Zechariah 11:16 in Kannada
ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
Igo, naanu deshadalli obba kurubanannu ebbisuvenu; avanu kettu hoguva vugalannu vichaarisuvadilla; illave mariyannu avanu hudukuvadilla; muridaddannu avanu gunamaaduvadilla; innoo nintiruvadannu avanu poshisuvadilla; aadare kobbidavugala maansa vannu tinnuvanu; avugala gorasugalannu muridu biduvanu.mandeyannu kaibiduvantha maigallanaada kurubanige ayyo! Kattiyu avana tolina meleyoo avana balagannina meleyoo iruvadu; avana tolu teeraa onaguvadu; avana balagannu poornavaagi kattalaaguvadu.
Zechariah 11:16 in English
- King James Version (KJV)
- For, lo, I will raise up a shepherd in the land, [which] shall not visit those that be cut off, neither shall seek the young one, nor heal that that is broken, nor feed that that standeth still: but he shall eat the flesh of the fat, and tear their claws in pieces.
- World English Bible (WEB)
- For, behold, I will raise up a shepherd in the land who will not visit those who are cut off, neither will seek those who are scattered, nor heal that which is broken, nor feed that which is sound; but he will eat the meat of the fat sheep, and will tear their hoofs in pieces.
- American Standard Version (ASV)
- For, lo, I will raise up a shepherd in the land, who will not visit those that are cut off, neither will seek those that are scattered, nor heal that which is broken, nor feed that which is sound; but he will eat the flesh of the fat [sheep], and will tear their hoofs in pieces.
- Bible in Basic English (BBE)
- For see, I will put a sheep-keeper over the land, who will have no care for that which is cut off, and will not go in search of the wanderers, or make well what is broken, and he will not give food to that which is ill, but he will take for his food the flesh of the fat, and let their feet be broken.
- Darby Translation (DBY)
- For behold, I will raise up a shepherd in the land, who shall not visit those that are about to perish, neither shall seek that which is strayed away, nor heal that which is wounded, nor feed that which is sound; but he will eat the flesh of the fat, and tear their hoofs in pieces.
- Webster's Bible (WBS)
- For lo, I will raise up a shepherd in the land, [who] shall not visit those that are cut off, neither shall seek the young one, nor heal that which is broken, nor feed that which standeth still: but he shall eat the flesh of the fat, and tear their claws in pieces.
- Young's Literal Translation (YLT)
- For lo, I am raising up a shepherd in the land, The cut off he doth not inspect, The shaken off he doth not seek, And the broken he doth not heal, The standing he doth not sustain, And the flesh of the fat he doth eat, And their hoofs he doth break off.
Read in context
- 14ಆಗ ನನ್ನ ಎರಡನೇ ಕೋಲಾದ ಬಂಧಗಳನ್ನು ಮುರಿದುಬಿಟ್ಟೆನು; ಹೀಗೆ ಯೆಹೂದಕ್ಕೂ ಇಸ್ರಾಯೇ ಲಿಗೂ ಮಧ್ಯೆ ಇರುವ ಸಹೋದರತನವನ್ನು ಇಲ್ಲದ ಹಾಗೆ ಮಾಡಿದೆನು.
- 15ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ.
