Skip to content
ThuthiThuthiThuthi
Bible verses by topic

Strength Bible Verses in Kannada

ಬಲ ವಚನಗಳು

Verses for strength and courage when you feel weak.

  1. ನನ್ನನ್ನು ಬಲಪಡಿಸುವ ಕ್ರಿಸ್ತನ ಮೂಲಕ ನಾನು ಎಲ್ಲವುಗಳನ್ನು ಮಾಡಬಲ್ಲೆನು.

    I can do all things through Christ which strengtheneth me.

    Philippians 4:13 (ಫಿಲಿಪ್ಪಿಯವರಿಗೆ 4:13)
  2. ಆತನು ದಣಿದವನಿಗೆ ಶಕ್ತಿಯನ್ನೂ ಬಲಹೀನನಿಗೆ ಬಹುಬಲವನ್ನೂ ಕೊಡುತ್ತಾನೆ. ಯೌವನಸ್ಥರೋ ದಣಿದು ಬಳಲುವರು ತರುಣರು ಸಂಪೂರ್ಣವಾಗಿ ಬೀಳುವರು.ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು. ಆದರೆ ಕರ್ತನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗ ಳಂತೆ ರೆಕ್ಕೆಗಳಿಂದ ಬೆಟ್ಟವನ್ನು ಏರುವರು. ಓಡಿ ದಣಿಯರು, ನಡೆದು ಬಳಲರು.

    He giveth power to the faint; and to [them that have] no might he increaseth strength. Even the youths shall faint and be weary, and the young men shall utterly fall: But they that wait upon the LORD shall renew [their] strength; they shall mount up with wings as eagles; they shall run, and not be weary; [and] they shall walk, and not faint.

    Isaiah 40:29–31 (ಯೆಶಾಯ 40:29–31)
  3. ನಿನಗೆ ಆಜ್ಞಾ ಪಿಸಿದ್ದೇನಲ್ಲಾ; ಬಲವಾಗಿರು, ಒಳ್ಳೆ ಧೈರ್ಯದಿಂದಿರು; ಭಯಪಡಬೇಡ, ನಿರಾಶೆಗೊಳ್ಳಬೇಡ. ನೀನು ಹೋಗು ವಲ್ಲೆಲ್ಲಾ ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಎಂದು ಹೇಳಿದನು.

    Have not I commanded thee? Be strong and of a good courage; be not afraid, neither be thou dismayed: for the LORD thy God [is] with thee whithersoever thou goest.

    Joshua 1:9 (ಯೆಹೋಶುವ 1:9)
  4. ಕರ್ತನು ನನ್ನ ಬಲವೂ ಗುರಾಣಿಯೂ ಆಗಿದ್ದಾನೆ; ನನ್ನ ಹೃದಯವು ಆತನಲ್ಲಿ ಭರವಸವಿಟ್ಟದ್ದರಿಂದ ಸಹಾಯ ಹೊಂದಿದೆನು; ಆದದರಿಂದ ನನ್ನ ಹೃದಯವು ಬಹಳವಾಗಿ ಉತ್ಸಾಹ ಪಡುವದು; ನನ್ನ ಹಾಡಿನಿಂದ ಆತನನ್ನು ಕೊಂಡಾ ಡುವೆನು.

    The LORD [is] my strength and my shield; my heart trusted in him, and I am helped: therefore my heart greatly rejoiceth; and with my song will I praise him.

    Psalm 28:7 (ಕೀರ್ತನೆಗಳು 28:7)
  5. ಅದಕ್ಕಾತನು--ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ನನ್ನ ಬಲವು ಪರಿಪೂರ್ಣವಾಗುತ್ತದೆ ಎಂದು ನನಗೆ ಹೇಳಿದನು. ಹೀಗಿರಲಾಗಿ ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿ ಕೊಂಡಿರಬೇಕೆಂದು ನನಗುಂಟಾಗುವ ನಿರ್ಬಲಾ ವಸ್ಥೆಗಳ ವಿಷಯದಲ್ಲಿಯೇ ಬಹು ಸಂತೋಷವಾಗಿ ಹೆಚ್ಚಳಪಡುವೆನು. ಆದದರಿಂದ ನಾನು ಕ್ರಿಸ್ತನ ನಿಮಿತ್ತ ನಿರ್ಬಲಾವಸ್ಥೆಗಳಲ್ಲಿ ಅವಮಾನಗಳಲ್ಲಿ ಕೊರತೆ ಗಳಲ್ಲಿ ಹಿಂಸೆಗಳಲ್ಲಿ ಇಕ್ಕಟ್ಟುಗಳಲ್ಲಿ ಸಂತೋಷವಾಗಿ ದ್ದೇನೆ; ಯಾಕಂದರೆ ನಾನು ಯಾವಾಗ ನಿರ್ಬಲ ನಾಗಿದ್ದೇನೋ ಅವಾಗಲೇ ಬಲವುಳ್ಳವನಾಗಿದ್ದೇನೆ.

