Song of Solomon · chapter 2 · verse 6
Song of Solomon 2:6 in Kannada
ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
Avana edagai nanna taleya kelagade; avana balagai nannannu appi kolluttade.
Song of Solomon 2:6 in English
- King James Version (KJV)
- His left hand [is] under my head, and his right hand doth embrace me.
- World English Bible (WEB)
- His left hand is under my head. His right hand embraces me.
- American Standard Version (ASV)
- His left hand [is] under my head, And his right hand doth embrace me.
- Bible in Basic English (BBE)
- His left hand is under my head, and his right hand is round about me.
- Darby Translation (DBY)
- His left hand is under my head, And his right hand doth embrace me.
- Webster's Bible (WBS)
- His left hand [is] under my head, and his right hand doth embrace me.
- Young's Literal Translation (YLT)
- His left hand [is] under my head, And his right doth embrace me.
Read in context
- 4ಔತಣದ ಮನೆಗೆ ನನ್ನನ್ನು ಕರಕೊಂಡು ಬಂದನು; ನನ್ನ ಮೇಲೆ ಅವನ ಧ್ವಜ ಪ್ರೀತಿಯೇ.
- 5ದ್ರಾಕ್ಷೆಯ ಉಂಡಿಗಳಿಂದ ನನ್ನನ್ನು ಹಿಡಿದಿರು; ಸೇಬು ಹಣ್ಣುಗಳಿಂದ ನನ್ನನ್ನು ಆದರಿಸು; ಪ್ರೀತಿಯ ದೆಸೆಯಿಂದ ಅಸ್ವಸ್ಥಳಾಗಿದ್ದೇನೆ.
- 6ಅವನ ಎಡಗೈ ನನ್ನ ತಲೆಯ ಕೆಳಗದೆ; ಅವನ ಬಲಗೈ ನನ್ನನ್ನು ಅಪ್ಪಿ ಕೊಳ್ಳುತ್ತದೆ.
- 7ಓ ಯೆರೂಸಲೇಮಿನ ಕುಮಾರ್ತೆಯರೇ, ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸಬೇಡಿರಿ, ಇಲ್ಲವೆ ನನ್ನ ಪ್ರಿಯನನ್ನು ಎಚ್ಚರಿಸಬೇಡಿರಿ ಎಂದು ದುಪ್ಪಿಗಳಿಂದಲೂ ಅಡವಿಯ ಜಿಂಕೆಗಳಿಂದಲೂ ನಿಮಗೆ ಆಜ್ಞಾಪಿಸುತ್ತೇನೆ.
- 8ನನ್ನ ಪ್ರಿಯನ ಸ್ವರವು! ಇಗೋ, ಅವನು ಪರ್ವತಗಳ ಮೇಲೆ ಹಾರುತ್ತಾ ಗುಡ್ಡಗಳ ಮೇಲೆ ನೆಗೆಯುತ್ತಾ ಬರುತ್ತಾನೆ.
