Zechariah · chapter 10 · verse 4
Zechariah 10:4 in Kannada
ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
Aata ninda moolegalloo aataninda moleyoo aataninda yuddhada billoo aataninda hinsisuvavarellaroo koodikondu horaduttaare.
Zechariah 10:4 in English
- King James Version (KJV)
- Out of him came forth the corner, out of him the nail, out of him the battle bow, out of him every oppressor together.
- World English Bible (WEB)
- From him will come the cornerstone, from him the tent peg, from him the battle bow, from him every ruler together.
- American Standard Version (ASV)
- From him shall come forth the corner-stone, from him the nail, from him the battle bow, from him every ruler together.
- Bible in Basic English (BBE)
- From him will come the keystone, from him the nail, from him the bow of war, from him will come every ruler;
- Darby Translation (DBY)
- From him shall come forth the corner-stone, from him the nail, from him the battle bow, from him every exactor together.
- Webster's Bible (WBS)
- Out of him came forth the corner, out of him the nail, out of him the battle-bow, out of him every oppressor together.
- Young's Literal Translation (YLT)
- From him [is] a corner-stone, From him a nail, from him a battle-bow, From him goeth forth every exactor together.
Read in context
- 2ವಿಗ್ರಹಗಳು ವ್ಯರ್ಥವಾಗಿ ಮಾತ ನಾಡಿವೆ; ಶಕುನಗಾರರು ಸುಳ್ಳನ್ನು ನೋಡಿದ್ದಾರೆ; ಮೋಸವಾದ ಕನಸುಗಳನ್ನು ತಿಳಿಸಿದ್ದಾರೆ; ವ್ಯರ್ಥವಾಗಿ ಆದರಿಸುತ್ತಾರೆ; ಆದದರಿಂದ ಮಂದೆಯ ಹಾಗೆ ತಮ್ಮ ದಾರಿಯಲ್ಲಿ ಹೋಗಿದ್ದಾರೆ; ಕುರುಬನಿಲ್ಲದ ಕಾರಣ ಕಳವಳಗೊಂಡಿದ್ದಾರೆ.
- 3ಕುರುಬರಿಗೆ ವಿರೋಧವಾಗಿ ನನ್ನ ಕೋಪವು ಉರಿಯಿತು; ಮೇಕೆಗಳನ್ನು ದಂಡಿಸಿದೆನು; ಸೈನ್ಯಗಳ ಕರ್ತನು ತನ್ನ ಮಂದೆಯಾಗಿರುವ ಯೆಹೂದನ ಮನೆ ತನದವರನ್ನು ದರ್ಶಿಸಿ ಅವರನ್ನು ಯುದ್ಧದಲ್ಲಿ ತನ್ನ ಘನವಾದ ಕುದುರೆಯ ಹಾಗೆ ಮಾಡಿದ್ದಾನೆ.
- 4ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
- 5ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
- 6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
Cross references
- Zechariah 9:10 ಜೆಕರ್ಯ 9:10ಇದಲ್ಲದೆ ಎಫ್ರಾಯಾಮಿನೊಳಗಿಂದ ರಥ ಗಳನ್ನೂ ಯೆರೂಸಲೇಮಿನೊಳಗಿಂದ ಕುದುರೆಗಳನ್ನೂ ತೆಗೆದುಬಿಡುವೆನು; ಯುದ್ಧದ ಬಿಲ್ಲು ಸಹ ತೆಗೆದು ಹಾಕಲ್ಪಡುವದು; ಆತನು ಅನ್ಯ ಜನಾಂಗಗಳಿಗೆ ಸಮಾ ಧಾನವನ್ನು ಹೇಳುವನು; ಆತನ ದೊರೆತನವು ಸಮುದ್ರ ದಿಂದ ಸಮುದ್ರಕ್ಕೂ ನದಿಯಿಂದ ಭೂಮಿಯ ಅಂತ್ಯಗಳ ವರೆಗೂ ಇರುವದು.
