Zechariah · chapter 14 · verse 3
Zechariah 14:3 in Kannada
ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
Aaga kartanu horatu yuddhada dinadalli kaadaatamaadida prakaarave aa janaangagala sangada aatanu kaadaata maaduvanu.
Zechariah 14:3 in English
- King James Version (KJV)
- Then shall the LORD go forth, and fight against those nations, as when he fought in the day of battle.
- World English Bible (WEB)
- Then the LORD will go out and fight against those nations, as when he fought in the day of battle.
- American Standard Version (ASV)
- Then shall Jehovah go forth, and fight against those nations, as when he fought in the day of battle.
- Bible in Basic English (BBE)
- Then the Lord will go out and make war against those nations, as he did in the day of the fight.
- Darby Translation (DBY)
- And Jehovah will go forth and fight with those nations, as when he fought in the day of battle.
- Webster's Bible (WBS)
- Then will the LORD go forth, and fight against those nations, as when he fought in the day of battle.
- Young's Literal Translation (YLT)
- And gone forth hath Jehovah, And He hath fought against those nations, As in the day of His fighting in a day of conflict.
Read in context
- 1ಇಗೋ, ಕರ್ತನ ದಿನವು ಬರುತ್ತದೆ.
- 2ಆಗ ನಿನ್ನ ಕೊಳ್ಳೆಯು ನಿನ್ನ ಮಧ್ಯದಲ್ಲಿ ವಿಭಾಗಿಸ ಲ್ಪಡುವದು; ನಾನು ಜನಾಂಗಗಳನ್ನೆಲ್ಲಾ ಯೆರೂಸ ಲೇಮಿಗೆ ವಿರೋಧವಾಗಿ ಯುದ್ಧಕ್ಕೆ ಕೂಡಿಸುವೆನು; ಪಟ್ಟಣವು ಹಿಡಿಯಲ್ಪಡುವದು; ಮನೆಗಳು ಸುಲು ಕೊಳ್ಳಲ್ಪಡುವವು, ಹೆಂಗಸರು ಕೆಡಿಸಲ್ಪಡುವರು, ಪಟ್ಟಣದ ಅರವಾಸಿ ಜನರು ಸೆರೆಗೆ ಹೋಗುವರು; ಆದರೆ ಉಳಿದ ಜನರೆಲ್ಲರು ಪಟ್ಟಣದೊಳಗಿಂದ ತೆಗೆದುಬಿಡಲ್ಪಡುವದಿಲ್ಲ.
- 3ಆಗ ಕರ್ತನು ಹೊರಟು ಯುದ್ಧದ ದಿನದಲ್ಲಿ ಕಾದಾಟಮಾಡಿದ ಪ್ರಕಾರವೇ ಆ ಜನಾಂಗಗಳ ಸಂಗಡ ಆತನು ಕಾದಾಟ ಮಾಡುವನು.
- 4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- 5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
Cross references
- Zechariah 12:9 ಜೆಕರ್ಯ 12:9ಆ ದಿನದಲ್ಲಿ ಆಗುವದೇ ನಂದರೆ, ಯೆರೂಸಲೇಮಿಗೆ ವಿರೋಧವಾಗಿ ಬರುವ ಜನಾಂಗಗಳನ್ನೆಲ್ಲಾ ನಾಶ ಮಾಡುವದಕ್ಕೆ ನಾನು ಹುಡುಕುವೆನು.
- Zechariah 2:8–9 ಜೆಕರ್ಯ 2:8–9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- Zephaniah 3:19 ಚೆಫನ್ಯ 3:19ಇಗೋ, ಆ ಕಾಲದಲ್ಲಿ ನಿನ್ನನ್ನು ಶ್ರಮೆ ಪಡಿಸುವವರನ್ನೆಲ್ಲಾ ತೀರಿಸಿಬಿಟ್ಟು, ಕುಂಟಾದ ದ್ದನ್ನು ರಕ್ಷಿಸಿ, ಹೊರಡಿಸಲ್ಪಟ್ಟವರನ್ನು ಕೂಡಿಸಿ, ಅವರಿಗೆ ನಾಚಿಕೆಯಾದ ದೇಶಗಳಲ್ಲೆಲ್ಲಾ ಹೊಗಳಿಕೆಯನ್ನೂ ಕೀರ್ತಿಯನ್ನೂ ಉಂಟುಮಾಡುವೆನು.ಆ ಕಾಲದಲ್ಲಿ ಅಂದರೆ ನಾನು ನಿಮ್ಮನ್ನು ಕೂಡಿಸುವ ಕಾಲದಲ್ಲಿ ನಿಮ್ಮನ್ನು ಕರಕೊಂಡು ಬರುವೆನು; ನಾನು ನಿಮ್ಮ ಸೆರೆಯನ್ನು ನಿಮ್ಮ ಕಣ್ಣುಗಳ ಮುಂದೆ ತಿರುಗಿಸುವಾಗ ಭೂಮಿಯ ಎಲ್ಲಾ ಜನರಲ್ಲಿ ನಿಮಗೆ ಕೀರ್ತಿಯನ್ನೂ ಹೊಗಳಿಕೆ ಯನ್ನೂ ಉಂಟುಮಾಡುವೆನು ಎಂದು ಕರ್ತನು ಹೇಳುತ್ತಾನೆ.
