Skip to content
ThuthiThuthiThuthi
Bible verses by topic

Blessing Bible Verses in Kannada

ಆಶೀರ್ವಾದ ವಚನಗಳು

Verses of God's blessing to read, share and pray over family and friends.

  1. ಕರ್ತನು ನಿನ್ನನ್ನು ಆಶೀರ್ವದಿಸಲಿ, ನಿನ್ನನ್ನು ಕಾಪಾಡಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಪ್ರಕಾಶಿಸುವಂತೆ ಮಾಡಿ ನಿನಗೆ ದಯೆ ತೋರಿಸಲಿ. ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್‌ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.

    The LORD bless thee, and keep thee: The LORD make his face shine upon thee, and be gracious unto thee: The LORD lift up his countenance upon thee, and give thee peace.

    Numbers 6:24–26 (ಅರಣ್ಯಕಾಂಡ 6:24–26)
  2. ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು. ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ, ನಿನ್ನ ಗರ್ಭದ ಫಲಕ್ಕೂ ನಿನ್ನ ಭೂಮಿಯ ಫಲಕ್ಕೂ ಪಶುಗಳ ಫಲಕ್ಕೂ ಪಶುಗಳ ಹಿಂಡಿಗೂ ಕುರಿಗಳ ಮಂದೆಗಳಿಗೂ ಆಶೀರ್ವಾದ. ನಿನ್ನ ಪುಟ್ಟಿಗೂ ಕಣಜಕ್ಕೂ ಆಶೀರ್ವಾದ. ಬರುವಾಗ ನಿನಗೆ ಆಶೀರ್ವಾದ; ಹೊರಡುವಾಗ ನಿನಗೆ ಆಶೀರ್ವಾದ.

    And all these blessings shall come on thee, and overtake thee, if thou shalt hearken unto the voice of the LORD thy God. Blessed [shalt] thou [be] in the city, and blessed [shalt] thou [be] in the field. Blessed [shall be] the fruit of thy body, and the fruit of thy ground, and the fruit of thy cattle, the increase of thy kine, and the flocks of thy sheep. Blessed [shall be] thy basket and thy store. Blessed [shalt] thou [be] when thou comest in, and blessed [shalt] thou [be] when thou goest out.

    Deuteronomy 28:2–6 (ಧರ್ಮೋಪದೇಶಕಾಂಡ 28:2–6)
  3. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ.

    The LORD shall open unto thee his good treasure, the heaven to give the rain unto thy land in his season, and to bless all the work of thine hand: and thou shalt lend unto many nations, and thou shalt not borrow.

    Deuteronomy 28:12 (ಧರ್ಮೋಪದೇಶಕಾಂಡ 28:12)
  4. ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ ಕರ್ತನ ನ್ಯಾಯ ಪ್ರಮಾಣದಲ್ಲಿ ಸಂತೋಷಿಸಿ ಅದನ್ನ್ನು ರಾತ್ರಿ ಹಗಲು ಧ್ಯಾನಿಸುವ ಮನುಷ್ಯನೇ ಧನ್ಯನು. ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

    Blessed [is] the man that walketh not in the counsel of the ungodly, nor standeth in the way of sinners, nor sitteth in the seat of the scornful. But his delight [is] in the law of the LORD; and in his law doth he meditate day and night. And he shall be like a tree planted by the rivers of water, that bringeth forth his fruit in his season; his leaf also shall not wither; and whatsoever he doeth shall prosper.

    Psalm 1:1–3 (ಕೀರ್ತನೆಗಳು 1:1–3)
  5. ಕರ್ತನಿಗೆ ಭಯಪಟ್ಟು ಆತನ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು. ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.

    Blessed [is] every one that feareth the LORD; that walketh in his ways. For thou shalt eat the labour of thine hands: happy [shalt] thou [be], and [it shall be] well with thee.

