Zechariah · chapter 11 · verse 3
Zechariah 11:3 in Kannada
ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
Kurubaru goliduva shabdavuntu; avara gauravavu kedisalpattide, praayada sinhagala gharjisuva shabdavuntu; yordanina garva kedisalpattide.
Zechariah 11:3 in English
- King James Version (KJV)
- [There is] a voice of the howling of the shepherds; for their glory is spoiled: a voice of the roaring of young lions; for the pride of Jordan is spoiled.
- World English Bible (WEB)
- A voice of the wailing of the shepherds! For their glory is destroyed—a voice of the roaring of young lions! For the pride of the Jordan is ruined.
- American Standard Version (ASV)
- A voice of the wailing of the shepherds! for their glory is destroyed: a voice of the roaring of young lions! for the pride of the Jordan is laid waste.
- Bible in Basic English (BBE)
- The sound of the crying of the keepers of the flock! for their glory is made waste: the sound of the loud crying of the young lions! for the pride of Jordan is made waste.
- Darby Translation (DBY)
- A voice of howling of the shepherds; for their glory is spoiled: a voice of roaring of young lions; for the pride of Jordan is spoiled.
- Webster's Bible (WBS)
- [There is] a voice of the howling of the shepherds; for their glory is destroyed: a voice of the roaring of young lions; for the pride of Jordan is laid waste.
- Young's Literal Translation (YLT)
- A voice of the howling of the shepherds! For destroyed was their robe of honour, A voice of the roaring of young lions! For destroyed was the excellency of Jordan.
Read in context
- 1ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.
- 2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- 3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
- 4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
- 5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
Cross references
- Jeremiah 50:44 ಯೆರೆಮೀಯ 50:44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ಉಕ್ಕುವಿಕೆಯಿಂದ ಬಲವಾದ ನಿವಾಸಕ್ಕೆ ಏರಿ ಬರುವನು; ಆದರೆ ನಾನು ಅವರನ್ನು ಕ್ಷಣಮಾತ್ರ ದಲ್ಲಿ ಅದಕ್ಕೆ ದೂರವಾಗಿ ಓಡಿಹೋಗುವಂತೆ ಮಾಡುವೆನು, ನಾನು ಅದರ ಮೇಲೆ ನೇಮಿಸತಕ್ಕ ಆಯಲ್ಪಟ್ಟವನು ಯಾರು? ನನ್ನ ಹಾಗೆ ಯಾರು? ಮತ್ತು ನನಗೆ ಕಾಲವನ್ನು ನೇಮಿಸುವವನಾರು? ನನ್ನ ಮುಂದೆ ನಿಲ್ಲತಕ್ಕ ಕುರುಬನು ಯಾರು?
- Jeremiah 25:34–36 ಯೆರೆಮೀಯ 25:34–36ಓ ಕುರುಬರೇ, ಗೋಳಿಟ್ಟುಕೂಗಿರಿ; ಮಂದೆಯಲ್ಲಿ ಪ್ರಮುಖರೇ, ಧೂಳಿನಲ್ಲಿ ಹೊರಳಾಡಿರಿ; ನಿಮ್ಮನ್ನು ಕೊಲ್ಲುವದಕ್ಕೂ ಚದರಿಸುವದಕ್ಕೂ ದಿನಗಳು ತುಂಬಿ ಅವೆ; ಆಗ ನೀವು ರಮ್ಯವಾದ ಪಾತ್ರೆಯ ಹಾಗೆ ಬೀಳುವಿರಿ. ಆಗ ಕುರುಬರಿಗೆ ಓಡಿಹೋಗುವದಕ್ಕೂ ಮಂದೆಯ ಪ್ರಮುಖರಿಗೆ ತಪ್ಪಿಸಿಕೊಳ್ಳುವದಕ್ಕೂ ಮಾರ್ಗವಿಲ್ಲದೆ ಹೋಗುವದು. ಕುರುಬರ ಕೂಗಿನ ಶಬ್ದವೂ ಮಂದೆಯ ಗೋಳಾಡುವಿಕೆಯೂ ಪ್ರಮುಖರಿಗೆ ಕೇಳ ಲ್ಪಡುವದು.
