Holy Spirit Bible Verses in Kannada
ಪವಿತ್ರಾತ್ಮ ವಚನಗಳು
Verses about the Holy Spirit.
ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬಂದಾಗ ನೀವು ಬಲವನ್ನು ಹೊಂದುವಿರಿ; ಯೆರೂಸಲೇಮಿನಲ್ಲಿಯೂ ಎಲ್ಲಾ ಯೂದಾಯದ ಲ್ಲಿಯೂ ಸಮಾರ್ಯದಲ್ಲಿಯೂ ಭೂಮಿಯ ಕಟ್ಟ ಕಡೆಯವರೆಗೂ ನೀವು ನನಗೆ ಸಾಕ್ಷಿಗಳಾಗಿರುವಿರಿ ಎಂದು ಹೇಳಿದನು.
But ye shall receive power, after that the Holy Ghost is come upon you: and ye shall be witnesses unto me both in Jerusalem, and in all Judæa, and in Samaria, and unto the uttermost part of the earth.
Acts 1:8 (ಅಪೊಸ್ತಲರ ಕೃತ್ಯಗಳು 1:8) ಆಗ ಅವರೆಲ್ಲರೂ ಪವಿತ್ರಾತ್ಮಭರಿತರಾಗಿ ಆತ್ಮನು ತಮಗೆ ನುಡಿಯುವ ಶಕ್ತಿಯನ್ನು ಕೊಟ್ಟ ಪ್ರಕಾರ ಅವರು ಬೇರೆಬೇರೆ ಭಾಷೆಗಳಲ್ಲಿ ಮಾತನಾಡುವದಕ್ಕೆ ಪ್ರಾರಂಭಿಸಿದರು.
And they were all filled with the Holy Ghost, and began to speak with other tongues, as the Spirit gave them utterance.
Acts 2:4 (ಅಪೊಸ್ತಲರ ಕೃತ್ಯಗಳು 2:4) ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಪರಿಶುದ್ಧಾತ್ಮನೆಂಬ ಆದರಿಕನೇ ಎಲ್ಲವುಗಳನ್ನು ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದವುಗಳನ್ನೆಲ್ಲಾ ನಿಮ್ಮ ನೆನಪಿಗೆ ತರುವನು.
But the Comforter, [which is] the Holy Ghost, whom the Father will send in my name, he shall teach you all things, and bring all things to your remembrance, whatsoever I have said unto you.
John 14:26 (ಯೋಹಾನನು 14:26) ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ ಸಾತ್ವಿಕತ್ವ ಮಿತವ್ಯಯ ಇಂಥ ವುಗಳೇ; ಇಂಥವುಗಳಿಗೆ ವಿರೋಧವಾಗಿ ನ್ಯಾಯ ಪ್ರಮಾಣವಿಲ್ಲ.
But the fruit of the Spirit is love, joy, peace, longsuffering, gentleness, goodness, faith, Meekness, temperance: against such there is no law.
Galatians 5:22–23 (ಗಲಾತ್ಯದವರಿಗೆ 5:22–23) ಹಾಗೆಯೇ ಆತ್ಮನು ಸಹ ನಮ್ಮ ಬಲಹೀನತೆ ಗಳಿಗೆ ಸಹಾಯಮಾಡುತ್ತಾನೆ; ಹೇಗಂದರೆ ನಾವು ತಕ್ಕ ಪ್ರಕಾರ ಏನು ಬೇಡಿಕೊಳ್ಳಬೇಕೋ ನಮಗೆ ಗೊತ್ತಿಲ್ಲವಾದ್ದರಿಂದ ಆತ್ಮನು ತಾನೇ ಉಚ್ಚರಿಸಲಾಗ ದಂಥ ನರಳಾಟದಿಂದ ನಮಗೋಸ್ಕರ ವಿಜ್ಞಾಪನೆ ಮಾಡುತ್ತಾನೆ.
Likewise the Spirit also helpeth our infirmities: for we know not what we should pray for as we ought: but the Spirit itself maketh intercession for us with groanings which cannot be uttered.
Romans 8:26 (ರೋಮಾಪುರದವರಿಗೆ 8:26) ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.
