Zechariah · chapter 10 · verse 9
Zechariah 10:9 in Kannada
ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
Naanu avarannu janagalalli bittuvenu; doora deshagalalli avaru nannannu jnyaapakamaaduvaru; tamma makkala sangada baduki matte tirugikolluvaru.
Zechariah 10:9 in English
- King James Version (KJV)
- And I will sow them among the people: and they shall remember me in far countries; and they shall live with their children, and turn again.
- World English Bible (WEB)
- I will sow them among the peoples. They will remember me in far countries. They will live with their children and will return.
- American Standard Version (ASV)
- And I will sow them among the peoples; and they shall remember me in far countries; and they shall live with their children, and shall return.
- Bible in Basic English (BBE)
- Though I had them planted among the peoples, they will keep me in mind in far countries: and they will take care of their children and will come back.
- Darby Translation (DBY)
- And I will sow them among the peoples, and they shall remember me in far countries; and they shall live with their children and return.
- Webster's Bible (WBS)
- And I will sow them among the people: and they shall remember me in remote countries; and they shall live with their children, and turn again.
- Young's Literal Translation (YLT)
- And I sow them among peoples, And in far-off places they remember Me, And they have lived with their sons, And they have turned back.
Read in context
- 7ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
- 8ನಾನು ಅವರಿಗೆ ಸಿಳ್ಳುಹಾಕಿ ಅವರನ್ನು ಕೂಡಿಸುವೆನು; ಅವರನ್ನು ವಿಮೋಚಿ ಸಿದ್ದೇನೆ; ಅವರು ಹಿಂದೆ ಹೆಚ್ಚಿದ ಹಾಗೆ ಹೆಚ್ಚುವರು.
- 9ನಾನು ಅವರನ್ನು ಜನಗಳಲ್ಲಿ ಬಿತ್ತುವೆನು; ದೂರ ದೇಶಗಳಲ್ಲಿ ಅವರು ನನ್ನನ್ನು ಜ್ಞಾಪಕಮಾಡುವರು; ತಮ್ಮ ಮಕ್ಕಳ ಸಂಗಡ ಬದುಕಿ ಮತ್ತೆ ತಿರುಗಿಕೊಳ್ಳುವರು.
- 10ಐಗುಪ್ತದೇಶದೊಳಗಿಂದ ಸಹ ಅವರನ್ನು ತಿರಿಗಿ ತರುವೆನು; ಅಶ್ಯೂರಿನೊಳಗಿಂದ ಅವರನ್ನು ಕೂಡಿಸು ವೆನು; ಗಿಲ್ಯಾದಿನ ಮತ್ತು ಲೆಬನೋನಿನ ದೇಶಕ್ಕೆ ಅವರನ್ನು ತರುವೆನು; ಅವರಿಗೆ ಸ್ಥಳ ಸಾಲದೆ ಇರು ವದು.
- 11ಅವನು ಸಮುದ್ರವನ್ನು ಬಾಧೆಯಿಂದ ದಾಟುವನು; ಸಮುದ್ರದಲ್ಲಿ ತೆರೆಗಳನ್ನು ಬಡಿಯು ವನು; ನದಿಯ ಅಗಾಧಗಳೆಲ್ಲಾ ಒಣಗುವವು; ಅಶ್ಯೂರಿನ ಗರ್ವವು ತಗ್ಗಿಸಲ್ಪಡುವದು; ಐಗುಪ್ತದ ಮುದ್ರೆಕೋಲು ಹೋಗಿಬಿಡುವದು.ಕರ್ತನಲ್ಲಿ ನಾನು ಅವರನ್ನು ಬಲಪಡಿಸುವೆನು; ಆತನ ಹೆಸರಿನಲ್ಲಿ ಅವರು ಮೇಲೆ ಕೆಳಗೆ ನಡೆಯುವರು ಎಂದು ಕರ್ತನು ಅನ್ನುತ್ತಾನೆ.
Cross references
- Ezekiel 6:9 ಯೆಹೆಜ್ಕೇಲನು 6:9ನಿಮ್ಮಲ್ಲಿ ತಪ್ಪಿಸಿಕೊಂಡವರು ತಾವು ಸೆರೆಗೆ ಒಯ್ಯಲ್ಪ ಡುವ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳು ವರು, ಯಾಕಂದರೆ ನನ್ನನ್ನು ಬಿಟ್ಟುಬಿಡುವ ಅವರ ಜಾರಹೃದಯದಿಂದಲೂ ಅವರ ದೇವರ ವಿಗ್ರಹಗಳ ಹಿಂದೆ ಜಾರತ್ವ ಮಾಡುವವರ ಕಣ್ಣುಗಳಿಂದಲೂ ಮುರಿದುಹೋದೆನು; ಅವರು ತಮ್ಮ ಅಸಹ್ಯಗಳಲ್ಲಿ ಮಾಡುವ ಕೇಡುಗಳ ನಿಮಿತ್ತ ತಮಗೆ ತಾವೇ ಹೇಸಿ ಕೊಳ್ಳುವರು.