- Joel 3:9–17 ಯೋವೇಲ 3:9–17ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ. ನಿಮ್ಮ ನೇಗಿಲುಗಳ ಗುಳಗಳನ್ನು ಕತ್ತಿಗಳಾಗಿಯೂ ನಿಮ್ಮ ಕುಡುಗೋಲುಗಳನ್ನು ಈಟಿಗಳಾ ಗಿಯೂ ಬಡಿಯಿರಿ; ಬಲಹೀನನು--ನಾನು ಶೂರ ನೆಂದು ಹೇಳಲಿ. ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು. ಜನಾಂಗಗಳು ಎಬ್ಬಿಸಲ್ಪಟ್ಟು ಯೆಹೋಷಾಫಾಟನ ತಗ್ಗಿಗೆ ಬರಲಿ; ಸುತ್ತಲಿನ ಎಲ್ಲಾ ಜನಾಂಗಗಳಿಗೆ ನ್ಯಾಯತೀರಿಸುವದಕ್ಕೆ ನಾನು ಅಲ್ಲಿ ಕೂತುಕೊಳ್ಳುವೆನು. ಕುಡುಗೋಲನ್ನು ಹಾಕಿರಿ, ಬೆಳೆ ಪಕ್ವವಾಯಿತು; ಬಂದು ಇಳಿಯಿರಿ; ದ್ರಾಕ್ಷೆಯ ಅಲೆ ತುಂಬಿ ಅದೆ; ತೊಟ್ಟಿಗಳು ತುಳುಕುತ್ತವೆ; ಅವರ ಕೆಟ್ಟತನವು ಬಹಳವಾಗಿದೆ. ನಿರ್ಣಯದ ತಗ್ಗಿನಲ್ಲಿ ಗುಂಪುಗಳು, ಗುಂಪುಗಳು; ಕರ್ತನ ದಿನವು ನಿರ್ಣ ಯದ ತಗ್ಗಿನಲ್ಲಿ ಸವಿಾಪವಾಗಿದೆ. ಸೂರ್ಯ, ಚಂದ್ರ ಕಪ್ಪಾಗುವವು; ನಕ್ಷತ್ರಗಳು ತಮ್ಮ ಪ್ರಕಾಶವನ್ನು ಮರೆಮಾಡುವವು. ಕರ್ತನು ಚೀಯೋನಿನೊಳಗಿಂದ ಘರ್ಜಿಸಿ ಯೆರೂಸಲೇಮಿನೊಳಗಿಂದ ತನ್ನ ಶಬ್ದವನ್ನು ಕೊಡುವನು. ಆಕಾಶಗಳೂ ಭೂಮಿಯೂ ಕದಲು ವವು; ಆದರೆ ಕರ್ತನು ತನ್ನ ಜನರಿಗೆ ನಿರೀಕ್ಷೆಯೂ ಇಸ್ರಾಯೇಲನ ಮಕ್ಕಳಿಗೆ ಬಲವೂ ಆಗಿರುವನು. ಹೀಗೆ ನನ್ನ ಪರಿಶುದ್ಧ ಪರ್ವತವಾದ ಚೀಯೋನಿ ನಲ್ಲಿ ವಾಸಿಸುವ ನಿಮ್ಮ ದೇವರಾದ ಕರ್ತನು ನಾನೇ ಎಂದು ನೀವು ತಿಳುಕೊಳ್ಳುವಿರಿ; ಆಗ ಯೆರೂಸಲೇಮು ಪರಿಶುದ್ಧವಾಗಿರುವದು; ಅನ್ಯರು ಇನ್ನು ಅದರಲ್ಲಿ ಹಾದುಹೋಗರು.
