Zechariah 13:8 in Kannada
ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Kartanu--idallade samasta deshadalli aaguvadenandare-- adaralli eradu paalu kadiyalpattu saayuvadu; aadare moorane paalu adaralli bidalpaduvadu.moorane paalannu naanu benkiyalli haaki belliyannu shuddhamaaduvante shuddhamaaduvenu; bangaaravu shodhisalpaduva prakaara avarannu shodhisuvenu; avaru nanna hesarannu kareyuvaru; naanu avarige uttara koduvenu; naanu--idu nanna janavendu heluvenu; kartanu nanna devarendu avaru heluvaru endu heluttaane.
Zechariah 13:8 in English
- King James Version (KJV)
- And it shall come to pass, [that] in all the land, saith the LORD, two parts therein shall be cut off [and] die; but the third shall be left therein.
- World English Bible (WEB)
- It shall happen that in all the land,” says the LORD, “two parts in it will be cut off and die; but the third will be left in it.
- American Standard Version (ASV)
- And it shall come to pass, that in all the land, saith Jehovah, two parts therein shall be cut off and die; but the third shall be left therein.
- Bible in Basic English (BBE)
- And it will come about that in all the land, says the Lord, two parts of it will be cut off and come to an end; but the third will be still living there.
- Darby Translation (DBY)
- And it shall come to pass in all the land, saith Jehovah, two parts therein shall be cut off [and] die; but the third shall be left therein.
- Webster's Bible (WBS)
- And it shall come to pass, [that] in all the land, saith the LORD, two parts therein shall be cut off [and] die; but the third shall be left therein.
- Young's Literal Translation (YLT)
- And it hath come to pass, In all the land, an affirmation of Jehovah, Two parts in it are cut off — they expire, And the third is left in it.
Read in context
- 6ಆಗ ಒಬ್ಬನು ಅವನಿಗೆ--ನಿನ್ನ ಕೈಗಳಲ್ಲಿರುವ ಈ ಗಾಯಗಳು ಏನು ಎಂದು ಹೇಳುವನು. ಆಗ ಅವನು--ನನ್ನ ಸ್ನೇಹಿತರ ಮನೆಯಲ್ಲಿ ನನಗುಂಟಾದ ಗಾಯಗಳೇ ಅನ್ನುವನು.
- 7ಓ ಕತ್ತಿಯೇ, ನನ್ನ ಕುರುಬನಿಗೆ ವಿರೋಧವಾಗಿ, ನನ್ನ ಸಂಗಡಿಗನಾದ ಮನುಷ್ಯನಿಗೆ ವಿರೋಧವಾಗಿ, ಎಚ್ಚರವಾಗು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ; ಕುರುಬನನ್ನು ಹೊಡೆ, ಆಗ ಕುರಿಗಳು ಚದರಿ ಹೋಗುವವು; ಆದರೆ ಚಿಕ್ಕವುಗಳ ಮೇಲೆ ನನ್ನ ಕೈಯನ್ನು ತಿರುಗಿಸುವೆನು ಎಂದು ಹೇಳುತ್ತಾನೆ.
- 8ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
- 9ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Cross references
- Ezekiel 5:12 ಯೆಹೆಜ್ಕೇಲನು 5:12ನಿನ್ನಲ್ಲಿಯ ಮೂರನೆಯ ಒಂದು ಪಾಲು ವ್ಯಾಧಿಗಳಿಂದ ಸಾಯು ವರು, ಕ್ಷಾಮದಿಂದ ನಿನ್ನಲ್ಲಿ ಅವರು ನಾಶವಾಗುವರು; ಮೂರನೆಯ ಒಂದು ಪಾಲು ನಿನ್ನ ಸುತ್ತಲೂ ಕತ್ತಿಯಿಂದ ಬೀಳುವರು; ಮೂರನೆಯ ಒಂದು ಪಾಲನ್ನು ಎಲ್ಲಾ ದಿಕ್ಕುಗಳಿಗೆ (ಗಾಳಿಗೆ ತೂರಿ) ಚದರಿಸಿ ಅವರ ಮೇಲೆ ಕತ್ತಿಯನ್ನು ಬೀಸುವೆನು.
