Zechariah · chapter 12 · verse 13
Zechariah 12:13 in Kannada
ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
Leviyara maneta nada gotravu pratyeka, avara hendatiyaru pratyeka; shimmiyana gotravu pratyeka, avara hendati yaru pratyeka.ulida gotraga lellaa gotra gotragala prakaara pratyekavaa giyoo avara hendatiyaru pratyekavaagiyoo golaaduvaru.
Zechariah 12:13 in English
- King James Version (KJV)
- The family of the house of Levi apart, and their wives apart; the family of Shimei apart, and their wives apart;
- World English Bible (WEB)
- the family of the house of Levi apart, and their wives apart; the family of the Shimeites apart, and their wives apart;
- American Standard Version (ASV)
- the family of the house of Levi apart, and their wives apart; the family of the Shimeites apart, and their wives apart;
- Bible in Basic English (BBE)
- The family of Levi by themselves, and their wives by themselves; the family of Shimei by themselves, and their wives by themselves;
- Darby Translation (DBY)
- the family of the house of Levi apart, and their wives apart; the family of Shimei apart, and their wives apart;
- Webster's Bible (WBS)
- The family of the house of Levi apart, and their wives apart; the family of Shimei apart, and their wives apart;
- Young's Literal Translation (YLT)
- The family of the house of Levi apart, And their women apart; The family of Shimei apart, And their women apart,
Read in context
- 11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
- 12ದೇಶವು ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾಗಿ ಗೋಳಾಡುವದು; ದಾವೀದನ ಮನೆಯ ಗೋತ್ರವು ಪ್ರತ್ಯೇಕ ಅವರ ಹೆಂಡತಿಯರು ಪ್ರತ್ಯೇಕ; ನಾತಾನನ ಮನೆತನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ.
