Verses by topic
Kannada Bible Verses & Quotes
ಬೈಬಲ್ ವಚನಗಳು
Kannada Bible verses by topic, with English alongside. Read them, share them as images, or open any verse to see the full chapter.
Today's Bible verse ಇಂದಿನ ವಚನ
ಅವರು--ಕರ್ತನಾದ ಯೇಸು ಕ್ರಿಸ್ತನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆ ಹೊಂದು ವರು ಎಂದು ಹೇಳಿದರು.And they said, Believe on the Lord Jesus Christ, and thou shalt be saved, and thy house.
Verses by topic
- Blessing verses ಆಶೀರ್ವಾದಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Comfort verses ಆದರಣೆಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Strength verses ಬಲನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.
- Motivation and success verses ಜಯನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.
- Love verses ಪ್ರೀತಿದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Peace verses ಸಮಾಧಾನನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
- Faith verses ನಂಬಿಕೆನಂಬಿಕೆಯು ನಿರೀಕ್ಷಿಸುವವುಗಳ ನಿಜ ಲಕ್ಷಣವೂ ಕಾಣದವುಗಳ ನಿದರ್ಶನವೂ ಆಗಿದೆ.
- Healing verses ಸ್ವಸ್ಥತೆಆತನು-- ನೀನು ನಿನ್ನ ದೇವರಾದ ಕರ್ತನ ಸ್ವರಕ್ಕೆ ಶ್ರದ್ಧೆಯಿಂದ ಕಿವಿಗೊಟ್ಟು ಆತನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಆತನ ಆಜ್ಞೆಗಳಿಗೆ ಕಿವಿಗೊಟ್ಟು ಆತನ ನಿಯಮ ಗಳನ್ನು ಕೈಕೊಂಡರೆ ಐಗುಪ್ತ್ಯರ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿನ್ನ ಮೇಲೆ ಬರಮಾಡುವದಿಲ್ಲ; ನಿನ್ನನ್ನು ಸ್ವಸ್ಥಪಡಿಸುವ ಕರ್ತನು ನಾನೇ ಆಗಿದ್ದೇನೆ ಅಂದನು.ತರುವಾಯ ಅವರು ಹನ್ನೆರಡು ನೀರಿನ ಬಾವಿಗಳೂ ಎಪ್ಪತ್ತು ಖರ್ಜೂರದ ಮರಗಳೂ ಇದ್ದ ಏಲೀಮಿಗೆ ಬಂದರು. ಅವರು ಆ ನೀರುಗಳ ಬಳಿಯಲ್ಲಿ ಇಳುಕೊಂಡರು.
- Prayer verses ಪ್ರಾರ್ಥನೆನನ್ನನ್ನು ಕರೆ, ಆಗ ನಿನಗೆ ಉತ್ತರ ಕೊಡುವೆನು; ನಿನಗೆ ತಿಳಿಯದ ದೊಡ್ಡ ಮಹತ್ತಾದವುಗಳನ್ನು ನಿನಗೆ ತಿಳಿಸುವೆನು.
- Thanksgiving verses ಕೃತಜ್ಞತೆಕೃತಜ್ಞತೆಯಿಂದ ಆತನ ಬಾಗಿಲುಗಳಿಗೂ ಸ್ತೋತ್ರದಿಂದ ಆತನ ಅಂಗಳಗಳಿಗೂ ಬನ್ನಿರಿ; ಆತನನ್ನು ಕೊಂಡಾಡಿರಿ, ಆತನ ಹೆಸರನ್ನು ಸ್ತುತಿಸಿರಿ.ಕರ್ತನು ಒಳ್ಳೆಯವನು; ಆತನ ಕರುಣೆಯು ಯುಗಯುಗಕ್ಕೂ ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.
- Birthday verses ಹುಟ್ಟುಹಬ್ಬಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
- Wedding and marriage verses ಮದುವೆಆದದರಿಂದ ಮನುಷ್ಯನು ತನ್ನ ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು; ಅವರು ಒಂದೇ ಶರೀರ ವಾಗಿರುವರು.ಇದಲ್ಲದೆ ಆ ಮನುಷ್ಯನು ಅವನ ಹೆಂಡತಿಯು ಇಬ್ಬರು ಬೆತ್ತಲೆಯಾಗಿದ್ದರೂ ನಾಚಿಕೊಳ್ಳಲಿಲ್ಲ.
- New Year verses ಹೊಸ ವರ್ಷಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Children verses ಮಕ್ಕಳುಇಗೋ, ಮಕ್ಕಳು ಕರ್ತನಿಂದ ಸಿಕ್ಕಿದ ಸ್ವಾಸ್ಥ್ಯವಾಗಿ ದ್ದಾರೆ; ಗರ್ಭಫಲವು ಆತನ ಬಹುಮಾನವಾಗಿದೆ.
- Fear and worry verses ಭಯ, ಚಿಂತೆನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
- Forgiveness verses ಕ್ಷಮೆನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Salvation verses ರಕ್ಷಣೆದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
- Holy Spirit verses ಪವಿತ್ರಾತ್ಮಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
- Christmas verses ಕ್ರಿಸ್ಮಸ್ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
- Good Friday and Easter verses ಶುಭ ಶುಕ್ರವಾರ, ಈಸ್ಟರ್ನಮ್ಮ ದ್ರೋಹಗಳ ನಿಮಿತ್ತ ಆತನಿಗೆ ಗಾಯವಾಯಿತು, ನಮ್ಮ ದುಷ್ಕೃತ್ಯಗಳ ನಿಮಿತ್ತ ಆತನು ಜಜ್ಜಲ್ಪಟ್ಟನು; ನಮ್ಮ ಸಮಾಧಾನಕ್ಕೆ ಕಾರಣವಾದ ಶಿಕ್ಷೆಯು ಆತನ ಮೇಲೆ ಬಿತ್ತು; ಆತನ ಬಾಸುಂಡೆ ಗಳಿಂದ ನಮಗೆ ಸ್ವಸ್ಥವಾಯಿತು.