Song of Solomon · chapter 2 · verse 3
Song of Solomon 2:3 in Kannada
ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
Adaviya gidagalalli sebu mara hego kumaararalli nanna priyanu haageye. Naanu avana neralinalli bahu aanandavaagi kulitu kondenu; avana phalavu nanna ruchige madhura vaagittu.
Song of Solomon 2:3 in English
- King James Version (KJV)
- As the apple tree among the trees of the wood, so [is] my beloved among the sons. I sat down under his shadow with great delight, and his fruit [was] sweet to my taste.
- World English Bible (WEB)
- As the apple tree among the trees of the wood, so is my beloved among the sons. I sat down under his shadow with great delight, his fruit was sweet to my taste.
- American Standard Version (ASV)
- As the apple-tree among the trees of the wood, So is my beloved among the sons. I sat down under his shadow with great delight, And his fruit was sweet to my taste.
- Bible in Basic English (BBE)
- As the apple-tree among the trees of the wood, so is my loved one among the sons. I took my rest under his shade with great delight, and his fruit was sweet to my taste.
- Darby Translation (DBY)
- As the apple-tree among the trees of the wood, So is my beloved among the sons: In his shadow have I rapture and sit down; And his fruit is sweet to my taste.
- Webster's Bible (WBS)
- As the apple-tree among the trees of the wood, so [is] my beloved among the sons. I sat down under his shadow with great delight, and his fruit [was] sweet to my taste.
- Young's Literal Translation (YLT)
- As a citron among trees of the forest, So [is] my beloved among the sons, In his shade I delighted, and sat down, And his fruit [is] sweet to my palate.
Read in context
- 1ಶಾರೋನಿನ ಗುಲಾಬಿ ಹೂವೂ, ತಗ್ಗುಗಳ ತಾವರೆಯೂ ನಾನೇ.
- 2ಮುಳ್ಳುಗಳಲ್ಲಿ ತಾವರೆಯು ಹೇಗೋ ನನ್ನ ಪ್ರಿಯಳು ಕುಮಾರ್ತೆ ಗಳಲ್ಲಿ ಹಾಗೆಯೇ ಇದ್ದಾಳೆ.
- 3ಅಡವಿಯ ಗಿಡಗಳಲ್ಲಿ ಸೇಬು ಮರ ಹೇಗೋ ಕುಮಾರರಲ್ಲಿ ನನ್ನ ಪ್ರಿಯನು ಹಾಗೆಯೇ. ನಾನು ಅವನ ನೆರಳಿನಲ್ಲಿ ಬಹು ಆನಂದವಾಗಿ ಕುಳಿತು ಕೊಂಡೆನು; ಅವನ ಫಲವು ನನ್ನ ರುಚಿಗೆ ಮಧುರ ವಾಗಿತ್ತು.
- 4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
- 5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
Cross references
- Song of Solomon 8:5 ಪರಮಗೀತೆ 8:5ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- Isaiah 25:4 ಯೆಶಾಯ 25:4ನೀನು ದೀನರಿಗೆ ಕೋಟೆಯೂ ಇಕ್ಕಟ್ಟಿನಲ್ಲಿ ದರಿದ್ರರಿಗೆ ರಕ್ಷಣಾ ದುರ್ಗವೂ ಭೀಕರರ ಶ್ವಾಸವು ಬಿಸಿಲಿಗೋಸ್ಕರ ನೆರಳೂ ಗೋಡೆಗೆ ಬಡಿದು ಬಿಡುವ ಬಿರುಗಾಳಿಯಂತಿರುವಾಗ ಬಿರುಗಾಳಿಗೋ ಸ್ಕರ ಆಶ್ರಯವೂ ಆಗಿದ್ದೀ.