- Joel 3:2 ಯೋವೇಲ 3:2ಎಲ್ಲಾ ಜನಾಂಗಗಳನ್ನು ಕೂಡಿಸಿ ಯೆಹೋಷಾಫಾಟನ ತಗ್ಗಿಗೆ ಅವರನ್ನು ಇಳಿಸಿ ನನ್ನ ಜನರೂ ನನ್ನ ಬಾಧ್ಯತೆಯೂ ಆಗಿರುವ ಇಸ್ರಾಯೇಲಿನ ವಿಷಯ ಅವರ ಸಂಗಡ ವ್ಯಾಜ್ಯವಾಡುವೆನು; ಅವರು ಅವರನ್ನು ಜನಾಂಗಗಳಲ್ಲಿ ಚದರಿಸಿ ನನ್ನ ದೇಶವನ್ನು ಪಾಲಿಟ್ಟು
- Daniel 2:44–45 ದಾನಿಯೇಲನು 2:44–45ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು. ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
- 2 Chronicles 20:15 2 ಪೂರ್ವಕಾಲವೃತ್ತಾಂತ 20:15ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.
- Exodus 15:1–6 ವಿಮೋಚನಕಾಂಡ 15:1–6ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ. ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು. ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು. ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು. ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು. ಓ ಕರ್ತನೇ, ನಿನ್ನ ಬಲಗೈ ಶಕ್ತಿಯಲ್ಲಿ ಮಹಿಮೆಯುಳ್ಳ ದ್ದಾಗಿದೆ. ಓ ಕರ್ತನೇ, ನಿನ್ನ ಬಲಗೈ ಶತ್ರುವನ್ನು ಜಜ್ಜಿ ಪುಡಿಮಾಡಿತು.
- Haggai 2:21–22 ಹಗ್ಗಾಯ 2:21–22ಹೇಗಂದರೆ, ಯೆಹೂದದ ಅಧಿಪತಿಯಾದ ಜೆರುಬ್ಬಾಬೆಲನಿಗೆ ನೀನು ಹೇಳತಕ್ಕದ್ದೇನಂದರೆ--ನಾನು ಆಕಾಶಗಳನ್ನೂ ಭೂಮಿಯನ್ನೂ ಕದಲಿಸುವೆನು. ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Revelation 6:4–17 ಪ್ರಕಟನೆ 6:4–17ಆಗ ಮತ್ತೊಂದು ಕೆಂಪು ಕುದುರೆಯು ಹೊರಗೆ ಹೋಯಿತು; ಅದರ ಮೇಲೆ ಕೂತಿದ್ದವನಿಗೆ ಭೂಮಿಯಿಂದ ಸಮಾಧಾನವನ್ನು ತೆಗೆದುಬಿಡುವ ದಕ್ಕೂ ಮನುಷ್ಯರು ಒಬ್ಬರನ್ನೊಬ್ಬರು ಕೊಲ್ಲುವವರಾಗು ವಂತೆ ಮಾಡುವದಕ್ಕೂ ಅಧಿಕಾರವು ಕೊಡಲ್ಪಟ್ಟಿತು; ಇದಲ್ಲದೆ ಅವನಿಗೆ ದೊಡ್ಡ ಕತ್ತಿಯು ಕೊ ಆತನು ಮೂರನೆಯ ಮುದ್ರೆಯನ್ನು ತೆರೆದಾಗ ಮೂರನೆಯ ಜೀವಿಯು--ಬಂದು ನೋಡು ಅನ್ನು ವದನ್ನು ನಾನು ಕೇಳಿದೆನು. ಆಗ ಇಗೋ, ನಾನು ಕಪ್ಪು ಕುದುರೆಯನ್ನು ನೋಡಿದೆನು. ಅದರ ಮೇಲೆ ಕೂತಿದ್ದವನ ಕೈಯಲ್ಲಿ ತ್ರಾಸು ಇತ್ತು. ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ--ರೂಪಾಯಿಗೆ ಒಂದು ಸೇರು ಗೋಧಿ; ರೂಪಾಯಿಗೆ ಮೂರು ಸೇರು ಜವೆಗೋಧಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ನೀನು ಕೆಡಿಸಬೇಡ ಎಂದು ಹೇಳುವ ಧ್ವನಿಯನ್ನು ನಾನು ಕೇಳಿದೆನು. ಆತನು ನಾಲ್ಕನೆಯ ಮುದ್ರೆಯನ್ನು ತೆರೆ ದಾಗ--ಬಂದು ನೋಡು ಎಂದು ನಾಲ್ಕನೆಯ ಜೀವಿಯು ಹೇಳುವ ಧ್ವನಿಯನ್ನು ನಾನು ಕೇಳಿದೆನು. ನಾನು ನೋಡಲಾಗಿ ಒಂದು ಬೂದಿ ಬಣ್ಣದ ಕುದುರೆ ಯನ್ನು ಕಂಡೆನು. ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ನರಕವು ಅವನನ್ನು ಹಿಂಬಾಲಿಸಿತು. ಅವ ರಿಗೆ ಭೂಮಿಯ ಕಾಲುಭಾಗದ ಮೇಲೆ ಕತ್ತಿಯಿಂದಲೂ ಹಸಿವೆಯಿಂದಲೂ ಸಾವಿನಿಂದಲೂ ಭೂಮಿಯ ಮೃಗ ಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊ ಆತನು ಐದನೆಯ ಮುದ್ರೆಯನ್ನು ತೆರೆದಾಗ ದೇವರವಾಕ್ಯದ ನಿಮಿತ್ತವಾಗಿಯೂ ತಾವು ಹೊಂದಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ನಾನು ಕಂಡೆನು. ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು. ಅವರಲ್ಲಿ ಒಬ್ಬೊಬ್ಬನಿಗೆ ಬಿಳೀ ನಿಲುವಂಗಿಗಳು ಕೊಡಲ್ಪಟ್ಟಿದ್ದವು. ಇದಲ್ಲದೆ ಅವರ ಹಾಗೆ ಅವರ ಜೊತೆ ಸೇವಕರ ಮತ್ತು ಅವರ ಸಹೋದರರ ಕೊಲೆಯು ಪೂರೈಸುವ ತನಕ ಇನೂ ಸ್ವಲ್ಪ ಕಾಲ ವಿಶ್ರಮಿಸಿಕೊಂಡಿರಬೇಕೆಂದು ಅವರಿಗೆ ಹೇಳಲ್ಪಟ್ಟಿತು. ಆತನು ಆರನೆಯ ಮುದ್ರೆ ತೆರೆಯುವದನ್ನು ನಾನು ಕಂಡೆನು. ಆಗ ಇಗೋ, ಮಹಾಭೂಕಂಪ ಉಂಟಾಯಿತು; ಸೂರ್ಯನು ಕೂದಲಿನ ಗೋಣಿ ಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು. ಅಂಜೂರದ ಮರವು ಬಿರುಗಾಳಿಯಿಂದ ಅಲ್ಲಾಡಿಸ ಲ್ಪಟ್ಟು ಅಕಾಲದಲ್ಲಿ ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂಮಿಗೆ ಬಿದ್ದವು. ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿ ಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚದರಿದವು. ಭೂರಾಜರೂ ದೊಡ್ಡ ವರೂ ಐಶ್ವರ್ಯವಂತರೂ ಮುಖ್ಯಾಧಿಪತಿಗಳೂ ಪರಾ ಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಗವಿ ಗಳಲ್ಲಿಯೂ ಬೆಟ್ಟಗಳ ಬಂಡೆಗಳಲ್ಲಿಯೂ ಅಡಗಿ ಕೊಂಡು ಪರ್ವತಗಳಿಗೂ ಬಂಡೆಗಳಿಗೂ--ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿದ್ದಾತನ ಮುಖಕ್ಕೂ ಕುರಿಮರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು. ಆತನ ಕೋಪದ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.
- Isaiah 66:15–16 ಯೆಶಾಯ 66:15–16ಇಗೋ, ಕರ್ತನು ಬೆಂಕಿಯೊಡನೆ ಬರುವನು. ಆತನ ರಥಗಳು ಬಿರುಗಾಳಿಯ ಹಾಗೆ ಇರುವವು; ಉಗ್ರದಿಂದ ತನ್ನ ಕೋಪವನ್ನೂ ಅಗ್ನಿಜ್ವಾಲೆಗಳಿಂದ ತನ್ನ ಗದರಿಕೆ ಯನ್ನೂ ಸಲ್ಲಿಸುವದಕ್ಕಾಗಿಯೇ ಬರುವನು. ಬೆಂಕಿ ಯಿಂದಲೂ ತನ್ನ ಕತ್ತಿಯಿಂದಲೂ ಕರ್ತನು ಮನುಷ್ಯ ರಿಗೆಲ್ಲಾ ನ್ಯಾಯತೀರಿಸುವನು; ಕರ್ತನಿಂದ ಕೊಲ್ಲಲ್ಪಟ್ಟ ವರು ಅನೇಕರಾಗಿರುವರು.
- Daniel 2:34–35 ದಾನಿಯೇಲನು 2:34–35ನೀನು ನೋಡುತ್ತಿರಲಾಗಿ, ಒಂದು ಕಲ್ಲು ಕೈಗಳ ಸಹಾಯವಿಲ್ಲದೆ ಒಡೆಯಲ್ಪಟ್ಟು ಅರ್ಧ ಕಬ್ಬಿ ಣವೂ ಅರ್ಧ ಮಣ್ಣೂ ಆಗಿದ್ದ ಆ ವಿಗ್ರಹದ ಪಾದ ಗಳನ್ನು ಬಡಿದು ಅವುಗಳನ್ನು ಚೂರುಚೂರು ಮಾಡಿತು. ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.