Zechariah · chapter 11 · verse 10
Zechariah 11:10 in Kannada
ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
Aaga saundaryavemba nanna kolannu takkondu adannu muridubittenu; heege janarellara sangada naanu maadidda nanna odambadikeyannu muridubittenu,
Zechariah 11:10 in English
- King James Version (KJV)
- And I took my staff, [even] Beauty, and cut it asunder, that I might break my covenant which I had made with all the people.
- World English Bible (WEB)
- I took my staff Favor and cut it apart, that I might break my covenant that I had made with all the peoples.
- American Standard Version (ASV)
- And I took my staff Beauty, and cut it asunder, that I might break my covenant which I had made with all the peoples.
- Bible in Basic English (BBE)
- And I took my rod Beautiful, cutting it in two, so that the Lord's agreement, which he had made with all the peoples, might be broken.
- Darby Translation (DBY)
- And I took my staff, Beauty, and cut it asunder, that I might break my covenant which I had made with all the peoples.
- Webster's Bible (WBS)
- And I took my staff, [even] Beauty, and cut it asunder, that I might break my covenant which I had made with all the people.
- Young's Literal Translation (YLT)
- And I take My staff Pleasantness, and cut it asunder, to make void My covenant that I had made with all the peoples:
Read in context
- 8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- 9ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.
- 10ಆಗ ಸೌಂದರ್ಯವೆಂಬ ನನ್ನ ಕೋಲನ್ನು ತಕ್ಕೊಂಡು ಅದನ್ನು ಮುರಿದುಬಿಟ್ಟೆನು; ಹೀಗೆ ಜನರೆಲ್ಲರ ಸಂಗಡ ನಾನು ಮಾಡಿದ್ದ ನನ್ನ ಒಡಂಬಡಿಕೆಯನ್ನು ಮುರಿದುಬಿಟ್ಟೆನು,
- 11ಅದೇ ದಿನದಲ್ಲಿ ಅದು ಮುರಿಯಲ್ಪಟ್ಟಿತು; ಆಗ ನನ್ನಲ್ಲಿ ನಿರೀಕ್ಷೆಯಿಟ್ಟ ಬಡ ಕುರಿಮಂದೆಯು ಅದು ಕರ್ತನ ವಾಕ್ಯವೆಂದು ತಿಳಿದುಕೊಂಡಿತು.
- 12ಆಗ ನಾನು ಅವರಿಗೆ--ನಿಮ್ಮ ಕಣ್ಣುಗಳಲ್ಲಿ ಒಳ್ಳೇದಾಗಿ ತೋರಿದರೆ ನನ್ನ ಸಂಬಳವನ್ನು ಕೊಡಿರಿ, ಇಲ್ಲದಿದ್ದರೆ ಬಿಡಿರಿ ಅಂದೆನು. ಆಗ ಅವರು ನನ್ನ ಸಂಬಳಕ್ಕಾಗಿ ಮೂವತ್ತು ರೂಪಾಯಿಗಳನ್ನು ತೂಕಮಾಡಿದರು.
Cross references
- Zechariah 11:7 ಜೆಕರ್ಯ 11:7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
- Psalm 89:39 ಕೀರ್ತನೆಗಳು 89:39ನಿನ್ನ ಸೇವಕನ ಒಡಂಬಡಿಕೆಯನ್ನು ಅಸಡ್ಡೆಮಾಡಿ, ಅವನ ಕಿರೀಟವನ್ನು ನೆಲಕ್ಕೆ ಹಾಕಿ ಹೊಲೆ ಮಾಡಿದ್ದೀ.