- Revelation 16:19 ಪ್ರಕಟನೆ 16:19ಆ ಮಹಾಪಟ್ಟಣವು ಮೂರು ಭಾಗಗಳಾಗಿ ವಿಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು; ಇದಲ್ಲದೆ ಮಹಾಬಾಬೆಲಿಗೆ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಕೊಡು ವಂತೆ ದೇವರ ಮುಂದೆ ಅದು ಜ್ಞಾಪಕಕ್ಕೆ ಬಂತು.
- Ezekiel 5:2–4 ಯೆಹೆಜ್ಕೇಲನು 5:2–4ಅದರ ಮೂರನೆಯ ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು, ಮೂರನೆಯ ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು; ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಕತ್ತಿಯನ್ನು ಬೀಸುವೆನು ನೀನು ಅವುಗಳೊಳಗಿಂದ ಕೆಲವನ್ನು ಲೆಕ್ಕದಲ್ಲಿ ತೆಗೆದು ನಿನ್ನ ಸೆರಗುಗಳಲ್ಲಿ ಕಟ್ಟು ಅಂದನು. ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
- Malachi 4:1–3 ಮಲಾಕಿಯ 4:1–3ಇಗೋ, ಆ ದಿನವು ಬರುತ್ತದೆ; ಅದು ಒಲೆಯ ಹಾಗೆ ಉರಿಯುವದು; ಆಗ ಗರ್ವಿಷ್ಠರೆಲ್ಲರೂ ಹೌದು, ಕೆಟ್ಟದ್ದನ್ನು ಮಾಡುವವ ರೆಲ್ಲರೂ ಹುಲ್ಲಿನಂತಿರುವರು; ಬರುವ ಆ ದಿನವು ಅವರನ್ನು ಸುಟ್ಟುಬಿಡುವದು; ಬೇರನ್ನಾದರೂ ಕೊಂಬೆ ಯನ್ನಾದರೂ ಅವರಿಗೆ ಬಿಡದು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ. ದುಷ್ಟರನ್ನು ತುಳಿದುಬಿಡುವಿರಿ; ಯಾಕಂದರೆ ನಾನು ಕಾರ್ಯ ಸಾಧಿಸುವ ದಿನದಲ್ಲಿ ಅವರು ನಿಮ್ಮ ಪಾದಗಳ ಕೆಳಗೆ ಬೂದಿಯಾಗಿರುವರೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Revelation 8:7–12 ಪ್ರಕಟನೆ 8:7–12ಮೊದಲನೆಯ ದೂತನು ಊದಿದಾಗ ರಕ್ತದಲ್ಲಿ ಕಲಸಿದ್ದ ಆನೆಕಲ್ಲಿನ ಮಳೆಯೂ ಬೆಂಕಿಯೂ ಭೂಮಿಗೆ ಸುರಿಸಲ್ಪಟ್ಟವು; ಮರಗಳೊಳಗೆ ಮೂರರಲ್ಲಿ ಒಂದು ಭಾಗ ಸುಟ್ಟುಹೋಯಿತು; ಹಸುರು ಹುಲ್ಲೆಲ್ಲಾ ಸುಟ್ಟುಹೋಯಿತು. ಎರಡನೆಯ ದೂತನು ಊದಿದಾಗ ಬೆಂಕಿಯಿಂದ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿದ್ದದ್ದು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದ ಮೂರ ರಲ್ಲಿ ಒಂದು ಭಾಗ ರಕ್ತವಾಯಿತು; ಸಮುದ್ರದಲ್ಲಿರುವ ಪ್ರಾಣವಿದ್ದ ಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು. ಮೂರನೆಯ ದೂತನು ಊದಿದಾಗ ದೀಪ ದಂತೆ ಉರಿಯುವ ಒಂದು ದೊಡ್ಡ ನಕ್ಷತ್ರವು ಆಕಾಶ ದಿಂದ ಬಿತ್ತು. ಅದು ನದಿಗಳೊಳಗೆ ಮೂರರಲ್ಲಿ ಒಂದು ಭಾಗದ ಮೇಲೆಯೂ ನೀರಿನ ಒರತೆಗಳ ಮೇಲೆಯೂ ಬಿತ್ತು. ಆ ನಕ್ಷತ್ರಕ್ಕೆ ಮಾಚಿಪತ್ರೆ ಎಂದು ಹೆಸರು. ನೀರಿನಲ್ಲಿ ಮೂರರೊಳಗೆ ಒಂದು ಭಾಗ ಮಾಚಿಪತ್ರೆ ಯಾಯಿತು. ಆ ನೀರು ವಿಷವಾದದ್ದರಿಂದ ಮನುಷ್ಯರಲ್ಲಿ ಬಹಳ ಮಂದಿ ಸತ್ತರು. ನಾಲ್ಕನೆಯ ದೂತನು ಊದಿದಾಗ ಸೂರ್ಯನ ಮೂರರಲ್ಲಿ ಒಂದು ಭಾಗವೂ ಚಂದ್ರನ ಮೂರರಲ್ಲಿ ಒಂದು ಭಾಗವೂ ನಕ್ಷತ್ರಗಳ ಮೂರರಲ್ಲಿ ಒಂದು ಭಾಗವೂ ಒಡೆಯಲ್ಪಟ್ಟದ್ದರಿಂದ ಮೂರನೇ ಭಾಗವು ಕತ್ತಲಾಯಿತು; ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು; ರಾತ್ರಿಯು ಹಾಗೆಯೇ ಆಆಮೇಲೆ ನಾನು ನೋಡಲಾಗಿ ಇಗೋ, ಒಬ್ಬ ದೂತನು ಆಕಾಶ ಮಧ್ಯದಲ್ಲಿ ಹಾರುತ್ತಾ--ಇನ್ನೂ ಊದಬೇಕಾಗಿರುವ ಮೂವರು ದೂತರ ಮಿಕ್ಕಾದ ತುತೂರಿಯ ಧ್ವನಿಗಳು ಉಂಟಾಗುವಾಗ ಭೂನಿವಾಸಿ ಗಳಿಗೆ ಅಯ್ಯೋ, ಅಯ್ಯೋ, ಅಯ್ಯೋ ಎಂದು ಮಹಾ ಶಬ್ದದಿಂದ ಹೇಳುವದನ್ನು ಕೇಳಿದೆನು.
- Luke 23:28–30 ಲೂಕನು 23:28–30ಆದರೆ ಯೇಸು ಅವರ ಕಡೆಗೆ ತಿರುಗಿ ಕೊಂಡು--ಯೆರೂಸಲೇಮಿನ ಕುಮಾರ್ತೆಯರೇ, ನನ ಗಾಗಿ ಅಳಬೇಡಿರಿ; ಆದರೆ ನಿಮಗಾಗಿಯೂ ನಿಮ್ಮ ಮಕ್ಕಳಿಗಾಗಿಯೂ ಅಳಿರಿ. ಯಾಕಂದರೆ--ಇಗೋ, ಬಂಜೆಯರೂ ಎಂದಿಗೂ ಗರ್ಭಿಣಿಯಾಗದವರೂ ಎಂದಿಗೂ ಮೊಲೆ ಕುಡಿಸದವರೂ ಧನ್ಯರು ಎಂದು ಹೇಳುವ ದಿವಸಗಳು ಬರುತ್ತವೆ. ಆಗ ಅವರು ಬೆಟ್ಟಗಳಿಗೆ--ನಮ್ಮ ಮೇಲೆ ಬೀಳಿರಿ; ಗುಡ್ಡಗಳಿಗೆ-- ನಮ್ಮನ್ನು ಮುಚ್ಚಿಕೊಳ್ಳಿರಿ ಎಂದು ಹೇಳಲಾರಂಭಿಸು ವರು.
