Zechariah · chapter 14 · verse 2
Zechariah 14:2 in Kannada
ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
Aaga ninna kolleyu ninna madhyadalli vibhaagisa lpaduvadu; naanu janaangagalannellaa yeroosa lemige virodhavaagi yuddhakke koodisuvenu; pattanavu hidiyalpaduvadu; manegalu sulu kollalpaduvavu, hengasaru kedisalpaduvaru, pattanada aravaasi janaru serege hoguvaru; aadare ulida janarellaru pattanadolaginda tegedubidalpaduvadilla.
Zechariah 14:2 in English
- King James Version (KJV)
- For I will gather all nations against Jerusalem to battle; and the city shall be taken, and the houses rifled, and the women ravished; and half of the city shall go forth into captivity, and the residue of the people shall not be cut off from the city.
- World English Bible (WEB)
- For I will gather all nations against Jerusalem to battle; and the city will be taken, the houses rifled, and the women ravished. Half of the city will go out into captivity, and the rest of the people will not be cut off from the city.
- American Standard Version (ASV)
- For I will gather all nations against Jerusalem to battle; and the city shall be taken, and the houses rifled, and the women ravished; and half of the city shall go forth into captivity, and the residue of the people shall not be cut off from the city.
- Bible in Basic English (BBE)
- For I will get all the nations together to make war against Jerusalem; and the town will be overcome, and the goods taken from the houses, and the women taken by force: and half the town will go away as prisoners, and the rest of the people will not be cut off from the town.
- Darby Translation (DBY)
- And I will assemble all the nations against Jerusalem to battle; and the city shall be taken, and the houses rifled, and the women ravished; and half of the city shall go forth into captivity; and the rest of the people shall not be cut off from the city.
- Webster's Bible (WBS)
- For I will gather all nations against Jerusalem to battle; and the city shall be taken, and the houses rifled, and the women ravished; and half of the city shall go forth into captivity, and the residue of the people shall not be cut off from the city.
- Young's Literal Translation (YLT)
- And I have gathered all the nations unto Jerusalem to battle, And captured hath been the city, And spoiled have been the houses, And the women are lain with, Gone forth hath half the city in a removal, And the remnant of the people are not cut off from the city.
Read in context
- 1ಇಗೋ, ಕರ್ತನ ದಿನವು ಬರುತ್ತದೆ.
- 2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- 3ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- 4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
Cross references
- Luke 21:20–24 ಲೂಕನು 21:20–24ಆದರೆ ಸೈನ್ಯಗಳು ಯೆರೂಸಲೇ ಮನ್ನು ಮುತ್ತಿಗೆ ಹಾಕುವದನ್ನು ನೀವು ನೋಡುವಾಗ ಅದು ಹಾಳಾಗುವ ಕಾಲವು ಸವಿಾಪಿಸಿದೆ ಎಂದು ತಿಳಿದುಕೊಳ್ಳಿರಿ. ಆಗ ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ; ಅದರ ಮಧ್ಯದಲ್ಲಿ ರುವವರು ಹೊರಟುಹೋಗಲಿ; ಇದಲ್ಲದೆ ಹಳ್ಳಿಗಳಲ್ಲಿ ಇರುವವರು ಅವುಗಳಲ್ಲಿ ಪ್ರವೇಶಿಸದೆ ಇರಲಿ. ಬರೆದಿರುವವುಗಳೆಲ್ಲವೂ ನೆರವೇರುವಂತೆ ಇವು ಮುಯ್ಯಿತೀರಿಸುವ ದಿವಸಗಳಾಗಿವೆ. ಆದರೆ ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆ ಕುಡಿಸುವ ವರಿಗೂ ಅಯ್ಯೊ! ಯಾಕಂದರೆ ದೇಶದಲ್ಲಿ ಮಹಾ ವಿಪತ್ತೂ ಈ ಜನರ ಮೇಲೆ ಕೋಪವೂ ಆಗ ಇರು ವದು. ಇದಲ್ಲದೆ ಅವರು ಕತ್ತಿಯ ಬಾಯಿಗೆ ಬೀಳುವರು. ಸೆರೆಯಾಗಿ ಎಲ್ಲಾ ಜನಾಂಗಗಳಲ್ಲಿ ಒಯ್ಯ ಲ್ಪಡುವರು;ಅನ್ಯಜನಗಳ ಕಾಲಗಳು ಪರಿಪೂರ್ಣ ವಾಗುವ ವರೆಗೆ ಯೆರೂಸಲೇಮು ಅನ್ಯಜನಗಳಿಂದ ತುಳಿದಾಡಲ್ಪಡುವದು.
