Zechariah · chapter 12 · verse 3
Zechariah 12:3 in Kannada
ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
Aa dinadalli naanu yeroosalemannu ellaa janarige bhaaravaada kallaagi maaduttene; adannu ettuvavarellaru jajjalpaduvaru; aadare adakke virodhavaagi bhoomiya janaangagalellaa ottugoodikolluvavu.
Zechariah 12:3 in English
- King James Version (KJV)
- And in that day will I make Jerusalem a burdensome stone for all people: all that burden themselves with it shall be cut in pieces, though all the people of the earth be gathered together against it.
- World English Bible (WEB)
- It will happen in that day that I will make Jerusalem a burdensome stone for all the peoples. All who burden themselves with it will be severely wounded, and all the nations of the earth will be gathered together against it.
- American Standard Version (ASV)
- And it shall come to pass in that day, that I will make Jerusalem a burdensome stone for all the peoples; all that burden themselves with it shall be sore wounded; and all the nations of the earth shall be gathered together against it.
- Bible in Basic English (BBE)
- And it will come about in that day that I will make Jerusalem a stone of great weight for all the peoples; all those who take it up will be badly wounded; and all the nations of the earth will come together against it.
- Darby Translation (DBY)
- And it shall come to pass in that day [that] I will make Jerusalem a burdensome stone unto all peoples: all that burden themselves with it shall certainly be wounded, and all the nations of the earth shall be assembled together against it.
- Webster's Bible (WBS)
- And in that day will I make Jerusalem a burdensome stone for all people: all that burden themselves with it shall be cut in pieces, though all the people of the earth be assembled against it.
- Young's Literal Translation (YLT)
- And it hath come to pass, in that day, I make Jerusalem a burdensome stone to all the peoples, All loading it are completely pressed down, And gathered against it have been all nations of the earth.
Read in context
- 1ಇಸ್ರಾಯೇಲಿನ ವಿಷಯವಾದ ಕರ್ತನ ವಾಕ್ಯದ ಭಾರವು ಆಕಾಶವನ್ನು ಹರಡಿಸು ವಾತನೂ ಭೂಮಿಯ ಅಸ್ತಿವಾರವನ್ನು ಹಾಕುವಾತನೂ ಮನುಷ್ಯನ ಆತ್ಮವನ್ನು ಅವನೊಳಗೆ ರೂಪಿಸುವಾತನೂ ಆದ ಕರ್ತನು ಹೇಳುವದೇನಂದರೆ--
- 2ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ
- 3ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
- 4ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
- 5ಆಗ ಯೆಹೂದದ ದೊರೆ ಗಳು ತಮ್ಮ ಹೃದಯದಲ್ಲಿ--ಯೆರೂಸಲೇಮಿನ ನಿವಾಸಿ ಗಳು ಅವರ ದೇವರಾದ ಸೈನ್ಯಗಳ ಕರ್ತನಲ್ಲಿ ನಮಗೆ ಬಲವಾಗಿದ್ದಾರೆಂದು ಅವರು ಅಂದುಕೊಳ್ಳುವರು.
Cross references
- Matthew 21:44 ಮತ್ತಾಯನು 21:44ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಆದರೆ ಅದು ಯಾವನ ಮೇಲೆ ಬೀಳುವದೋ ಅವನನ್ನು ಅರೆದು ಪುಡಿಪುಡಿ ಮಾಡುವದು ಅಂದನು.
- Zechariah 14:2–4 ಜೆಕರ್ಯ 14:2–4ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ. ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು. ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
- Luke 20:18 ಲೂಕನು 20:18ಯಾವನಾದರೂ ಆ ಕಲ್ಲಿನ ಮೇಲೆ ಬಿದ್ದರೆ ತುಂಡುತುಂಡಾಗುವನು. ಆದರೆ ಇದು ಯಾರ ಮೇಲೆ ಬೀಳುವದೋ ಅವನನ್ನು ಅದು ಅರೆದು ಪುಡಿಪುಡಿ ಮಾಡುವದು ಅಂದನು.
