Skip to content
ThuthiThuthiThuthi
Bible verses by topic

Motivation and success Bible Verses in Kannada

ಜಯ ವಚನಗಳು

Motivational Bible verses about hope, purpose and success.

  1. ನಾನು ನಿಮ್ಮನ್ನು ಕುರಿತು ಮಾಡುವ ಆಲೋಚನೆ ಗಳನ್ನು ಬಲ್ಲೆನೆಂದು ಕರ್ತನು ಅನ್ನುತ್ತಾನೆ; ಅವು ಕೇಡಿ ಗಲ್ಲ, ಸಮಾಧಾನಕ್ಕಿರುವ ಆಲೋಚನೆಗಳು; ನೀವು ನಿರೀಕ್ಷಿಸಿದ್ದ ಸ್ಥಿತಿಯನ್ನು ಕೊಡುವವುಗಳೇ.

    For I know the thoughts that I think toward you, saith the LORD, thoughts of peace, and not of evil, to give you an expected end.

    Jeremiah 29:11 (ಯೆರೆಮೀಯ 29:11)
  2. ಈ ಪುಸ್ತಕದಲ್ಲಿ ಬರೆದಿರುವ ನ್ಯಾಯಪ್ರಮಾಣವು ನಿನ್ನ ಬಾಯಿಂದ ಹೋಗಬಾರದು; ಅದರಲ್ಲಿ ಬರೆದಿರುವ ಪ್ರಕಾರವೇ ಕೈಕೊಂಡು ನಡೆಯುವ ಹಾಗೆ ರಾತ್ರಿಹಗಲು ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವನ್ನು ಸಫಲಮಾಡಿ ಕೊಂಡು ಮಹಾ ಜಯಶಾಲಿಯಾಗುವಿ.

    This book of the law shall not depart out of thy mouth; but thou shalt meditate therein day and night, that thou mayest observe to do according to all that is written therein: for then thou shalt make thy way prosperous, and then thou shalt have good success.

    Joshua 1:8 (ಯೆಹೋಶುವ 1:8)
  3. ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ. ನಿನ್ನ ಎಲ್ಲಾ ಮಾರ್ಗಗಳಲ್ಲಿ ಆತನನ್ನು ಸನ್ಮಾನಿಸು. ಆಗ ಆತನು ನಿನ್ನ ಮಾರ್ಗಗಳನ್ನು ಸರಾಗಮಾಡುವನು.

    Trust in the LORD with all thine heart; and lean not unto thine own understanding. In all thy ways acknowledge him, and he shall direct thy paths.

    Proverbs 3:5–6 (ಜ್ಞಾನೋಕ್ತಿಗಳು 3:5–6)
  4. ನಿನ್ನ ಕಾರ್ಯಗಳನ್ನು ಕರ್ತನಿಗೆ ಒಪ್ಪಿಸಿದರೆ ನಿನ್ನ ಆಲೋಚನೆಗಳು ಸ್ಥಿರವಾಗುವವು.

    Commit thy works unto the LORD, and thy thoughts shall be established.

    Proverbs 16:3 (ಜ್ಞಾನೋಕ್ತಿಗಳು 16:3)
  5. ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು. ನಿನ್ನ ಮಾರ್ಗವನ್ನು ಕರ್ತನಿಗೆ ಒಪ್ಪಿಸು; ಆತನಲ್ಲಿ ಭರವಸ ವಿಡು; ಆತನು ಅದನ್ನು ನೆರವೇರಿಸುವನು.

    Delight thyself also in the LORD; and he shall give thee the desires of thine heart. Commit thy way unto the LORD; trust also in him; and he shall bring [it] to pass.

    Psalm 37:4–5 (ಕೀರ್ತನೆಗಳು 37:4–5)
  6. ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ; ಇಲ್ಲವೆ ಹಳೇ ಸಂಗತಿಗಳನ್ನು ಯೋಚಿಸಬೇಡಿರಿ. ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.

    Remember ye not the former things, neither consider the things of old. Behold, I will do a new thing; now it shall spring forth; shall ye not know it? I will even make a way in the wilderness, [and] rivers in the desert.

