Comfort Bible Verses in Kannada
ಆದರಣೆ ವಚನಗಳು
Comforting verses for times of grief, sorrow and loss.
ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
Yea, though I walk through the valley of the shadow of death, I will fear no evil: for thou [art] with me; thy rod and thy staff they comfort me.
Psalm 23:4 (ಕೀರ್ತನೆಗಳು 23:4) ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು. ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು. ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
Come unto me, all [ye] that labour and are heavy laden, and I will give you rest. Take my yoke upon you, and learn of me; for I am meek and lowly in heart: and ye shall find rest unto your souls. For my yoke [is] easy, and my burden is light.
Matthew 11:28–30 (ಮತ್ತಾಯನು 11:28–30) ಮುರಿದ ಹೃದಯದವರಿಗೆ ಕರ್ತನು ಸವಿಾಪವಾಗಿದ್ದಾನೆ; ಜಜ್ಜಿದ ಆತ್ಮವನ್ನು ರಕ್ಷಿಸುತ್ತಾನೆ.
The LORD [is] nigh unto them that are of a broken heart; and saveth such as be of a contrite spirit.
Psalm 34:18 (ಕೀರ್ತನೆಗಳು 34:18) ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.
Fear thou not; for I [am] with thee: be not dismayed; for I [am] thy God: I will strengthen thee; yea, I will help thee; yea, I will uphold thee with the right hand of my righteousness.
Isaiah 41:10 (ಯೆಶಾಯ 41:10) ನಿಮ್ಮ ಹೃದಯವು ಕಳವಳಗೊಳ್ಳದೆ ಇರಲಿ; ನೀವು ದೇವರನ್ನು ನಂಬಿರಿ, ನನ್ನನ್ನೂ ನಂಬಿರಿ. ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ. ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
Let not your heart be troubled: ye believe in God, believe also in me. In my Father’s house are many mansions: if [it were] not [so], I would have told you. I go to prepare a place for you. And if I go and prepare a place for you, I will come again, and receive you unto myself; that where I am, [there] ye may be also.
John 14:1–3 (ಯೋಹಾನನು 14:1–3) ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
Peace I leave with you, my peace I give unto you: not as the world giveth, give I unto you. Let not your heart be troubled, neither let it be afraid.
John 14:27 (ಯೋಹಾನನು 14:27) ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ.
Blessed [be] God, even the Father of our Lord Jesus Christ, the Father of mercies, and the God of all comfort; Who comforteth us in all our tribulation, that we may be able to comfort them which are in any trouble, by the comfort wherewith we ourselves are comforted of God.
2 Corinthians 1:3–4 (2 ಕೊರಿಂಥದವರಿಗೆ 1:3–4) ಆತನು ಮುರಿದ ಹೃದಯದವರನ್ನು ಸ್ವಸ್ಥಮಾಡಿ ಅವರ ಗಾಯಗಳನ್ನು ಕಟ್ಟುತ್ತಾನೆ.
He healeth the broken in heart, and bindeth up their wounds.
Psalm 147:3 (ಕೀರ್ತನೆಗಳು 147:3) ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣ ವಿರುವದಿಲ್ಲ. ಇನ್ನು ದುಃಖವಾಗಲಿ ಗೋಳಾಟವಾಗಲಿ ನೋವಾಗಲಿ ಇರುವದೇ ಇಲ್ಲ. ಮೊದಲಿದ್ದವುಗಳೆಲ್ಲಾ ಇಲ್ಲದೆ ಹೋದವು ಎಂದು ಹೇಳಿತು.
And God shall wipe away all tears from their eyes; and there shall be no more death, neither sorrow, nor crying, neither shall there be any more pain: for the former things are passed away.
Revelation 21:4 (ಪ್ರಕಟನೆ 21:4) ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
As one whom his mother comforteth, so will I comfort you; and ye shall be comforted in Jerusalem.
Isaiah 66:13 (ಯೆಶಾಯ 66:13) ಕರ್ತನ ಕನಿಕರಗಳಿಂದಲೇ ನಾವು ನಾಶವಾಗ ಲಿಲ್ಲ, ಆತನ ಅಂತಃಕರುಣೆಯು ಮುಗಿಯುವದಿಲ್ಲ. ಅವು ಪ್ರತಿ ಮುಂಜಾನೆಯೂ ಹೊಸದಾಗಿರುವವು; ನಿನ್ನ ನಂಬಿಗಸ್ತಿಕೆಯು ಮಹತ್ತಾದದ್ದು.
[It is of] the LORD’s mercies that we are not consumed, because his compassions fail not. [They are] new every morning: great [is] thy faithfulness.
Lamentations 3:22–23 (ಪ್ರಲಾಪಗಳು 3:22–23) ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯ ಲ್ಪಟ್ಟು ಆತನನ್ನು ಪ್ರಿತಿಸುವವರ ಒಳ್ಳೇದಕ್ಕಾಗಿ ಎಲ್ಲವು ಗಳು ಒಟ್ಟಾಗಿ ಸಂಭವಿಸುತ್ತವೆಯೆಂದು ನಾವು ಬಲ್ಲೆವು.
And we know that all things work together for good to them that love God, to them who are the called according to [his] purpose.
Romans 8:28 (ರೋಮಾಪುರದವರಿಗೆ 8:28) ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.
God [is] our refuge and strength, a very present help in trouble.
Psalm 46:1 (ಕೀರ್ತನೆಗಳು 46:1) ನಿಮ್ಮ ಚಿಂತೆಯನ್ನೆಲ್ಲಾ ಆತನ ಮೇಲೆ ಹಾಕಿರಿ, ಆತನು ನಿಮಗೋಸ್ಕರ ಚಿಂತಿಸುತ್ತಾನೆ.
Casting all your care upon him; for he careth for you.
1 Peter 5:7 (1 ಪೇತ್ರನು 5:7)
More Bible verses in Kannada
- Blessing ಆಶೀರ್ವಾದ
- Strength ಬಲ
- Motivation and success ಜಯ
- Love ಪ್ರೀತಿ
- Peace ಸಮಾಧಾನ
- Faith ನಂಬಿಕೆ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- New Year ಹೊಸ ವರ್ಷ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Holy Spirit ಪವಿತ್ರಾತ್ಮ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್