- Zechariah 9:8 ಜೆಕರ್ಯ 9:8ಇದಲ್ಲದೆ ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ ಸೈನ್ಯದ ನಿಮಿತ್ತವೂ ನನ್ನ ಮನೆಯ ಹತ್ತಿರ ಪಾಳೆಯಮಾಡುತ್ತೇನೆ; ಇನ್ನು ಮೇಲೆ ಉಪದ್ರ ಕೊಡುವವನು ಅವರ ಮೇಲೆ ಹಾದು ಹೋಗುವದಿಲ್ಲ; ಯಾಕಂದರೆ ಈಗ ನನ್ನ ಕಣ್ಣುಗಳಿಂದ ನೋಡಿದ್ದೇನೆ.
- Numbers 24:17 ಅರಣ್ಯಕಾಂಡ 24:17ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.
- Revelation 19:13–15 ಪ್ರಕಟನೆ 19:13–15ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ. ಪರಲೋಕದಲ್ಲಿರುವ ಸೈನ್ಯಗಳು ಶುಭ್ರವಾಗಿಯೂ ನಿರ್ಮಲವಾಗಿಯೂ ಇರುವ ನಯವಾದ ನಾರುಮಡಿಯನ್ನು ಧರಿಸಿಕೊಂಡು ಬಿಳೀ ಕುದುರೆಗಳ ಮೇಲೆ ಆತನ ಹಿಂದೆ ಬರುತ್ತಿದ್ದವು. ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಹೊರಡುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.
- Ezra 9:8 ಎಜ್ರನು 9:8ಈಗ ನಮ್ಮ ದೇವರು, ನಮ್ಮ ಕಣ್ಣುಗಳು ಕಳೆಗೊಳ್ಳುವ ಹಾಗೆಯೂ ನಮ್ಮ ದಾಸತ್ವದಲ್ಲಿ ನಮ್ಮನ್ನು ಸ್ವಲ್ಪ ಉಜ್ಜೀವಿಸುವ ಹಾಗೆಯೂ ನಮಗಾಗಿ ಜನಶೇಷವನ್ನು ಉಳಿಸಿ ತನ್ನ ಪರಿಶುದ್ಧ ಸ್ಥಾನದಲ್ಲಿ ನಮಗೆ ಮೊಳೆಯನ್ನು ಕೊಡುವದಕ್ಕೂ ಸ್ವಲ್ಪ ಹೊತ್ತು ನಮ್ಮ ದೇವರಾಗಿರುವ ಕರ್ತನಿಂದ ನಮಗೆ ದಯವು ದೊರಕಿತು.
- 2 Timothy 2:4 2 ತಿಮೊಥೆಯನಿಗೆ 2:4ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳದೆ ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡವನನ್ನು ಮೆಚ್ಚಿಸುವದಕ್ಕೆ ಪ್ರಯಾಸಪಡು ತ್ತಾನೆ.
- Matthew 9:38 ಮತ್ತಾಯನು 9:38ಆದದರಿಂದ ಬೆಳೆಯ ಯಜ ಮಾನನು ಕೆಲಸಗಾರರನ್ನು ತನ್ನ ಬೆಳೆಗೆ ಕಳುಹಿಸುವಂತೆ ಆತನನ್ನು ಪ್ರಾರ್ಥಿಸಿರಿ ಅಂದನು.
- Isaiah 49:2 ಯೆಶಾಯ 49:2ಆತನು ನನ್ನ ಬಾಯನ್ನು ಹರಿತವಾದ ಖಡ್ಗವನ್ನಾಗಿ ಮಾಡಿ, ತನ್ನ ಕೈ ನೆರಳಿನಲ್ಲಿ ನನ್ನನ್ನು ಮರೆಯಾಗಿಟ್ಟಿದ್ದಾನೆ; ಆತನು ನುಣುಪಾದ ಬಾಣವನ್ನಾಗಿ ನನ್ನನ್ನು ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.