- Hebrews 8:8–13 ಇಬ್ರಿಯರಿಗೆ 8:8–13ಆತನು ಆದರ ಮೇಲೆ ತಪ್ಪುಹೊರಿಸಿ ಹೀಗೆಂ ದನು--ಇಗೋ, ನಾನು ಇಸ್ರಾಯೇಲ್ ಮನೆತನ ದೊಂದಿಗೂ ಯೆಹೂದ ಮನೆತನದೊಂದಿಗೂ ಹೊಸ ದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿ ಕೊಳ್ಳುವ ದಿನಗಳು ಬರುವವು. ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶ ದೊಳಗಿಂದ ಕರಕೊಂಡು ಬಂದ ದಿನದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾ ದದರಿಂದ ನಾನು ಅವರನ್ನು ಲಕ್ಷ್ಯಕ್ಕೆ ತರಲಿಲ್ಲ ಎಂದು ಕರ್ತನು ಹೇಳುತ್ತಾನೆ. ಆ ದಿನಗಳ ತರುವಾಯ ನಾನು ಇಸ್ರಾಯೇಲ್ ಮನೆತನದ ವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು, ಅದೇನಂದರೆ--ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು; ಅವರ ಹೃದಯಗಳಲ್ಲಿ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರ ಇದಲ್ಲದೆ ಪ್ರತಿ ಯೊಬ್ಬನು ತನ್ನ ನೆರೆಯವನಿಗೂ ತನ್ನ ಸಹೋದ ರನಿಗೂ--ಕರ್ತನನ್ನು ತಿಳಿದುಕೊಳ್ಳಿರಿ ಎಂದು ಉಪ ದೇಶಿಸುವದಿಲ್ಲ; ಯಾಕಂದರೆ ಚಿಕ್ಕವರಿಂದ ದೊಡ್ಡವರ ವರೆಗೂ ನನ್ನನ್ನು ಅರಿತುಕೊಳ್ಳುವರು. ನಾನು ಅವರ ಅನೀತಿಯ ವಿಷಯವಾಗಿ ಕರುಣೆಯುಳ್ಳವನಾಗಿದ್ದು ಅವರ ಪಾಪಗಳನ್ನೂ ಅಪರಾಧಗಳನ್ನೂ ನನ್ನ ನೆನಪಿಗೆ ಇನ್ನೆಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯು ತ್ತಾನೆ.ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ. ಇಲ್ಲಿ ಆತನು--ಹೊಸಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೆಯದಾಗಿ ಮಾಡಿ ದ್ದಾನೆ. ಅದು ಹಳೇದಾಗುತ್ತಾ ಕ್ಷೀಣವಾಗಿ ಇಲ್ಲದಂತಾ ಗುವದಕ್ಕೆ ಸಿದ್ಧವಾಗಿದೆ ಎಂದು ಹೇಳುತ್ತಾನೆ.
- Jeremiah 14:21 ಯೆರೆಮೀಯ 14:21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- Jeremiah 31:31–32 ಯೆರೆಮೀಯ 31:31–32ಇಗೋ, ನಾನು ಇಸ್ರಾಯೇಲಿನ ಮನೆತನದವರ ಸಂಗಡಲೂ ಯೆಹೂದದ ಮನೆತನದವರ ಸಂಗ ಡಲೂ ಹೊಸ ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ. ನಾನು ಅವರ ತಂದೆಗಳ ಸಂಗಡ ಅವರನ್ನು ಐಗುಪ್ತದೇಶದಿಂದ ಹೊರತರುವದಕ್ಕೆ ಅವರ ಕೈ ಹಿಡಿದ ದಿನದಲ್ಲಿ ಮಾಡಿದ ಒಡಂಬಡಿಕೆಯ ಹಾಗಲ್ಲ; ನಾನು ಅವರ ಯಜಮಾನನಾಗಿದ್ದಾಗ್ಯೂ ಆ ನನ್ನ ಒಡಂಬಡಿಕೆಯನ್ನು ಅವರು ವಿಾರಿದರೆಂದು, ಕರ್ತನು ಅನ್ನುತ್ತಾನೆ.
