Zechariah · chapter 1 · verse 13
Zechariah 1:13 in Kannada
ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
Aaga kartanu nanna sangada maatanaadida dootanige olle maatugalindaloo aadaraneya maatu galindaloo uttarakottanu.
Zechariah 1:13 in English
- King James Version (KJV)
- And the LORD answered the angel that talked with me [with] good words [and] comfortable words.
- World English Bible (WEB)
- The LORD answered the angel who talked with me with kind and comforting words.
- American Standard Version (ASV)
- And Jehovah answered the angel that talked with me with good words, [even] comfortable words.
- Bible in Basic English (BBE)
- And the Lord gave an answer in good and comforting words to the angel who was talking to me.
- Darby Translation (DBY)
- And Jehovah answered the angel that talked with me good words, comforting words.
- Webster's Bible (WBS)
- And the LORD answered the angel that talked with me [with] good words [and] comforting words.
- Young's Literal Translation (YLT)
- And Jehovah answereth the messenger, who is speaking with me, good words, comfortable words.
Read in context
- 11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- 12ಆಗ ಕರ್ತನ ದೂತನು ಉತ್ತರಕೊಟ್ಟು ಹೀಗಂ ದನು--ಓ ಸೈನ್ಯಗಳ ಕರ್ತನೇ, ನೀನು ಯೆರೂಸಲೇ ಮನ್ನೂ ಯೆಹೂದದ ಪಟ್ಟಣಗಳನ್ನೂ ಎಷ್ಟರ ವರೆಗೆ ಕನಿಕರಿಸದೆ ಇರುವಿ? ಅವುಗಳ ಮೇಲೆ ಈ ಎಪ್ಪತ್ತು ವರುಷಗಳು ಸಿಟ್ಟು ಮಾಡಿದ್ದೀಯಲ್ಲವೋ ಅಂದನು.
- 13ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
- 14ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
- 15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
Cross references
- Isaiah 40:1–2 ಯೆಶಾಯ 40:1–2ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ. ಯೆರೂಸಲೇಮಿನ ಸಂಗಡ ನೀವು ಹೃದಯಾಂಗಮ ವಾಗಿ ಮಾತಾಡಿರಿ; ಅದರ ಯುದ್ಧವು ತೀರಿತೆಂದೂ ದೋಷವು ಕ್ಷಮಿಸಲ್ಪಟ್ಟಿದೆ ಎಂದು ಕೂಗಿರಿ; ಅದು ಎಲ್ಲಾ ಪಾಪಗಳಿಗೂ ಕರ್ತನಿಂದ ಎರಡರಷ್ಟು ಹೊಂದಿ ದ್ದಾಯಿತು.
- Jeremiah 29:10 ಯೆರೆಮೀಯ 29:10ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನಲ್ಲಿ ಎಪ್ಪತ್ತು ವರುಷ ತುಂಬಿದ ಮೇಲೆ ನಿಮ್ಮನ್ನು ಪರಾಮರಿ ಸುವೆನು; ನನ್ನ ಶುಭ ವಾಕ್ಯವನ್ನು ನಿಮ್ಮ ವಿಷಯದಲ್ಲಿ ಸ್ಥಾಪಿಸಿ ನಿಮ್ಮನ್ನು ತಿರುಗಿ ಈ ಸ್ಥಳಕ್ಕೆ ಬರಮಾಡುವೆನು.
