Zechariah · chapter 11 · verse 4
Zechariah 11:4 in Kannada
ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
Nanna devaraada kartanu heege heluttaane --koleya mandeyannu meyisu.
Zechariah 11:4 in English
- King James Version (KJV)
- Thus saith the LORD my God; Feed the flock of the slaughter;
- World English Bible (WEB)
- The LORD my God says: “Feed the flock of slaughter.
- American Standard Version (ASV)
- Thus said Jehovah my God: Feed the flock of slaughter;
- Bible in Basic English (BBE)
- This is what the Lord my God has said: Take care of the flock of death;
- Darby Translation (DBY)
- Thus saith Jehovah my God: Feed the flock of slaughter,
- Webster's Bible (WBS)
- Thus saith the LORD my God; Feed the flock of the slaughter;
- Young's Literal Translation (YLT)
- Thus said Jehovah my God: 'Feed the flock of the slaughter,
Read in context
- 2ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.
- 3ಕುರುಬರು ಗೋಳಿಡುವ ಶಬ್ದವುಂಟು; ಅವರ ಗೌರವವು ಕೆಡಿಸಲ್ಪಟ್ಟಿದೆ, ಪ್ರಾಯದ ಸಿಂಹಗಳ ಘರ್ಜಿಸುವ ಶಬ್ದವುಂಟು; ಯೊರ್ದನಿನ ಗರ್ವ ಕೆಡಿಸಲ್ಪಟ್ಟಿದೆ.
- 4ನನ್ನ ದೇವರಾದ ಕರ್ತನು ಹೀಗೆ ಹೇಳುತ್ತಾನೆ --ಕೊಲೆಯ ಮಂದೆಯನ್ನು ಮೇಯಿಸು.
- 5ಅವುಗಳನ್ನು ಸಂಪಾದಿಸಿದವರು ಅವುಗಳನ್ನು ಕೊಂದು ತಮ್ಮನ್ನು ನಿರಪರಾಧಿಗಳೆಂದೆಣಿಸುತ್ತಾರೆ; ಅವುಗಳನ್ನು ಮಾರುವ ವರು--ನಾನು ಐಶ್ವರ್ಯವಂತನಾದೆನು, ಕರ್ತನಿಗೆ ಸ್ತೋತ್ರ ಎಂದನ್ನುತ್ತಾರೆ; ಅವರ ಸ್ವಂತ ಕುರುಬರು ಅವುಗಳನ್ನು ಕನಿಕರಿಸುವದಿಲ್ಲ.
- 6ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ.
Cross references
- Zechariah 11:7 ಜೆಕರ್ಯ 11:7ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು.
- Matthew 23:37 ಮತ್ತಾಯನು 23:37ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
- Romans 15:8 ರೋಮಾಪುರದವರಿಗೆ 15:8ಹೀಗಿರುವದರಿಂದ ಪಿತೃ ಗಳಿಗೆ ಮಾಡಿದ ವಾಗ್ದಾನಗಳನ್ನು ದೃಢಪಡಿಸುವದಕ್ಕೆ ದೇವರ ಸತ್ಯಕ್ಕಾಗಿ ಯೇಸು ಕ್ರಿಸ್ತನು ಸುನ್ನತಿಯವರಿಗೆ ಸೇವಕನಾಗಿದ್ದನೆಂದು ನಾನು ಹೇಳುತ್ತೇನೆ.