- Hebrews 1:1–6 ಇಬ್ರಿಯರಿಗೆ 1:1–6ಕಳೆದ ಕಾಲದಲ್ಲಿ ಪಿತೃಗಳ ಸಂಗಡ ಪ್ರವಾದಿಗಳ ಮುಖಾಂತರ ನಾನಾ ಸಮಯಗಳಲ್ಲಿ ವಿಧವಿಧವಾದ ರೀತಿಯಲ್ಲಿ ಮಾತನಾಡಿದ ದೇವರು ಈ ಅಂತ್ಯದಿನಗಳಲ್ಲಿ ನಮ್ಮ ಸಂಗಡ ತನ್ನ ಮಗನ ಮುಖಾಂತರ ಮಾತನಾಡಿದ್ದಾನೆ. ಈತನನ್ನು ಎಲ್ಲಕ್ಕೂ ಬಾಧ್ಯನನ್ನಾಗಿ ನೇಮಿಸಿದನು, ಈತನ ಮೂಲಕವೇ ಲೋಕಗಳನ್ನು ಉಂಟು ಮಾಡಿದನು. ಈತನು ದೇವರ ಮಹಿಮೆಯ ಪ್ರಕಾಶವೂ ಆತನ ವ್ಯಕ್ತಿತ್ವದ ಪ್ರತಿರೂಪವೂ ತನ್ನ ಬಲವುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ತೊಳೆದ ಮೇಲೆ ಉನ್ನತದೊಳಗೆ ಮಹೋನ್ನತನ ಬಲ ಗಡೆಯಲ್ಲಿ ಕೂತುಕೊಂಡನು. ಈತನು ದೂತರಿಗಿಂತಲೂ ಉತ್ತಮನಾಗಿ ಮಾಡ ಲ್ಪಟ್ಟು ಅವರಿಗಿಂತ ಅತಿ ಶ್ರೇಷ್ಠವಾದ ಹೆಸರನ್ನು ಬಾಧ್ಯವಾಗಿ ಹೊಂದಿದನಲ್ಲಾ; ಹೇಗೆಂದರೆ--ನೀನು ನನ್ನ ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂತಲೂ ತಿರಿಗಿ--ನಾನು ಅವನಿಗೆ ತಂದೆಯಾಗಿ ರುವೆನು; ಅವನು ನನಗೆ ಮಗನಾಗಿರುವನು ಎಂತಲೂ ಆತನು ತನ್ನ ದೂತರೊಳಗೆ ಯಾರಿಗಾದರೂ ಎಂದಾ ದರೂ ಹೇಳಿದ್ದುಂಟೋ? ಇದಲ್ಲದೆ ದೇವರು ಮೊದಲು ಹುಟ್ಟಿದಾತನನ್ನು ಲೋಕದೊಳಗೆ ಬರ ಮಾಡುವಾಗ--ದೇವದೂತರೆಲ್ಲರೂ ಆತನನ್ನು ಆರಾಧಿಸಲಿ ಎಂದು ಹೇಳುತ್ತಾನೆ.
- Isaiah 32:2 ಯೆಶಾಯ 32:2ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ ಬಿರುಗಾಳಿ ಗೋಸ್ಕರ ಮರೆಮಾಡಿಕೊಳ್ಳುವಂತೆಯೂ ಸ್ಥಾನದ ಹಾಗೂ ಒಣಗಿದ ಸ್ಥಳದಲ್ಲಿರುವ ನೀರಿನ ಕಾಲುವೆಗಳ ಹಾಗೂ ಆಯಾಸವುಳ್ಳ ದೇಶದಲ್ಲಿರುವ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.
