Zechariah · chapter 14 · verse 6
Zechariah 14:6 in Kannada
ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
Aa dinadalli aaguvade nandare--belaku illave kattaleyu spashtavaagiradu.
Zechariah 14:6 in English
- King James Version (KJV)
- And it shall come to pass in that day, [that] the light shall not be clear, [nor] dark:
- World English Bible (WEB)
- It will happen in that day that there will not be light, cold, or frost.
- American Standard Version (ASV)
- And it shall come to pass in that day, that there shall not be light; the bright ones shall withdraw themselves:
- Bible in Basic English (BBE)
- And in that day there will be no heat or cold or ice;
- Darby Translation (DBY)
- And it shall come to pass in that day, [that] there shall not be light; the shining shall be obscured.
- Webster's Bible (WBS)
- And it shall come to pass in that day, [that] the light shall not be clear, [nor] dark:
- Young's Literal Translation (YLT)
- And it hath come to pass, in that day, The precious light is not, it is dense darkness,
Read in context
- 4ಆ ದಿನದಲ್ಲಿ ಆತನ ಪಾದಗಳು ಯೆರೂಸಲೇಮಿನ ಮುಂದೆ ಪೂರ್ವ ದಿಕ್ಕಿನಲ್ಲಿರುವ ಎಣ್ಣೇ ಮರದ ಗುಡ್ಡದ ಮೇಲೆ ನಿಲ್ಲುವವು; ಎಣ್ಣೇ ಮರದ ಗುಡ್ಡವು ಅದರ ನಡುವೆಯಿಂದ ಪೂರ್ವಕ್ಕೂ ಪಶ್ಚಿಮಕ್ಕೂ ಸೀಳಿ ಬಹುದೊಡ್ಡ ತಗ್ಗಾಗುವದು; ಅರ್ಧ ಗುಡ್ಡವು ಉತ್ತರಕ್ಕೂ ಅರ್ಧ ದಕ್ಷಿಣಕ್ಕೂ ಸರಿದು ಕೊಳ್ಳುವದು.
- 5ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
- 6ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು.
- 7ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
- 8ಆ ದಿನದಲ್ಲಿ ಆಗುವದೇನಂದರೆ, ಯೆರೂಸಲೇಮಿ ನೊಳಗಿದ್ದ ಜೀವಜಲಗಳು ಹೊರಡುವವು; ಅವುಗ ಳಲ್ಲಿ ಅರ್ಧ ಪೂರ್ವ ಸಮುದ್ರಕ್ಕೆ ಅರ್ಧ ಪಶ್ಚಿಮ ಸಮುದ್ರಕ್ಕೆ ಹೋಗುವವು; ಅದು ಬೇಸಿಗೆ ಕಾಲ ದಲ್ಲಿಯೂ ಚಳಿಗಾಲದಲ್ಲಿಯೂ ಇರುವದು.
Cross references
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- Psalm 97:10–11 ಕೀರ್ತನೆಗಳು 97:10–11ಕರ್ತನನ್ನು ಪ್ರೀತಿಮಾಡುವವರು ಕೆಟ್ಟದ್ದನ್ನು ಹಗೆ ಮಾಡುವರು; ಆತನು ತನ್ನ ಪರಿಶುದ್ಧರ ಪ್ರಾಣ ಗಳನ್ನು ಕಾಪಾಡಿ ದುಷ್ಟರ ಕೈಯೊಳಗಿಂದ ಅವರನ್ನು ಬಿಡಿಸುವನು. ಬೆಳಕು ನೀತಿವಂತನಿಗೋಸ್ಕರವೂ ಸಂತೋಷವು ಯಥಾರ್ಥ ಹೃದಯದವರಿಗೋಸ್ಕರವೂ ಬಿತ್ತಲ್ಪಟ್ಟಿವೆ.ನೀತಿವಂತರೇ, ಕರ್ತನಲ್ಲಿ ಸಂತೋ ಷಿಸಿರಿ; ಆತನ ಪರಿಶುದ್ಧತ್ವವನ್ನು ಜ್ಞಾಪಕಮಾಡಿ ಕೊಂಡಾಡಿರಿ.
