Zechariah · chapter 1 · verse 15
Zechariah 1:15 in Kannada
ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
Nishchinte yullavaraagiruva anyajanaangada mele naanu bahala kopisikondiddene. Naanu svalpa kopa maadikondaaga avaru sankatakke sahaayamaadi daru.
Zechariah 1:15 in English
- King James Version (KJV)
- And I am very sore displeased with the heathen [that are] at ease: for I was but a little displeased, and they helped forward the affliction.
- World English Bible (WEB)
- I am very angry with the nations that are at ease; for I was but a little displeased, but they added to the calamity.”
- American Standard Version (ASV)
- And I am very sore displeased with the nations that are at ease; for I was but a little displeased, and they helped forward the affliction.
- Bible in Basic English (BBE)
- And I am very angry with the nations who are living untroubled: for when I was only a little angry, they made the evil worse.
- Darby Translation (DBY)
- and I am wroth exceedingly with the nations that are at ease; for I was but a little wroth, and they helped forward the affliction.
- Webster's Bible (WBS)
- And I am very greatly displeased with the heathen [that are] at ease: for I was but a little displeased, and they helped forward the affliction.
- Young's Literal Translation (YLT)
- And [with] great wrath I am wroth against the nations who are at ease, For I was a little wroth, and they assisted — for evil.
Read in context
- 13ಆಗ ಕರ್ತನು ನನ್ನ ಸಂಗಡ ಮಾತನಾಡಿದ ದೂತನಿಗೆ ಒಳ್ಳೇ ಮಾತುಗಳಿಂದಲೂ ಆದರಣೆಯ ಮಾತು ಗಳಿಂದಲೂ ಉತ್ತರಕೊಟ್ಟನು.
- 14ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
- 15ನಿಶ್ಚಿಂತೆ ಯುಳ್ಳವರಾಗಿರುವ ಅನ್ಯಜನಾಂಗದ ಮೇಲೆ ನಾನು ಬಹಳ ಕೋಪಿಸಿಕೊಂಡಿದ್ದೇನೆ. ನಾನು ಸ್ವಲ್ಪ ಕೋಪ ಮಾಡಿಕೊಂಡಾಗ ಅವರು ಸಂಕಟಕ್ಕೆ ಸಹಾಯಮಾಡಿ ದರು.
- 16ಆದದರಿಂದ ಕರ್ತನು ಹೀಗೆ ಹೇಳುತ್ತಾನೆ --ನಾನು ಕನಿಕರದಿಂದ ಯೆರೂಸಲೇಮಿನ ಕಡೆಗೆ ತಿರುಗಿಕೊಂಡಿದ್ದೇನೆ; ನನ್ನ ಆಲಯವು ಅದರಲ್ಲಿ ಕಟ್ಟ ಲ್ಪಡುವದೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಯೆರೂ ಸಲೇಮಿನ ಮೇಲೆ ಅಳತೆ ನೂಲು ಚಾಚಲ್ಪಡುವದು.
- 17ಇನ್ನೂ ಕೂಗಿ ಹೇಳು, ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನನ್ನ ಪಟ್ಟಣಗಳು ಇನ್ನು ಅಭಿವೃದ್ಧಿಯಾಗಿ ಹರಡುವವು; ಕರ್ತನು ಚೀಯೋನನ್ನು ಇನ್ನು ಆದರಿಸುವನು; ಯೆರೂಸಲೇಮನ್ನು ಇನ್ನು ಆದುಕೊಳ್ಳುವನು.
Cross references
- Ezekiel 25:12–17 ಯೆಹೆಜ್ಕೇಲನು 25:12–17ದೇವರಾದ ಕರ್ತನು--ಎದೋಮು ಮತ್ತು ಯೆಹೂದನ ಮನೆತನದವರಿಗೆ ಮುಯ್ಯಿಗೆಮುಯ್ಯಿ ತೀರಿಸಿದ್ದರಿಂದಲೇ ಮತ್ತು ಅತಿ ಅಪರಾಧ ಮಾಡಿ ಅವರಲ್ಲಿ ಸೇಡು ತೀರಿಸಿ ತೆಗೆದುಕೊಂಡದ್ದರಿಂದಲೇ ಎಂದು ಹೇಳುತ್ತಾನೆ. ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನೂ ನನ್ನ ಕೈಯನ್ನು ಎದೋಮಿನ ಮೇಲೆ ಚಾಚುತ್ತೇನೆ, ಅದರೊಳಗಿನಿಂದ ಮನುಷ್ಯರನ್ನೂ ಮೃಗಗಳನ್ನೂ ಕಡಿದುಬಿಡುತ್ತೇನೆ, ತೇಮಾನು ಮೊದಲುಗೊಂಡು ಅದನ್ನು ಕಾಡನ್ನಾಗಿ ಮಾಡುತ್ತೇನೆ; ದೆದಾನಿಯವರು ಕತ್ತಿಯಿಂದ ಬೀಳು ವರು. ನಾನು ನನ್ನ ಜನರಾದ ಇಸ್ರಾಯೇಲಿನ ಮೂಲಕವಾಗಿ ನನ್ನ ಪ್ರತಿದಂಡನೆಯನ್ನು ಎದೋಮಿನ ಮೇಲೆ ಇಡುವೆನು, ಅವರು ಎದೋಮಿನಲ್ಲಿ ನನ್ನ ಕೋಪದ ಪ್ರಕಾರವೂ ರೋಷದ ಪ್ರಕಾರವೂ ಮಾಡು ವರು; ಹೀಗೆಯೇ ಅವರು ನನ್ನ ಪ್ರತಿದಂಡನೆಯನ್ನು ತಿಳಿಯುವರೆಂದು ದೇವರಾದ ಕರ್ತನು ಹೇಳುತ್ತಾನೆ. ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಫಿಲಿಷ್ಟಿಯರು ಮುಯ್ಯಿಗೆ ಮುಯ್ಯಿ ನಡಿಸಿ, ಹಗೆಯುಳ್ಳ ಹೃದಯದಿಂದ ಸೇಡು ತೀರಿಸಿಕೊಂಡು ಪೂರ್ವದ ಕ್ರೋಧದಿಂದ ಕೆಡಿಸಿದರು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನನ್ನ ಕೈಯನ್ನು ಫಿಲಿಷ್ಟಿಯರ ಮೇಲೆ ಚಾಚುತ್ತೇನೆ; ಕೆರೇತಿಯರನ್ನು ಕಡಿದುಬಿಡುತ್ತೇನೆ; ಉಳಿದವರನ್ನು ಸಮುದ್ರತೀರದಲ್ಲಿ ನಾಶಮಾಡುತ್ತೇನೆ;ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು. ನಾನು ದೊಡ್ಡ ಪ್ರತಿದಂಡನೆ ಯನ್ನು ಉರಿಯುಳ್ಳ ಗದರಿಕೆಗಳ ಸಂಗಡ ಅವರಲ್ಲಿ ತೀರಿಸುತ್ತೇನೆ; ಹೀಗೆ ಪ್ರತೀಕಾರ ಮಾಡಿದ ಮೇಲೆ ನಾನೇ ಕರ್ತನೆಂದು ಅವರಿಗೆ ತಿಳಿಯುವದು.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 54:8 ಯೆಶಾಯ 54:8ರೌದ್ರವೇರಿದಾಗ ನನ್ನ ಮುಖವನ್ನು ನಿನಗೆ ಕ್ಷಣ ಮಾತ್ರವೇ ಮರೆಮಾಡಿಕೊಂಡೆನು; ಆದರೆ ನಿರಂತರ ವಾದ ದಯದಿಂದ ನಿನ್ನ ಮೇಲೆ ಕರುಣೆಯನ್ನು ಇಟ್ಟಿ ದ್ದೇನೆ ಎಂದು ನಿನ್ನ ವಿಮೋಚಕನಾದ ಕರ್ತನು ಹೇಳು ತ್ತಾನೆ.