- Romans 9:27–29 ರೋಮಾಪುರದವರಿಗೆ 9:27–29ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ. ಆತನು ನೀತಿಯಲ್ಲಿ ಕಾರ್ಯವನ್ನು ಕ್ಲುಪ್ತಮಾಡಿ ಪೂರ್ತಿಗೊಳಿಸುತ್ತಾನೆ; ಕಾರಣವೇ ನಂದರೆ, ಕರ್ತನು ಭೂಮಿಯ ಮೇಲೆ ಒಂದು ಕ್ಲುಪ್ತ ವಾದ ಕಾರ್ಯವನ್ನು ಮಾಡುವನು. ಯೆಶಾಯನು ಮುಂದಾಗಿ--ಸೈನ್ಯಗಳ ಕರ್ತನು ನಮಗಾಗಿ ಸಂತಾನ ವನ್ನು ಉಳಿಸದೆ ಹೋಗಿದ್ದರೆ ನಾವು ಸೊದೋಮಿನ ಹಾಗೆ ಇರುತ್ತಿದ್ದೆವು; ಗೊಮೋರದ ಸ್ಥಿತಿಯು ನಮ್ಮದಾ ಗುತ್ತಿತ್ತು ಎಂದು ಹೇಳಿದನು.
- Isaiah 13:16 ಯೆಶಾಯ 13:16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- Matthew 24:19–22 ಮತ್ತಾಯನು 24:19–22ಆ ದಿವಸಗಳಲ್ಲಿ ಗರ್ಭಿಣಿಯರಿಗೂ ಮೊಲೆಕುಡಿಸುವ ಕೂಸುಗಳಿದ್ದ ವರಿಗೂ ಅಯ್ಯೋ! ಆದರೆ ನಿಮ್ಮ ಪಲಾಯನವು ಚಳಿಗಾಲದಲ್ಲಾಗಲೀ ಸಬ್ಬತ್ತಿನ ದಿನದಲ್ಲಾಗಲೀ ಆಗದಂತೆ ಪ್ರಾರ್ಥಿಸಿರಿ. ಅಂಥ ಮಹಾ ಸಂಕಟವು ಲೋಕಾದಿಯಿಂದ ಇಂದಿನವರೆಗೂ ಆಗಲಿಲ್ಲ, ಆಮೇಲೆ ಎಂದಿಗೂ ಆಗುವದಿಲ್ಲ. ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Mark 13:14 ಮಾರ್ಕನು 13:14ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
- Matthew 24:15–16 ಮತ್ತಾಯನು 24:15–16ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ) ಯೂದಾಯದಲ್ಲಿ ದ್ದವರು ಬೆಟ್ಟಗಳಿಗೆ ಓಡಿ ಹೋಗಲಿ;
- Galatians 4:26–27 ಗಲಾತ್ಯದವರಿಗೆ 4:26–27ಆದರೆ ಮೇಲಣ ಯೆರೂಸಲೇಮ್ ಎಂಬವಳು ಸ್ವತಂತ್ರಳು, ಇವಳೇ ನಮ್ಮೆಲ್ಲರಿಗೆ ತಾಯಿ. ಯಾಕಂದರೆ--ಬಂಜೆಯೇ, ಹೆರದವಳೇ, ಸಂತೋಷಿಸು; ಪ್ರಸವ ವೇದನೆ ಪಡದವಳೇ, ಸ್ವರವೆತ್ತಿ ಕೂಗು; ಯಾಕಂದರೆ ಗಂಡನುಳ್ಳವಳಿಗಿಂತ ಬಿಡಲ್ಪಟ್ಟವಳಿಗೆ ಎಷ್ಟೋ ಹೆಚ್ಚು ಮಕ್ಕಳಿದ್ದಾರೆಂದು ಬರೆದದೆ.