- Ezekiel 38:1–23 ಯೆಹೆಜ್ಕೇಲನು 38:1–23ಕರ್ತನ ವಾಕ್ಯವು ಬಂದು ನನಗೆ ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಮೆಷೆಕ್ ಮತ್ತು ತೂಬಲಿನವರಿಗೆ ಮುಖ್ಯ ಪ್ರಭುಗಳಾ ಗಿರುವ ಮಾಗೋಗ್ ದೇಶದ ಗೋಗನಿಗೆ ನೀನು ಅಭಿಮುಖನಾಗಿ ಅವನಿಗೆ ವಿರುದ್ಧವಾಗಿ ಪ್ರವಾದಿಸು ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಮೆಷೆಕ್ ತೂಬಲಿಗೆ ಮುಖ್ಯ ಪ್ರಭುವಾದ ಗೋಗನೇ, ನಾನು ನಿನಗೆ ವಿರೋಧವಾಗಿದ್ದೇನೆ. ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ ನಿನ್ನ ದವಡೆಗಳಲ್ಲಿ ಕೊಕ್ಕೆಗಳನ್ನು ಹಾಕು ವೆನು; ನಾನು ನಿನ್ನನ್ನೂ ನಿನ್ನ ಎಲ್ಲಾ ಸೈನ್ಯವನ್ನೂ ಕುದುರೆಗಳನ್ನೂ ಕುದುರೆ ಸವಾರರನ್ನೂ ಮುಂದೆ ತರುವೆನು. ಇವರೆಲ್ಲರೂ ನಾನಾ ತರವಾದ ಆಯುಧ ಗಳನ್ನು ತೊಟ್ಟಿರುವರು, ಇವರೊಂದಿಗೆ ಖೇಡ್ಯವೂ ಮತ್ತು ಗುರಾಣಿಯೂ ಉಳ್ಳ ಮಹಾಸಮೂಹವನ್ನು ತರುವೆನು; ಇವರೆಲ್ಲರೂ ಕತ್ತಿಗಳನ್ನು ಹಿಡಿದಿರುವರು. ಅವರೊಂದಿಗೆ ಪರ್ಷಿಯಾ ಇಥಿಯೋಪ್ಯ ಲಿಬಿಯಾ ಇವರೆಲ್ಲರೊಂದಿಗೆ ಗುರಾಣಿ ಮತ್ತು ಶಿರಸ್ತ್ರಾಣಗಳು ಇದ್ದವು. ಗೋಮೆರ್ ಮತ್ತು ಅವನ ಎಲ್ಲಾ ದಳಗಳನ್ನು ಉತ್ತರ ದಿಕ್ಕಿನ ತೋಗರ್ಮನ ಮನೆತನದವರನ್ನೂ ಅವನ ಎಲ್ಲಾ ದಳಗಳನ್ನೂ ನಿನ್ನ ಸಂಗಡವಿರುವ ಅನೇಕ ಜನರನ್ನೂ ಹೊರಗೆ ತರುವೆನು. ನೀನು ಸಿದ್ಧನಾಗಿ ನಿನ್ನ ಸಂಗಡ ಕೂಡಿ ಬಂದಿರುವ ನಿನ್ನ ಎಲ್ಲಾ ಕೂಟಗಳನ್ನು ಸಿದ್ಧಮಾಡಿಕೊಂಡು ನೀನು ಅವರಿಗೆ ಕಾವಲಿರು. ಬಹಳ ದಿವಸಗಳಾದ ಮೇಲೆ ನಾನು ನಿನ್ನನ್ನು ಪರಿಶೀ ಲಿಸುತ್ತೇನೆ; ವರುಷಗಳ ಅಂತ್ಯದಲ್ಲಿ ನೀನು ಕತ್ತಿಯಿಂದ ಹಿಂತಿರುಗಿಸಲ್ಪಟ್ಟಂಥ ದೇಶಕ್ಕೂ ಯಾವಾಗಲೂ ಬೀಡಾ ಗಿದ್ದ ಇಸ್ರಾಯೇಲ್ ಪರ್ವತಗಳ ಮೇಲೆಯೂ ಜನಾಂಗಗಳೊಳಗಿಂದ ಮುಂದೆ ತರಲ್ಪಟ್ಟು ಎಲ್ಲರೂ ಭದ್ರವಾಗಿ ವಾಸಿಸುವವರ ಬಳಿಗೂ ಬರುವಿ. ನೀನು ಮೇಲೇರಿ ಬಿರುಗಾಳಿಯಂತೆ ಬರುವಿ. ನೀನೂ ನಿನ್ನ ಎಲ್ಲಾ ದಂಡುಗಳೂ ಮತ್ತು ಅನೇಕ ಜನರ ಸಹಿತವಾಗಿ ಮೇಘದಂತೆ ದೇಶವನ್ನು ಮುಚ್ಚುವಿರಿ. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದೂ ಸಹ ಆಗುವದು, ಅದೇ ಸಮಯದಲ್ಲಿ ನಿನ್ನ ಮನಸ್ಸಿಗೆ ಕೆಲವು ಸಂಗತಿಗಳು ಬರುವವು ನೀನು ಒಂದು ಕೆಟ್ಟಯೋಚನೆಯನ್ನು ಯೋಚಿಸುವಿ, ನೀನು ಪೌಳಿಗೋಡೆಯಿಲ್ಲದ ಹಳ್ಳಿಗಳುಳ್ಳ ದೇಶಕ್ಕೆ ನಾನು ಹೋಗುವೆನು; ಪೌಳಿ ಗೋಡೆಗಳಿಲ್ಲದೆ ಇಲ್ಲವೆ ಬಾಗಲುಗಳು ಅಗುಳಿಗಳು ಇಲ್ಲದೆ ಅದೂ ಅವರು ವಿಶ್ರಾಂತಿಯಿಂದಲೂ ಸುಖ ವಾಗಿ ವಾಸಿಸುತ್ತಿರುವಾಗ ನಾನು