Love Bible Verses in Kannada
ಪ್ರೀತಿ ವಚನಗಳು
Verses about God's love and loving one another.
ದೇವರು ಲೋಕವನ್ನು ಎಷ್ಟೋ ಪ್ರೀತಿಮಾಡಿ ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಯಾವನಾದರೂ ನಾಶವಾಗದೆ ನಿತ್ಯಜೀವ ವನ್ನು ಪಡೆದವನಾಗಿರುವನು.
For God so loved the world, that he gave his only begotten Son, that whosoever believeth in him should not perish, but have everlasting life.
John 3:16 (ಯೋಹಾನನು 3:16) ಪ್ರೀತಿ ಬಹು ತಾಳ್ಮೆಯುಳ್ಳದ್ದು, ಕರುಣೆಯುಳ್ಳದ್ದು; ಪ್ರೀತಿಯು ಹೊಟ್ಟೇಕಿಚ್ಚು ಪಡುವದಿಲ್ಲ, ಹೊಗಳಿ ಕೊಳ್ಳುವದಿಲ್ಲ, ಉಬ್ಬಿಕೊಳ್ಳುವದಿಲ್ಲ, ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
Charity suffereth long, [and] is kind; charity envieth not; charity vaunteth not itself, is not puffed up, Doth not behave itself unseemly, seeketh not her own, is not easily provoked, thinketh no evil; Rejoiceth not in iniquity, but rejoiceth in the truth; Beareth all things, believeth all things, hopeth all things, endureth all things.
1 Corinthians 13:4–7 (1 ಕೊರಿಂಥದವರಿಗೆ 13:4–7) ಪ್ರಿಯರೇ, ನಾವು ಒಬ್ಬರನ್ನೊಬ್ಬರು ಪ್ರೀತಿಸೋಣ. ಯಾಕಂದರೆ ಪ್ರೀತಿಯು ದೇವರಿಂದಾಗಿದೆ. ಪ್ರೀತಿ ಮಾಡುವ ಪ್ರತಿಯೊಬ್ಬನು ದೇವರಿಂದ ಹುಟ್ಟಿದವನೂ ದೇವರನ್ನು ಬಲ್ಲವನೂ ಆಗಿದ್ದಾನೆ. ಪ್ರೀತಿಯಿಲ್ಲದ ವನು ದೇವರನ್ನು ಬಲ್ಲವನಲ್ಲ; ಯಾಕಂದರೆ ದೇವರು ಪ್ರೀತಿಯಾಗಿದ್ದಾನೆ.
Beloved, let us love one another: for love is of God; and every one that loveth is born of God, and knoweth God. He that loveth not knoweth not God; for God is love.
1 John 4:7–8 (1 ಯೋಹಾನನು 4:7–8) ಆತನು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.
We love him, because he first loved us.
1 John 4:19 (1 ಯೋಹಾನನು 4:19) ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ತೋರ್ಪಡಿಸಿದ್ದಾನೆ.
But God commendeth his love toward us, in that, while we were yet sinners, Christ died for us.
Romans 5:8 (ರೋಮಾಪುರದವರಿಗೆ 5:8) ಹೇಗಂದರೆ ಮರಣವಾಗಲಿ ಜೀವವಾಗಲಿ ದೂತರಾಗಲಿ ರಾಜತ್ವಗಳಾಗಲಿ ಅಧಿಕಾರಗಳಾಗಲಿ ಈಗಿನವುಗಳಾ ಗಲಿ ಮುಂಬರುವವುಗಳಾಗಲಿಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು. ಉನ್ನತವಾಗಲಿ ಅಗಾಧವಾಗಲಿ ಬೇರೆ ಯಾವ ಸೃಷ್ಟಿಯಾಗಲಿ ನಮ್ಮನ್ನು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ದೇವರ ಪ್ರೀತಿಯಿಂದ ಅಗಲಿಸಲಾರವೆಂದು ನನಗೆ ನಿಶ್ಚಯ ಉಂಟು.
For I am persuaded, that neither death, nor life, nor angels, nor principalities, nor powers, nor things present, nor things to come, Nor height, nor depth, nor any other creature, shall be able to separate us from the love of God, which is in Christ Jesus our Lord.