- 16ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- 17ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
Cross references
- Ezekiel 34:2–6 ಯೆಹೆಜ್ಕೇಲನು 34:2–6ಮನುಷ್ಯಪುತ್ರನೇ, ಇಸ್ರಾಯೇಲಿನ ಕುರುಬರಿಗೆ ವಿರುದ್ಧವಾಗಿ ಪ್ರವಾದಿಸು, ಪ್ರವಾದಿಸಿ ಅವರಿಗೆ ಹೀಗೆ ಹೇಳು--ದೇವರಾದ ಕರ್ತನು ಕುರುಬರಿಗೆ ಹೀಗೆ ಹೇಳುತ್ತಾನೆ--ತಮ್ಮನ್ನು ತಾವೇ ಮೇಯಿಸಿಕೊಳ್ಳುವ ಇಸ್ರಾಯೇಲಿನ ಕುರುಬ ರಿಗೆ ಅಯ್ಯೋ, ಕುರುಬರು ಮಂದೆಗಳನ್ನು ಮೇಯಿಸ ಬಾರದೋ? ನೀವು ಕೊಬ್ಬನ್ನು ತಿನ್ನುತ್ತೀರಿ, ಉಣ್ಣೆಯ ಬಟ್ಟೆಯನ್ನು ಹಾಕುತ್ತೀರಿ, ಅವುಗಳಲ್ಲಿ ಕೊಬ್ಬಿದ್ದನ್ನು ಕೊಲ್ಲುತ್ತೀರಿ, ಆದರೆ ಮಂದೆಯನ್ನು ನೀವು ಮೇಯಿ ಸುವದಿಲ್ಲ, ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ. ಅವು ಚದರಿಹೋದವು; ಯಾಕಂದರೆ ಅಲ್ಲಿ ಕುರುಬ ರಿಲ್ಲ; ಅವರು ಚದರಿಹೋದಾಗ ಬಯಲಿನಲ್ಲಿರುವ ಎಲ್ಲಾ ಮೃಗಗಳಿಗೆ ಆಹಾರವಾದವು. ನನ್ನ ಕುರಿಗಳು ಎಲ್ಲಾ ಪರ್ವತಗಳ ಮೇಲೆಯೂ ಪ್ರತಿಯೊಂದು ಎತ್ತರವಾದ ಬೆಟ್ಟಗಳ ಮೇಲೆಯೂ ಅಲೆದಾಡುತ್ತಿವೆ; ಹೌದು, ನನ್ನ ಮಂದೆಯು ಭೂಮಂಡಲದಲ್ಲೆಲ್ಲಾ ಚದರಿ ಹೋಗಿದೆ; ಯಾವನೂ ಅವುಗಳಿಗಾಗಿ ವಿಚಾರಿಸಲಿಲ್ಲ ಅಥವಾ ಹುಡುಕಲಿಲ್ಲ.
- Jeremiah 23:2 ಯೆರೆಮೀಯ 23:2ಆದದರಿಂದ ಇಸ್ರಾಯೇಲಿನ ದೇವರಾದ ಕರ್ತನು ನನ್ನ ಜನರನ್ನು ಮೇಯಿಸುವ ಕುರುಬರಿಗೆ ವಿರೋಧ ವಾಗಿ ಹೀಗೆ ಹೇಳುತ್ತಾನೆ--ನೀವು ನನ್ನ ಮಂದೆಯನ್ನು ಚದರಿಸಿ ಓಡಿಸಿಬಿಟ್ಟು ವಿಚಾರಿಸದೆ ಇದ್ದೀರಿ; ಇಗೋ, ನಾನು ನಿಮ್ಮ ಕ್ರಿಯೆಗಳ ಕೆಟ್ಟತನವನ್ನು ನಿಮ್ಮಲ್ಲಿ ವಿಚಾರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- John 10:1 ಯೋಹಾನನು 10:1ನಾನು ನಿಮಗೆ ನಿಜನಿಜವಾಗಿ ಹೇಳು ತ್ತೇನೆ--ಬಾಗಲಿನಿಂದ ಕುರೀಹಟ್ಟಿಯೊಳಗೆ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನೇ ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
- John 10:12–13 ಯೋಹಾನನು 10:12–13ಆದರೆ ಕೂಲಿಯವನು ಕುರುಬನಲ್ಲವಾದದ ರಿಂದಲೂ ಕುರಿಗಳು ತನ್ನವುಗಳಲ್ಲವಾದದರಿಂದಲೂ ತೋಳ ಬರುವದನ್ನು ಕಂಡು ಕುರಿಗಳನ್ನು ಬಿಟ್ಟು ಓಡಿ ಹೋಗುತ್ತಾನೆ; ಆಗ ತೋಳವು ಕುರಿಗಳನ್ನು ಹಿಡಿದು ಕೊಂಡು ಅವುಗಳನ್ನು ಚದರಿಸುತ್ತದೆ. ಕೂಲಿಯವನು ಕೂಲಿಯವನೇ ಆಗಿರುವದರಿಂದ ಕುರಿಗಳಿಗೋಸ್ಕರ ಚಿಂತಿಸದೆ ಓಡಿ ಹೋಗುತ್ತಾನೆ.