    And he said unto me, My grace is sufficient for thee: for my strength is made perfect in weakness. Most gladly therefore will I rather glory in my infirmities, that the power of Christ may rest upon me. Therefore I take pleasure in infirmities, in reproaches, in necessities, in persecutions, in distresses for Christ’s sake: for when I am weak, then am I strong.

    2 Corinthians 12:9–10 (2 ಕೊರಿಂಥದವರಿಗೆ 12:9–10)
  6. ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.

    Then he said unto them, Go your way, eat the fat, and drink the sweet, and send portions unto them for whom nothing is prepared: for [this] day [is] holy unto our Lord: neither be ye sorry; for the joy of the LORD is your strength.

    Nehemiah 8:10 (ನೆಹೆಮೀಯ 8:10)
  7. ನಮ್ಮ ಆಶ್ರಯವೂ ಬಲವೂ ಆಗಿರುವ ದೇವರು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

    God [is] our refuge and strength, a very present help in trouble.

    Psalm 46:1 (ಕೀರ್ತನೆಗಳು 46:1)
  8. ಬಲವಾಗಿರ್ರಿ; ಧೈರ್ಯವಾಗಿರ್ರಿ; ಭಯಪಡಬೇಡಿರಿ; ಅವರಿಗೆ ಹೆದರಬೇಡಿರಿ; ನಿನ್ನ ದೇವರಾದ ಕರ್ತನು ತಾನೇ ನಿನ್ನ ಸಂಗಡ ಹೋಗುತ್ತಾನೆ; ಆತನು ನಿನ್ನನ್ನು ಬಿಡುವದಿಲ್ಲ, ವಿಸರ್ಜಿಸುವದೂ ಇಲ್ಲ ಎಂದು ಹೇಳಿದನು.

    Be strong and of a good courage, fear not, nor be afraid of them: for the LORD thy God, he [it is] that doth go with thee; he will not fail thee, nor forsake thee.

    Deuteronomy 31:6 (ಧರ್ಮೋಪದೇಶಕಾಂಡ 31:6)
  9. ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

    Fear thou not; for I [am] with thee: be not dismayed; for I [am] thy God: I will strengthen thee; yea, I will help thee; yea, I will uphold thee with the right hand of my righteousness.

    Isaiah 41:10 (ಯೆಶಾಯ 41:10)
  10. ಕಡೇದಾಗಿ ನನ್ನ ಸಹೋದರರೇ, ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.

    Finally, my brethren, be strong in the Lord, and in the power of his might.

    Ephesians 6:10 (ಎಫೆಸದವರಿಗೆ 6:10)
  11. ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.

    My flesh and my heart faileth: [but] God [is] the strength of my heart, and my portion for ever.

    Psalm 73:26 (ಕೀರ್ತನೆಗಳು 73:26)
  12. ಕರ್ತನಾದ ದೇವರು ನನ್ನ ಬಲವಾಗಿದ್ದಾನೆ. ಆತನು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ ನನ್ನ ಉನ್ನತ ಸ್ಥಳಗಳಲ್ಲಿ ನಾನು ನಡೆಯುವಂತೆ ಆತನು ಮಾಡುವನು. ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು: ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.

    The LORD God [is] my strength, and he will make my feet like hinds’ [feet], and he will make me to walk upon mine high places. To the chief singer on my stringed instruments.

    Habakkuk 3:19 (ಹಬಕ್ಕೂಕ 3:19)

More Bible verses in Kannada

Kannada Bible: Kannada Old Version, public domain.

King James Version: public domain.