- Zephaniah 3:14–20 ಚೆಫನ್ಯ 3:14–20ಓ ಚೀಯೋನಿನ ಕುಮಾರ್ತೆಯೇ, ಹಾಡು; ಇಸ್ರಾಯೇಲೇ ಆರ್ಭಟಿಸು; ಯೆರೂಸಲೇಮಿನ ಕುಮಾರ್ತೆಯೇ, ಪೂರ್ಣಹೃದಯ ದಿಂದ ಸಂಭ್ರಮಿಸಿ ಉಲ್ಲಾಸಪಡು. ಕರ್ತನು ನಿನ್ನ ನ್ಯಾಯ ತೀರ್ವಿಕೆಗಳನ್ನು ದೂರಮಾಡಿ ನಿನ್ನ ಶತ್ರು ವನ್ನು ತೆಗೆದುಹಾಕಿದ್ದಾನೆ; ಇಸ್ರಾಯೇಲಿನ ಅರಸನಾದ ಕರ್ತನು ನಿನ್ನ ಮಧ್ಯದಲ್ಲಿ ಇದ್ದಾನೆ; ಇನ್ನು ಮೇಲೆ ನೀನು ಕೇಡನ್ನು ನೋಡುವದಿಲ್ಲ. ಆ ದಿನದಲ್ಲಿ ಯೆರೂಸಲೇಮಿಗೆ ಹೇಳಲ್ಪಡುವದೇನಂದರೆ--ನೀನು ಭಯಪಡಬೇಡ; ಚೀಯೋನೇ, ನಿನ್ನ ಕೈಗಳು ಬಲ ಹೀನವಾಗದಿರಲಿ. ನಿನ್ನ ದೇವರಾದ ಕರ್ತನು ನಿನ್ನ ಮಧ್ಯದಲ್ಲಿ ಪರಾಕ್ರಮಿಯಾಗಿದ್ದಾನೆ. ಆತನು ರಕ್ಷಿಸು ವಂಥ ವನು; ಆನಂದದಿಂದ ನಿನ್ನಲ್ಲಿ ಸಂತೋಷಿಸು ವನು; ತನ್ನ ಪ್ರೀತಿಯಲ್ಲಿ ಮೌನವಾಗಿರುವನು; ಆನಂದ ಸ್ವರದಿಂದ ನಿನ್ನ ಮೇಲೆ ಉಲ್ಲಾಸಿಸುವನು. ಪರಿಶುದ್ಧ ಸಭೆಯ ವಿಷಯವಾಗಿ ವ್ಯಸನ ಪಡುವವರನ್ನು ನಾನು ಕೂಡಿಸುತ್ತೇನೆ; ಅವರು ನಿನ್ನವರೇ; ಅವರ ಮೇಲೆ ನಿಂದೆ ಭಾರವಾಗಿದೆ. ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ. ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Zechariah 4:1 ಜೆಕರ್ಯ 4:1ಇದಲ್ಲದೆ ನನ್ನ ಸಂಗಡ ಮಾತನಾಡಿದ ದೂತನು ತಿರಿಗಿ ಬಂದು
- Zechariah 1:9 ಜೆಕರ್ಯ 1:9ಆಗ ನಾನು--ಓ ನನ್ನ ಒಡೆಯನೇ, ಇವೇನು ಅಂದೆನು. ಆಗ ನನ್ನ ಸಂಗಡ ಮಾತನಾಡಿದ ದೂತ ನು--ಇವೇನೆಂದು ನಿನಗೆ ತೋರಿಸುತ್ತೇನೆ ಅಂದೆನು.
- Amos 9:11–15 ಆಮೋಸ 9:11–15ಆ ದಿನದಲ್ಲಿ ಬಿದ್ದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಹರಕುಗಳನ್ನು ಮುಚ್ಚುವೆನು. ಅವನ ಹಾಳಾದದ್ದನ್ನು ಎಬ್ಬಿಸಿ ಹಿಂದಿನ ದಿವಸಗಳಲ್ಲಿ ಮಾಡಿದ ಹಾಗೆ ಕಟ್ಟುವೆನು. ಆಗ ಅವರು ಎದೋ ಮಿನ ಮಿಕ್ಕಭಾಗವನ್ನೂ ನನ್ನ ಹೆಸರಿನಿಂದ ಕರೆಯಲ್ಪ ಡುವ ಎಲ್ಲಾ ಅನ್ಯಜನಾಂಗಗಳನ್ನೂ ಸ್ವಾಧೀನಮಾಡಿ ಕೊಳ್ಳುವರೆಂದು ಇದನ್ನು ಮಾಡುವವನಾದ ಕರ್ತನು ಹೇಳುತ್ತಾನೆ. ಕರ್ತನು ಹೇಳುವದೇನಂದರೆ--ಇಗೋ, ದಿನಗಳು ಬರುವವು, ಆಗ ಉಳುವವನು ಕೊಯ್ಯುವವನನ್ನೂ ದ್ರಾಕ್ಷೇ ಮಾರುವ ವನು ಬೀಜ ಬಿತ್ತುವವನನ್ನೂ ಹಿಂದಟ್ಟುವರು. ಬೆಟ್ಟಗಳು ಹೊಸ ಸಿಹಿ ದ್ರಾಕ್ಷಾರಸವನ್ನು ಸುರಿಯುವವು. ಗುಡ್ಡಗಳೆಲ್ಲಾ ಕರಗುವವು. ನನ್ನ ಜನರಾದ ಇಸ್ರಾಯೇಲ್ಯರನ್ನು ಸೆರೆಯಿಂದ ತಿರಿಗಿ ಬರಮಾಡುವೆನು; ಅವರು ಹಾಳಾದ ಪಟ್ಟಣಗಳನ್ನು ಕಟ್ಟಿ ವಾಸಮಾಡುವರು; ದ್ರಾಕ್ಷೇತೋಟ ಗಳನ್ನು ನೆಟ್ಟು ಅವುಗಳ ದ್ರಾಕ್ಷಾರಸವನ್ನು ಕುಡಿಯು ವರು; ತೋಟಗಳನ್ನು ಮಾಡಿ ಅವುಗಳ ಫಲವನ್ನು ತಿನ್ನುವರು.ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ. ನಾನು ಅವರನ್ನು ಅವರ ದೇಶದಲ್ಲಿ ನೆಡುವೆನು; ನಾನು ಅವರಿಗೆ ಕೊಟ್ಟಿರುವ ದೇಶದಿಂದ ಅವರು ಇನ್ನು ಮೇಲೆ ಕಿತ್ತು ಹಾಕಲ್ಪಡರೆಂದು ನಿನ್ನ ದೇವರಾದ ಕರ್ತನು ಹೇಳುತ್ತಾನೆ.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- Zechariah 2:4–12 ಜೆಕರ್ಯ 2:4–12ಇವನು ಅವನಿಗೆ ಹೀಗಂದನು--ಓಡಿಹೋಗಿ ಈ ಯೌವನಸ್ಥನಿಗೆ ಹೀಗೆ ಹೇಳು, ಏನಂದರೆ--ಯೆರೂಸಲೇಮು ಅದರಲ್ಲಿರುವ ಮನು ಷ್ಯರ ಮತ್ತು ದನಗಳ ಸಂಖ್ಯೆ ಹೆಚ್ಚಾದದ್ದರಿಂದ ಗೋಡೆ ಇಲ್ಲದ ಊರುಗಳಂತೆ ನಿವಾಸವಾಗುವದು. ಯಾಕಂ ದರೆ ನಾನು ಅದರ ಸುತ್ತಲೂ ಬೆಂಕಿಯ ಗೋಡೆಯಾ ಗಿಯೂ ಅದರ ಮಧ್ಯದಲ್ಲಿ ಮಹಿಮೆಯಾಗಿಯೂ ಇರುವೆನೆಂದು ಕರ್ತನು ಅನ್ನುತ್ತಾನೆ. ಓಹೋ, ನೀವು ಹೊರಗೆ ಬಂದು ಉತ್ತರ ದೇಶ ದಿಂದ ಓಡಿಹೋಗಿರಿ; ಆಕಾಶದ ನಾಲ್ಕು ದಿಕ್ಕುಗಳಂತೆ ನಿಮ್ಮನ್ನು ಚದರಿಸಿದ್ದೇನೆಂದು ಕರ್ತನು ಅನ್ನುತ್ತಾನೆ. ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ. ಚೀಯೋನ್ ಕುಮಾರ್ತೆಯೇ, ಹಾಡಿ ಹರ್ಷಿಸು. ಇಗೋ, ನಾನು ಬಂದು ನಿನ್ನ ಮಧ್ಯದಲ್ಲಿ ವಾಸವಾಗಿರುವೆನೆಂದು ಕರ್ತನು ಅನ್ನುತ್ತಾನೆ. ಇದ ಲ್ಲದೆ ಆ ದಿನದಲ್ಲಿ ಅನೇಕ ಜನಾಂಗಗಳು ಕರ್ತನಿಗೆ ಅಂಟಿಕೊಂಡು ನನ್ನ ಜನರಾಗುವರು; ನಾನು ನಿನ್ನ ಮಧ್ಯದಲ್ಲಿ ವಾಸಮಾಡುವೆನು; ಸೈನ್ಯಗಳ ಕರ್ತನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂದು ತಿಳುಕೊಳ್ಳುವಿ. ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