- John 12:46 ಯೋಹಾನನು 12:46ನನ್ನಲ್ಲಿ ನಂಬಿಕೆಯಿಟ್ಟ ಯಾವನೂ ಕತ್ತಲೆಯಲ್ಲಿ ಇರಬಾರದೆಂದು ನಾನು ಬೆಳಕಾಗಿ ಲೋಕಕ್ಕೆ ಬಂದಿದ್ದೇನೆ.
- 2 Peter 1:19 2 ಪೇತ್ರನು 1:19ನಮಗೂ ಬಹು ದೃಢವಾದ ಪ್ರವಾದನೆಯ ವಾಕ್ಯವು ಇರುತ್ತದೆ; ಆ ದಿನವು ಬೆಳಗುವವರೆಗೆ ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವ ತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪ ವೆಂದೆಣಿಸಿ ಅದಕ್ಕೆ ನೀವು ಲಕ್ಷ್ಯಕೊಡುವದು ಒಳ್ಳೇದು.
- Proverbs 4:18–19 ಜ್ಞಾನೋಕ್ತಿಗಳು 4:18–19ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು. ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
- Isaiah 60:1–3 ಯೆಶಾಯ 60:1–3ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು. ಇಗೋ, ಕತ್ತಲೆ ಭೂಮಿಯನ್ನೂ ಗಾಢಾಂಧಕಾರವು ಜನಗಳನ್ನೂ ಮುಚ್ಚುವದು; ಆದರೆ ನಿನ್ನ ಮೇಲೆ ಕರ್ತನು ಉದಯಿ ಸುವನು; ಆತನ ಮಹಿಮೆಯು ನಿನ್ನ ಮೇಲೆ ಕಾಣ ಬರುವದು. ಅನ್ಯಜನಾಂಗಗಳು ನಿನ್ನ ಪ್ರಕಾಶಕ್ಕೂ ಅರಸರು ನಿನ್ನ ಉದಯದ ಕಾಂತಿಗೂ ಬರುವರು.
- Revelation 11:15 ಪ್ರಕಟನೆ 11:15ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
- Ephesians 5:8–14 ಎಫೆಸದವರಿಗೆ 5:8–14ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ. ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ. ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ. ತ್ತಲೆಗೆ ಸಂಬಂಧ ವಾದ ಕೃತ್ಯಗಳಿಂದ ಯಾವ ಫಲವೂ ಬರಲಾರದು; ಅವುಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಖಂಡಿಸಿರಿ. ಅವರು ರಹಸ್ಯವಾಗಿ ನಡಿಸುವ ಕೆಲಸ ಗಳನ್ನು ಕುರಿತು ಮಾತನಾಡುವದಾದರೂ ನಾಚಿಕೆಗೆ ಕಾರಣವಾಗಿದೆ. ಆದರೆ ಖಂಡನೆಯಾಗುವವು ಗಳೆಲ್ಲವೂ ಬೆಳಕಿನಿಂದ ಪ್ರಕಟವಾಗುತ್ತವೆ; ಯಾಕಂದರೆ ಪ್ರಕಟಪಡಿಸುವಂಥದ್ದು ಬೆಳಕೇ. ಆದದರಿಂದ-- ನಿದ್ರೆ ಮಾಡುವವನೇ, ಎಚ್ಚರವಾಗು, ಸತ್ತವರಿಂದ ಎದ್ದೇಳು; ಕ್ರಿಸ್ತನು ನಿನಗೆ ಪ್ರಕಾಶಕೊಡುವನು ಎಂದು ಆತನು ಹೇಳುತ್ತಾನೆ.
- Isaiah 50:10 ಯೆಶಾಯ 50:10ನಿಮ್ಮೊಳಗೆ ಕರ್ತನಿಗೆ ಭಯಪಟ್ಟು ಆತನ ಸೇವ ಕನ ಸ್ವರವನ್ನು ಕೇಳಿ ಬೆಳಕಿಲ್ಲದೆ ಕತ್ತಲೆಯಲ್ಲಿ ನಡೆ ಯುವವನು ಯಾರು? ಅವನು ಕರ್ತನ ಹೆಸರಿನಲ್ಲಿ ನಂಬಿಕೆಯಿಟ್ಟು ತನ್ನ ದೇವರ ಮೇಲೆ ಆತುಕೊಳ್ಳಲಿ.ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
- Isaiah 13:10 ಯೆಶಾಯ 13:10ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.
- Jeremiah 4:23 ಯೆರೆಮೀಯ 4:23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.