- Acts 22:21–22 ಅಪೊಸ್ತಲರ ಕೃತ್ಯಗಳು 22:21–22ಅದಕ್ಕೆ ಆತನು--ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುವೆನು ಎಂದು ನನಗೆ ಹೇಳಿದನು. ಈ ಮಾತಿನತನಕ ಅವನು ಹೇಳಿದ್ದನ್ನು ಅವರು ಕೇಳಿ ತಮ್ಮ ಧ್ವನಿಗಳನ್ನೆತ್ತಿ--ಇಂಥವನನ್ನು ಭೂಮಿ ಯಿಂದ ತೆಗೆದುಹಾಕಿರಿ; ಇವನು ಜೀವಿಸುವದು ಯುಕ್ತವಲ್ಲ ಎಂದು ಕೂಗಿದರು.
- Zephaniah 1:10 ಚೆಫನ್ಯ 1:10ಆ ದಿನದಲ್ಲಿ ಆಗುವದೇನಂದರೆ--ವಿಾನುಬಾಗಲಿಂದ ಕೂಗಿನ ಶಬ್ದವೂ ಮತ್ತೊಂದ ರಿಂದ ಗೋಳಾಟವೂ ಗುಡ್ಡಗಳ ಕಡೆಯಿಂದ ದೊಡ್ಡ ಮುರಿಯೋಣವೂ ಇರುವದು.
- Hosea 10:5 ಹೋಶೇಯ 10:5ಬೇತಾವೆನಿನ ಕರುಗಳ ನಿಮಿತ್ತ ಸಮಾರ್ಯದ ನಿವಾಸಿಗಳು ಭಯಪಡುವರು; ಅದರ ಮಹಿಮೆಯು ಅವರಿಂದ ಕಳೆದುಹೋದ ಕಾರಣ ಅಂದು ಅದರ ವಿಷಯದಲ್ಲಿ ಸಂತೋಷಪಟ್ಟ ಜನರೂ ಪೂಜಾರಿಗಳೂ ಗೋಳಾಡುವರು.
- Zechariah 11:8 ಜೆಕರ್ಯ 11:8ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು.
- Joel 1:13 ಯೋವೇಲ 1:13ಯಾಜಕರೇ, ನಿಮ್ಮ ನಡುಕಟ್ಟಿಕೊಂಡು ಗೋಳಾ ಡಿರಿ; ಬಲಿಪೀಠದ ಸೇವಕರೇ, ಗೋಳಾಡಿರಿ; ನನ್ನ ದೇವರ ಸೇವಕರೇ, ಬಂದು ಗೋಣೀತಟ್ಟಿನಲ್ಲಿ ರಾತ್ರಿ ಯೆಲ್ಲಾ ಮಲಗಿರಿ, ಯಾಕಂದರೆ ಆಹಾರದರ್ಪಣೆಯೂ ಪಾನ ದರ್ಪಣೆಯೂ ನಿಮ್ಮ ದೇವರ ಆಲಯದಿಂದ ಹಿಂತೆಗೆಯಲ್ಪಟ್ಟಿವೆ.
- James 5:1–6 ಯಾಕೋಬನು 5:1–6ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ ನಿಮ್ಮ ಐಶ್ವರ್ಯವು ನಾಶವಾಗಿದೆ, ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ. ನಿಮ್ಮ ಚಿನ್ನ ಬೆಳ್ಳಿಗಳು ತುಕ್ಕು ಹಿಡಿದವೆ; ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು ಬೆಂಕಿಯಂತೆ ನಿಮ್ಮ ಮಾಂಸವನ್ನು ತಿಂದು ಬಿಡುವದು. ಕಡೇ ದಿನಗಳಿಗಾಗಿ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿ ದ್ದೀರಿ. ಇಗೋ, ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿ ದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ; ಕೊಯಿದವರ ಕೂಗು ಸೈನ್ಯಗಳ ಕರ್ತನ ಕಿವಿಗಳಲ್ಲಿ ಬಿದ್ದಿದೆ. ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ. ನೀತಿವಂತನಿಗೆ ದಂಡನೆಯನ್ನು ವಿಧಿಸಿ ಕೊಂದು ಹಾಕಿ ದ್ದೀರಿ; ಅವನು ನಿಮ್ಮನ್ನು ಎದುರಾಯಿಸುವವನಲ್ಲ.