- Isaiah 47:6–9 ಯೆಶಾಯ 47:6–9ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- Psalm 123:4 ಕೀರ್ತನೆಗಳು 123:4ಭೋಗಿಗಳ ಹಾಸ್ಯದಿಂದ ನಮ್ಮ ಹೃದಯವು ತುಂಬಿಯದೆ, ಗರ್ವಿಷ್ಟರ ನಿಂದೆ ಯಿಂದ ನಮ್ಮ ಮನಸ್ಸು ಬೇಸತ್ತು ಹೋಯಿತು.
- Zechariah 1:2 ಜೆಕರ್ಯ 1:2ಕರ್ತನು ನಿಮ್ಮ ಪಿತೃಗಳ ಮೇಲೆ ಬಹು ಕೋಪಗೊಂಡಿ ದ್ದಾನೆ.
- Obadiah 1:10–16 ಓಬದ್ಯ 1:10–16ನಿನ್ನ ತಮ್ಮನಾದ ಯಾಕೋಬನಿಗೆ ವಿರೋಧವಾದ ನಿನ್ನ ಬಲಾತ್ಕಾರದ ನಿಮಿತ್ತ ನಾಚಿಕೆಯು ನಿನ್ನನ್ನು ಮುಚ್ಚು ವದು; ನೀನು ಎಂದೆಂದಿಗೂ ಕಡಿದುಹಾಕಲ್ಪಡುವಿ. ನೀನು ಆ ಕಡೆಯಲ್ಲಿ ನಿಂತ ದಿನದಲ್ಲಿ ಪರರು ಅವನ ಸೆರೆಯಾಗಿ ತಕ್ಕೊಂಡುಹೋದ ದಿನದಲ್ಲಿ ಅನ್ಯರು ಅವನ ಬಾಗಲುಗಳಲ್ಲಿ ಪ್ರವೇಶಿಸಿ ಯೆರೂಸಲೇಮಿನ ಮೇಲೆ ಚೀಟುಗಳನ್ನು ಹಾಕಿದಾಗ ನೀನು ಸಹ ಅವರಲ್ಲಿ ಒಬ್ಬನ ಹಾಗಿದ್ದಿ. ಆದರೆ ನಿನ್ನ ಸಹೋದರನ ದಿನದಲ್ಲಿ ಅವನು ಅನ್ಯನಾದ ದಿನದಲ್ಲಿ ನೀನು ನೋಡಬಾರ ದಾಗಿತ್ತು; ಯೆಹೂದನ ಮಕ್ಕಳ ಮೇಲೆ ಅವರ ನಾಶನದ ದಿವಸದಲ್ಲಿ ಸಂತೋಷಿಸಬಾರದಾಗಿತ್ತು; ಕಷ್ಟದ ದಿನದಲ್ಲಿ ಅಹಂಕಾರವಾಗಿ ಮಾತನಾಡಬಾರದಾಗಿತ್ತು; ನನ್ನ ಜನರ ಬಾಗಲೊಳಗೆ ಅವರ ಆಪತ್ತಿನ ದಿನದಲ್ಲಿ ಪ್ರವೇಶಿಸಬಾರದಾಗಿತ್ತು; ಹೌದು, ನೀನು ಅವರ ಆಪತ್ತಿನ ದಿನದಲ್ಲಿ ಅವರ ಕೇಡನ್ನು ನೋಡಬಾರ ದಾಗಿತ್ತು; ಅವರ ಆಪತ್ತಿನ ದಿನದಲ್ಲಿ ಅವರ ಆಸ್ತಿಯ ಮೇಲೆ ಕೈಹಾಕಬಾರದಾಗಿತ್ತು; ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು. ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು. ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.
- Psalm 69:26 ಕೀರ್ತನೆಗಳು 69:26ನೀನು ಹೊಡೆದ ವನನ್ನು ಅವರು ಹಿಂಸಿಸುತ್ತಾರೆ, ನೀನು ಗಾಯಮಾಡಿ ದವರ ವ್ಯಸನವನ್ನು ಮಾತನಾಡಿಕೊಳ್ಳುತ್ತಾರೆ.
