Zechariah · chapter 10 · verse 3
Zechariah 10:3 in Kannada
ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
Kurubarige virodhavaagi nanna kopavu uriyitu; mekegalannu dandisidenu; sainyagala kartanu tanna mandeyaagiruva yehoodana mane tanadavarannu darshisi avarannu yuddhadalli tanna ghanavaada kudureya haage maadiddaane.
Zechariah 10:3 in English
- King James Version (KJV)
- Mine anger was kindled against the shepherds, and I punished the goats: for the LORD of hosts hath visited his flock the house of Judah, and hath made them as his goodly horse in the battle.
- World English Bible (WEB)
- My anger is kindled against the shepherds, and I will punish the male goats, for the LORD of Armies has visited his flock, the house of Judah, and will make them as his majestic horse in the battle.
- American Standard Version (ASV)
- Mine anger is kindled against the shepherds, and I will punish the he-goats; for Jehovah of hosts hath visited his flock, the house of Judah, and will make them as his goodly horse in the battle.
- Bible in Basic English (BBE)
- My wrath is burning against the keepers of the flock, and I will send punishment on the he-goats: for the Lord of armies takes care of his flock, the people of Judah, and will make them like the horse of his pride in the fight.
- Darby Translation (DBY)
- Mine anger is kindled against the shepherds, and I will punish the he-goats; for Jehovah of hosts visiteth his flock, the house of Judah, and maketh them as his majestic horse in the battle.
- Webster's Bible (WBS)
- My anger was kindled against the shepherds, and I punished the goats: for the LORD of hosts hath visited his flock the house of Judah, and hath made them as his goodly horse in the battle.
- Young's Literal Translation (YLT)
- Against the shepherds did Mine anger burn, And against the he-goats I lay a charge, For inspected hath Jehovah of Hosts His flock, the house of Judah, And set them as His beauteous horse in battle.
Read in context
- 1ಕರ್ತನಿಂದ ಹಿಂಗಾರುಮಳೆಯ ಕಾಲದಲ್ಲಿ ಮಳೆಗಾಗಿ ಬೇಡಿಕೊಳ್ಳಿರಿ. ಹೀಗೆ ಕರ್ತನು ಮಿಂಚುವ ಮೋಡಗಳನ್ನು ಮಾಡಿ ಅವರಿಗೆ ಜಡಿ ಮಳೆಯನ್ನೂ ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವನು.
- 2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
- 3ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
- 4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- 5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
Cross references
- Ezekiel 34:7–10 ಯೆಹೆಜ್ಕೇಲನು 34:7–10ಆದದರಿಂದ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ; ನನ್ನ ಜೀವದಾಣೆ, ನಿಶ್ಚಯವಾಗಿ ನನ್ನ ಮಂದೆಯು ಕೊಳ್ಳೆಯಾದದ ರಿಂದಲೂ ನನ್ನ ಮಂದೆಯು ಕುರುಬ ನಿಲ್ಲದೆ ಬಯಲಿನ ಮೃಗಗಳಿಗೆಲ್ಲಾ ಆಹಾರವಾದದ್ದರಿಂದಲೂ ನನ್ನ ಕುರು ಬರು ನನ್ನ ಮಂದೆಯನ್ನು ಹುಡುಕದೆ ಇದ್ದದರಿಂದಲೂ ಕುರುಬರು ತಮ್ಮನ್ನು ಮೇಯಿಸಿಕೊಂಡರೇ ಹೊರತು ತಮ್ಮ ಕುರಿಗಳನ್ನು ಮೇಯಿಸದಿದ್ದದರಿಂದಲೂ ಓ ಕುರುಬರೇ, ನೀವು ಕರ್ತನ ವಾಕ್ಯವನ್ನು ಕೇಳಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Ezekiel 34:2 ಯೆಹೆಜ್ಕೇಲನು 34:2ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ?
- Ezekiel 34:20–21 ಯೆಹೆಜ್ಕೇಲನು 34:20–21ಆದದರಿಂದ ದೇವರಾದ ಕರ್ತನು ನಿಮಗೆ ಹೀಗೆ ಹೇಳುತ್ತಾನೆ-- ಇಗೋ, ನಾನು, ನಾನೇ ಕೊಬ್ಬಿದ ದನಕ್ಕೂ ಮತ್ತು ಬಡಕಲಾದ ದನಕ್ಕೂ ನಡುವೆ ನ್ಯಾಯತೀರಿಸುತ್ತೇನೆ. ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
- Ezekiel 34:16–17 ಯೆಹೆಜ್ಕೇಲನು 34:16–17ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು. ನಿಮಗೆ ಓ ನನ್ನ ಮಂದೆಯೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ದನಗಳ ಪಶುಗಳ ನಡುವೆ ಮತ್ತು ಟಗರುಗಳ ಹೋತಗಳ ನಡುವೆ ನಾನು ನ್ಯಾಯತೀರಿಸುವೆನು.
