Zechariah · chapter 10 · verse 8
Zechariah 10:8 in Kannada
ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
Naanu avarige silluhaaki avarannu koodisuvenu; avarannu vimochi siddene; avaru hinde hechchida haage hechchuvaru.
Zechariah 10:8 in English
- King James Version (KJV)
- I will hiss for them, and gather them; for I have redeemed them: and they shall increase as they have increased.
- World English Bible (WEB)
- I will signal for them and gather them, for I have redeemed them. They will increase as they were before.
- American Standard Version (ASV)
- I will hiss for them, and gather them; for I have redeemed them; and they shall increase as they have increased.
- Bible in Basic English (BBE)
- With the sound of the pipe I will get them together; for I have given the price to make them free: and they will be increased as they were increased.
- Darby Translation (DBY)
- I will hiss for them, and gather them; for I have redeemed them: and they shall multiply as they used to multiply.
- Webster's Bible (WBS)
- I will hiss for them, and gather them: for I have redeemed them: and they shall increase as they have increased.
- Young's Literal Translation (YLT)
- I hist for them, and I gather them, For I have redeemed them, And they have multiplied as they did multiply.
Read in context
- 6ಇದಲ್ಲದೆ ನಾನು ಯೆಹೂದನ ಮನೆತನದವರನ್ನು ಬಲಪಡಿಸುವೆನು, ಯೋಸೇಫನ ಮನೆತನದವರನ್ನು ರಕ್ಷಿಸುವೆನು; ಅವರನ್ನು ಕನಿಕರಿಸುವದರಿಂದ ತಿರಿಗಿ ತಂದು ನಿವಾಸಿಸ ಮಾಡುವೆನು; ನಾನು ಅವರನ್ನು ತಳ್ಳಿಬಿಡಲಿಲ್ಲವೋ ಎಂಬಂತೆ ಅವರು ಇರುವರು; ನಾನೇ ಅವರ ದೇವರಾದ ಕರ್ತನಾಗಿದ್ದು ಅವರಿಗೆ ಉತ್ತರಕೊಡುವೆನು.
- 7ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
- 8ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
- 9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- 10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
Cross references
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Isaiah 7:18 ಯೆಶಾಯ 7:18ಆ ದಿನದಲ್ಲಿ ಐಗುಪ್ತದ ನದಿಗಳ ಕಟ್ಟಕಡೆ ಯಿಂದ ನೊಣಕ್ಕೂ ಅಶ್ಯೂರ ದೇಶದ ಜೇನು ಹುಳಕ್ಕೂ ಕರ್ತನು ಸಿಳ್ಳುಹಾಕುವನು.
- Jeremiah 33:22 ಯೆರೆಮೀಯ 33:22ಆಕಾಶದ ಸೈನ್ಯವನ್ನು ಹೇಗೆ ಎಣಿಸಲಿಕ್ಕಾಗದೋ ಸಮುದ್ರದ ಮರಳನ್ನು ಹೇಗೆ ಅಳಿಯಲಿಕ್ಕಾಗದೋ ಹಾಗೆಯೇ ನಾನು ನನ್ನ ಸೇವಕನಾದ ದಾವೀದನ ಸಂತಾನವನೂ ನನಗೆ ಸೇವೆ ಮಾಡುವ ಲೇವಿಯ ರನ್ನೂ ಹೆಚ್ಚಿಸುವೆನು.
- Hosea 1:10 ಹೋಶೇಯ 1:10ಆದಾಗ್ಯೂ ಇಸ್ರಾಯೇಲಿನ ಮಕ್ಕಳ ಸಂಖ್ಯೆ ಅಳೆಯಲೂ ಲೆಕ್ಕಿಸಲೂ ಆಗದ ಸಮುದ್ರದ ಮರಳಿನ ಹಾಗೆ ಇರುವದು; ಮುಂದೆ ಇದಾದ ಮೇಲೆ--ನನ್ನ ಜನರಲ್ಲವೆಂದು ಅವರಿಗೆ ಹೇಳಿದ ಸ್ಥಳದಲ್ಲಿಯೇ ಜೀವವುಳ್ಳ ದೇವರ ಕುಮಾರರೆಂದು ಅವರಿಗೆ ಹೇಳುವರು.ಆಗ ಯೆಹೂದದ ಮಕ್ಕಳು ಮತ್ತು ಇಸ್ರಾಯೇಲಿನ ಮಕ್ಕಳು ಒಟ್ಟುಗೂಡಿಕೊಂಡು ತಮಗೆ ಒಬ್ಬನನ್ನೇ ಶಿರಸ್ಸನ್ನಾಗಿ ನೇಮಕಮಾಡಿಕೊಳ್ಳುವರು; ದೇಶದೊಳಗಿಂದ ಹೊರಗೆ ಬರುವರು, ಯಾಕಂದರೆ ಇಜ್ರೇಲಿನ ಸುದಿನವು ಅತಿ ವಿಶೇಷವಾಗಿರುವದು ಅಂದನು.