Romans 8:38–39 (ರೋಮಾಪುರದವರಿಗೆ 8:38–39) ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನನ್ನ ಆಜ್ಞೆಯಾಗಿದೆ. ಒಬ್ಬನು ತನ್ನ ಸ್ನೇಹಿತರಿ ಗೋಸ್ಕರ ತನ್ನ ಪ್ರಾಣವನ್ನು ಕೊಡುವ ಪ್ರೀತಿಗಿಂತ ಹೆಚ್ಚಿನದು ಯಾವದೂ ಇಲ್ಲ.
This is my commandment, That ye love one another, as I have loved you. Greater love hath no man than this, that a man lay down his life for his friends.
John 15:12–13 (ಯೋಹಾನನು 15:12–13) ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ.
The LORD hath appeared of old unto me, [saying], Yea, I have loved thee with an everlasting love: therefore with lovingkindness have I drawn thee.
Jeremiah 31:3 (ಯೆರೆಮೀಯ 31:3) ಹೀಗೆ ನಂಬಿಕೆ ನಿರೀಕ್ಷೆ ಪ್ರೀತಿ ಈ ಮೂರೇ ನಿಲ್ಲುತ್ತವೆ; ಆದರೆ ಇವುಗಳಲ್ಲಿ ದೊಡ್ಡದು ಪ್ರೀತಿಯೇ.
And now abideth faith, hope, charity, these three; but the greatest of these [is] charity.
1 Corinthians 13:13 (1 ಕೊರಿಂಥದವರಿಗೆ 13:13) ಎಲ್ಲವುಗಳಿಗೆ ಮಿಗಿಲಾಗಿ ನಿಮ್ಮ ನಿಮ್ಮೊಳಗೆ ಯಥಾರ್ಥವಾದ ಪ್ರೀತಿಯಿರಲಿ; ಯಾಕಂದರೆ ಪ್ರೀತಿಯು ಎಷ್ಟೋ ಪಾಪಗಳನ್ನು ಮುಚ್ಚುತ್ತದೆ.
And above all things have fervent charity among yourselves: for charity shall cover the multitude of sins.
1 Peter 4:8 (1 ಪೇತ್ರನು 4:8) ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು.
The LORD thy God in the midst of thee [is] mighty; he will save, he will rejoice over thee with joy; he will rest in his love, he will joy over thee with singing.
Zephaniah 3:17 (ಚೆಫನ್ಯ 3:17) ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ನಂಬಿಕೆಯ ಮೂಲಕ ವಾಸಿಸುವಂತೆಯೂ ನೀವು ಪ್ರೀತಿಯಲಿ ಬೇರೂರಿ ನೆಲೆಗೊಂಡು ನಿಂತು ಪರಿಶುದ್ಧರೆಲ್ಲ ರೊಂದಿಗೆ ಅದರ ಅಗಲ ಉದ್ದ ಆಳ ಮತ್ತು ಎತ್ತರವನ್ನು ಗ್ರಹಿಸುವಂತೆಯೂ ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
That Christ may dwell in your hearts by faith; that ye, being rooted and grounded in love, May be able to comprehend with all saints what [is] the breadth, and length, and depth, and height; And to know the love of Christ, which passeth knowledge, that ye might be filled with all the fulness of God.
Ephesians 3:17–19 (ಎಫೆಸದವರಿಗೆ 3:17–19)
More Bible verses in Kannada
- Blessing ಆಶೀರ್ವಾದ
- Comfort ಆದರಣೆ
- Strength ಬಲ
- Motivation and success ಜಯ
- Peace ಸಮಾಧಾನ
- Faith ನಂಬಿಕೆ
- Healing ಸ್ವಸ್ಥತೆ
- Prayer ಪ್ರಾರ್ಥನೆ
- Thanksgiving ಕೃತಜ್ಞತೆ
- Birthday ಹುಟ್ಟುಹಬ್ಬ
- Wedding and marriage ಮದುವೆ
- New Year ಹೊಸ ವರ್ಷ
- Children ಮಕ್ಕಳು
- Fear and worry ಭಯ, ಚಿಂತೆ
- Forgiveness ಕ್ಷಮೆ
- Salvation ರಕ್ಷಣೆ
- Holy Spirit ಪವಿತ್ರಾತ್ಮ
- Christmas ಕ್ರಿಸ್ಮಸ್
- Good Friday and Easter ಶುಭ ಶುಕ್ರವಾರ, ಈಸ್ಟರ್