- 13ಲೇವಿಯರ ಮನೆತ ನದ ಗೋತ್ರವು ಪ್ರತ್ಯೇಕ, ಅವರ ಹೆಂಡತಿಯರು ಪ್ರತ್ಯೇಕ; ಶಿಮ್ಮಿಯನ ಗೋತ್ರವು ಪ್ರತ್ಯೇಕ, ಅವರ ಹೆಂಡತಿ ಯರು ಪ್ರತ್ಯೇಕ.ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
- 14ಉಳಿದ ಗೋತ್ರಗ ಳೆಲ್ಲಾ ಗೋತ್ರ ಗೋತ್ರಗಳ ಪ್ರಕಾರ ಪ್ರತ್ಯೇಕವಾ ಗಿಯೂ ಅವರ ಹೆಂಡತಿಯರು ಪ್ರತ್ಯೇಕವಾಗಿಯೂ ಗೋಳಾಡುವರು.
Cross references
- Malachi 2:4–9 ಮಲಾಕಿಯ 2:4–9ಸೈನ್ಯಗಳ ಕರ್ತನು ಹೇಳುವದೇನಂದರೆ--ನನ್ನ ಒಡಂಬಡಿಕೆ ಲೇವಿಯ ಸಂಗಡ ಇರುವ ಹಾಗೆ ಈ ಆಜ್ಞೆಯನ್ನು ನಿಮಗೆ ಕಳುಹಿಸಿದ್ದೇನೆಂದು ತಿಳುಕೊಳ್ಳುವಿರಿ. ನನ್ನ ಜೀವದ ಮತ್ತು ಸಮಾಧಾನದ ನನ್ನ ಒಡಂಬಡಿಕೆಯು ಅವನ ಸಂಗಡ ಇತ್ತು; ಅವುಗಳನ್ನು ಅವನಿಗೆ ಕೊಟ್ಟೆನು; ಅವನು ನನಗೆ ಭಯಪಟ್ಟು ನನ್ನ ಹೆಸರಿಗೆ ಅಂಜಿ ಕೊಂಡನು. ಸತ್ಯದ ನ್ಯಾಯಪ್ರಮಾಣವು ಅವನ ಬಾಯಲ್ಲಿ ಇತ್ತು; ಅಕ್ರಮವು ಅವನ ತುಟಿಗಳಲ್ಲಿ ಸಿಕ್ಕಲಿಲ್ಲ. ಅವನು ಸಮಾಧಾನದಿಂದಲೂ ನ್ಯಾಯ ದಿಂದಲೂ ನನ್ನ ಸಂಗಡ ನಡೆದುಕೊಂಡು ಅನೇಕರನ್ನು ಅಕ್ರಮದಿಂದ ತಿರುಗಿಸಿದನು. ಯಾಜಕನ ತುಟಿಗಳು ತಿಳುವಳಿಕೆಯನ್ನು ಕಾಪಾಡತಕ್ಕದ್ದು, ನ್ಯಾಯಪ್ರಮಾಣ ವನ್ನು ಅವನ ಬಾಯಲ್ಲಿ ಹುಡುಕತಕ್ಕದ್ದು; ಯಾಕಂದರೆ ಅವನು ಸೈನ್ಯಗಳ ಕರ್ತನ ಸೇವಕನೇ. ಆದರೆ ನೀವು ಮಾರ್ಗವನ್ನು ಬಿಟ್ಟುಹೋಗಿದ್ದೀರಿ; ಅನೇಕರನ್ನು ನ್ಯಾಯಪ್ರಮಾಣಕ್ಕೆ ಎಡವುವಂತೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಕೆಡಿಸಿದ್ದೀರೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ಆದದರಿಂದ ನೀವು ನನ್ನ ಮಾರ್ಗಗಳನ್ನು ಕೈಕೊಳ್ಳದೆ, ನನ್ನ ನ್ಯಾಯ ಪ್ರಮಾಣದ ವಿಷಯವಾಗಿ ಮುಖದಾಕ್ಷಿಣ್ಯ ತೋರಿಸಿದ ಪ್ರಕಾರವೇ ನಾನು ನಿಮ್ಮನ್ನು ಜನರೆಲ್ಲರ ಮುಂದೆ ಅಸಡ್ಡೆ ಮಾಡಲ್ಪಟ್ಟ ವರನ್ನಾಗಿಯೂ ನೀಚರನ್ನಾಗಿಯೂ ಮಾಡಿದ್ದೇನೆ.
- 1 Chronicles 4:27 1 ಪೂರ್ವಕಾಲವೃತ್ತಾಂತ 4:27ಶಿಮ್ಮಿಗೆ ಹದಿನಾರು ಮಂದಿ ಕುಮಾರರೂ ಆರು ಮಂದಿ ಕುಮಾರ್ತೆಯರೂ ಇದ್ದರು. ಆದರೆ ಇವನ ಸಹೋದರರಿಗೆ ಬಹಳ ಮಕ್ಕಳಿರಲಿಲ್ಲ; ಅವರ ಸಮಸ್ತ ಸಂತತಿಯು ಯೆಹೂ ದದ ಮಕ್ಕಳ ಹಾಗೆ ಹೆಚ್ಚಾಗಲಿಲ್ಲ.
- 2 Chronicles 29:14 2 ಪೂರ್ವಕಾಲವೃತ್ತಾಂತ 29:14ಜೆಕರ್ಯನೂ ಮತ್ತನ್ಯನೂ ಹೆಮಾನನ ಮಕ್ಕಳಲ್ಲಿ ಯೆಹೀಯೇಲನೂ ಶಿಮ್ಮನೂ ಯೆದುತೂನನ ಮಕ್ಕಳಲ್ಲಿ ಶೆಮಾಯನೂ ಉಜ್ಜೀಯೇಲನೂ ಎದ್ದರು.