- Matthew 23:13–29 ಮತ್ತಾಯನು 23:13–29ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.
- Luke 12:45–46 ಲೂಕನು 12:45–46ಆದರೆ ಆ ಸೇವಕನು--ನನ್ನ ಒಡೆಯನು ಬರುವದಕ್ಕೆ ತಡಮಾಡುತ್ತಾನೆ ಎಂದು ತನ್ನ ಹೃದಯದಲ್ಲಿ ಅಂದು ಕೊಂಡು ಗಂಡಾಳು ಹೆಣ್ಣಾಳುಗಳನ್ನು ಹೊಡೆಯು ವದಕ್ಕೂ ತಿಂದು ಕುಡಿದು ಮತ್ತನಾಗುವದಕ್ಕೂ ಆರಂಭಿಸಿದರೆ ಅವನು ನಿರೀಕ್ಷಿಸದ ದಿನದಲ್ಲಿಯೂ ತಿಳಿಯದ ಗಳಿಗೆಯಲ್ಲಿಯೂ ಆ ಸೇವಕನ ಒಡೆಯನು ಬಂದು ಅವನನ್ನು ಕಠಿಣವಾಗಿ ಛೇದಿಸಿ ಅವನಿಗೆ ನಂಬಿಕೆಯಿಲ್ಲದವರ ಕೂಡ ಪಾಲನ್ನು ನೇಮಕ ಮಾಡುವನು.
- Jeremiah 23:22 ಯೆರೆಮೀಯ 23:22ಆದರೆ ಅವರು ನನ್ನ ಆಲೋಚನೆಯಲ್ಲಿ ನಿಂತಿದ್ದರೆ, ಅವರು ಜನರಿಗೆ ನನ್ನ ವಾಕ್ಯಗಳನ್ನು ಕೇಳಕೊಟ್ಟು ಅವರನ್ನು ತಮ್ಮ ಕೆಟ್ಟ ಮಾರ್ಗದಿಂದಲೂ ತಮ್ಮ ಕ್ರಿಯೆಗಳ ಕೆಟ್ಟತನದಿಂದಲೂ ತಿರುಗಿಸುತ್ತಿದ್ದರು.
- Ezekiel 34:16 ಯೆಹೆಜ್ಕೇಲನು 34:16ಕಳೆದು ಹೋದದ್ದನ್ನು ನಾನೇ ಹುಡುಕುವೆನು; ಓಡಿಸಲ್ಪಟ್ಟಿದ್ದನ್ನು ನಾನೇ ಮತ್ತೆ ತರುವೆನು, ಮುರಿದದ್ದನ್ನು ನಾನೇ ಕಟ್ಟುವೆನು, ಬಲಹೀನವಾದದ್ದನ್ನು ನಾನೇ ಬಲಪಡಿಸುವೆನು. ಆದರೆ ಕೊಬ್ಬಿದ್ದನ್ನೂ ಬಲಿಷ್ಠವಾದದ್ದನ್ನೂ ನಾನೇ ಸಂಹರಿಸು ವೆನು; ನಾನೇ ಅವುಗಳಿಗೆ ನ್ಯಾಯದಂಡನೆ ಎಂಬ ಮೇವನ್ನು ಮೇಯಿಸುವೆನು.
- Genesis 31:38 ಆದಿಕಾಂಡ 31:38ಈ ಇಪ್ಪತ್ತು ವರುಷ ನಾನು ನಿನ್ನ ಸಂಗಡ ಇದ್ದೆನು. ನಿನ್ನ ಕುರಿಗಳೂ ಮೇಕೆಗಳೂ ಕಂದು ಹಾಕಲಿಲ್ಲ. ನಿನ್ನ ಕುರಿ ಹೋತಗಳನ್ನು ನಾನು ತಿನ್ನಲಿಲ್ಲ.