- Zechariah 11:17 ಜೆಕರ್ಯ 11:17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Jeremiah 23:1–2 ಯೆರೆಮೀಯ 23:1–2ನನ್ನ ಹುಲ್ಲುಗಾವಲಿನ ಕುರಿಗಳನ್ನು ಹಾಳು ಮಾಡಿ ಚದರಿಸುವ ಕುರುಬರಿಗೆ ಅಯ್ಯೋ, ಎಂದು ಕರ್ತನು ಅನ್ನುತ್ತಾನೆ. ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Jeremiah 25:34 ಯೆರೆಮೀಯ 25:34ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ.
- Zephaniah 2:7 ಚೆಫನ್ಯ 2:7ತೀರವು ಯೆಹೂದದ ಮನೆತನದವರ ಉಳಿದವರಿಗೆ ಆಗುವದು; ಅದರ ಮೇಲೆ ಮೇಯಿಸುವರು; ಅಷ್ಕೆ ಲೋನಿನ ಮನೆತನಗಳಲ್ಲಿ ಸಾಯಂಕಾಲ ಅವರು ಮಲಗಿಕೊಳ್ಳುವರು; ಅವರ ದೇವರಾದ ಕರ್ತನು ಅವರನ್ನು ದರ್ಶಿಸಿ ಅವರ ಸೆರೆಯನ್ನು ತಿರುಗಿಸುವನು.
- 1 Peter 2:12 1 ಪೇತ್ರನು 2:12ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
- Proverbs 21:31 ಜ್ಞಾನೋಕ್ತಿಗಳು 21:31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.
- Exodus 4:31 ವಿಮೋಚನಕಾಂಡ 4:31ಕರ್ತನು ಇಸ್ರಾಯೇಲ್ ಮಕ್ಕಳನ್ನು ದರ್ಶಿಸಿ ಅವರ ಸಂಕಟವನ್ನು ನೋಡಿದ್ದಾನೆಂದು ಅವರು ಕೇಳಿದಾಗ ತಲೆಬಾಗಿಸಿ ಆರಾಧಿಸಿದರು.
- Isaiah 56:9–12 ಯೆಶಾಯ 56:9–12ಅರಣ್ಯದ ಸಕಲ ಮೃಗಗಳೇ, ಹೌದು, ಕಾಡಿನ ಎಲ್ಲಾ ಮೃಗಗಳೇ, ನುಂಗಿಬಿಡುವದಕ್ಕೆ ಬನ್ನಿರಿ. ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ. ಹೌದು, ಎಂದಿಗೂ ಸಾಕೆನ್ನದ ಹೊಟ್ಟೇಬಾಕ ನಾಯಿಗಳು, ಅವರು ಗ್ರಹಿಕೆಯಿಲ್ಲದ ಕುರುಬರು; ಅವರೆಲ್ಲರು ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ ಪ್ರತಿಯೊಬ್ಬನು ತನಗೆ ಲಾಭ ಸಿಕ್ಕುವ ಕಡೆಗೂ ತಿರುಗಿ ಕೊಳ್ಳುವನು.ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು. ಬನ್ನಿರಿ, ನಾನು ದ್ರಾಕ್ಷಾರಸವನ್ನು ತರುವೆನು; ನಮ್ಮನ್ನು ನಾವೇ ಅಮಲೇರುವ ಮದ್ಯದಿಂದ ತುಂಬಿಸಿ ಕೊಳ್ಳುವ! ನಾಳೆಯು ಈ ದಿವಸದಂತೆಯೇ ಬಹಳ ಸಮೃದ್ಧಿಯಾಗಿರುವದು.
Original words (Hebrew)
- anger · H639אַף ʼaph
- kindled · H2734חָרָה chârâh
- shepherds · H7462רָעָה râʻâh
- punished · H6485פָּקַד pâqad
- goats · H6260עַתּוּד ʻattûwd
- hosts · H6635צָבָא tsâbâʼ
- visited · H6485פָּקַד pâqad
- flock · H5739עֵדֶר ʻêder
- house · H1004בַּיִת bayith
- Judah · H3063יְהוּדָה Yᵉhûwdâh
- made · H7760שׂוּם sûwm
- goodly · H1935הוֹד hôwd
- horse · H5483סוּס çûwç
- battle · H4421מִלְחָמָה milchâmâh