- Jeremiah 26:6 ಯೆರೆಮೀಯ 26:6ಆಗ ನಾನು ಈ ಮನೆಯನ್ನು ಶಿಲೋವಿನ ಹಾಗೆ ಮಾಡುತ್ತೇನೆ; ಈ ಪಟ್ಟಣವನ್ನು ಭೂಮಿಯ ಎಲ್ಲಾ ಜನಾಂಗಗಳಿಗೆ ಶಾಪಕ್ಕೆ ಗುರಿಯಾಗುವಂತೆ ಮಾಡುತ್ತೇನೆ ಅಂದನು.
- Zechariah 11:15–17 ಜೆಕರ್ಯ 11:15–17ಇದಲ್ಲದೆ ಕರ್ತನು ನನಗೆ ಹೇಳಿದ್ದೇನಂದರೆ --ಇನ್ನು ಬುದ್ಧಿಹೀನವಾದ ಕುರುಬನ ಆಯುಧಗ ಳನ್ನು ತಕ್ಕೋ. ಇಗೋ, ನಾನು ದೇಶದಲ್ಲಿ ಒಬ್ಬ ಕುರುಬನನ್ನು ಎಬ್ಬಿಸುವೆನು; ಅವನು ಕೆಟ್ಟು ಹೋಗುವ ವುಗಳನ್ನು ವಿಚಾರಿಸುವದಿಲ್ಲ; ಇಲ್ಲವೆ ಮರಿಯನ್ನು ಅವನು ಹುಡುಕುವದಿಲ್ಲ; ಮುರಿದದ್ದನ್ನು ಅವನು ಗುಣಮಾಡುವದಿಲ್ಲ; ಇನ್ನೂ ನಿಂತಿರುವದನ್ನು ಅವನು ಪೋಷಿಸುವದಿಲ್ಲ; ಆದರೆ ಕೊಬ್ಬಿದವುಗಳ ಮಾಂಸ ವನ್ನು ತಿನ್ನುವನು; ಅವುಗಳ ಗೊರಸುಗಳನ್ನು ಮುರಿದು ಬಿಡುವನು.ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು. ಮಂದೆಯನ್ನು ಕೈಬಿಡುವಂಥ ಮೈಗಳ್ಳನಾದ ಕುರುಬನಿಗೆ ಅಯ್ಯೋ! ಕತ್ತಿಯು ಅವನ ತೋಳಿನ ಮೇಲೆಯೂ ಅವನ ಬಲಗಣ್ಣಿನ ಮೇಲೆಯೂ ಇರುವದು; ಅವನ ತೋಳು ತೀರಾ ಒಣಗುವದು; ಅವನ ಬಲಗಣ್ಣು ಪೂರ್ಣವಾಗಿ ಕತ್ತಲಾಗುವದು.