- Isaiah 49:4–5 ಯೆಶಾಯ 49:4–5ಅದಕ್ಕೆ ನಾನು--ನಾನು ಪಡುವ ಪ್ರಯಾಸವು ವ್ಯರ್ಥ, ನನ್ನ ಶಕ್ತಿಯನ್ನೆಲ್ಲಾ ನಿಷ್ಪ್ರಯೋಜನವಾಗಿಯೂ ವ್ಯರ್ಥವಾ ಗಿಯೂ ಕಳಕೊಂಡೆನೆಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಕರ್ತನ ಬಳಿಯಲ್ಲಿಯೂ ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು. ಯಾಕೋಬನ್ನು ತನ್ನ ಕಡೆಗೆ ತಿರಿಗಿ ಸೇರಿಸಿಕೊಳ್ಳ ಬೇಕೆಂತಲೂ ಇಸ್ರಾಯೇಲು ತನ್ನ ಕಡೆಗೆ ಕೂಡಿಕೊಳ್ಳು ವಂತೆಯೂ ಆತನು ಗರ್ಭದಲ್ಲಿಯೇ ನನ್ನನ್ನು ತನ್ನ ಸೇವಕನನ್ನಾಗಿ ರೂಪಿಸಿದನು. ಆದರೂ ನಾನು ಕರ್ತನ ದೃಷ್ಟಿಯಲ್ಲಿ ಗೌರವವುಳ್ಳವನಾಗಿರುವೆನು; ನನ್ನ ದೇವರೇ ನನಗೆ ಬಲವಾಗಿರುವನು.
- Isaiah 40:9–11 ಯೆಶಾಯ 40:9–11ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು. ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ. ಆತನು ತನ್ನ ಮಂದೆಯನ್ನು ಕುರುಬನಂತೆ ಮೇಯಿ ಸುವನು. ಕುರಿಮರಿಗಳನ್ನು ಕೂಡಿಸಿ ಅವುಗಳನ್ನು ತನ್ನ ಎದೆಗಪ್ಪಿಕೊಳ್ಳುವನು ಎಳೇಮರಿಗಳನ್ನು ಮೆಲ್ಲಗೆ ನಡಿಸುವನು ಎಂದು ಸಾರು.
- Matthew 15:24 ಮತ್ತಾಯನು 15:24ಆದರೆ ಆತನು ಪ್ರತ್ಯು ತ್ತರವಾಗಿ-- ತಪ್ಪಿಸಿಕೊಂಡ ಕುರಿಗಳಾಗಿರುವ ಇಸ್ರಾ ಯೇಲಿನ ಮನೆತನದವರ ಬಳಿಗೆ ಮಾತ್ರ ನಾನು ಕಳುಹಿಸಲ್ಪಟ್ಟಿದ್ದೇನೆ ಅಂದನು.
- Ephesians 1:3 ಎಫೆಸದವರಿಗೆ 1:3ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯ ಆಶೀರ್ವಾದ ಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.
- Zechariah 14:5 ಜೆಕರ್ಯ 14:5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- John 20:17 ಯೋಹಾನನು 20:17ಯೇಸು ಆಕೆಗೆ--ನನ್ನನ್ನು ಮುಟ್ಟಬೇಡ; ಯಾಕಂದರೆ ನಾನು ಇನ್ನೂ ನನ್ನ ತಂದೆಯ ಬಳಿಗೆ ಏರಿಹೋಗಲಿಲ್ಲ; ಆದರೆ ನೀನು ನನ್ನ ಸಹೋದರರ ಬಳಿಗೆ ಹೋಗಿ ಅವ ರಿಗೆ--ನನ್ನ ತಂದೆಯೂ ನಿಮ್ಮ ತಂದೆಯೂ ನನ್ನ ದೇವರೂ ನಿಮ್ಮ ದೇವರೂ ಆಗಿರುವಾತನ ಬಳಿಗೆ ನಾನು ಏರಿಹೋಗುತ್ತೇನೆ ಎಂದು ಹೇಳು
- Ezekiel 34:23–24 ಯೆಹೆಜ್ಕೇಲನು 34:23–24ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ. ಕರ್ತನಾದ ನಾನೇ ಅವುಗಳಿಗೆ ದೇವರಾಗಿರುವೆನು; ಮತ್ತು ನನ್ನ ಸೇವಕನಾದ ದಾವೀದನು ಅವುಗಳ ಮಧ್ಯೆ ಪ್ರಧಾನನಾಗಿರುವನೆಂದು ಕರ್ತನಾದ ನಾನೇ ಅದನ್ನು ಮಾತಾಡಿದ್ದೇನೆ;
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Micah 5:4 ಮೀಕ 5:4ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.