And it shall come to pass afterward, [that] I will pour out my spirit upon all flesh; and your sons and your daughters shall prophesy, your old men shall dream dreams, your young men shall see visions:
Joel 2:28 (ಯೋವೇಲ 2:28) ಏನು? ದೇವರಿಂದ ದೊರಕಿ ನಿಮ್ಮೊಳಗೆ ನೆಲೆಗೊಂಡಿರುವ ಪವಿತ್ರಾತ್ಮನಿಗೆ ನಿಮ್ಮ ದೇಹವು ಆಲಯವಾಗಿದೆಯೆಂಬದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ;ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
What? know ye not that your body is the temple of the Holy Ghost [which is] in you, which ye have of God, and ye are not your own?
1 Corinthians 6:19 (1 ಕೊರಿಂಥದವರಿಗೆ 6:19) ನಿನಗೆ ಹೊಸ ಹೃದಯವನ್ನು ಕೊಟ್ಟು ಹೊಸ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನಿಮ್ಮ ದೇಹದಿಂದ ಕಲ್ಲಿನ ಹೃದಯವನ್ನು ಹೊರಗೆ ತೆಗೆದು ನಿಮಗೆ ಮಾಂಸದ ಹೃದಯವನ್ನು ಕೊಡುತ್ತೇನೆ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಡುವೆನು; ನೀವು ನನ್ನ ನಿಯಮ ಗಳಲ್ಲಿ ನಡೆಯುವ ಹಾಗೆ ಮಾಡುವೆನು ಮತ್ತು ನೀವು ನನ್ನ ನ್ಯಾಯವಿಧಿಗಳನ್ನು ಅನುಸರಿಸಿ ನಡೆಯುವಿರಿ.
A new heart also will I give you, and a new spirit will I put within you: and I will take away the stony heart out of your flesh, and I will give you an heart of flesh. And I will put my spirit within you, and cause you to walk in my statutes, and ye shall keep my judgments, and do [them].
Ezekiel 36:26–27 (ಯೆಹೆಜ್ಕೇಲನು 36:26–27) ಆದರೆ ಆತನು ಅಂದರೆ ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ಎಲ್ಲಾ ಸತ್ಯಕ್ಕೆ ನಡಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತನಾಡದೆ ತಾನು ಕೇಳಿದವುಗಳನ್ನೇ ಮಾತನಾಡುತ್ತಾನೆ; ಮುಂದೆ ಬರುವದಕ್ಕಿರುವ ವಿಷಯಗಳನ್ನು ಆತನು ನಿಮಗೆ ತೋರಿಸುವನು.
Howbeit when he, the Spirit of truth, is come, he will guide you into all truth: for he shall not speak of himself; but whatsoever he shall hear, [that] shall he speak: and he will shew you things to come.
John 16:13 (ಯೋಹಾನನು 16:13) ಯಾಕಂದರೆ ಯಾರಾರು ದೇವರ ಆತ್ಮನಿಂದ ನಡಿಸಲ್ಪಡುತ್ತಾರೋ ಅವರು ದೇವರ ಪುತ್ರರಾಗಿದ್ದಾರೆ.
For as many as are led by the Spirit of God, they are the sons of God.
Romans 8:14 (ರೋಮಾಪುರದವರಿಗೆ 8:14) ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
If ye then, being evil, know how to give good gifts unto your children: how much more shall [your] heavenly Father give the Holy Spirit to them that ask him?
Luke 11:13 (ಲೂಕನು 11:13) ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Then he answered and spake unto me, saying, This [is] the word of the LORD unto Zerubbabel, saying, Not by might, nor by power, but by my spirit, saith the LORD of hosts.
Zechariah 4:6 (ಜೆಕರ್ಯ 4:6)
More Bible verses in Kannada
- Blessing ಆಶೀರ್ವಾದ
- Comfort ಆದರಣೆ
- Strength ಬಲ
- Motivation and success ಜಯ
- Love ಪ್ರೀತಿ
- Peace ಸಮಾಧಾನ
- Faith ನಂಬಿಕೆ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- New Year ಹೊಸ ವರ್ಷ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್