- Jeremiah 7:11–14 ಯೆರೆಮೀಯ 7:11–14ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ. ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ. ಈಗ ಕರ್ತನು ಅನ್ನುವದೇನಂದರೆ--ನೀವು ಈ ಕೆಲಸಗಳ ನ್ನೆಲ್ಲಾ ಮಾಡಿದ್ದರಿಂದ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತಾಡಿದರೂ ನೀವು ಕೇಳದೆ ಹೋದಿರಿ. ನಾನು ನಿಮ್ಮನ್ನು ಕರೆದರೂ ನೀವು ಉತ್ತರ ಕೊಡದೆ ಹೋದಿರಿ. ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Matthew 23:13–38 ಮತ್ತಾಯನು 23:13–38ಆದರೆ ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮನುಷ್ಯರ ಮುಂದೆ ಪರ ಲೋಕರಾಜ್ಯವನ್ನು ಮುಚ್ಚುತ್ತೀರಿ. ನೀವಂತೂ ಪ್ರವೇಶಿ ಸುವದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಹೋಗಗೊಡಿಸುವದಿಲ್ಲ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ವಿಧವೆಯರ ಮನೆಗಳನ್ನು ನುಂಗುತ್ತೀರಿ; ಮತ್ತು ನಟನೆಗಾಗಿ ಉದ್ದವಾದ ಪ್ರಾರ್ಥನೆಯನ್ನು ಮಾಡುತ್ತೀರಿ; ಆದದರಿಂದ ನೀವು ಹೆಚ್ಚಾದ ದಂಡನೆಯನ್ನು ಹೊಂದುವಿರಿ. ಕಪಟಿಗಳಾದ ಫರಿಸಾಯರೇ, ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಒಬ್ಬನನ್ನು ಮತಾಂತರ ಮಾಡು ವದಕ್ಕೆ ನೀವು ಸಮುದ್ರವನ್ನೂ ಭೂಮಿಯನ್ನೂ ಸುತ್ತುತ್ತೀರಿ; ಮತಾಂತರ ಮಾಡಿದ ಮೇಲೆ ಅವನನ್ನು ನಿಮಗಿಂತಲೂ ಎರಡರಷ್ಟು ನರಕದ ಮಗನನ್ನಾಗಿ ಮಾಡುತ್ತೀರಿ. ಕುರುಡರಾದ ಮಾರ್ಗದರ್ಶಕರೇ, ನಿಮಗೆ ಅಯ್ಯೋ! ಒಬ್ಬನು ದೇವಾಲಯದ ಮೇಲೆ ಆಣೆಯಿಟ್ಟರೆ ಅದು ಏನೂ ಅಲ್ಲ ಅನ್ನುತ್ತೀರಿ; ಆದರೆ ಯಾವನಾದರೂ ದೇವಾಲಯದ ಚಿನ್ನದ ಮೇಲೆ ಆಣೆಯಿಟ್ಟರೆ ಅವನು ಸಾಲಗಾರನು ಎಂದು ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಚಿನ್ನವೋ ಇಲ್ಲವೆ ಚಿನ್ನವನ್ನು ಪಾವನ ಮಾಡುವ ದೇವಾಲಯವೋ? ಯಾರಾದರೂ ಯಜ್ಞವೇದಿಯ ಮೇಲೆ ಆಣೆಯಿಡುವದಾದರೆ ಅದು ಏನೂ ಅಲ್ಲವೆಂದೂ ಯಾರಾದರೂ ಅದರಲ್ಲಿರುವ ಕಾಣಿಕೆಯ ಮೇಲೆ ಆಣೆಯಿಟ್ಟರೆ ಅವನು ಅಪರಾಧಿ ಯೆಂದೂ ಅನ್ನುತ್ತೀರಿ. ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ? ಆದದರಿಂದ ಯಜ್ಞವೇದಿಯ ಮೇಲೆ ಆಣೆಯಿಡು ವವನು ಅದರ ಮೇಲೆಯೂ ಅದರಲ್ಲಿರುವಂಥವುಗಳ ಮೇಲೆಯೂ ಆಣೆಯಿಡುವವನಾಗಿದ್ದಾನೆ. ದೇವಾ ಲಯದ ಮೇಲೆ ಆಣೆಯಿಡುವವನು ಅದರ ಮೇಲೆ ಯೂ ಆದರಲ್ಲಿ ವಾಸಿಸುವಾತನ ಮೇಲೆಯೂ ಆಣೆ ಯಿಡುವವನಾಗಿದ್ದಾನೆ. ಪರಲೋಕದ ಮೇಲೆ ಆಣೆ ಯಿಡುವವನು ದೇವರ ಸಿಂಹಾಸನದ ಮೇಲೆಯೂ ಅದರ ಮೇಲೆ ಕೂತಿರುವಾತನ ಮೇಲೆಯೂ ಆಣೆಯಿಡುವವನಾಗಿದ್ದಾನೆ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ ಕುರುಡ ಮಾರ್ಗದರ್ಶಕರಾದ ನೀವು ಸೊಳ್ಳೇ ಸೋಸುವವರು ಮತ್ತು ಒಂಟೇ ನುಂಗುವವರು. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ. ಕುರುಡನಾದ ಫರಿಸಾಯನೇ, ಮೊದಲು ಪಾತ್ರೆಯ ಮತ್ತು ತಟ್ಟೆಯ ಒಳಗಿನ ಭಾಗ ವನ್ನು ಶುಚಿಮಾಡು; ಆಗ ಅವುಗಳ ಹೊರ ಭಾಗವೂ ಶುಚಿಯಾಗುವದು. ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ. ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ. ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ. ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ. ಹಾವು ಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆ ಯಿಂದ ಹೇಗೆ ತಪ್ಪಿಸಿಕೊಂಡೀರಿ? ಆದದರಿಂದ ಇಗೋ, ನಾನು ಪ್ರವಾದಿಗಳನ್ನೂ ಜ್ಞಾನಿಗಳನ್ನೂ ಶಾಸ್ತ್ರಿಗಳನ್ನೂ ನಿಮ್ಮ ಬಳಿಗೆ ಕಳುಹಿ ಸುತ್ತೇನೆ. ಅವರಲ್ಲಿ ಕೆಲವರನ್ನು ನೀವು ಕೊಂದು ಶಿಲುಬೆಗೆ ಹಾಕುವಿರಿ; ಮತ್ತು ಕೆಲವರನ್ನು ನೀವು ನಿಮ್ಮ ಸಭಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆದು ಅವ ರನ್ನು ಪಟ್ಟಣದಿಂದ ಪಟ್ಟಣಕ್ಕೆ ಅಟ್ಟಿ ಹಿಂಸಿಸ ಹೀಗೆ ನೀತಿವಂತನಾದ ಹೇಬೆಲನ ರಕ್ತ ಮೊದಲು ಗೊಂಡು ದೇವಾಲಯಕ್ಕೂ ಯಜ್ಞವೇದಿಗೂ ನಡುವೆ ನೀವು ಕೊಂದು ಹಾಕಿದ ಬರಕೀಯನ ಮಗನಾದ ಜಕರೀಯನ ರಕ್ತದವರೆಗೂ ಭೂಮಿಯ ಮೇಲೆ ಸುರಿಸಲ್ಪಟ್ಟ ಎಲ್ಲಾ ನೀತಿವಂತರ ರಕ್ತಾಪರಾಧವು ನಿಮ್ಮ ಮೇಲೆ ಬರುವದು. ನಿಮಗೆ ನಿಜವಾಗಿ ಹೇಳು ತ್ತೇನೆ--ಇವೆಲ್ಲವುಗಳು ಈ ಸಂತತಿಯವರ ಮೇಲೆ ಬರುವವು. ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ ಇಗೋ, ನಿಮ್ಮ ಮನೆಯು ನಿಮಗೆ ಹಾಳಾದದ್ದಾಗಿ ಬಿಡಲ್ಪಡುವದು.ಇಂದಿನಿಂದ ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು ಎಂದು ನೀವು ಹೇಳುವ ವರೆಗೆ ನೀವು ನನ್ನನ್ನು ನೋಡುವದೇ ಇಲ್ಲ ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
Original words (Hebrew)
- voice · H6963קוֹל qôwl
- howling · H3215יְלָלָה yᵉlâlâh
- shepherds · H7462רָעָה râʻâh
- glory · H155אַדֶּרֶת ʼaddereth
- spoiled · H7703שָׁדַד shâdad
- voice · H6963קוֹל qôwl
- roaring · H7581שְׁאָגָה shᵉʼâgâh
- lions · H3715כְּפִיר kᵉphîyr
- pride · H1347גָּאוֹן gâʼôwn
- Jordan · H3383יַרְדֵּן Yardên
- spoiled · H7703שָׁדַד shâdad