- Luke 19:43–44 ಲೂಕನು 19:43–44ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Isaiah 65:6–9 ಯೆಶಾಯ 65:6–9ಇಗೋ, ನನ್ನ ಮುಂದೆ ಅದು ಬರೆಯಲ್ಪಟ್ಟಿದೆ; ನಾನು ಸುಮ್ಮನಿರದೆ ಪ್ರತಿಫಲ ಕೊಡುತ್ತೇನೆ; ಅವರ ಉಡಿಯಲ್ಲಿ ಪ್ರತಿಫಲ ಕೊಡು ತ್ತೇನೆ. ನಿಮ್ಮ ಅಕ್ರಮಗಳಿಗೂ ನಿಮ್ಮ ತಂದೆಗಳ ಅಕ್ರ ಮಗಳಿಗೂ ಪ್ರತಿಫಲ ಕೊಡುತ್ತೇನೆಂದು ಕರ್ತನು ಹೇಳುತ್ತಾನೆ; ಅವರು ಬೆಟ್ಟಗಳ ಮೇಲೆ ಧೂಪ ಸುಟ್ಟು ಗುಡ್ಡಗಳ ಮೇಲೆ ನನ್ನನ್ನು ದೂಷಿಸಿದರಲ್ಲಾ. ಹೀಗಿರು ವದರಿಂದ ಅವರ ಹಿಂದಿನ ಕೆಲಸಗಳನ್ನು ಅವರ ಉಡಿ ಯಲ್ಲಿ ಅಳೆದುಬಿಡುವೆನು. ಕರ್ತನು ಹೇಳುವದೇನಂದರೆ--ದ್ರಾಕ್ಷೇಗೊನೆ ಯಲ್ಲಿ ಹೊಸದ್ರಾಕ್ಷಾರಸ ಕಂಡುಕೊಳ್ಳುವದನ್ನು ಒಬ್ಬನು ನೋಡಿ--ಕೆಡಿಸಬೇಡ, ಅದರಲ್ಲಿ ಆಶೀರ್ವಾದ ಉಂಟೆಂದು ಹೇಳುವದು ಹೇಗೋ ಹಾಗೆಯೇ ನನ್ನ ಸೇವಕರಿಗೋಸ್ಕರ ಅವರನ್ನೆಲ್ಲಾ ನಾನು ಕೆಡಿಸಿ ಬಿಡದ ಹಾಗೆ ಮಾಡುವೆನು. ಯಾಕೋಬಿನೊಳಗಿಂದ ಒಂದು ಸಂತಾನವನ್ನೂ ಯೆಹೂದದೊಳಗಿಂದ ನನ್ನ ಪರ್ವತಗಳಿಗೆ ಬಾಧ್ಯಸ್ಥನಾಗಿರುವವನನ್ನೂ ಹೊರಗೆ ಬರಮಾಡುವೆನು; ನಾನು ಆದುಕೊಂಡವರು ಅದನ್ನು ಸ್ವಾಧೀನಮಾಡಿಕೊಳ್ಳುವರು; ನನ್ನ ಸೇವಕರು ಅದರಲಿವಾಸವಾಗುವರು.
- Isaiah 5:26 ಯೆಶಾಯ 5:26ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು;
- Deuteronomy 28:9–14 ಧರ್ಮೋಪದೇಶಕಾಂಡ 28:9–14ನೀನು ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ಕಾಪಾಡಿ ಆತನ ಮಾರ್ಗಗಳಲ್ಲಿ ನಡೆದರೆ ಕರ್ತನು ನಿನಗೆ ಪ್ರಮಾಣಮಾಡಿದ ಹಾಗೆ ನಿನ್ನನ್ನು ತನಗೆ ಪರಿಶುದ್ಧ ಜನವಾಗಿ ಸ್ಥಾಪಿಸುವನು. ಆಗ ನೀನು ಕರ್ತನ ಹೆಸರಿನಿಂದ ಕರೆಯಲ್ಪಡುವದನ್ನು ಭೂಮಿಯ ಜನಗಳೆಲ್ಲಾ ನೋಡಿ ನಿನಗೆ ಭಯಪಡುವರು; ಇದಲ್ಲದೆ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಆಣೆ ಇಟ್ಟ ಕರ್ತನು ಭೂಮಿಯಮೇಲೆ ನಿನ್ನನ್ನು ಸರಕುಗಳಲ್ಲಿಯೂ ಗರ್ಭದ ಫಲದಲ್ಲಿಯೂ ಪಶುಗಳ ಫಲದಲ್ಲಿಯೂ ಭೂಮಿಯ ಫಲದಲ್ಲಿಯೂ ಸಮೃದ್ಧಿ ಹೊಂದುವಂತೆ ಮಾಡುವನು. ಕರ್ತನು ಆಕಾಶ ವೆಂಬ ತನ್ನ ಒಳ್ಳೆ ಉಗ್ರಾಣವನ್ನು ನಿನಗೆ ತೆರೆದು ನಿನ್ನ ಭೂಮಿಗೆ ತಕ್ಕ ಕಾಲದಲ್ಲಿ ಮಳೆಯನ್ನು