- Isaiah 55:1–3 ಯೆಶಾಯ 55:1–3ಹಾ, ಬಾಯಾರಿದ ಸಕಲಜನರೇ, ನೀವು ನೀರಿನ ಬಳಿಗೆ ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ; ಹೌದು, ಬನ್ನಿರಿ; ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡು ಕೊಳ್ಳಿರಿ. ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ! ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- Ezekiel 36:10–11 ಯೆಹೆಜ್ಕೇಲನು 36:10–11ನಾನು ಮನುಷ್ಯರನ್ನೂ ಎಲ್ಲಾ ಇಸ್ರಾಯೇಲ್ ಮನೆತನದ ವರನ್ನೂ ಅಂದರೆ ಎಲ್ಲರನ್ನೂ ನಿನ್ನ ಮೇಲೆ ವೃದ್ಧಿ ಮಾಡುತ್ತೇನೆ, ಪಟ್ಟಣಗಳು ಜನಭರಿತವಾಗುವವು, ಹಾಳಾದ ಪ್ರದೇಶಗಳು ಕಟ್ಟಲ್ಪಡುವವು; ನಾನು ನಿಮ್ಮಲ್ಲಿ ಮನುಷ್ಯರನ್ನೂ ಮೃಗಗಳನ್ನೂ ವೃದ್ಧಿಮಾಡು ವೆನು; ಅವು ಹೆಚ್ಚಾಗಿ ನಿಮಗೆ ಫಲವನ್ನು ತರುವವು; ನಾನು ನಿಮ್ಮನ್ನು ನಿಮ್ಮ ಹಳೆಯ ಸ್ಥಳಗಳಲ್ಲಿ ವಾಸಿಸುವಂತೆ ಮಾಡಿ ನಿಮ್ಮ ಮೊದಲಿನ ಸ್ಥಿತಿಗಿಂತ ನಿಮ್ಮನ್ನು ಉತ್ತಮ ಸ್ಥಿತಿಗೆ ತರುವೆನು; ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ.
- Revelation 22:17 ಪ್ರಕಟನೆ 22:17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.
- Jeremiah 31:10–11 ಯೆರೆಮೀಯ 31:10–11ಜನಾಂಗಗಳೇ, ಕರ್ತನ ವಾಕ್ಯವನ್ನು ಕೇಳಿರಿ; ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ತಿಳಿಸಿ ಹೀಗೆ ಹೇಳಿರಿ--ಇಸ್ರಾಯೇಲನನ್ನು ಚದರಿಸಿದಾತನು ಅವ ನನ್ನು ಕೂಡಿಸುವನು; ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವನನ್ನು ಕಾಯುವನು. ಕರ್ತನು ಯಾಕೋಬನನ್ನು ವಿಮೋಚಿಸಿದ್ದಾನೆ; ಅವನಿಗಿಂತ ಬಲಿಷ್ಠನಾದವನ ಕೈಯೊಳಗಿಂದ ಅವನನ್ನು ಬಿಡಿಸಿ ದ್ದಾನೆ.
- 1 Timothy 2:4–6 1 ತಿಮೊಥೆಯನಿಗೆ 2:4–6ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರ ಬೇಕೆಂಬದು ಆತನ ಚಿತ್ತವಾಗಿದೆ. ಯಾಕಂದರೆ ದೇವರು ಒಬ್ಬನೇ;ದೇವರಿಗೂ ಮನಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ; ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.
- Isaiah 11:11–12 ಯೆಶಾಯ 11:11–12ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವದಕ್ಕೆ ಎರಡನೇ ಸಾರಿ ಕೈಹಾಕಿ ಅಶ್ಶೂರ; ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಮತ್ತು ಸಮುದ್ರದ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು. ಜನಾಂಗ ಗಳಿಗೆ ಗುರುತಾಗಿ ಇಟ್ಟ ಇಸ್ರಾಯೇಲಿನಿಂದ ತಳ್ಳಿಬಿಟ್ಟವ ರನ್ನು ಕೂಡಿಸುವನು ಮತ್ತು ಯೆಹೂದದಿಂದ ಚದರಿದ ವರನ್ನು ಭೂಮಿಯ ನಾಲ್ಕು ಮೂಲೆಗಳಿಂದ ಒಟ್ಟುಗೂಡಿಸುವನು.
- Isaiah 52:1–3 ಯೆಶಾಯ 52:1–3ಓ ಚೀಯೋನೇ, ಎಚ್ಚರವಾಗು, ಎಚ್ಚರವಾಗು, ನಿನ್ನ ಬಲವನ್ನು ಹೊಂದಿಕೋ, ಓ ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಸೌಂದರ್ಯವಾದ ಉಡುಪುಗಳನ್ನು ಧರಿಸಿಕೋ; ಯಾಕಂದರೆ ಇಂದಿನಿಂದ ಸುನ್ನತಿಯಿಲ್ಲದವರೂ ಅಶುದ್ಧರೂ ನಿನ್ನೊಳಗೆ ಬರುವದಿಲ್ಲ. ಓ ಯೆರೂಸ ಲೇಮೇ, ಧೂಳನ್ನು ಝಾಡಿಸಿಕೋ; ಎದ್ದು ಕೂತು ಕೋ, ಓ ಸೆರೆಯಾದ ಚೀಯೋನ್ ಕುಮಾರಿಯೇ, ನಿನ್ನ ಕುತ್ತಿಗೆಯ ಪಾಶಗಳನ್ನು ಬಿಚ್ಚಿಕೋ. ಕರ್ತನು ಹೀಗನ್ನುತ್ತಾನೆ--ನಿಮ್ಮನ್ನು ನೀವೇ ನಿಷ್ಫಲವಾಗಿ ಮಾಡಿಕೊಂಡಿರಿ; ಹಣವಿಲ್ಲದೇ ನೀವು ವಿಮೋಚಿಸಲ್ಪಡುವಿರಿ.