Skip to content
ThuthiThuthiThuthi
Bible verses by topic

Forgiveness Bible Verses in Kannada

ಕ್ಷಮೆ ವಚನಗಳು

Verses about God's forgiveness and forgiving others.

  1. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.

    If we confess our sins, he is faithful and just to forgive us [our] sins, and to cleanse us from all unrighteousness.

    1 John 1:9 (1 ಯೋಹಾನನು 1:9)
  2. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾನೆ.

    As far as the east is from the west, [so] far hath he removed our transgressions from us.

    Psalm 103:12 (ಕೀರ್ತನೆಗಳು 103:12)
  3. ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷಮಿಸಿ ದಂತೆಯೇ ನೀವು ಒಬ್ಬರಿಗೊಬ್ಬರು ಉಪಕಾರಿಗಳಾ ಗಿಯೂ ಕರುಣೆಯುಳ್ಳವರಾಗಿಯೂ ಕ್ಷಮಿಸುವವ ರಾಗಿಯೂ ಇರ್ರಿ.

    And be ye kind one to another, tenderhearted, forgiving one another, even as God for Christ’s sake hath forgiven you.

    Ephesians 4:32 (ಎಫೆಸದವರಿಗೆ 4:32)
  4. ಯಾವನಿ ಗಾದರೂ ಒಬ್ಬನಿಗೆ ಇನ್ನೊಬ್ಬನ ಮೇಲೆ ವಿರೋಧವಾಗಿ ವ್ಯಾಜ್ಯವಿದ್ದರೂ ಒಬ್ಬರಿಗೊಬ್ಬರು ತಾಳಿಕೊಂಡು ಕ್ರಿಸ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಒಬ್ಬರಿಗೊಬ್ಬರು ಕ್ಷಮಿಸಿರಿ.

    Forbearing one another, and forgiving one another, if any man have a quarrel against any: even as Christ forgave you, so also [do] ye.

    Colossians 3:13 (ಕೊಲೊಸ್ಸೆಯವರಿಗೆ 3:13)
  5. ಆದದರಿಂದ ನೀವು ಮನುಷ್ಯರ ಅಪರಾಧ ಗಳನ್ನು ಕ್ಷಮಿಸುವದಾದರೆ ಪರಲೋಕದ ನಿಮ್ಮ ತಂದೆಯು ಸಹ ನಿಮ್ಮನ್ನು ಕ್ಷಮಿಸುವನು. ನೀವು ಮನುಷ್ಯರ ಅಪರಾಧಗಳನ್ನು ಕ್ಷಮಿಸದೆ ಹೋದರೆ ನಿಮ್ಮ ತಂದೆಯೂ ನಿಮ್ಮ ಅಪರಾಧಗಳನ್ನು ಕ್ಷಮಿಸು ವದಿಲ್ಲ.

    For if ye forgive men their trespasses, your heavenly Father will also forgive you: But if ye forgive not men their trespasses, neither will your Father forgive your trespasses.

    Matthew 6:14–15 (ಮತ್ತಾಯನು 6:14–15)
  6. ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ ಎಂದು ಕರ್ತನು ಹೇಳುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದಂತೆ ಬಿಳುಪಾಗುವವು; ಕಡು ಕೆಂಪಿನಂತೆ ಕೆಂಪಾಗಿದ್ದರೂ ಉಣ್ಣೆಯಂತೆ ಆಗುವವು.

    Come now, and let us reason together, saith the LORD: though your sins be as scarlet, they shall be as white as snow; though they be red like crimson, they shall be as wool.

    Isaiah 1:18 (ಯೆಶಾಯ 1:18)
  7. ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.

    Who [is] a God like unto thee, that pardoneth iniquity, and passeth by the transgression of the remnant of his heritage? he retaineth not his anger for ever, because he delighteth [in] mercy. He will turn again, he will have compassion upon us; he will subdue our iniquities; and thou wilt cast all their sins into the depths of the sea.

    Micah 7:18–19 (ಮೀಕ 7:18–19)
  8. ಆದದರಿಂದ ನಿಮ್ಮ ಪಾಪಗಳು ಅಳಿಸಲ್ಪಡು ವಂತೆ ನೀವು ಮಾನಸಾಂತರಪಟ್ಟು ತಿರುಗಿಕೊಳ್ಳಿರಿ; ಆಗ ಕರ್ತನ ಸನ್ನಿಧಾನದಿಂದ ನಿಮಗೆ ವಿಶ್ರಾಂತಿಕಾಲಗಳು ಒದಗುವವು.

    Repent ye therefore, and be converted, that your sins may be blotted out, when the times of refreshing shall come from the presence of the Lord;

    Acts 3:19 (ಅಪೊಸ್ತಲರ ಕೃತ್ಯಗಳು 3:19)
  9. ಯಾವನ ದ್ರೋಹವು ಕ್ಷಮಿಸಲ್ಪಟ್ಟದೆಯೋ, ಯಾವನ ಪಾಪವು ಮುಚ್ಚಲ್ಪಟ್ಟಿದೆಯೋ, ಅವನೇ ಧನ್ಯನು.

    [A Psalm] of David, Maschil. Blessed [is he whose] transgression [is] forgiven, [whose] sin [is] covered.

    Psalm 32:1 (ಕೀರ್ತನೆಗಳು 32:1)
  10. ತೀರ್ಪು ಮಾಡಬೇಡಿರಿ; ಆಗ ನಿಮಗೂ ತೀರ್ಪಾಗುವದಿಲ್ಲ. ಖಂಡಿಸಬೇಡಿರಿ; ಆಗ ನಿಮಗೂ ಖಂಡನೆಯಾಗುವದಿಲ್ಲ. ಕ್ಷಮಿಸಿರಿ; ಆಗ ನಿಮಗೂ ಕ್ಷಮಿಸಲ್ಪಡುವದು.

    Judge not, and ye shall not be judged: condemn not, and ye shall not be condemned: forgive, and ye shall be forgiven:

    Luke 6:37 (ಲೂಕನು 6:37)
  11. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.

    I, [even] I, [am] he that blotteth out thy transgressions for mine own sake, and will not remember thy sins.

    Isaiah 43:25 (ಯೆಶಾಯ 43:25)
  12. ತರುವಾಯ ಪೇತ್ರನು ಆತನ ಬಳಿಗೆ ಬಂದು--ಕರ್ತನೇ, ನನ್ನ ಸಹೋದರನು ನನಗೆ ವಿರೋಧ ವಾಗಿ ಪಾಪಮಾಡಿದರೆ ನಾನು ಎಷ್ಟು ಸಾರಿ ಅವನಿಗೆ ಕ್ಷಮಿಸಬೇಕು? ಏಳು ಸಾರಿಯೋ ಎಂದು ಕೇಳಿದನು. ಯೇಸು ಅವನಿಗೆ--ಏಳು ಸಾರಿಯಲ್ಲ, ಆದರೆ ಏಳೆಪ್ಪತ್ತು ಸಾರಿ ಎಂದು ನಾನು ನಿನಗೆ ಹೇಳುತ್ತೇನೆ;

    Then came Peter to him, and said, Lord, how oft shall my brother sin against me, and I forgive him? till seven times? Jesus saith unto him, I say not unto thee, Until seven times: but, Until seventy times seven.

    Matthew 18:21–22 (ಮತ್ತಾಯನು 18:21–22)

More Bible verses in Kannada

Kannada Bible: Kannada Old Version, public domain.

King James Version: public domain.