    Psalm 128:1–2 (ಕೀರ್ತನೆಗಳು 128:1–2)
  6. ಕರ್ತನ ಆರ್ಶೀ ವಾದವು ಐಶ್ವರ್ಯವನ್ನುಂಟು ಮಾಡುವದು. ಅದ ರೊಂದಿಗೆ ಆತನು ಯಾವ ದುಃಖವನ್ನೂ ಸೇರಿಸುವ ದಿಲ್ಲ.

    The blessing of the LORD, it maketh rich, and he addeth no sorrow with it.

    Proverbs 10:22 (ಜ್ಞಾನೋಕ್ತಿಗಳು 10:22)
  7. ಯಾವನು ಕರ್ತನಲ್ಲಿ ಭರವಸವಿಟ್ಟಿರುವನೋ ಯಾವನಿಗೆ ಕರ್ತನು ನಿರೀಕ್ಷೆ ಯಾಗಿದ್ದಾನೋ ಆ ಮನುಷ್ಯನು ಧನ್ಯನು. ಅವನು ನೀರಿನ ಬಳಿಯಲ್ಲಿ ನೆಡಲ್ಪಟ್ಟು ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು; ಧಗೆಯು ಬರುವಾಗ ಅದು ಬಾಡಿಹೋಗದೆ ಅದರ ಎಲೆ ಹಸುರಾಗಿರುವದು; ಕ್ಷಾಮದ ವರುಷದಲ್ಲಿ ಅದಕ್ಕೆ ಚಿಂತೆ ಇರುವದಿಲ್ಲ ಇಲ್ಲವೆ ಫಲಫಲಿಸುವದನ್ನು ನಿಲ್ಲಿಸುವದಿಲ್ಲ.

    Blessed [is] the man that trusteth in the LORD, and whose hope the LORD is. For he shall be as a tree planted by the waters, and [that] spreadeth out her roots by the river, and shall not see when heat cometh, but her leaf shall be green; and shall not be careful in the year of drought, neither shall cease from yielding fruit.

    Jeremiah 17:7–8 (ಯೆರೆಮೀಯ 17:7–8)
  8. ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

    Blessed [be] the God and Father of our Lord Jesus Christ, who hath blessed us with all spiritual blessings in heavenly [places] in Christ:

    Ephesians 1:3 (ಎಫೆಸದವರಿಗೆ 1:3)
  9. ನನ್ನ ದೇವರು ಕ್ರಿಸ್ತ ಯೇಸುವಿನ ಮೂಲಕ ತನ್ನ ಪ್ರಭಾವದ ಐಶ್ವರ್ಯಕ್ಕೆ ತಕ್ಕ ಹಾಗೆ ನಿಮ್ಮ ಪ್ರತಿ ಯೊಂದು ಕೊರತೆಯನ್ನು ನೀಗಿಸುವನು.

    But my God shall supply all your need according to his riches in glory by Christ Jesus.

    Philippians 4:19 (ಫಿಲಿಪ್ಪಿಯವರಿಗೆ 4:19)
  10. ಪ್ರಿಯನೇ, ನಿನ್ನ ಆತ್ಮವು ಅಭಿವೃದಿ ಹೊಂದಿರುವ ಪ್ರಕಾರವೇ ಎಲ್ಲಾ ವಿಷಯಗಳಿಗಿಂತ ನೀನು ಸ್ವಸ್ಥನಾಗಿದ್ದು ಕ್ಷೇಮಹೊಂದಿ ಅಭಿವೃದ್ಧಿಯಾಗ ಬೇಕೆಂದು ನಾನು ಅಪೇಕ್ಷಿಸುತ್ತೇನೆ.

    Beloved, I wish above all things that thou mayest prosper and be in health, even as thy soul prospereth.

    3 John 1:2 (3 ಯೋಹಾನನು 1:2)
  11. ನನ್ನ ಆಲಯದಲ್ಲಿ ಆಹಾರವಿರುವ ಹಾಗೆ ಹತ್ತನೇ ಪಾಲು ಗಳನ್ನೆಲ್ಲಾ ಬೊಕ್ಕಸದ ಮನೆಯಲ್ಲಿ ತನ್ನಿರಿ; ಇದರಿಂದ ನನ್ನನ್ನು ಪರೀಕ್ಷಿಸಿರಿ; ನಾನು ನಿಮಗೆ ಆಕಾಶದ ಕಿಟಕಿ ಗಳನ್ನು ತೆರೆದು ಸಾಕಾಗುವಷ್ಟಕ್ಕಿಂತ ಹೆಚ್ಚಾಗುವಷ್ಟು ಆಶೀರ್ವಾದ ನಿಮಗೆ ಸುರಿಸದಿರುವೆನೇ? ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.

    Bring ye all the tithes into the storehouse, that there may be meat in mine house, and prove me now herewith, saith the LORD of hosts, if I will not open you the windows of heaven, and pour you out a blessing, that [there shall] not [be room] enough [to receive it].

    Malachi 3:10 (ಮಲಾಕಿಯ 3:10)
  12. ಕರ್ತನು ನಮ್ಮನ್ನು ಜ್ಞಾಪಕಮಾಡಿಕೊಂಡಿದ್ದಾನೆ,ಆತನು ನಮ್ಮನ್ನು ಆಶೀರ್ವದಿಸುವನು; ಇಸ್ರಾಯೇಲಿನ ಮನೆಯನ್ನು ಆಶೀರ್ವದಿಸುವನು; ಆರೋನನ ಮನೆ ಯನ್ನು ಆಶೀರ್ವದಿಸುವನು. ಕರ್ತನಿಗೆ ಭಯ ಪಡುವವರಾದ ಹಿರಿಯರ ಸಂಗಡ ಕಿರಿಯರನ್ನು ಆಶೀರ್ವದಿಸುವನು. ಕರ್ತನು ನಿಮ್ಮನ್ನೂ ನಿಮ್ಮ ಮಕ್ಕಳನ್ನೂ ಅಭಿವೃದ್ಧಿ ಮಾಡುವನು.

    The LORD hath been mindful of us: he will bless [us;] he will bless the house of Israel; he will bless the house of Aaron. He will bless them that fear the LORD, [both] small and great. The LORD shall increase you more and more, you and your children.

    Psalm 115:12–14 (ಕೀರ್ತನೆಗಳು 115:12–14)
  13. ನಿಮ್ಮ ಅವಮಾನಕ್ಕೆ ಬದಲಾಗಿ ಮಾನವು ಎರಡರಷ್ಟಾಗು ವದು. ಬದಲಾಗಿ ತಮ್ಮ ಪಾಲಿನಲ್ಲಿ ಹರ್ಷಿಸುವರು; ಆದದರಿಂದ ತಮ್ಮ ದೇಶದಲ್ಲಿ ಎರಡರಷ್ಟು ಸ್ವಾಧೀನ ಮಾಡಿಕೊಳ್ಳುವರು, ನಿತ್ಯವಾದ ಸಂತೋಷವು ಅವರಿಗೆ ಆಗುವದು.

    For your shame [ye shall have] double; and [for] confusion they shall rejoice in their portion: therefore in their land they shall possess the double: everlasting joy shall be unto them.

    Isaiah 61:7 (ಯೆಶಾಯ 61:7)
  14. ನಾನು ನಿನ್ನನ್ನು ದೊಡ್ಡ ಜನಾಂಗವಾಗ ಮಾಡಿ ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರನ್ನು ದೊಡ್ಡ ದಾಗಿ ಮಾಡುವೆನು, ನೀನು ಆಶೀರ್ವಾದವಾಗಿರುವಿ.

    And I will make of thee a great nation, and I will bless thee, and make thy name great; and thou shalt be a blessing:

    Genesis 12:2 (ಆದಿಕಾಂಡ 12:2)
  15. ಕರ್ತನೇ, ನೀನು ನೀತಿವಂತನನ್ನು ಆಶೀರ್ವದಿಸುತ್ತೀ. ಖೇಡ್ಯದ ಹಾಗೆ ಅನುಗ್ರಹದಿಂದ ಅವನನ್ನು ಸುತ್ತಿಕೊಳ್ಳುತ್ತೀ.