- Isaiah 65:23 ಯೆಶಾಯ 65:23ಅವರು ವ್ಯರ್ಥವಾಗಿ ದುಡಿಯರು ಕಷ್ಟವನ್ನು ಎದುರುಗೊಳ್ಳುವದಿಲ್ಲ; ಯಾಕಂದರೆ ಅವರು ಕರ್ತನು ಆಶೀರ್ವದಿಸಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವದಿಸ ಲ್ಪಡುವದು.
- Nehemiah 1:9 ನೆಹೆಮೀಯ 1:9ಆದರೆ ನೀವು ನನ್ನ ಬಳಿಗೆ ತಿರುಗಿ ನನ್ನ ಆಜ್ಞೆಗಳನ್ನು ಕೈಕೊಂಡು ಅವುಗಳ ಪ್ರಕಾರ ಮಾಡಿದರೆ ನಿಮ್ಮಲ್ಲಿರುವವರು ಆಕಾಶದ ಅಂತ್ಯದ ವರೆಗೂ ಹೊರಡಿಸಲ್ಪಟ್ಟಿದ್ದರೂ ನಾನು ಅಲ್ಲಿಂದ ಅವ ರನ್ನು ಕೂಡಿಸಿ ನನ್ನ ಹೆಸರನ್ನಿಡಲು ಆದುಕೊಂಡ ಸ್ಥಳಕ್ಕೆ ಅವರನ್ನು ಬರಮಾಡುವೆನು ಎಂದು ಹೇಳಿದಿ.
- Isaiah 65:9 ಯೆಶಾಯ 65:9ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- 1 Kings 8:47–48 1 ಅರಸುಗಳು 8:47–48ಅವರು ಸೆರೆ ಒಯ್ಯಲ್ಪಟ್ಟ ದೇಶದಲ್ಲಿ ಪಶ್ಚಾತ್ತಾಪಪಟ್ಟು ತಿರುಗಿ ಕೊಂಡು ತಾವು ಪಾಪಮಾಡಿ ವಕ್ರಬುದ್ಧಿಯಿಂದ ನಡೆದು ದ್ರೋಹಮಾಡಿದೆವೆಂದು ತಮ್ಮನ್ನು ಸೆರೆಯಾಗಿ ಒಯ್ಯುವವರ ದೇಶದಲ್ಲಿ ನಿನಗೆ ವಿಜ್ಞಾಪನೆಮಾಡಿ ಅವರನ್ನು ಸೆರೆಯಾಗಿ ಒಯ್ದ ಶತ್ರುಗಳ ದೇಶದಲ್ಲಿ ತಮ್ಮ ಪೂರ್ಣಹೃದಯದಿಂದಲೂ ತಮ್ಮ ಪೂರ್ಣ ಪ್ರಾಣದಿಂದಲೂ ನಿನ್ನ ಕಡೆಗೆ ತಿರುಗಿಕೊಂಡು ನೀನು ಅವರ ಪಿತೃಗಳಿಗೆ ಕೊಟ್ಟ ತಮ್ಮ ದೇಶದ ಮಾರ್ಗ ವಾಗಿಯೂ ನೀನು ಆದುಕೊಂಡ ಪಟ್ಟಣದ ಮಾರ್ಗ ವಾಗಿಯೂ ನಿನ್ನ ಹೆಸರಿಗೋಸ್ಕರ ನಾನು ಕಟ್ಟಿಸಿದ ಈ ಮಂದಿರದ ಮಾರ್ಗವಾಗಿಯೂ ಅವರು ನಿನಗೆ ಪ್ರಾರ್ಥನೆ ಮಾಡಿದರೆ
- Micah 5:7 ಮೀಕ 5:7ಇದಲ್ಲದೆ ಯಾಕೋಬಿನ ಶೇಷವು ಅನೇಕ ಜನಗಳ ಮಧ್ಯದಲ್ಲಿ ಕರ್ತನಿಂದ ಮಂಜಿನ ಹಾಗೆಯೂ ಹುಲ್ಲಿನ ಮೇಲೆ ಜಡಿಮಳೆಯ ಹಾಗೆಯೂ ಇರುವದು; ಅದು ಮನುಷ್ಯರಿಗೊಸ್ಕರ ತಡೆಮಾಡುವ ದಿಲ್ಲ; ಮನುಷ್ಯನ ಮಕ್ಕಳಿಗೋಸ್ಕರ ಕಾದುಕೊಳ್ಳುವದಿಲ್ಲ.
- Jeremiah 31:27 ಯೆರೆಮೀಯ 31:27ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಇಸ್ರಾಯೇಲಿನ ಮನೆಯನ್ನೂ ಯೆಹೂದನ ಮನೆಯನ್ನೂ ಮನುಷ್ಯನ ಸಂತತಿಯಿಂದಲೂ ಮೃಗದ ಸಂತತಿಯಿಂದಲೂ ಬಿತ್ತು ವೆನು.
- Esther 8:17 ಎಸ್ತೇರಳು 8:17ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Hosea 2:23 ಹೋಶೇಯ 2:23ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Daniel 3:1–6 ದಾನಿಯೇಲನು 3:1–6ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು. ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು.
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Amos 9:9 ಆಮೋಸ 9:9ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.