- Luke 21:5–6 ಲೂಕನು 21:5–6ತರುವಾಯ ಕೆಲವರು ದೇವಾಲಯದ ವಿಷಯ ವಾಗಿ ಅದು ಎಂಥಾ ಒಳ್ಳೇ ಕಲ್ಲುಗಳಿಂದಲೂ ದಾನಗ ಳಿಂದಲೂ ಅಲಂಕೃತವಾಗಿದೆ ಎಂದು ಮಾತನಾಡು ತ್ತಿರುವಾಗ ಆತನು-- ನೀವು ನೋಡುತ್ತಿರುವ ಇವುಗ ಳಾದರೋ ಕೆಡವಲ್ಪಟ್ಟು ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಬಿಡಲ್ಪಡದ ದಿವಸಗಳು ಬರುವವು ಅಂದನು.
- Psalm 90:17 ಕೀರ್ತನೆಗಳು 90:17ನಮ್ಮ ದೇವರಾದ ಕರ್ತನ ರಮ್ಯತೆಯು ನಮ್ಮ ಮೇಲೆ ಇರಲಿ; ನಾವು ಕೈಹಾಕಿದ ಕೈಲಸವನ್ನು ನಮಗೆ ಸ್ಥಿರಪಡಿಸು; ಹೌದು, ನಮ್ಮ ಕೆಲಸವನ್ನು ಸ್ಥಿರಪಡಿಸು;
- 1 Samuel 2:30 1 ಸಮುವೇಲನು 2:30ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ಹೇಳುವ ದೇನಂದರೆ--ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಕರ್ತನು ಹೇಳುವದೇನಂದರೆ--ನನಗೆ ಅದು ದೂರವಾಗಿರಲಿ; ಯಾಕಂದರೆ ನನ್ನನ್ನು ಸನ್ಮಾನಿಸು ವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸು ವವರನ್ನು ನಾನು ತಿರಸ್ಕರಿಸುವೆನು.
- Hebrews 7:17–22 ಇಬ್ರಿಯರಿಗೆ 7:17–22ಆತನ ವಿಷಯದಲ್ಲಿ--ನೀನು ಸದಾಕಾಲವು ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನು ಸಾಕ್ಷಿ ಕೊಡುತ್ತಾನೆ. ಮೊದಲಿದ್ದ ಆಜ್ಞೆಯು ನಿರ್ಬಲವಾಗಿಯೂ ನಿಷ್ಪ್ರಯೋಜಕವಾಗಿಯೂ ಇದ್ದು ನಿಜವಾಗಿಯೂ ರದ್ದಾಗಿಹೋಯಿತು. ನ್ಯಾಯ ಪ್ರಮಾಣವು ಯಾವದನ್ನೂ ಸಿದ್ದಿಗೆ ತಾರದಿರುವ ದರಿಂದ ಉತ್ತಮವಾಗಿರುವ ನಿರೀಕ್ಷೆಯು ಸಿದ್ಧಿಗೆ ತಂದಿತು. ಇದರಿಂದ ನಾವು ದೇವರ ಸವಿಾಪಕ್ಕೆ ಸೇರುತ್ತೇವೆ. ಆತನು ಆಣೆಯಿಲ್ಲದೆ ಯಾಜಕನಾಗಲೇ ಇಲ್ಲ. (ಆ ಯಾಜಕರೂ ಆಣೆಯಿಲ್ಲದೆ ಯಾಜಕರಾದರು); ಈತನಾದರೊ--ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನಾಗಿದ್ದೀ ಎಂದು ಆತನಿಗೆ ಹೇಳಿದ ಕರ್ತನು ಆಣೆಯಿಟ್ಟು ನುಡಿದನು, ಪಶ್ಚಾತ್ತಾಪಪಡುವದಿಲ್ಲ. ಇದರಿಂದಲೇ ಯೇಸು ಎಷ್ಟೋ ಶ್ರೇಷ್ಠವಾದ ಒಡಂಬಡಿಕೆಗೆ ಹೊಣೆಗಾರನಾದನು.