- Psalm 118:22 ಕೀರ್ತನೆಗಳು 118:22ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
- Micah 5:5–8 ಮೀಕ 5:5–8ಇದಲ್ಲದೆ ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದಾಗ ಈತನೇ ಸಮಾಧಾನವಾಗಿರುವನು; ನಮ್ಮ ಅರಮನೆಗಳಲ್ಲಿ ಅವನು ತುಳಿಯುವಾಗ ನಾವು ಆತನಿಗೆ ವಿರೋಧವಾಗಿ ಏಳು ಕುರುಬರನ್ನೂ ಎಂಟು ಮುಖ್ಯ ಮನುಷ್ಯರನ್ನೂ ಎಬ್ಬಿಸುವೆವು. ಅವರು ಅಶ್ಶೂರಿನ ದೇಶವನ್ನು ಕತ್ತಿಯಿಂದಲೂ ನಿಮ್ರೋದನ ದೇಶವನ್ನು ಅದರ ಪ್ರವೇಶಗಳಲ್ಲಿಯೂ ಹಾಳುಮಾಡುವರು; ಅಶ್ಶೂರ್ಯನು ನಮ್ಮ ದೇಶದಲ್ಲಿ ಬಂದು ನಮ್ಮ ಪ್ರಾಂತ್ಯಗಳಲ್ಲಿ ತುಳಿಯುವಾಗ ಆತನು ನಮ್ಮನ್ನು ತಪ್ಪಿಸುವನು. ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ. ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ, ಜನಾಂಗಗಳೊಳಗೆ ಅಡವಿಯ ಮೃಗಗಳಲ್ಲಿ ಸಿಂಹದಂತೆಯೂ ಕುರಿಮಂದೆಗಳಲ್ಲಿ ಪ್ರಾಯದ ಸಿಂಹದಂತೆಯೂ ಇರುವದು; ಅದು ಹಾದುಹೋದರೆ ಇಳಿದುಬಿಟ್ಟು ಹರಿದುಬಿಡುತ್ತದೆ, ಯಾರೂ ಬಿಡಿಸ ಲಾರರು.
- Zechariah 1:20–21 ಜೆಕರ್ಯ 1:20–21ಆಗ ಕರ್ತನು ನನಗೆ ನಾಲ್ಕು ಬಡಗಿಯವರನ್ನು ತೋರಿಸಿದನು.ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು. ಆಗ ನಾನು--ಇವರು ಏನು ಮಾಡುವದಕ್ಕೆ ಬರುತ್ತಾರೆ ಅಂದೆನು. ಅದಕ್ಕೆ ಆತನು ಮಾತನಾಡಿ ಹೇಳಿದ್ದೇನಂದರೆ--ಯಾವನಾದರೂ ತಲೆಯನ್ನು ಎತ್ತದ ಹಾಗೆ ಯೆಹೂದವನ್ನು ಚದರಿಸಿದ ಕೊಂಬುಗಳು. ಆದರೆ ಇವರು ಅವರನ್ನು ಹೆದರಿಸಿ ಯೆಹೂದ ದೇಶದ ಮೇಲೆ ಅದನ್ನು ಚದರಿಸುವದಕ್ಕೆ ಕೊಂಬನ್ನು ಎತ್ತಿದ ಅನ್ಯಜನಾಂಗಗಳ ಕೊಂಬುಗಳನ್ನು ಕೆಳಗೆ ಹಾಕುವದಕ್ಕೆ ಬಂದಿದ್ದಾರೆ ಅಂದನು.
- Isaiah 41:14–16 ಯೆಶಾಯ 41:14–16ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ! ಇಗೋ, ನಿನ್ನನ್ನು ಹದವಾದ, ಹೊಸ, ಮೊನೆಹಲ್ಲಿನ ಹಂತಿಕುಂಟೆಯನ್ನಾಗಿ (ಹೊಕ್ಕುವ ಯಂತ್ರ) ಮಾಡು ವೆನು, ನೀನು ಬೆಟ್ಟಗಳನ್ನು ಹೊಕ್ಕು ಪುಡಿಪುಡಿ ಮಾಡಿ ಗುಡ್ಡಗಳನ್ನು ಹೊಟ್ಟಿನಂತೆ ಮಾಡುವಿ. ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.