- Zechariah 1:14–16 ಜೆಕರ್ಯ 1:14–16ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ. ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು. ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
- Zechariah 8:2–8 ಜೆಕರ್ಯ 8:2–8ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಾನು ಚೀಯೋನಿನ ವಿಷಯವಾಗಿ ಅತಿ ರೋಷಗೊಂಡಿದ್ದೆನು; ಅತಿ ಉಗ್ರದಿಂದ ಅದರ ವಿಷಯದಲ್ಲಿ ರೋಷವುಳ್ಳವನಾಗಿದ್ದೆನು. ಕರ್ತನು ಹೀಗೆ ಹೇಳುತ್ತಾನೆ--ಚೀಯೋನಿಗೆ ನಾನು ತಿರಿಗಿ ಕೊಂಡಿದ್ದೇನೆ; ಯೆರೂಸಲೇಮಿನ ಮಧ್ಯದಲ್ಲಿ ವಾಸಿಸು ವೆನು; ಯೆರೂಸಲೇಮು ಸತ್ಯದ ಪಟ್ಟಣವೆಂದೂ ಸೈನ್ಯಗಳ ಕರ್ತನ ಪರ್ವತವು ಪರಿಶುದ್ಧ ಪರ್ವತ ವೆಂದೂ ಕರೆಯಲ್ಪಡುವದು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇನ್ನು ಯೆರೂಸಲೇಮಿನ ಬೀದಿಗಳಲ್ಲಿ ಮುದುಕರೂ ಮುದುಕಿಯರೂ ವಾಸವಾಗಿರುವರು; ಕೇವಲ ವೃದ್ಧಾಪ್ಯದಿಂದ ಒಬ್ಬೊಬ್ಬನ ಕೈಯಲ್ಲಿ ಅವನವನ ಕೋಲು ಇರುವದು. ಪಟ್ಟಣದ ಬೀದಿಗಳು ಆಡುವ ಬಾಲಕ ಬಾಲಕಿಯರಿಂದ ತುಂಬಿರುವವು. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇದು ಈ ದಿವಸಗಳಲ್ಲಿ ಉಳಿದ ಈ ಜನರ ಕಣ್ಣುಗಳಿಗೆ ಆಶ್ಚರ್ಯವಾಗಿ ತೋರಿ ದರೂ ಅದು ನನ್ನ ಕಣ್ಣುಗಳಿಗೂ ಸಹ ಆಶ್ಚರ್ಯವಾಗಿ ತೋರುವದೋ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಜನರನ್ನು ಪೂರ್ವ ದಿಕ್ಕಿನ ದೇಶದಿಂದಲೂ ಪಶ್ಚಿಮ ದಿಕ್ಕಿನ ದೇಶದಿಂದಲೂ ರಕ್ಷಿಸುವೆನು. ನಾನು ಅವರನ್ನು ತರುವೆನು; ಅವರು ಯೆರೂಸಲೇಮಿನ ಮಧ್ಯದಲ್ಲಿ ವಾಸಿಸುವರು; ಅವರು ನನ್ನ ಜನರಾಗಿ ರುವರು; ನಾನು ಸತ್ಯದಲ್ಲಿಯೂ ನೀತಿಯಲ್ಲಿಯೂ ಅವರ ದೇವರಾಗಿರುವೆನು.
- Jeremiah 30:10–22 ಯೆರೆಮೀಯ 30:10–22ಆದದರಿಂದ ನನ್ನ ಸೇವಕನಾದ ಯಾಕೋ ಬನೇ, ಭಯಪಡಬೇಡ ಎಂದು ಕರ್ತನು ಅನ್ನುತ್ತಾನೆ; ಇಸ್ರಾಯೇಲೇ ಹೆದರಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಸೆರೆ ಒಯ್ದ ದೇಶದಿಂದಲೂ ರಕ್ಷಿಸುತ್ತೇನೆ; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಲ್ಲಿರುವನು; ಹೆದರಿಸುವವನಿಲ್ಲದೆ ಸೌಖ್ಯವಾಗಿರುವನು. ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ. ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ. ಆದರೂ ನಿನ್ನನ್ನು ನುಂಗುವವರೆಲ್ಲರೂ ನುಂಗಲ್ಪಡು ವರು; ನಿನ್ನ ವಿರೋಧಿಗಳಲ್ಲಿ ಪ್ರತಿಯೊಬ್ಬನೂ ಸೆರೆಗೆ ಹೋಗುವನು; ನಿನ್ನನ್ನು ಕೊಳ್ಳೆಮಾಡುವವರು ಕೊಳ್ಳೆ ಯಾಗುವರು; ನಿನಗೆ ಬಲೆ ಬೀಸುವವರೆಲ್ಲರನ್ನು ನಾನು ಬಲೆಗೆ ಒಪ್ಪಿಸುವೆನು. ಚೀಯೋನು ತಳ್ಳಿಬಿಡಲ್ಪ ಟ್ಟದ್ದೂ ಅದನ್ನು ವಿಚಾರಿಸುವವರು ಯಾರೂ ಇಲ್ಲ ವೆಂದೂ ಅವರು ನಿನ್ನ ವಿಷಯ ಹೇಳುವದರಿಂದ ನಿನಗೆ ಕ್ಷೇಮವನ್ನುಂಟು ಮಾಡುವೆನು; ನಿನ್ನ ಗಾಯ ಗಳನ್ನು ಸ್ವಸ್ಥ ಮಾಡುವೆನೆಂದು ಕರ್ತನು ಅನ್ನುತ್ತಾನೆ. ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಯಾಕೋಬನ ಗುಡಾರಗಳ ಸೆರೆಯನ್ನು ತಿರುಗಿ ತರುತ್ತೇನೆ; ಅವನ ನಿವಾಸಗಳನ್ನು ಕರುಣಿಸುತ್ತೇನೆ; ಪಟ್ಟಣವು ಅದರ ದಿಣ್ಣೆಯ ಮೇಲೆ ಕಟ್ಟಲ್ಪಡುವದು; ಅರಮನೆಯು ತಕ್ಕಸ್ಥಳದಲ್ಲಿ ನೆಲೆಯಾಗಿರುವದು. ಅವುಗಳೊಳಗಿಂದ ಕೃತಜ್ಞತಾ ಸ್ತೋತ್ರವೂ ಸಂತೋ ಷಪಡುವವರ ಸ್ವರವೂ ಹೊರಡುವದು; ಅವರನ್ನು ಅಭಿವೃದ್ಧಿಮಾಡುವೆನು; ಅವರು ಕೊಂಚವಾಗಿರರು, ಅವರು ಅಲ್ಪವಾಗದ ಹಾಗೆ ಅವರಿಗೆ ಘನವನ್ನು ಕೊಡುವೆನು. ಅವರ ಮಕ್ಕಳು ಸಹ ಪೂರ್ವ ಕಾಲದ ಹಾಗೆ ಇರುವರು; ಅವರ ಸಭೆಯು ನನ್ನ ಮುಂದೆ ಸ್ಥಾಪಿಸಲ್ಪಡುವದು; ಅವರನ್ನು ಬಾಧಿಸುವವರೆಲ್ಲರನ್ನು ವಿಚಾರಿಸುವೆನು. ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ. ನೀವು ನನಗೆ ಜನರಾಗಿರುವಿರಿ; ನಾನು ನಿಮಗೆ ದೇವರಾಗಿರುವೆನು.
- Jeremiah 31:3–14 ಯೆರೆಮೀಯ 31:3–14ಹಿಂದಿನಂತೆ ಕರ್ತನು ಬಂದು ನನಗೆ ಕಾಣಿಸಿಕೊಂಡು--ಹೌದು, ಶಾಶ್ವತವಾದ ಪ್ರೀತಿ ಯಿಂದ ನಿನ್ನನ್ನು ಪ್ರೀತಿ ಮಾಡಿದ್ದೇನೆ; ಆದದರಿಂದ ಪ್ರೀತಿ ದಯೆಗಳಿಂದ ನಿನ್ನನ್ನು ಎಳೆದಿದ್ದೇನೆ. ಇಸ್ರಾ ಯೇಲಿನ ಕನ್ಯಾಸ್ತ್ರೀಯೇ, ನೀನು ಕಟ್ಟಲ್ಪಟ್ಟಿರುವ ಹಾಗೆ ತಿರುಗಿ ನಿನ್ನನ್ನು