಲೆ ರತ್ನಾಭರಣವನ್ನೂ ನಿನ್ನ ಕಿವಿಗಳಲ್ಲಿ ವಾಲೆಗಳನ್ನೂ ನಿನ್ನ ತಲೆಯ ಮೇಲೆ ಶೃಂಗಾರ ಕಿರೀಟವನ್ನೂ ಇಟ್ಟೆನು. ನಿನ್ನ ಒಡವೆಗಳು ಬೆಳ್ಳಿ ಬಂಗಾರಗಳು, ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಯವಾದ ಹಿಟ್ಟನ್ನೂ ಜೇನನ್ನೂ ಎಣ್ಣೆಯನ್ನೂ ತಿನ್ನುತ್ತಿದ್ದೆ, ನಿನ್ನ ಲಾವಣ್ಯವು ಅತಿ ಮನೋಹರವಾಗಿ ವೃದ್ಧಿಗೊಂಡು ನೀನು ರಾಣಿಯಾದೆ.
- 1 Peter 3:4 1 ಪೇತ್ರನು 3:4ಆದರೆ ಸಾತ್ವಿಕವಾದ ಶಾಂತ ಮನಸ್ಸು ಎಂಬ ಹೃದಯದ ಮರೆಯಾದ ಮನುಷ್ಯನ ಅಲಂಕಾರವೇ ನಿಮಗಿರಲಿ. ಇದು ಅಕ್ಷಯ ವಾಗಿದ್ದು ದೇವರ ದೃಷ್ಟಿಗೆ ಬಹು ಬೆಲೆಯುಳ್ಳದ್ದಾಗಿದೆ.
- Genesis 24:47 ಆದಿಕಾಂಡ 24:47ನಾನು ಆಕೆಗೆ--ನೀನು ಯಾರ ಮಗಳು ಎಂದು ಕೇಳಿದೆನು. ಅದಕ್ಕವಳು--ನಾಹೋರ ನಿಗೆ ಮಿಲ್ಕಳು ಹೆತ್ತ ಮಗನಾದ ಬೆತೊವೇಲನ ಮಗಳು ಅಂದಳು. ಆಗ ನಾನು ಆಕೆಗೆ ವಾಲೆಯನ್ನೂ ಕೈಗಳಿಗೆ ಕಡಗಗಳನ್ನೂ ಇಟ್ಟು
- Song of Solomon 5:13 ಪರಮಗೀತೆ 5:13ಅವನ ಕೆನ್ನೆಗಳು ಸುಗಂಧಮಡಿಯ ಹಾಗೆಯೂ ಸುವಾಸನೆಯ ಪುಷ್ಪಗಳ ಹಾಗೆಯೂ ಅವೆ. ಅವನ ತುಟಿಗಳು ತಾವರೆಗಳ ಹಾಗೆ ಸೋರುವ ಸುಗಂಧ ರಕ್ತಬೋಳವನ್ನು ಸುರಿಯುತ್ತವೆ.
- Isaiah 3:18–21 ಯೆಶಾಯ 3:18–21ಆ ದಿನದಲ್ಲಿ ಕರ್ತನು ಅವರ ಅಂದುಗೆ, ತುರುಬುಬಲೆ, ಅರ್ಧಚಂದ್ರ, ಸರ, ಬಳೆ, ಮುಂಡಾಸ, ಟೊಪ್ಪಿಗೆ, ಕಾಲಸರಪಣಿ, ಶಿರೋ ವೇಷ್ಟನ, ಗಂಧದ ಡಬ್ಬಿ, ಓಲೆ, ಉಂಗುರ, ಮೂಗುತಿ,
- Song of Solomon 4:9 ಪರಮಗೀತೆ 4:9ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ. ನನ್ನ ಸಹೋದರಿಯೇ, ವಧುವೇ, ನಿನ್ನ ಕಣ್ಣುಗಳ ಏಕದೃಷ್ಟಿಯಿಂದಲೂ ನಿನ್ನ ಕೊರಳಲ್ಲಿರುವ ಒಂದು ಕಂಠಮಾಲೆಯಿಂದಲೂ ನನ್ನ ಹೃದಯವನ್ನು ನೀನು ಸೆಳಕೊಂಡಿದ್ದೀ.
