Titus · chapter 3 · verse 4
Titus 3:4 in Kannada
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
Aadare namma rakshakanaada devara dayeyoo preetiyoo manushyana kadege pratyakshavaadaaga
Titus 3:4 in English
- King James Version (KJV)
- But after that the kindness and love of God our Saviour toward man appeared,
- World English Bible (WEB)
- But when the kindness of God our Savior and his love toward mankind appeared,
- American Standard Version (ASV)
- But when the kindness of God our Saviour, and his love toward man, appeared,
- Bible in Basic English (BBE)
- But when the mercy of God our Saviour, and his love to man was seen,
- Darby Translation (DBY)
- But when the kindness and love to man of our Saviour God appeared,
- Webster's Bible (WBS)
- But when the kindness and love of God our Savior towards man appeared,
- Young's Literal Translation (YLT)
- and when the kindness and the love to men of God our Saviour did appear
Read in context
- 2ಯಾರ ವಿಷಯವಾಗಿಯೂ ಕೆಟ್ಟ ಮಾತನ್ನಾಡದವರೂ ಜಗಳವಾಡದವರೂ ಆಗಿದ್ದು ಸಾಧು ಸ್ವಭಾವವುಳ್ಳವರಾಗಿ ಎಲ್ಲಾ ಮನುಷ್ಯರಿಗೆ ಪೂರ್ಣ ಸಾತ್ವಿಕತ್ವವನ್ನು ತೋರಿಸಬೇಕೆಂತಲೂ ಅವ ರಿಗೆ ಜ್ಞಾಪಕಮಾಡು.
- 3ನಾವು ಸಹ ಮೊದಲು ಅವಿವೇಕಿಗಳೂ ಅವಿಧೇಯರೂ ಮೋಸಹೋದ ವರೂ ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ದಾಸರೂ ಕೆಟ್ಟತನ ಹೊಟ್ಟೇಕಿಚ್ಚುಗಳಲ್ಲಿ ಜೀವಿಸುವವರೂ ಅಸಹ್ಯರೂ ಒಬ್ಬರನ್ನೊಬ್ಬರು ಹಗೆ ಮಾಡುವವರೂ ಆಗಿದ್ದೆವು.
- 4ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
- 5ನಾವು ಮಾಡಿದ ನೀತಿಯ ಕ್ರಿಯೆ ಗಳಿಂದಲ್ಲ, ಆತನ ಕರುಣೆಯಿಂದಲೇ ಪುನರ್ಜನ್ಮದ ತೊಳೆಯುವಿಕೆಯಿಂದಲೂ ಪವಿತ್ರಾತ್ಮನು ನೂತನ ಸ್ವಭಾವವನ್ನುಂಟು ಮಾಡುವದರಿಂದಲೂ ಆತನು ನಮ್ಮನ್ನು ರಕ್ಷಿಸಿದನು.
- 6ಆತನು (ದೇವರು) ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಮೂಲಕ ಆತನನ್ನು (ಪವಿತ್ರಾತ್ಮನನ್ನು) ನಮ್ಮ ಮೇಲೆ ಧಾರಾಳವಾಗಿ ಸುರಿಸಿ ದ್ದಾನೆ.
Cross references
- Ephesians 2:4–10 ಎಫೆಸದವರಿಗೆ 2:4–10ಆದರೆ ಕರುಣಾನಿಧಿಯಾದ ದೇವರು ತನ್ನ ಅಪಾರ ವಾದ ಪ್ರೀತಿಯ ನಿಮಿತ್ತ ನಮ್ಮನ್ನು ಪ್ರೀತಿಸಿ ಪಾಪಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ನೀವು ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ;) ನಮ್ಮನ್ನು ಆತನ ಕೂಡ ಎಬ್ಬಿಸಿ ಕ್ರಿಸ್ತ ಯೇಸುವಿನಲ್ಲಿ ಆತನೊಂದಿಗೆ ಪರ ಲೋಕದ ಸ್ಥಳಗಳಲ್ಲಿ ಕೂಡ್ರಿಸಿದ್ದಾನೆ. ಹೀಗೆ ಕ್ರಿಸ್ತ ಯೇಸುವಿನ ಲ್ಲಿರುವ ಕರುಣೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ನಮಗೆ ತೋರಿಸಬೇಕೆಂದಿದ್ದನು. ನಂಬಿಕೆಯ ಮೂಲಕ ಕೃಪೆ ಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಆ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ. ಅದು ಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದ ವಿಲ್ಲ. ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
- Titus 2:10–11 ತೀತನಿಗೆ 2:10–11ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು. ಯಾಕಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನುಂಟು ಮಾಡುವ ದೇವರ ಕೃಪೆಯು ಪ್ರತ್ಯಕ್ಷವಾಯಿತು.