    Isaiah 43:18–19 (ಯೆಶಾಯ 43:18–19)
  7. ಸಹೋದರರೇ, ನಾನಂತೂ ಹಿಡಿದುಕೊಂಡವ ನೆಂದು ನನ್ನನ್ನು ಎಣಿಸಿಕೊಳ್ಳುವದಿಲ್ಲ; ಆದರೆ ಇದೊಂ ದನ್ನು ಮಾಡುತ್ತೇನೆ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕಾಗಿ ಕ್ರಿಸ್ತ ಯೇಸುವಿನಲ್ಲಿ ದೇವರ ಉನ್ನತವಾದ ಕರೆಯುವಿಕೆಯ ಬಹುಮಾನವನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.

    Brethren, I count not myself to have apprehended: but [this] one thing [I do], forgetting those things which are behind, and reaching forth unto those things which are before, I press toward the mark for the prize of the high calling of God in Christ Jesus.

    Philippians 3:13–14 (ಫಿಲಿಪ್ಪಿಯವರಿಗೆ 3:13–14)
  8. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು.

    And let us not be weary in well doing: for in due season we shall reap, if we faint not.

    Galatians 6:9 (ಗಲಾತ್ಯದವರಿಗೆ 6:9)
  9. ನೀವು ಯಾವದನ್ನು ಮಾಡಿದರೂ ಅದನ್ನು ಮನುಷ್ಯರಿ ಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ;

    And what soever ye do, do [it] heartily, as to the Lord, and not unto men;

    Colossians 3:23 (ಕೊಲೊಸ್ಸೆಯವರಿಗೆ 3:23)
  10. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ.

    And the LORD shall make thee the head, and not the tail; and thou shalt be above only, and thou shalt not be beneath; if that thou hearken unto the commandments of the LORD thy God, which I command thee this day, to observe and to do [them:]

    Deuteronomy 28:13 (ಧರ್ಮೋಪದೇಶಕಾಂಡ 28:13)
  11. ಆದರೆ ಮೊದಲು ನೀವು ದೇವರ ರಾಜ್ಯವನ್ನೂ ಆತನ ನೀತಿಯನ್ನೂ ಹುಡುಕಿರಿ. ಇವುಗಳ ಕೂಡ ಅವೆಲ್ಲವುಗಳು ಕೂಡಿಸಲ್ಪಡುವವು.ಆದಕಾರಣ ನಾಳೆಗೋಸ್ಕರ ಚಿಂತೆ ಮಾಡಬೇಡಿರಿ; ಯಾಕಂದರೆ ನಾಳಿನ ದಿನವು ತನಗೆ ಸಂಬಂಧ ಪಟ್ಟವುಗಳಿಗಾಗಿ ತಾನೇ ಚಿಂತಿಸುವದು. ಆ ದಿನಕ್ಕೆ ಅದರ ಕಾಟ ಸಾಕು.

    But seek ye first the kingdom of God, and his righteousness; and all these things shall be added unto you.

    Matthew 6:33 (ಮತ್ತಾಯನು 6:33)
  12. ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.

    And he shall be like a tree planted by the rivers of water, that bringeth forth his fruit in his season; his leaf also shall not wither; and whatsoever he doeth shall prosper.

    Psalm 1:3 (ಕೀರ್ತನೆಗಳು 1:3)
  13. ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.

    Therefore, my beloved brethren, be ye stedfast, unmoveable, always abounding in the work of the Lord, forasmuch as ye know that your labour is not in vain in the Lord.

    1 Corinthians 15:58 (1 ಕೊರಿಂಥದವರಿಗೆ 15:58)
  14. ಹೌದು, ನಮ್ಮನ್ನು ಪ್ರಿತಿಸಿದಾತನ ಮೂಲಕವಾಗಿ ನಾವು ಈ ಎಲ್ಲವುಗಳಲ್ಲಿ ಜಯಶಾಲಿ ಗಳಿಗಿಂತಲೂ ಹೆಚ್ಚಿನವರಾಗಿದ್ದೇವೆ.

    Nay, in all these things we are more than conquerors through him that loved us.

    Romans 8:37 (ರೋಮಾಪುರದವರಿಗೆ 8:37)

More Bible verses in Kannada

Kannada Bible: Kannada Old Version, public domain.

King James Version: public domain.