- Ezekiel 34:21 ಯೆಹೆಜ್ಕೇಲನು 34:21ನೀವು ಅವುಗಳನ್ನು ಪಕ್ಕೆ ಮತ್ತು ಹೆಗಲುಗಳಿಂದ ನೂಕುತ್ತಾ ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ ನನ್ನ ಮಂದೆಯನ್ನು ದೂರ ಚದುರಿಸಿ ಬಿಟ್ಟಿರಿ.
- Ezekiel 34:10 ಯೆಹೆಜ್ಕೇಲನು 34:10ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಕುರುಬರಿಗೆ ವಿರುದ್ಧವಾಗಿದ್ದೇನೆ; ನನ್ನ ಮಂದೆ ಯನ್ನು ಅವರ ಕೈಯಿಂದ ವಿಚಾರಿಸುವೆನು; ಅವರು ಮಂದೆ ಮೇಯಿಸುವದನ್ನು ನಿಲ್ಲಿಸಿಬಿಡುತ್ತೇನೆ. ಇನ್ನು ಮೇಲೆ ಕುರುಬರು ತಮ್ಮ ಹೊಟ್ಟೆಯನ್ನು ತುಂಬಿಸಿ ಕೊಳ್ಳರು. ನಾನು ನನ್ನ ಮಂದೆಯನ್ನು ಅವರಿಗೆ ಆಹಾರ ವಾಗದ ಹಾಗೆ ಅವರ ಬಾಯಿಂದ ತಪ್ಪಿಸುತ್ತೇನೆ.
- Matthew 23:2–4 ಮತ್ತಾಯನು 23:2–4ಶಾಸ್ತ್ರಿ ಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕೂತಿ ದ್ದಾರೆ; ಆದದರಿಂದ ಅವರು ನಿಮಗೆ ಹೇಳುವವು ಗಳನ್ನೆಲ್ಲಾ ಕೈಕೊಂಡು ನಡೆಯಿರಿ; ಅವರ ಕ್ರಿಯೆಗಳ ಪ್ರಕಾರ ನೀವು ಮಾಡಬೇಡಿರಿ; ಯಾಕಂದರೆ ಅವರು ಹೇಳುತ್ತಾರೆ, ಮಾಡುವದಿಲ್ಲ. ಹೊರುವದಕ್ಕೆ ಅವರು ಭಾರವಾದ ಮತ್ತು ಕ್ರೂರವಾದ ಹೊರೆಗಳನ್ನು ಕಟ್ಟಿ ಜನರ ಹೆಗಲುಗಳ ಮೇಲೆ ಹೊರಿಸುತ್ತಾರೆ. ತಾವಾ ದರೋ ತಮ್ಮ ಬೆರಳುಗಳಲ್ಲಿ ಒಂದರಿಂದ ಲಾದರೂ ಅವುಗಳನ್ನು ಸರಿಸುವದಿಲ್ಲ.
Original words (Hebrew)
- up · H6965קוּם qûwm
- shepherd · H7462רָעָה râʻâh
- land · H776אֶרֶץ ʼerets
- visit · H6485פָּקַד pâqad
- off · H3582כָּחַד kâchad
- seek · H1245בָּקַשׁ bâqash
- one · H5289נַעַר naʻar
- heal · H7495רָפָא râphâʼ
- broken · H7665שָׁבַר shâbar
- feed · H3557כּוּל kûwl
- standeth · H5324נָצַב nâtsab
- eat · H398אָכַל ʼâkal
- flesh · H1320בָּשָׂר bâsâr
- fat · H1277בָּרִיא bârîyʼ
- tear · H6561פָּרַק pâraq
- claws · H6541פַּרְסָה parçâh
- pieces · H6561פָּרַק pâraq