- Matthew 24:21–22 ಮತ್ತಾಯನು 24:21–22ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Amos 9:8–9 ಆಮೋಸ 9:8–9ಇಗೋ, ದೇವರಾದ ಕರ್ತನ ಕಣ್ಣುಗಳು ಪಾಪವುಳ್ಳ ರಾಜ್ಯದ ಮೇಲಿವೆ; ನಾನು ಅದನ್ನು ಭೂಮಿಯ ಮೇಲಿನಿಂದ ನಾಶಮಾಡುವೆನು. ಆದರೆ ಯಾಕೋ ಬಿನ ಮನೆತನದವರನ್ನು ನಾನು ನಿಜವಾಗಿ ನಾಶ ಮಾಡುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಇಗೋ, ಮೊರದಲ್ಲಿ ಧಾನ್ಯವನ್ನು ಕೇರುವಂತೆ ನಾನು ಆಜ್ಞಾಪಿಸಿ ಇಸ್ರಾಯೇಲಿನ ಮನೆತನದವ ರನ್ನು ಎಲ್ಲಾ ಜನಾಂಗಗಳಲ್ಲಿ ಕೇರುವೆನು; ಆದಾಗ್ಯೂ ಒಂದು ಕಾಳಾದರೂ ನೆಲಕ್ಕೆ ಬೀಳುವದಿಲ್ಲ.
- Zechariah 14:1–2 ಜೆಕರ್ಯ 14:1–2ಇಗೋ, ಕರ್ತನ ದಿನವು ಬರುತ್ತದೆ. ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- Luke 19:41–44 ಲೂಕನು 19:41–44ತರುವಾಯ ಆತನು ಸವಿಾಪಿಸಿದಾಗ ಪಟ್ಟಣ ವನ್ನು ನೋಡಿ ಅದರ ವಿಷಯವಾಗಿ ಅತ್ತು-- ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Zechariah 11:6–9 ಜೆಕರ್ಯ 11:6–9ನಾನು ದೇಶದ ನಿವಾಸಿಗಳನ್ನು ಇನ್ನು ಕನಿಕರಿಸುವದೇ ಇಲ್ಲ ಎಂದು ಕರ್ತನು ಅನ್ನುತ್ತಾನೆ; ಆದರೆ ಇಗೋ, ನಾನು ಒಬ್ಬೊ ಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ತನ್ನ ಅರಸನ ಕೈಗೂ ಒಪ್ಪಿಸುವೆನು; ಅವರು ದೇಶವನ್ನು ಹೊಡೆ ಯುವರು; ಅವರ ಕೈಯೊಳಗಿಂದ ನಾನು ಅವರನ್ನು ತಪ್ಪಿಸುವದಿಲ್ಲ. ಆಗ ಕೊಯ್ಗುರಿಗಳ ಮಂದೆ ಯನ್ನು ಹೌದು, ಬಡವಾದ ಮಂದೆಯನ್ನೇ ಮೇಯಿಸಿದೆನು; ನನಗಾಗಿ ಎರಡು ಕೋಲುಗಳನ್ನು ತಕ್ಕೊಂಡೆನು; ಒಂದಕ್ಕೆ ಸೌಂದರ್ಯ ಎಂದೂ ಮತ್ತೊಂದಕ್ಕೆ ಬಂಧ ಗಳೆಂದೂ ಹೆಸರಿಟ್ಟೆನು; ಹೀಗೆ ಮಂದೆಯನ್ನು ಮೇಯಿ ಸಿದೆನು. ಇದಲ್ಲದೆ ಒಂದೇ ತಿಂಗಳಲ್ಲಿ ಮೂರು ಕುರುಬರನ್ನು ತೆಗೆದುಹಾಕಿದೆನು; ನನ್ನ ಆತ್ಮವು ಅವರನ್ನು ಹೇಸಿಕೊಂಡಿತು; ಅವರ ಆತ್ಮವು ಸಹ ನನ್ನನ್ನು ಹೇಸಿ ಕೊಂಡಿತು. ಆಗ ನಾನು ಹೇಳಿದ್ದೇನಂದರೆ-- ನಾನು ನಿಮ್ಮನ್ನು ಮೇಯಿಸುವದಿಲ್ಲ; ಸಾಯುವಂಥದ್ದು ಸಾಯಲಿ; ಕೆಡುವಂಥದ್ದು ಕೆಡಲಿ; ಮಿಕ್ಕಾದವುಗಳ ಒಂದರ ಮಾಂಸವನ್ನು ಒಂದು ತಿನ್ನಲಿ.