ಹೋಗಿ, ಸುಲಿಗೆ ಯನ್ನು ಕೊಳ್ಳೆಯನ್ನು ತೆಗೆದುಕೊಳ್ಳುವೆನು; ಹೀಗೆ ನಿವಾಸಗಳಿದ್ದು ಬೀಡಾಗಿದ್ದ ಸ್ಥಳಗಳಲ್ಲಿಯೂ ಜನಾಂಗ ಗಳಿಂದ ಕೂಡಿಸಲ್ಪಟ್ಟಂತಹ ದನಗಳೂ ಸಂಪತ್ತೂ ಉಳ್ಳಂಥ ಮತ್ತು ಭೂಮಿಯ ಮಧ್ಯದಲ್ಲಿ ವಾಸಮಾಡು ವಂಥ ಜನರ ಮೇಲೆಯೂ ಕೈಹಾಕವೆನು ಎಂದು ಹೇಳುವಿ. ಶೇಬಾ, ದೇದಾನ್ ಮತ್ತು ತಾರ್ಷೀಷಿನ ವರ್ತಕರು, ಎಲ್ಲಾ ಪ್ರಾಯದ ಸಿಂಹಗಳೊಂದಿಗೆ ಅಲ್ಲಿ ನಿನಗೆ--ನೀನು ಸುಲಿಗೆ ತೆಗೆದುಕೊಳ್ಳಬೇಕೆಂದು ಬಂದಿಯಾ ಕೊಳ್ಳೆಹೊಡೆಯುವದಕ್ಕಾಗಿಯೇ ನಿನ್ನ ತಂಡ ವನ್ನು ಕೂಡಿಸಿದೆಯೋ? ಬಂಗಾರ ಮತ್ತು ಬೆಳ್ಳಿಯನ್ನು ಹೊತ್ತುಕೊಂಡು ದನಗಳನ್ನು ಸಂಪತ್ತನ್ನೂ ತೆಗೆದು ಕೊಂಡು ಮಹಾಸುಲಿಗೆ ತೆಗೆದುಕೊಳ್ಳಬೇಕೆಂದೋ ಅನ್ನುವರು. ಆದದರಿಂದ ಮನುಷ್ಯಪುತ್ರನೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಗೋಗನಿಗೆ ಪ್ರವಾ ದಿಸು ಮತ್ತು ಹೇಳು--ಯಾವಾಗ ನನ್ನ ಜನರಾದ ಇಸ್ರಾಯೇಲ್ಯರು ಸುಖವಾಗಿ ವಾಸಿಸುವರೋ ಆ ದಿನದಲ್ಲಿ ಅದು ನಿನಗೆ ತಿಳಿಯುವುದಿಲ್ಲವೋ ನೀನು ಉತ್ತರ ಭಾಗಗಳ ನಿನ್ನ ಸ್ಥಳದಿಂದ ಬರುವಿ; ನೀನೂ ನಿನ್ನ ಸಂಗಡ ಅನೇಕ ಜನರೂ ಕುದುರೆಗಳನ್ನು ಹತ್ತಿದ ವರಾಗಿ ಬಲವಾದ ಸೈನ್ಯವಾಗಿಯೂ ಮಹಾದಂಡಾ ಗಿಯೂ ಬರುವಿರಿ. ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು. ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ? ಆ ದಿನದಲ್ಲಿ ಗೋಗನು ಇಸ್ರಾಯೇಲ್ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ. ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್ ದೇಶದಲ್ಲಿ ಮಹಾಕಂಪನ ಉಂಟಾಗು ವದು; ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು. ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು. ನಾನು ಅವನಿಗೆ ವಿರುದ್ಧ ವಾಗಿ ವ್ಯಾಧಿಯಿಂದಲೂ ರಕ್ತದಿಂದಲೂ ವಾದಿಸು ತ್ತೇನೆ. ನಾನು ಅವನ ಮೇಲೆ ಅವನ ದಂಡುಗಳ ಮೇಲೆ ಮಳೆಯನ್ನು ಸುರಿಸುವೆನು. ಅವನೊಂದಿಗಿರುವ ಅನೇಕ ಜನರ ಮೇಲೆ ಬೆಂಕಿಯನ್ನೂ ಗಂಧಕವನ್ನೂ ನುಣುಪಾದ ಕಲ್ಲುಗಳಿಂದ ತುಂಬಿ ಹರಿಯುವಂತಹ ಮಹಾ ಮಳೆಯನ್ನು ಸುರಿಸುವೆನು.ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು. ಹೀಗೆ ನನ್ನೊಂದಿಗೆ ನಾನೇ ಹೆಚ್ಚಿಸಿಕೊಂಡು ಮತ್ತು ನನಗೆ ನಾನೇ ಪರಿಶುದ್ಧಪಡಿಸಿಕೊಂಡು ಅನೇಕ ಜನಾಂಗಗಳ ಕಣ್ಣುಗಳ ಮುಂದೆ ನಾನು ತಿಳಿಯಪಡಿಸಿಕೊಳ್ಳುತ್ತೇನೆ. ಅವರು ನಾನೇ ಕರ್ತನೆಂದು ತಿಳಿದುಕೊಳ್ಳುವರು.