    For thou, LORD, wilt bless the righteous; with favour wilt thou compass him as [with] a shield.

    Psalm 5:12 (ಕೀರ್ತನೆಗಳು 5:12)
  16. ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.

    Blessings [are] upon the head of the just: but violence covereth the mouth of the wicked.

    Proverbs 10:6 (ಜ್ಞಾನೋಕ್ತಿಗಳು 10:6)
  17. ಆತನು ನಿನ್ನನ್ನು ಪ್ರೀತಿಮಾಡಿ ಆಶೀರ್ವದಿಸಿ ಹೆಚ್ಚಿಸುವನು; ನಿನಗೆ ಕೊಡುತ್ತೇನೆಂದು ಆತನು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶದಲ್ಲಿ ನಿನ್ನ ಗರ್ಭದ ಫಲ ವನ್ನೂ ಭೂಮಿಯ ಹುಟ್ಟುವಳಿಯನ್ನೂ ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಪಶುಗಳನ್ನೂ ನಿನ್ನ ಕುರಿಮಂದೆಗಳನ್ನೂ ಆಶೀರ್ವದಿಸುವನು.

    And he will love thee, and bless thee, and multiply thee: he will also bless the fruit of thy womb, and the fruit of thy land, thy corn, and thy wine, and thine oil, the increase of thy kine, and the flocks of thy sheep, in the land which he sware unto thy fathers to give thee.

    Deuteronomy 7:13 (ಧರ್ಮೋಪದೇಶಕಾಂಡ 7:13)
  18. ದೇವರು ನಮಗೆ ಕರುಣೆಯುಳ್ಳವನಾಗಿದ್ದು ನಮ್ಮನ್ನು ಆಶೀರ್ವದಿಸಲಿ; ಆತನು ತನ್ನ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ. ಸೆಲಾ.

    God be merciful unto us, and bless us; [and] cause his face to shine upon us; Selah.

    Psalm 67:1 (ಕೀರ್ತನೆಗಳು 67:1)
  19. ನಿನ್ನನ್ನು ಆಶೀರ್ವದಿ ಸಿಯೇ ಆಶೀರ್ವದಿಸುವೆನು; ನಿನ್ನ ಸಂತಾನವನ್ನು ಆಕಾಶದ ನಕ್ಷತ್ರಗಳ ಹಾಗೆಯೂ ಸಮುದ್ರದ ತೀರ ದಲ್ಲಿರುವ ಮರಳಿನ ಹಾಗೆಯೂ ಹೆಚ್ಚಿಸೇ ಹೆಚ್ಚಿಸುವೆನು; ನಿನ್ನ ಸಂತಾನವು ತನ್ನ ಶತ್ರುಗಳ ದ್ವಾರವನ್ನು ವಶ ಮಾಡಿಕೊಳ್ಳುವದು.

    That in blessing I will bless thee, and in multiplying I will multiply thy seed as the stars of the heaven, and as the sand which [is] upon the sea shore; and thy seed shall possess the gate of his enemies;

    Genesis 22:17 (ಆದಿಕಾಂಡ 22:17)
  20. ಇಗೋ, ಆಶೀರ್ವದಿಸು ವದಕ್ಕೆ ಅಪ್ಪಣೆ ಹೊಂದಿದ್ದೇನೆ; ಆತನು ಆಶೀರ್ವದಿ ಸುತ್ತಿದ್ದಾನೆ; ನಾನು ಅದನ್ನು ಬದಲು ಮಾಡುವದ ಕ್ಕಾಗದು.

    Behold, I have received [commandment] to bless: and he hath blessed; and I cannot reverse it.

    Numbers 23:20 (ಅರಣ್ಯಕಾಂಡ 23:20)

More Bible verses in Kannada

Kannada Bible: Kannada Old Version, public domain.

King James Version: public domain.