- 1 Timothy 4:10 1 ತಿಮೊಥೆಯನಿಗೆ 4:10ಆದದರಿಂದ ಇದಕ್ಕಾಗಿ ನಾವು ಕಷ್ಟಪಡುವವರೂ ನಿಂದೆಯನ್ನನುಭವಿಸುವವರೂ ಆಗಿದ್ದೇವೆ; ಯಾಕಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕನಾಗಿರುವ ಜೀವವುಳ್ಳ ದೇವರನ್ನು ನಾವು ನಂಬಿ ದ್ದೇವೆ.
- Romans 5:20–21 ರೋಮಾಪುರದವರಿಗೆ 5:20–21ಹೇಗಾದರೂ ಅಪರಾಧವು ಹೆಚ್ಚಾಗಿ ಕಂಡುಬರುವ ಹಾಗೆ ನ್ಯಾಯಪ್ರಮಾಣವು ಪ್ರವೇಶಿಸಿತು; ಆದರೆ ಪಾಪವು ಹೆಚ್ಚಿದಲ್ಲೇ ಕೃಪೆಯು ಎಷ್ಟೋ ಹೆಚ್ಚಾಗಿ ಪ್ರಬಲವಾಯಿತು.ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು. ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
- Romans 2:4 ರೋಮಾಪುರದವರಿಗೆ 2:4ಇಲ್ಲವೆ ದೇವರ ದಯೆಯು ನಿನ್ನನ್ನು ಮಾನಸಾಂತರಕ್ಕೆ ನಡಿಸುತ್ತದೆಯೆಂದು ನೀನು ತಿಳಿಯದೆ ಆತನ ಅಪಾರವಾದ ದಯೆ ಸಹನೆ ದೀರ್ಘ ಶಾಂತಿ ಇವುಗಳನ್ನು ಅಸಡ್ಡೆಮಾಡುತ್ತೀಯೋ?
- 2 Timothy 1:10 2 ತಿಮೊಥೆಯನಿಗೆ 1:10ಈಗ ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಾಶ ಪಡಿಸಿದ್ದಾನೆ. ಈತನು ಮರಣವನ್ನು ನಿವೃತ್ತಿ ಮಾಡಿ ಸುವಾರ್ತೆಯ ಮೂಲಕ ಜೀವವನ್ನೂ ನಿರ್ಲಯತ್ವ ವನ್ನೂ ಪ್ರಕಾಶಗೊಳಿಸಿದನು.
- Hebrews 9:26 ಇಬ್ರಿಯರಿಗೆ 9:26ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕದ ಅಸ್ತಿವಾರದಿಂದ ಅನೇಕ ಸಾರಿ ಬಾಧೆಪಡಬೇಕಾಗಿತ್ತು; ಆದರೆ ಈಗ ಒಂದೇ ಸಾರಿ ಲೋಕಾಂತ್ಯದಲ್ಲಿ ಪಾಪನಿವಾರಣೆ ಮಾಡುವದಕ್ಕೆ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷ ನಾದನು.
- Titus 1:3 ತೀತನಿಗೆ 1:3ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಆ ಸಾರೋಣ ವನ್ನು ಒಪ್ಪಿಸಿದನು.
- 1 Timothy 2:3 1 ತಿಮೊಥೆಯನಿಗೆ 2:3ಯಾಕಂದರೆ ಇದು ನಮ್ಮ ರಕ್ಷಕನಾದ ದೇವರ ದೃಷ್ಟಿಯಲ್ಲಿ ಒಳ್ಳೇದಾಗಿಯೂ ಅಂಗೀಕರಿಸತಕ್ಕದ್ದಾಗಿಯೂ ಅದೆ.
- 1 Timothy 1:1 1 ತಿಮೊಥೆಯನಿಗೆ 1:1ನಮ್ಮ ರಕ್ಷಕನಾದ ದೇವರ ಮತ್ತು ನಮ್ಮ ನಿರೀಕ್ಷೆಯಾಗಿರುವ ಕರ್ತನಾದ ಯೇಸು ಕ್ರಿಸ್ತನ ಆಜ್ಞಾನುಸಾರ ಯೇಸು ಕ್ರಿಸ್ತನ ಅಪೊಸ್ತಲನಾದ ಪೌಲನು