- Hebrews 12:2 ಇಬ್ರಿಯರಿಗೆ 12:2ನಮ್ಮ ನಂಬಿಕೆಯನ್ನೂ ಹುಟ್ಟಿಸುವಾತನೂ ಅದನ್ನು ಪೂರೈಸುವಾತನೂ ಆಗಿ ರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮ್ಮ ಮುಂದೆ ಇಟ್ಟಿರುವ ಓಟವನ್ನು ತಾಳ್ಮೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ ಸಂತೋಷಕ್ಕೋಸ್ಕರ ಶಿಲುಬೆ ಯನ್ನು ಸಹಿಸಿಕೊಂಡು ಅವಮಾನವನ್ನು ಅಲಕ್ಷ್ಯಮಾಡಿ ದೇವರ
- John 1:14–18 ಯೋಹಾನನು 1:14–18ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು). ಯೋಹಾನನು ಆತನ ವಿಷಯದಲ್ಲಿ ಸಾಕ್ಷಿ ಕೊಟ್ಟು--ನನ್ನ ಹಿಂದೆ ಬರುವಾತನು ನನಗಿಂತ ಮೊದಲೇ ಇದ್ದದರಿಂದ ನನಗಿಂತ ಮುಂದಿನವನು ಎಂದು ನಾನು ಹೇಳಿದಾತನು ಈತನೇ ಎಂದು ಕೂಗಿ ಹೇಳಿದನು. ಆತನ ಸಂಪೂರ್ಣತೆಯೊಳಗಿಂದ ನಾವೆಲ್ಲರೂ ಕೃಪೆಗಾಗಿ ಕೃಪೆಯನ್ನು ಹೊಂದಿದೆವು. ನ್ಯಾಯಪ್ರಮಾಣವು ಮೋಶೆಯ ಮುಖಾಂತರ ವಾಗಿ ಕೊಡಲ್ಪಟ್ಟಿತು; ಆದರೆ ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರವಾಗಿ ಬಂದವು. ಯಾವನೂ ಯಾವ ಕಾಲದಲ್ಲೂ ದೇವರನ್ನು ಕಂಡಿಲ್ಲ. ತಂದೆಯ ಎದೆಯಲ್ಲಿರುವ ಆ ಒಬ್ಬನೇ ಮಗ ನಾಗಿರುವಾತನು ಆತನನ್ನು ತಿಳಿಯಪಡಿಸಿದ್ದಾನೆ.
- John 3:29–31 ಯೋಹಾನನು 3:29–31ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು. ಆತನು ಹೆಚ್ಚಿಸಲ್ಪ ಡತಕ್ಕದ್ದು; ನಾನು ತಗ್ಗಿಸಲ್ಪಡತಕ್ಕದ್ದು. ಮೇಲಿನಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ; ಯಾವನು ಭೂಸಂಬಂಧವಾದವನಾಗಿದ್ದಾನೋ ಅವನು ಭೂ ಸಂಬಂಧದವನಾಗಿದ್ದು ಭೂಸಂಬಂಧವಾದವುಗಳನ್ನು ಮಾತನಾಡುತ್ತಾನೆ; ಪರಲೋಕದಿಂದ ಬರುವಾತನು ಎಲ್ಲರ ಮೇಲೆ ಇದ್ದಾನೆ.
- John 15:1–8 ಯೋಹಾನನು 15:1–8ನಾನೇ ನಿಜವಾದ ದ್ರಾಕ್ಷೇ ಬಳ್ಳಿ ನನ್ನ ತಂದೆ ವ್ಯವಸಾಯಗಾರನು. ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ. ನಾನು ನಿಮಗೆ ಹೇಳಿದ ಮಾತಿನ ದೆಸೆಯಿಂದ ನೀವು ಈಗ ಶುದ್ಧರಾಗಿದ್ದೀರಿ. ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ. ನಾನೇ ದ್ರಾಕ್ಷೇಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿ ಮತ್ತು ನಾನು ಅವನಲ್ಲಿ ನೆಲೆಗೊಂಡಿದ್ದರೆ ಅವನೇ ಬಹಳ ಫಲವನ್ನು ಕೊಡುವನು; ಯಾಕಂದರೆ ನಾನಿಲ್ಲದೆ ನೀವು ಏನೂ ಮಾಡಲಾರಿರಿ. ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು. ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನಿಮಗೆ ಬೇಕಾದದ್ದನ್ನು ಬೇಡಿಕೊಳ್ಳಿರಿ, ನಿಮಗೆ ಅದು ದೊರೆ ಯುವದು. ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