- 1 Kings 1:8 1 ಅರಸುಗಳು 1:8ಆದರೆ ಯಾಜಕ ನಾದ ಚಾದೋಕನೂ ಯೆಹೋಯಾದಾವನ ಮಗ ನಾದ ಬೆನಾಯನೂ ಪ್ರವಾದಿಯಾದ ನಾತಾನನೂ ಶಿಮ್ಮಿಯೂ ರೇಗಿಯೂ ದಾವೀದನ ಪರಾಕ್ರಮ ಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
- Exodus 6:16–26 ವಿಮೋಚನಕಾಂಡ 6:16–26ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಕುಮಾರರ ಹೆಸರುಗಳು ಇವೇ: ಗೇರ್ಷೋನ್ ಕೆಹಾತ್ ಮೆರಾರೀ. ಲೇವಿಯು ನೂರ ಮೂವತ್ತೇಳು ವರುಷ ಬದುಕಿದನು. ಗೇರ್ಷೋನನ ಕುಮಾರರು ಅವರ ಗೋತ್ರಗಳಿಗನುಸಾರವಾಗಿ: ಲಿಬ್ನೀ ಶಿವ್ಮೆಾಯರು. ಕೆಹಾತನ ಕುಮಾರರು: ಅಮ್ರಾಮ್ ಇಚ್ಹಾರ್ ಹೆಬ್ರೋನ್ ಉಜ್ಜೀಯೇಲ್. ಕೆಹಾತನು ಜೀವಿಸಿದ ವರುಷಗಳು ನೂರ ಮೂವತ್ತುಮೂರು. ಮೆರಾರೀಯ ಕುಮಾರರು: ಮಹ್ಲೀ ಮೂಷೀ. ವಂಶಾ ವಳಿಗಳ ಪ್ರಕಾರ ಇವರೇ ಲೇವಿಯ ಗೋತ್ರಗಳು. ಅಮ್ರಾಮನು ತನ್ನ ಸೋದರತ್ತೆಯಾದ ಯೋಕೆಬೆ ದಳನ್ನು ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ ಆರೋನನನ್ನೂ ಮೋಶೆಯನ್ನೂ ಹೆತ್ತಳು. ಅಮ್ರಾಮನು ಜೀವಿಸಿದ ಕಾಲ ನೂರ ಮೂವತ್ತೇಳು ವರುಷಗಳು. ಇಚ್ಹಾರನ ಕುಮಾರರು: ಕೋರಹ ನೆಫೆಗ್ ಜಿಕ್ರೀ. ಉಜ್ಜೀಯೇಲನ ಕುಮಾರರು: ವಿಾಷಾಯೇಲ್ ಎಲ್ಚಾಫಾನ್ ಸಿತ್ರೀ. ಆರೋನನು ಅವ್ಮೆಾನಾದಾಬನ ಮಗಳೂ ನಹಶೋನನ ಸಹೋದರಿಯೂ ಆದ ಎಲೀಶೇಬ ಳನ್ನು ತನ್ನ ಹೆಂಡತಿಯಾಗಿ ತಕ್ಕೊಂಡನು. ಆಕೆಯು ಅವನಿಗೆ--ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಇವರನ್ನು ಹೆತ್ತಳು. ಕೋರಹನ ಕುಮಾರರು: ಅಸ್ಸೀರ್ ಎಲ್ಕಾನಾ ಅಬೀಯಾಸಾಫ್ ಎಂಬವರು. ಇವರೇ ಕೋರಹೀಯರ ಗೋತ್ರಗಳು. ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಮಕ್ಕಳಲ್ಲಿ ಒಬ್ಬಳನ್ನು ತನಗೆ ಹೆಂಡತಿ ಯಾಗಿ ತಕ್ಕೊಂಡನು. ಆಕೆಯು ಅವನಿಗೆ--ಫಿನೇಹಾಸ ನನ್ನು ಹೆತ್ತಳು. ಗೋತ್ರಗಳ ಪ್ರಕಾರ ಇವರು ಲೇವಿ ಯರ ತಂದೆಗಳ ಮುಖ್ಯಸ್ಥರು. ಇಸ್ರಾಯೇಲ್ ಮಕ್ಕಳನ್ನು ಅವರ ಸೈನ್ಯಗಳ ಪ್ರಕಾರ ಐಗುಪ್ತದೊಳಗಿಂದ ಹೊರಗೆ ಬರಮಾಡ ಬೇಕೆಂದು ಕರ್ತನು ಯಾರಿಗೆ ಹೇಳಿದನೋ ಆ ಆರೋನ ಮೋಶೆ ಇವರೇ.