- Jeremiah 48:11–13 ಯೆರೆಮೀಯ 48:11–13ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯ ಲ್ಪಡಲಿಲ್ಲ; ಸೆರೆಗೆ ಹೋಗಲಿಲ್ಲ; ಆದದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ. ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅದರ ಬಳಿಗೆ ಅಲೆದಾಡುವವರನ್ನು ಕಳುಹಿಸುವೆನು; ಅವರು ಅದು ಅಲೆದಾಡುವಂತೆ ಮಾಡುವರು, ಅದರ ಪಾತ್ರೆಗಳನ್ನು ಬರಿದುಮಾಡಿ ತಮ್ಮ ಬುದ್ದಲಿಗಳನ್ನು ಒಡೆಯುವರು. ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ ಬೇತೇಲಿನ ವಿಷಯ ಹೇಗೆ ನಾಚಿಕೆಪಟ್ಟರೋ ಹಾಗೆಯೇ ಮೋವಾಬು ಕೇಮೋ ಷನ ವಿಷಯ ನಾಚಿಕೆಪಡುವದು.
- Zechariah 1:11 ಜೆಕರ್ಯ 1:11ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- Psalm 83:2–5 ಕೀರ್ತನೆಗಳು 83:2–5ಇಗೋ, ನಿನ್ನ ಶತ್ರುಗಳು ಗದ್ದಲ ಮಾಡು ತ್ತಾರೆ; ನಿನ್ನ ಹಗೆಯವರು ತಲೆ ಎತ್ತುತ್ತಾರೆ. ನಿನ್ನ ಜನರಿಗೆ ವಿರೋಧವಾಗಿ ಉಪಾಯದ ಯುಕ್ತಿಯನ್ನು ಕಲ್ಪಿಸುತ್ತಾರೆ. ನೀನು ಅಡಗಿಸಿಟ್ಟವರಿಗೆ ವಿರೋಧಿಗಳು ಆಲೋಚಿಸಿಕೊಳ್ಳುತ್ತಾರೆ. ಅವರು--ಬನ್ನಿರಿ, ಅವ ರನ್ನು ಜನಾಂಗವಾಗಿರದ ಹಾಗೆ ನಾವು ಅವರನ್ನು ನಿರ್ಮೂಲ ಮಾಡೋಣ; ಇಸ್ರಾಯೇಲಿನ ಹೆಸರು ಇನ್ನು ಜ್ಞಾಪಕಕ್ಕೆ ಬಾರದಿರಲಿ ಅನ್ನುತ್ತಾರೆ. ಅವರು ಕೂಡ ಏಕಮನಸ್ಸಾಗಿ ಆಲೋಚನೆ ಮಾಡಿಕೊಂಡಿ ದ್ದಾರೆ; ನಿನಗೆ ವಿರೋಧವಾಗಿ ಒಡಂಬಟ್ಟಿದ್ದಾರೆ.
- Isaiah 10:5–7 ಯೆಶಾಯ 10:5–7ಓ ನನ್ನ ಕೋಪದ ಕೋಲಾದ ಅಶ್ಶೂರವೇ, ಕೈಯಲ್ಲಿರುವ ಬೆತ್ತವು ನನ್ನ ರೌದ್ರವೇ. ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು. ಅದರ ಅಭಿಪ್ರಾಯವೋ ಹಾಗಲ್ಲ; ಇಲ್ಲವೇ ಅದರ ಹೃದಯವು ಈ ಪ್ರಕಾರ ಆಲೋಚಿಸುವದಿಲ್ಲ; ಜನಾಂಗಗಳನ್ನು ಕಡಿದು ಬಿಡುವದು ಕೊಂಚವಾಗಿ ಅಲ್ಲ. ಆದರೆ ನಾಶಮಾಡುವದು ಅವನ ಹೃದಯದಲ್ಲಿ ಇದೆ.