ಕೊಟ್ಟು ನಿನ್ನ ಕೈಕೆಲಸವನ್ನೆಲ್ಲಾ ಆಶೀರ್ವದಿಸುವನು; ನೀನು ಸಾಲ ತಕ್ಕೊಳ್ಳದೆ ಬಹಳ ಜನಾಂಗಗಳಿಗೆ ಸಾಲ ಕೊಡುವಿ. ನಾನು ಈಹೊತ್ತು ನಿನಗೆ ಆಜ್ಞಾಪಿಸುವ ನಿನ್ನ ದೇವರಾದ ಕರ್ತನ ಆಜ್ಞೆಗಳನ್ನು ನೀನು ಕೇಳಿ ಕಾಪಾಡಿ ಕೈಕೊಂಡರೆ ಕರ್ತನು ನಿನ್ನನ್ನು ಬಾಲವನ್ನಲ್ಲ, ತಲೆಯಾಗಿ ಮಾಡುವನು; ನೀನು ಕೆಳಗಲ್ಲ, ಮೇಲೆಯೇ ಇರುವಿ. ಹೀಗಿರುವದರಿಂದ ಬೇರೆ ದೇವರುಗಳನ್ನು ಹಿಂಬಾ ಲಿಸಿ ಸೇವಿಸದಂತೆ ನಾನು ಈಹೊತ್ತು ನಿನಗೆ ಆಜ್ಞಾಪಿ ಸುವ ಮಾತುಗಳನ್ನೆಲ್ಲಾ ಬಿಟ್ಟು ಎಡಕ್ಕಾದರೂ ಬಲ ಕ್ಕಾದರೂ ತೊಲಗಬಾರದು.
- Zechariah 13:8–9 ಜೆಕರ್ಯ 13:8–9ಕರ್ತನು--ಇದಲ್ಲದೆ ಸಮಸ್ತ ದೇಶದಲ್ಲಿ ಆಗುವದೇನಂದರೆ-- ಅದರಲ್ಲಿ ಎರಡು ಪಾಲು ಕಡಿಯಲ್ಪಟ್ಟು ಸಾಯುವದು; ಆದರೆ ಮೂರನೇ ಪಾಲು ಅದರಲ್ಲಿ ಬಿಡಲ್ಪಡುವದು.ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ. ಮೂರನೇ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ ಬೆಳ್ಳಿಯನ್ನು ಶುದ್ಧಮಾಡುವಂತೆ ಶುದ್ಧಮಾಡುವೆನು; ಬಂಗಾರವು ಶೋಧಿಸಲ್ಪಡುವ ಪ್ರಕಾರ ಅವರನ್ನು ಶೋಧಿಸುವೆನು; ಅವರು ನನ್ನ ಹೆಸರನ್ನು ಕರೆಯುವರು; ನಾನು ಅವರಿಗೆ ಉತ್ತರ ಕೊಡುವೆನು; ನಾನು--ಇದು ನನ್ನ ಜನವೆಂದು ಹೇಳುವೆನು; ಕರ್ತನು ನನ್ನ ದೇವರೆಂದು ಅವರು ಹೇಳುವರು ಎಂದು ಹೇಳುತ್ತಾನೆ.
Original words (Hebrew)
- gather · H622אָסַף ʼâçaph
- nations · H1471גּוֹי gôwy
- Jerusalem · H3389יְרוּשָׁלַ͏ִם Yᵉrûwshâlaim
- battle · H4421מִלְחָמָה milchâmâh
- city · H5892עִיר ʻîyr
- taken · H3920לָכַד lâkad
- houses · H1004בַּיִת bayith
- rifled · H8155שָׁסַס shâçaç
- women · H802אִשָּׁה ʼishshâh
- ravished · H7901שָׁכַב shâkab
- half · H2677חֵצִי chêtsîy
- city · H5892עִיר ʻîyr
- forth · H3318יָצָא yâtsâʼ
- captivity · H1473גּוֹלָה gôwlâh
- residue · H3499יֶתֶר yether
- people · H5971עַם ʻam
- off · H3772כָּרַת kârath
- city · H5892עִיר ʻîyr