- 1 Chronicles 23:7 1 ಪೂರ್ವಕಾಲವೃತ್ತಾಂತ 23:7ಗೇರ್ಷೋನ್ಯರಲ್ಲಿ ಲದ್ದಾನನು ಶಿವ್ಮೆಾ: ಲದ್ದಾನನ ಕುಮಾರರು --
- Numbers 3:1–4 ಅರಣ್ಯಕಾಂಡ 3:1–4ಕರ್ತನು ಸೀನಾಯಿ ಪರ್ವತದಲ್ಲಿ ಮೋಶೆಯ ಸಂಗಡ ಮಾತನಾಡಿದ ದಿನದಲ್ಲಿ ಆರೋನನ ಮತ್ತು ಮೋಶೆಯ ಸಂತತಿಗಳು ಇವೇ: ಆರೋನನ ಮಕ್ಕಳ ಹೆಸರುಗಳು ಇವೇ; ಚೊಚ್ಚಲ ಮಗನು ನಾದಾಬನು, ತರುವಾಯ ಅಬೀಹೂ, ಎಲ್ಲಾಜಾರನು, ಈತಾಮಾರನು. ಅಭಿಷೇ ಕಿಸಲ್ಪಟ್ಟ ಯಾಜಕರಾದ ಆರೋನನ ಮಕ್ಕಳ ಹೆಸರು ಗಳು ಇವೇ; ಇವರನ್ನು ಯಾಜಕೋದ್ಯೋಗ ಮಾಡುವ ದಕ್ಕೆ ಅವನು ಪ್ರತಿಷ್ಠೆಮಾಡಿದನು. ನಾದಾಬನೂ ಅಬೀಹೂ ಕರ್ತನ ಸಮ್ಮುಖದಲ್ಲಿ ಅನ್ಯಬೆಂಕಿಯನ್ನು ಅರ್ಪಿಸಿದಾಗ ಸೀನಾಯಿ ಅರಣ್ಯದಲ್ಲಿ ಕರ್ತನ ಮುಂದೆ ಸತ್ತರು. ಅವರಿಗೆ ಮಕ್ಕಳು ಇರಲಿಲ್ಲ; ಹೀಗೆ ಎಲ್ಲಾಜಾ ರನು ಈತಾಮಾರನು ತಮ್ಮ ತಂದೆಯಾದ ಆರೋನನ ಎದುರಿನಲ್ಲಿ ಯಾಜಕೋದ್ಯೋಗವನ್ನು ಮಾಡಿದರು.
- 1 Chronicles 3:19 1 ಪೂರ್ವಕಾಲವೃತ್ತಾಂತ 3:19ಪೆದಾಯನ ಮಕ್ಕಳು--ಜೆರು ಬ್ಬಾಬೆಲನು, ಶಿವ್ಮೆಾಯು, ಜೆರುಬ್ಬಾಬೆಲನ ಮಕ್ಕಳುಮೆಷುಲ್ಲಾಮನು, ಹನನ್ಯನು, ಇವರ ಸಹೋದರಿ ಯಾದ ಶೆಲೋವಿಾತಳು.
- 1 Chronicles 23:10 1 ಪೂರ್ವಕಾಲವೃತ್ತಾಂತ 23:10ಇವರು ಲದ್ದಾನನ ಪಿತೃಗಳಲ್ಲಿ ಮುಖ್ಯಸ್ಥ ರಾಗಿದ್ದರು. ಶಿಮ್ಮನ ಕುಮಾರರು--ಯಹತನು ಜೀನನು ಯೆಯೂಷನು ಬೆರೀಯನು.
- 2 Samuel 16:5 2 ಸಮುವೇಲನು 16:5ಅರಸನಾದ ದಾವೀದನು ಬಹುರೀಮಿನ ವರೆಗೂ ಬಂದಾಗ ಇಗೋ, ಸೌಲನ ಗೋತ್ರದವನಾದಂಥ ಗೇರನ ಮಗನಾದ ಶಿಮ್ಮಿಯೆಂಬ ಹೆಸರುಳ್ಳ ಒಬ್ಬ ಮನುಷ್ಯನು ಅಲ್ಲಿಂದ ಹೊರಟು ದೂಷಿಸುತ್ತಾ ನಡೆದು ಬಂದನು.