Song of Solomon · chapter 1 · verse 12
Song of Solomon 1:12 in Kannada
ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
Arasanu mejina baliyalli kootiddaaga nanna jataamaansiyu adara vaasaneyannu biduttade.
Song of Solomon 1:12 in English
- King James Version (KJV)
- While the king [sitteth] at his table, my spikenard sendeth forth the smell thereof.
- World English Bible (WEB)
- While the king sat at his table, my perfume spread its fragrance.
- American Standard Version (ASV)
- While the king sat at his table, My spikenard sent forth its fragrance.
- Bible in Basic English (BBE)
- While the king is seated at his table, my spices send out their perfume.
- Darby Translation (DBY)
- While the king is at his table, My spikenard sendeth forth its fragrance.
- Webster's Bible (WBS)
- While the king [sitteth] at his table, my spikenard sendeth forth its smell.
- Young's Literal Translation (YLT)
- While the king [is] in his circle, My spikenard hath given its fragrance.
Read in context
- 10ನಿನ್ನ ಕೆನ್ನೆಗಳು ಆಭರಣಗಳ ಸಾಲಿನಿಂದಲೂ ಕೊರಳು ಕಂಠಮಾಲೆಗಳಿಂದಲೂ ರಮ್ಯವಾಗಿವೆ.
- 11ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
- 12ಅರಸನು ಮೇಜಿನ ಬಳಿಯಲ್ಲಿ ಕೂತಿದ್ದಾಗ ನನ್ನ ಜಟಾಮಾಂಸಿಯು ಅದರ ವಾಸನೆಯನ್ನು ಬಿಡುತ್ತದೆ.
- 13ನನ್ನ ಅತಿಪ್ರಿಯನು ನನಗೆ ಬೋಳದ ಗಡ್ಡೆಯ ಹಾಗೆ ಇರುವನು; ರಾತ್ರಿಯೆಲ್ಲಾ ನನ್ನ ಸ್ತನಗಳ ಮಧ್ಯದಲ್ಲಿ ಮಲಗುವನು.
- 14ಏನ್ಗೆದಿಯ ದ್ರಾಕ್ಷೇ ತೋಟ ಗಳಲ್ಲಿರುವ ಗೋರಂಟೆಯ ಪೂಗೊಂಚಲಿನಂತೆ ನನ್ನ ಪ್ರಿಯನು ನನಗೆ ಇರುವನು.
Cross references
- John 12:3 ಯೋಹಾನನು 12:3ಆಗ ಮರಿಯಳು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲವನ್ನು ಒಂದು ಸೇರಷ್ಟು ತಂದು ಯೇಸುವಿನ ಪಾದಕ್ಕೆ ಹಚ್ಚಿ ತನ್ನ ತಲೆಯ ಕೂದಲಿನಿಂದ ಆತನ ಪಾದಗಳನ್ನು ಒರಸಿದಳು; ಆ ತೈಲದ ಪರಿ ಮಳವು ಮನೆಯಲ್ಲಿ ತುಂಬಿಕೊಂಡಿತ್ತು.
- Revelation 3:20 ಪ್ರಕಟನೆ 3:20ಇಗೋ, ನಾನು ಬಾಗಿಲ ಬಳಿಯಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ; ಯಾವನಾದರೂ ನನ್ನ ಸ್ವರವನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು, ಅವನು ನನ್ನ ಸಂಗಡ ಊಟ ಮಾಡುವನು.
- Mark 14:3 ಮಾರ್ಕನು 14:3ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
- Matthew 22:4 ಮತ್ತಾಯನು 22:4ಅವನು ತಿರಿಗಿ ಬೇರೆ ಸೇವಕರನ್ನು ಕಳುಹಿಸಿ ಅವರಿಗೆ--ಇಗೋ, ನಾನು ಔತಣವನ್ನು ಸಿದ್ಧಮಾಡಿದ್ದೇನೆ, ನನ್ನ ಎತ್ತುಗಳೂ ಕೊಬ್ಬಿದ ಪಶುಗಳೂ ಕೊಯ್ಯಲ್ಪಟ್ಟಿವೆ ಮತ್ತು ಎಲ್ಲವು ಗಳು ಸಿದ್ಧವಾಗಿವೆ; ಮದುವೆಗೆ ಬನ್ನಿರಿ ಎಂದು ಕರೆಯಲ್ಪಟ್ಟವರಿಗೆ ಹೇಳಿರಿ ಅಂದನು.
- Song of Solomon 7:5 ಪರಮಗೀತೆ 7:5ನಿನ್ನ ತಲೆಯು ಕರ್ಮೆಲಿನ ಹಾಗೆಯೂ ನಿನ್ನ ತಲೆಯ ಕೂದಲು ಧೂಮ್ರದ ಹಾಗೆಯೂ ಇವೆ. ಅರಸನು ವೇದಿಕೆಗಳಲ್ಲಿ ಹಿಡಿಯಲ್ಪಟ್ಟಿದ್ದಾನೆ.
- Matthew 26:26–28 ಮತ್ತಾಯನು 26:26–28ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿ ಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ ಮುರಿದು ತನ್ನ ಶಿಷ್ಯರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು. ಮತ್ತು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರ ಮಾಡಿ ಅವರಿಗೆ ಕೊಟ್ಟು --ನೀವೆಲ್ಲರೂ ಇದರಲ್ಲಿರುವದನ್ನು ಕುಡಿಯಿರಿ; ಯಾಕಂದರೆ ಇದು ಬಹು ಜನರ ಪಾಪಗಳ ಪರಿಹಾರಕ್ಕೋಸ್ಕರ ಸುರಿಸಲ್ಪಡುವ ಹೊಸಒಡಂಬಡಿಕೆ ಯ ನನ್ನ ರಕ್ತವಾಗಿದೆ ಅಂದನು.