- Numbers 31:50 ಅರಣ್ಯಕಾಂಡ 31:50ಆದದರಿಂದ ಕರ್ತನ ಸಮ್ಮುಖದಲ್ಲಿ ನಮ್ಮ ಪ್ರಾಣಗಳಿಗೋಸ್ಕರ ಪ್ರಾಯಶ್ಚಿತ್ತಕ್ಕಾಗಿ ನಾವು ಒಬ್ಬೊಬ್ಬನಿಗೆ ಸಿಕ್ಕಿದಂಥ ಬಂಗಾರದ ಆಭರಣಗಳಾದ ಸರಗಳನ್ನೂ ಕಡಗಗಳನ್ನೂ ಉಂಗುರಗಳನ್ನೂ ವಾಲೆ ಗಳನ್ನೂ ಪದಕಗಳನ್ನೂ ಕರ್ತನಿಗೆ ಕಾಣಿಕೆಯಾಗಿ ತಂದಿ ದ್ದೇವೆ ಎಂದು ಹೇಳಿದರು.
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Proverbs 1:9 ಜ್ಞಾನೋಕ್ತಿಗಳು 1:9ಅವು ನಿನ್ನ ತಲೆಗೆ ಕೃಪೆಯ ಆಭರಣವೂ ನಿನ್ನ ಕೊರಳಿನ ಸುತ್ತಲೂ ಸರಗಳಂತೆಯೂ ಇರುವವು.
- 2 Peter 1:3–4 2 ಪೇತ್ರನು 1:3–4ತನ್ನ ಮಹಿಮೆಗಾಗಿಯೂ ಗುಣಾತಿಶಯಕ್ಕಾಗಿಯೂ ನಮ್ಮನ್ನು ಕರೆದಾತನ ವಿಷಯವಾದ ಪರಿಜ್ಞಾನದ ಮೂಲಕವಾಗಿ ಆತನ ದೈವಶಕ್ತಿಯು ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ನಮಗೆ ದಯಪಾಲಿಸಿತು. ನೀವು ಲೋಕದಲ್ಲಿ ದುರಾಶೆಯಿಂದುಂಟಾದ ಕೆಟ್ಟತನಕ್ಕೆ ತಪ್ಪಿಸಿಕೊಂಡು ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂದು ಆತನು ಅತ್ಯಂತ ಮಹತ್ವ ವುಳ್ಳ ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯ ಪಾಲಿಸಿದ್ದಾನೆ.
- Genesis 24:22 ಆದಿಕಾಂಡ 24:22ಒಂಟೆಗಳು ಕುಡಿದ ಮೇಲೆ ಆ ಮನುಷ್ಯನು ಅರ್ಧ ಶೆಕೆಲ್ ತೂಕದ ಚಿನ್ನದ ವಾಲೆಯನ್ನು ಹತ್ತು ಶೆಕೆಲ್ ತೂಕದ ಎರಡು ಕಡಗಗಳನ್ನು ಆಕೆಯ ಕೈಗಳಿಗೆ ಕೊಟ್ಟನು.
- Isaiah 61:10 ಯೆಶಾಯ 61:10ನಾನು ಕರ್ತನಲ್ಲಿ ಬಹಳವಾಗಿ ಸಂತೋಷಿ ಸುವೆನು; ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸ ಪಡುವದು; ಯಾಕಂದರೆ ಮದಲಿಂಗನು ಸೌಂದರ್ಯ ವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ ಮದಲ ಗಿತ್ತಿಯು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ ಆತನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ, ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.