- Hosea 1:9 ಹೋಶೇಯ 1:9ಆಗ ದೇವರು--ಅವನ ಹೆಸರನ್ನು ಲೋ ಅಮ್ಮಿ ಎಂದು ಕರೆ, ಯಾಕಂದರೆ ನೀವು ನನ್ನ ಜನರಲ್ಲ, ನಾನು ನಿಮ್ಮ ದೇವರಾಗಿರುವದಿಲ್ಲ ಅಂದನು.
- Acts 6:13–14 ಅಪೊಸ್ತಲರ ಕೃತ್ಯಗಳು 6:13–14ಸುಳ್ಳು ಸಾಕ್ಷಿಗಳನ್ನು ನಿಲ್ಲಿಸ ಲಾಗಿ ಅವರು--ಈ ಮನುಷ್ಯನು ಈ ಪರಿಶುದ್ಧ ಸ್ಥಳಕ್ಕೂ ನ್ಯಾಯಪ್ರಮಾಣಕ್ಕೂ ವಿರುದ್ಧವಾಗಿ ದೂಷಣೆಯ ಮಾತುಗಳನ್ನಾಡುವದನ್ನು ನಿಲ್ಲಿಸುವದೇ ಇಲ್ಲ. ನಜ ರೇತಿನ ಯೇಸು ಈ ಸ್ಥಳವನ್ನು (ದೇವಾಲಯವನ್ನು) ಕೆಡವಿ ಮೋಶೆಯು ನಮಗೆ ಒಪ್ಪಿಸಿಕೊಟ್ಟ ಆಚಾರಗಳನ್ನು ಮಾರ್ಪಡಿಸುವನು ಎಂದು ಇವನು ಹೇಳುವದನ್ನು ನಾವು ಕೇಳಿದ್ದೇವೆ ಅಂದರು.ಆಗ ಆಲೋಚನಾ ಸಭೆಯಲ್ಲಿ ಕೂತಿದ್ದವರೆಲ್ಲರೂ ಅವನನ್ನು ದೃಷ್ಟಿಸಿ ನೋಡಲಾಗಿ ಅವನ ಮುಖವು ದೂತನ ಮುಖದಂತೆ ಇರುವದನ್ನು ಕಂಡರು.
- Romans 9:3–5 ರೋಮಾಪುರದವರಿಗೆ 9:3–5ಶರೀರ ಸಂಬಂಧ ವಾಗಿ ನನ್ನ ಸ್ವಜನರಾಗಿರುವ ನನ್ನ ಸಹೋದರರಿಗೊಸ್ಕರ ನಾನೇ ಕ್ರಿಸ್ತನಿಂದ ಅಗಲಿ ಶಾಪಗ್ರಸ್ತನಾಗುವದಕ್ಕೆ ಒಪ್ಪಿಕೊಂಡೇನು. ಇವರು ಇಸ್ರಾಯೇಲ್ಯರು; ದತ್ತುಪುತ್ರ ಸ್ವಿಕಾರವೂ ಮಹಿಮೆಯೂ ಒಡಂಬಡಿ ಕೆಗಳೂ ನ್ಯಾಯಪ್ರಮಾಣ ಕೊಡೋಣವೂ ದೇವರ ಸೇವೆಯೂ ವಾಗ್ದಾನಗಳೂ ಇವರಿಗೆ ಸಂಬಂಧ ಪಟ್ಟವುಗಳು. ಪಿತೃಗಳು ಇವರಿಗೆ ಸಂಬಂಧಪಟ್ಟವರೇ; ಶರೀರ ಸಂಬಂಧವಾಗಿ ಕ್ರಿಸ್ತನು ಇವರಿಂದಲೇ ಬಂದನು; ಆತನು ಎಲ್ಲಾದರ ಮೇಲೆ ಇರುವಾತನಾಗಿದ್ದು ನಿರಂತರಕ್ಕೂ ಸ್ತುತಿ ಹೊಂದತಕ್ಕ ದೇವರಾಗಿದ್ದಾನೆ. ಆಮೆನ್.