ಕಟ್ಟುವೆನು; ನಿನ್ನ ದಮ್ಮಡಿಗಳಿಂದ ತಿರುಗಿ ನಿನ್ನನ್ನು ಅಲಂಕರಿಸಿಕೊಂಡು ಸಂತೋಷಪಡು ವವರ ನಾಟ್ಯದಲ್ಲಿ ಹೊರಡುವಿ. ಸಮಾರ್ಯದ ಪರ್ವ ತಗಳಲ್ಲಿ ತಿರುಗಿ ದ್ರಾಕ್ಷೇಗಿಡಗಳನ್ನು ನೆಡುವಿ; ನೆಡು ವವರು ನೆಟ್ಟು ಸಾಧಾರಣವಾದವುಗಳಂತೆ ಫಲ ಅನುಭ ವಿಸುವರು. ಒಂದು ದಿನವದೆ; ಆಗ ಎಫ್ರಾಯಾಮಿನ ಪರ್ವತದಲ್ಲಿ ಕಾಯುವವರು--ಏಳಿರಿ, ಚೀಯೋನಿಗೆ, ನಮ್ಮ ದೇವರಾದ ಕರ್ತನ ಬಳಿಗೆ ಹೋಗೋಣ ಎಂದು ಕೂಗುವರು. ಕರ್ತನು ಹೀಗೆ ಹೇಳುತ್ತಾನೆ --ಯಾಕೋಬನ ವಿಷಯ ಸಂತೋಷದಿಂದ ಹಾಡಿ ಮುಖ್ಯವಾದ ಜನಾಂಗಗಳೊಳಗೆ ಆರ್ಭಟಿಸಿರಿ, ಸಾರಿರಿ, ಸ್ತುತಿಸಿರಿ; ಕರ್ತನೇ, ನಿನ್ನ ಜನರನ್ನೂ ಇಸ್ರಾಯೇಲಿನ ಉಳಿದವರನ್ನೂ ರಕ್ಷಿಸು ಎಂದು ಹೇಳಿರಿ. ಇಗೋ, ನಾನು ಅವರನ್ನು ಉತ್ತರ ದೇಶ ದಿಂದ ಬರಮಾಡಿ ಭೂಮಿಯ ಮೇರೆಗಳಿಂದ ಅವರನ್ನು ಕೂಡಿಸುತ್ತೇನೆ; ಅವರಲ್ಲಿ ಕುರುಡರೂ ಕುಂಟರೂ ಗರ್ಭಿಣಿಯಾದವರೂ ದಿನತುಂಬಿದ ಗರ್ಭಿಣಿಯರ ಸಹಿತವಾಗಿ ಇರುವರು; ದೊಡ್ಡ ಗುಂಪಾಗಿ ಇಲ್ಲಿಗೆ ಹಿಂತಿರುಗಿ ಬರುವರು. ಅಳುತ್ತಾ ಬರುವರು; ಬಿನ್ನಹಗಳ ಸಂಗಡ ಅವರನ್ನು ನಡಿಸುವೆನು; ಅವರು ಎಡವದ ಸಮದಾರಿಯಲ್ಲಿ ನೀರಿನ ನದಿಗಳ ಬಳಿಯಲ್ಲಿ ನಡೆಯುವಂತೆ ಮಾಡುವೆನು; ನಾನು ಇಸ್ರಾಯೇಲಿಗೆ ತಂದೆಯಾಗಿದ್ದೇನೆ; ಎಫ್ರಾಯಾಮನು ನನ್ನ ಚೊಚ್ಚಲನೇ. ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ. ಆದದರಿಂದ ಅವರು ಬಂದು ಚೀಯೋನಿನ ಉನ್ನತದಲ್ಲಿ ಹಾಡಿ ಕರ್ತನ ಒಳ್ಳೇತನದ ಬಳಿಗೆ ಗೋಧಿಯ ನಿಮಿತ್ತವೂ ದ್ರಾಕ್ಷಾರಸದ ನಿಮಿತ್ತವೂ ಎಣ್ಣೆಯ ನಿಮಿತ್ತವೂ ಮಂದೆ ದನ ಮರಿಗಳ ನಿಮಿತ್ತವೂ ಪ್ರವಾಹದಂತೆ ಬರುವರು; ಅವರ ಪ್ರಾಣವು ಚೆನ್ನಾಗಿ ನೀರು ಹಾಕಿದ ತೋಟದ ಹಾಗೆ ಇರುವದು; ಅವರು ಇನ್ನು ಮೇಲೆ ಯಾವಾಗಲೂ ದುಃಖಪಡುವದಿಲ್ಲ. ಆಗ ಕನ್ಯಾಸ್ತ್ರೀಯೂ ಪ್ರಾಯದವರೂ ಮುದುಕರ ಸಹಿತವಾಗಿ ನಾಟ್ಯದಲ್ಲಿ ಸಂತೋಷಪಡುವರು, ಯಾಕಂ ದರೆ ಅವರ ದುಃಖವನ್ನು ಆನಂದಕ್ಕೆ ಬದಲಾಯಿಸು ವೆನು; ಅವರನ್ನು ಆದರಿಸಿ ದುಃಖದಿಂದ ಬಿಡಿಸಿ ಅವ ರಿಗೆ ಸಂತೋಷವನ್ನುಂಟು ಮಾಡುವೆನು. ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.