- Revelation 8:3–4 ಪ್ರಕಟನೆ 8:3–4ಆಮೇಲೆ ಚಿನ್ನದ ಧೂಪದ ಪಾತ್ರೆಯಿದ್ದ ಮತ್ತೊಬ್ಬ ದೂತನು ಬಂದು ಯಜ್ಞವೇದಿಯ ಬಳಿ ಯಲ್ಲಿ ನಿಂತನು; ಸಿಂಹಾಸನದ ಮುಂದೆ ಇದ್ದ ಚಿನ್ನದ ಧೂಪವೇದಿಯ ಮೇಲೆ ಪರಿಶುದ್ಧರೆಲ್ಲರ ಪ್ರಾರ್ಥನೆಗಳ ಜೊತೆಯಲ್ಲಿ ಸಮರ್ಪಿಸುವದಕ್ಕಾಗಿ ಅವನಿಗೆ ಬಹಳ ಧೂಪ ಕೊಡಲ್ಪಟ್ಟಿತು. ಆಗ ಧೂಪದ ಹೊಗೆಯು ದೂತನ ಕೈಯೊಳಗಿಂದ ಹೊರಟು ಪರಿಶುದ್ಧರ ಪ್ರಾರ್ಥನೆಗಳೊಂದಿಗೆ ಕೂಡಿ ದೇವರ ಸನ್ನಿಧಾನಕ್ಕೆ ಏರಿಹೋಯಿತು.
- Philippians 4:18 ಫಿಲಿಪ್ಪಿಯವರಿಗೆ 4:18ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆ ಯಾದದ್ದು; ಸುಗಂಧವಾಸನೆಯೇ, ಇಷ್ಟಯಜ್ಞವೇ
- Matthew 25:34 ಮತ್ತಾಯನು 25:34ಆಗ ಅರಸನು ತನ್ನ ಬಲಗಡೆಯಲ್ಲಿ ರುವವರಿಗೆ--ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ನೀವು ಬನ್ನಿರಿ; ಭೂಲೋಕಕ್ಕೆ ಅಸ್ತಿ ವಾರ ಹಾಕಿದಂದಿನಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಬಾಧ್ಯವಾಗಿ ಹೊಂದಿರಿ;
- Song of Solomon 4:13–16 ಪರಮಗೀತೆ 4:13–16ನಿನ್ನ ಗಿಡಗಳಲ್ಲಿ ದಾಳಿಂಬರದ ವನವೂ ರಮ್ಯವಾದ ಫಲಕೊಡುವ ಗಿಡಗಳೂ ಕರ್ಪೂರವೂ ಜಟಾಮಾಂಸಿಯೂ ಕೂಡ ಇವೆ. ಜಟಾಮಾಂಸಿಯೂ-- ಕೇಸರಿಯೂ ಬಜೆಯೂ ಲವಂಗವೂ ಎಲ್ಲಾ ಸಾಂಬ್ರಾಣಿ ಗಿಡಗಳೂ ರಕ್ತಬೋಳವೂ ಅಗರೂ ಸಮಸ್ತ ಮುಖ್ಯವಾದ ಸುಗಂಧದ್ರವ್ಯ ಗಳೂ ತೋಟಗಳ ಬುಗ್ಗೆಯೂ ಜೀವಜಲಗಳ ಬಾವಿಯೂ ಲೆಬನೋನಿನಿಂದ ಹರಿಯುವ ಕಾಲುವೆ ಗಳೂ ನಿನ್ನಲ್ಲಿ ಇವೆ.ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ. ಓ ಉತ್ತರ ಗಾಳಿಯೇ, ಎಚ್ಚರವಾಗು! ದಕ್ಷಿಣ ಗಾಳಿಯೇ, ಬಾ! ನನ್ನ ತೋಟದ ಮೇಲೆ ಬೀಸು; ಅದರ ಸುಗಂಧಗಳು ಹರಿಯಲಿ. ನನ್ನ ಪ್ರಿಯನು ತನ್ನ ತೋಟದಲ್ಲಿ ಬಂದು ತನ್ನ ರಮ್ಯವಾದ ಫಲಗ ಳನ್ನು ತಿನ್ನಲಿ.
- Matthew 22:11 ಮತ್ತಾಯನು 22:11ತರುವಾಯ ಅರಸನು ಅತಿಥಿಗಳನ್ನು ನೋಡುವದಕ್ಕಾಗಿ ಒಳಗೆ ಬಂದು ಮದುವೆಯ ಉಡು ಪಿಲ್ಲದೆ ಇದ್ದ ಒಬ್ಬ ಮನುಷ್ಯನನ್ನು ಅಲ್ಲಿ ಕಂಡನು.
- Luke 24:30–32 ಲೂಕನು 24:30–32ಇದಾದ ಮೇಲೆ ಆತನು ಅವರೊಂದಿಗೆ ಊಟಕ್ಕೆ ಕೂತುಕೊಂಡಿರಲು ರೊಟ್ಟಿಯನ್ನು ತೆಗೆದು ಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟನು. ಆಗ ಅವರ ಕಣ್ಣುಗಳು ತೆರೆಯಲ್ಪಟ್ಟದ್ದರಿಂದ ಅವರು ಆತನ ಗುರುತು ಹಿಡಿದರು; ಆತನು ಅವರ ದೃಷ್ಟಿಗೆ ಅದೃಶ್ಯನಾದನು. ಆಗ ಅವರು ಒಬ್ಬರಿಗೊಬ್ಬರು--ಆತನು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ ಬರಹಗಳನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ ಎಂದು ಅಂದುಕೊಂಡರು.