Cross references
- Zephaniah 3:17 ಚೆಫನ್ಯ 3:17ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
- Isaiah 54:5–10 ಯೆಶಾಯ 54:5–10ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು. ನೀನು ಬಿಡಲ್ಪಟ್ಟು ಆತ್ಮದಲ್ಲಿ ವ್ಯಥೆಪಟ್ಟ ಹೆಂಗಸು, ತ್ಯಜಿಸಲ್ಪಟ್ಟವಳಾದ ಯೌವನದ ಪತ್ನಿಯ ಹಾಗೆ ಇದ್ದಾಗ ಕರ್ತನು ನಿನ್ನನ್ನು ಕರೆದಿದ್ದಾನೆ ಎಂದು ನಿನ್ನ ದೇವರು ಹೇಳುತ್ತಾನೆ. ಕ್ಷಣ ಮಾತ್ರಕ್ಕೆ ನಿನ್ನನ್ನು ನಾನು ಬಿಟ್ಟಿದ್ದೇನೆ; ಆದರೆ ಮಹಾ ಕೃಪೆಗಳೊಂದಿಗೆ ನಿನ್ನನ್ನು ನಾನು ಕೂಡಿಸುವೆನು. ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ. ಇದು ನನಗೆ ನೋಹನ ಕಾಲದ ಪ್ರಳಯ ದಂತಿದೆ; ನೋಹನ ಕಾಲದ ಪ್ರಳಯವು ಇನ್ನು ಭೂಮಿಯ ಮೇಲೆ ಹರಿಯಗೊಡಿಸುವದಿಲ್ಲವೆಂದು ನಾನು ಪ್ರಮಾಣಮಾಡಿದ ಹಾಗೆಯೇ ಇನ್ನು ನಿನ್ನ ಮೇಲೆ ಕೋಪಗೊಳ್ಳುವದಿಲ್ಲ ಇಲ್ಲವೇ ನಿನ್ನನ್ನು ಗದರಿಸುವದಿಲ್ಲ ಎಂದು ಪ್ರಮಾಣಮಾಡಿದ್ದೇನೆ. ಪರ್ವತಗಳು ಹೊರಟುಹೋಗುವವು, ಮತ್ತು ಗುಡ್ಡಗಳು ತೆಗೆದುಹಾಕಲ್ಪಡುವವು; ಆದರೆ ನನ್ನ ದಯೆಯು ನಿನ್ನನ್ನು ಬಿಟ್ಟುಹೋಗದು ಇಲ್ಲವೆ ನನ್ನ ಸಮಾಧಾನದ ಒಡಂಬಡಿಕೆಯು ತೆಗೆಯಲ್ಪಡುವದಿಲ್ಲ ಎಂದು ನಿನ್ನ ಮೇಲೆ ಕರುಣೆಯನ್ನು ಇಟ್ಟಿರುವ ಕರ್ತನು ಹೇಳುತ್ತಾನೆ.
- Song of Solomon 8:3–5 ಪರಮಗೀತೆ 8:3–5ಅವನ ಎಡಗೈ ನನ್ನ ತಲೆಯ ಕೆಳಗಿರುವದು; ಅವನ ಬಲಗೈ ನನ್ನನ್ನು ಅಪ್ಪಿಕೊಳ್ಳುವದು. ಓ ಯೆರೂಸಲೇಮಿನ ಕುಮಾರ್ತೆಯರೇ, ನಿಮಗೆ ಆಜ್ಞಾಪಿಸುತ್ತೇನೆ--ನನ್ನ ಪ್ರಿಯನು ಮೆಚ್ಚುವ ವರೆಗೆ ನೀವು ಎಬ್ಬಿಸದೆಯೂ ನನ್ನ ಪ್ರೀತಿಯನ್ನು ಎಚ್ಚರಿ ಸದೆಯೂ ಇರ್ರಿ. ತನ್ನ ಪ್ರಿಯನ ಮೇಲೆ ಆತುಕೊಂಡು ಅರಣ್ಯದಿಂದ ಬರುವ ಇವಳು ಯಾರು? ಸೇಬು ಗಿಡದ ಕೆಳಗೆ ನಿನ್ನನ್ನು ಎಚ್ಚರಿಸಿದೆನು; ಅಲ್ಲಿ ನಿನ್ನ ತಾಯಿ ನಿನ್ನನ್ನು ಪಡೆದಳು; ಅಲ್ಲಿ ನಿನ್ನನ್ನು ಹೆತ್ತವಳು ನಿನ್ನನ್ನು ಪಡೆದಳು.
- Jeremiah 32:41 ಯೆರೆಮೀಯ 32:41ಹೌದು, ಅವರಿಗೆ ಒಳ್ಳೇದನ್ನು ಮಾಡುವದಕ್ಕೆ ಅವ ರೊಂದಿಗೆ ಆನಂದಪಡುವೆನು; ನಿಜವಾಗಿ ನನ್ನ ಪೂರ್ಣ ಹೃದಯದಿಂದಲೂ ನನ್ನ ಪೂರ್ಣ ಪ್ರಾಣದಿಂದಲೂ ಅವರನ್ನು ಈ ದೇಶದಲ್ಲಿ ನೆಡುತ್ತೇನೆ.