- Zechariah 14:6 ಜೆಕರ್ಯ 14:6ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
- Isaiah 66:14–16 ಯೆಶಾಯ 66:14–16ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು. ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Zechariah 13:1 ಜೆಕರ್ಯ 13:1ಆ ದಿನದಲ್ಲಿ ದಾವೀದನ ಮನೆತನದ ವರಿಗೂ ಯೆರೂಸಲೇಮಿನ ನಿವಾಸಿಗ ಳಿಗೂ ಪಾಪದ ನಿಮಿತ್ತ ಮತ್ತು ಅಶುದ್ಧತ್ವದ ನಿಮಿತ್ತ ಬುಗ್ಗೆ ತೆರೆಯಲ್ಪಡುವದು.
- Zechariah 12:11 ಜೆಕರ್ಯ 12:11ಮೆಗಿದ್ದೋವಿನ ತಗ್ಗಿನಲ್ಲಾದ ಹದದ್ ರಿಮ್ಮೊನಿನ ಗೋಳಾಟದ ಹಾಗೆ ಆ ದಿನ ದಲ್ಲಿ ಯೆರೂಸಲೇಮಿನೊಳಗೆ ಮಹಾಗೋಳಾಟವಿ ರುವದು.
- Zechariah 12:6 ಜೆಕರ್ಯ 12:6ಆ ದಿನದಲ್ಲಿ ನಾನು ಯೆಹೂದದ ದೊರೆಗಳನ್ನು ಕಟ್ಟಿಗೆಯ ಮಧ್ಯದಲ್ಲಿರುವ ಬೆಂಕಿಯ ಒಲೆಯ ಹಾಗೆಯೂ ಸಿವುಡುಗಳಲ್ಲಿರುವ ಬೆಂಕಿಯ ಕೊಳ್ಳಿಯ ಹಾಗೆಯೂ ಮಾಡುವೆನು. ಅವರು ಬಲಗಡೆಯಲ್ಲಿಯೂ ಎಡಗಡೆ ಯಲ್ಲಿಯೂ ಸುತ್ತಲಿರುವ ಎಲ್ಲಾ ಜನಗಳನ್ನು ನುಂಗಿ ಬಿಡುವರು; ಯೆರೂಸಲೇಮು ತಿರುಗಿ ತನ್ನ ಸ್ಥಳದಲ್ಲಿ, ಯೆರೂಸಲೇಮಿನಲ್ಲಿಯೇ ವಾಸಿಸುವದು.
- Micah 7:15–17 ಮೀಕ 7:15–17ನೀನು ಐಗುಪ್ತ ದೇಶದೊಳಗಿಂದ ಹೊರಡುವ ದಿವಸಗಳ ಹಾಗೆ ಅವನಿಗೆ ಆಶ್ಚರ್ಯವಾದವುಗಳನ್ನು ತೋರಿಸುವೆನು. ಜನಾಂಗಗಳು ನೋಡಿ ತಮ್ಮ ತ್ರಾಣಕ್ಕೆಲ್ಲಾ ನಾಚಿಕೆ ಪಡುವರು; ತಮ್ಮ ಕೈಗಳನ್ನು ಬಾಯಿಯ ಮೇಲೆ ಇಡುವರು; ಅವರ ಕಿವಿಗಳು ಕಿವುಡಾಗಿ ಹೋಗುವವು. ಅವರು ಸರ್ಪದಂತೆ ಧೂಳನ್ನು ನೆಕ್ಕುವರು; ಭೂಮಿಯ ಕ್ರಿಮಿಗಳಂತೆ ತಾವು ರಂಧ್ರಗಳಿಂದ ಹೊರಗೆ ಬರುವರು; ನಮ್ಮ ದೇವರಾದ ಕರ್ತನಿಗೆ ಅವರು ಹೆದರುವರು; ನಿನಗೆ ಭಯಪಡುವರು.
- Zechariah 14:8–9 ಜೆಕರ್ಯ 14:8–9ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು. ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.