- Hebrews 3:1–6 ಇಬ್ರಿಯರಿಗೆ 3:1–6ಆದದರಿಂದ ಪರಿಶುದ್ಧರಾದ ಸಹೋ ದರರೇ, ಪರಲೋಕದ ಕರೆಯುವಿಕೆಯಲ್ಲಿ ಪಾಲುಗಾರರೇ, ನಾವು ಒಪ್ಪಿಕೊಂಡಿರುವ ಅಪೊ ಸ್ತಲನೂ ಮಹಾಯಾಜಕನೂ ಆಗಿರುವ ಕ್ರಿಸ್ತ ಯೇಸುವನ್ನು ಆಲೋಚಿಸಿರಿ. ಮೋಶೆಯು ದೇವರ ಮನೆಯಲ್ಲೆಲ್ಲಾ ನಂಬಿಗಸ್ತ ನಾಗಿದ್ದಂತೆಯೇ ಈತನೂ ತನ್ನನ್ನು ನೇಮಿಸಿದಾತನಿಗೆ ನಂಬಿಗಸ್ತನಾಗಿದ್ದಾನೆ. ಮನೆಗಿಂತ ಮನೆಕಟ್ಟಿದವನಿಗೆ ಹೆಚ್ಚಾದ ಗೌರವವಿರುವದರಿಂದ ಮೋಶೆಗಿಂತ ಈತನು (ಕ್ರಿಸ್ತ ಯೇಸು) ಹೆಚ್ಚಾದ ಮಾನಕ್ಕೆ ಯೋಗ್ಯನೆಂದೆಣಿಸ ಲ್ಪಟ್ಟಿದ್ದಾನೆ. ಪ್ರತಿ ಮನೆಯನ್ನು ಯಾರೋ ಒಬ್ಬನು ಕಟ್ಟಿರುವನು; ಆದರೆ ಸಮಸ್ತವನ್ನು ಕಟ್ಟಿದಾತನು ದೇವರೇ. ನಿಜವಾಗಿಯೂ ಮೋಶೆಯು ಸೇವಕನಾಗಿ ದೇವರ ಮನೆಯಲ್ಲೆಲ್ಲಾ ನಂಬಿಗಸ್ತನಾಗಿದ್ದನು; ಅವನು ಮುಂದೆ ಪ್ರಕಟವಾಗಬೇಕಾಗಿದ್ದವುಗಳಿಗೆ ಸಾಕ್ಷಿಯಾಗಿ ದ್ದನು. ಕ್ರಿಸ್ತನಾದರೋ ಮಗನಾಗಿ ತನ್ನ ಸ್ವಂತ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯ ವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇತನಕ ದೃಢವಾಗಿ ಹಿಡುಕೊಂಡವರಾದರೆ ನಾವೇ ಆತನ ಮನೆಯಾಗಿದ್ದೇವೆ.
- Psalm 91:1 ಕೀರ್ತನೆಗಳು 91:1ಮಹೋನ್ನತನ ಮರೆಯಾದ ಸ್ಥಳದಲ್ಲಿ ವಾಸಿಸುವವನು ಸರ್ವಶಕ್ತನ ನೆರಳಿನಲ್ಲಿ ತಂಗುವನು.
- Isaiah 4:6 ಯೆಶಾಯ 4:6ಹಗಲಲ್ಲಿ ಬಿಸಿಲಿಗೆ ನೆರಳಾಗುವ ಹಾಗೂ ಬಿರುಗಾಳಿಗೂ ಮಳೆಗೂ ಮರೆಯಾಗಲು ಆಶ್ರಯ ಸ್ಥಾನವಾಗಿ ಒಂದು ಗುಡಾರವಿರುವದು.
- Hebrews 7:23–26 ಇಬ್ರಿಯರಿಗೆ 7:23–26ಅವರು (ಲೇವಿಯರು) ಶಾಶ್ವತವಾಗಿ ಉದ್ಯೋಗ ನಡಿಸುವದಕ್ಕೆ ಮರಣ ಕಾರಣದಿಂದ ನಿಜವಾಗಿಯೂ ಅವರಲ್ಲಿ ಯಾಜಕರಾದವರು ಅನೇಕರು; ಈತನಾ ದರೋ ಸದಾಕಾಲವಿರುವದರಿಂದ ಬದಲಾವಣೆಯಾ ಗದ ಯಾಜಕತ್ವವನ್ನು ಹೊಂದಿದ್ದಾನೆ. ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿ ಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕವವನಾಗಿದ್ದಾನೆ. ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.