- John 3:29 ಯೋಹಾನನು 3:29ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೆ ಮದಲಿಂಗನ ಸ್ನೇಹಿತನು ನಿಂತುಕೊಂಡು ಆತನ ಮಾತನ್ನು ಕೇಳಿ ಮದಲಿಂಗನ ಧ್ವನಿಗೆ ಬಹಳವಾಗಿ ಸಂತೋಷ ಪಡುತ್ತಾನೆ; ಆದಕಾರಣ ಈ ನನ್ನ ಸಂತೋಷವು ನೆರವೇರಿತು.
- Ephesians 5:25–29 ಎಫೆಸದವರಿಗೆ 5:25–29ಪುರಷರೇ, ನೀವು ನಿಮ್ಮನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಯಾಕಂದರೆ ಕ್ರಿಸ್ತನು ಸಹ ಸಭೆಯನ್ನು ಪ್ರೀತಿಸಿ ಅದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು. ಆತನು ಅದನ್ನು ವಾಕ್ಯವೆಂಬ ನೀರಿನಿಂದ ತೊಳೆದು ಪ್ರತಿಷ್ಠಿಸಿ ಶುದ್ಧ ಮಾಡಿದ್ದಲ್ಲದೆ ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ. ಹಾಗೆಯೇ ಪುರುಷರು ಸಹ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೆ ಪ್ರೀತಿಸಿಕೊಳ್ಳುವನಾಗಿದ್ದಾನೆ. ಯಾರೂ ಎಂದೂ ಸ್ವಶರೀರವನ್ನು ಹಗೆಮಾಡಿದ್ದಿಲ್ಲ. ಆದರೆ ಅದನ್ನು ಪೋಷಿಸಿ ಸಂರಕ್ಷಿಸುವ ಪ್ರಕಾರ ಕರ್ತನು ಸಭೆಯನ್ನು ಪೋಷಿಸಿ ಸಂರಕ್ಷಿಸುವಾತನಾಗಿದ್ದಾನೆ.
- Isaiah 62:4–5 ಯೆಶಾಯ 62:4–5ಇನ್ನು ಮೇಲೆ ನೀನು ಬಿಡಲ್ಪಟ್ಟವಳೆಂದು ಹೇಳಲ್ಪಡುವದಿಲ್ಲ, ಇಲ್ಲವೆ ನಿನ್ನ ದೇಶಕ್ಕೆ ಹಾಳಾದದ್ದೆಂದು ಹೇಳಲ್ಪಡುವದಿಲ್ಲ: ಆದರೆ ನೀನು (ಹೆಫ್ಜೀಬಾ) ಮೆಚ್ಚಿದವಳೆಂದೂ ನಿನ್ನ ದೇಶವು (ಬೆಯೂಲಾ) ಮದುವೆಯಾದದ್ದೆಂದೂ ಕರೆಯಲ್ಪ ಡುವದು; ಯಾಕಂದರೆ ಕರ್ತನು ನಿನ್ನಲ್ಲಿ ಉಲ್ಲಾಸಿಸು ವನು; ನಿನ್ನ ದೇಶವು ಮದುವೆಯಾಗುವದು. ಯೌವನಸ್ಥನು ಕನ್ಯಾಸ್ತ್ರೀಯನ್ನು ಮದುವೆಮಾಡಿ ಕೊಳ್ಳುವ ಪ್ರಕಾರ ನಿನ್ನ ಕುಮಾರರು ನಿನ್ನನ್ನು ಮದುವೆ ಮಾಡಿಕೊಳ್ಳುವರು; ಮದಲಿಂಗನು ಮದಲಗಿತ್ತಿಯಲ್ಲಿ ಆನಂದಪಡುವ ಪ್ರಕಾರ ನಿನ್ನ ದೇವರು ನಿನ್ನಲ್ಲಿ ಆನಂದಪಡುವನು.
- Proverbs 4:8 ಜ್ಞಾನೋಕ್ತಿಗಳು 4:8ಆಕೆಯನ್ನು ನೀನು ಮೇಲೆತ್ತಿದರೆ ಆಕೆಯು ನಿನ್ನನ್ನು ಮೇಲೆತ್ತುವಳು; ಆಕೆಯನ್ನು ನೀನು ಅಪ್ಪಿ ಕೊಂಡರೆ ಆಕೆಯು ನಿನ್ನನ್ನು ಘನತೆಗೆ ತರುವಳು.