Zechariah · chapter 4 · verse 10
Zechariah 4:10 in Kannada
ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
Sanna kaaryagala dinavannu tiraskarisidavanyaaru? Aa elu andare bhoomiyallellaa attitta odaaduva kartana kannugalu noolu gundannu jerubbaabelana kaiyalli noduvaaga santoshapaduttave.
Zechariah 4:10 in English
- King James Version (KJV)
- For who hath despised the day of small things? for they shall rejoice, and shall see the plummet in the hand of Zerubbabel [with] those seven; they [are] the eyes of the LORD, which run to and fro through the whole earth.
- World English Bible (WEB)
- Indeed, who despises the day of small things? For these seven shall rejoice, and shall see the plumb line in the hand of Zerubbabel. These are the LORD’s eyes, which run back and forth through the whole earth.”
- American Standard Version (ASV)
- For who hath despised the day of small things? for these seven shall rejoice, and shall see the plummet in the hand of Zerubbabel; [these are] the eyes of Jehovah, which run to and fro through the whole earth.
- Bible in Basic English (BBE)
- For who has had a poor opinion of the day of small things? for they will be glad when they see the weighted measuring-line in the hand of Zerubbabel. Then he said in answer to me, These seven lights are the eyes of the Lord which go quickly up and down through all the earth.
- Darby Translation (DBY)
- For who hath despised the day of small things? Yea, they shall rejoice [even] those seven — and shall see the plummet in the hand of Zerubbabel: these are the eyes of Jehovah, which run to and fro in the whole earth.
- Webster's Bible (WBS)
- For who hath despised the day of small things? for they shall rejoice, and shall see the plummet in the hand of Zerubbabel [with] those seven; they [are] the eyes of the LORD, which run to and fro through the whole earth.
- Young's Literal Translation (YLT)
- For who trampled on the day of small things, They have rejoiced, And seen the tin weight in the hand of Zerubbabel, These seven [are] the eyes of Jehovah, They are going to and fro in all the land.'
Read in context
- 8ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--
- 9ಜೆರುಬ್ಬಾಬೆಲನ ಕೈಗಳು ಈ ಮನೆಯ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳು ಸಹ ಅದನ್ನು ಪೂರೈಸುವವು; ಸೈನ್ಯಗಳ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆಂದು ತಿಳಿಯುವಿರಿ.
- 10ಸಣ್ಣ ಕಾರ್ಯಗಳ ದಿನವನ್ನು ತಿರಸ್ಕರಿಸಿದವನ್ಯಾರು? ಆ ಏಳು ಅಂದರೆ ಭೂಮಿಯಲ್ಲೆಲ್ಲಾ ಅತ್ತಿತ್ತ ಓಡಾಡುವ ಕರ್ತನ ಕಣ್ಣುಗಳು ನೂಲು ಗುಂಡನ್ನು ಜೆರುಬ್ಬಾಬೆಲನ ಕೈಯಲ್ಲಿ ನೋಡುವಾಗ ಸಂತೋಷಪಡುತ್ತವೆ.
- 11ಆಗ ನಾನು ಉತ್ತರ ಕೊಟ್ಟು ಅವನಿಗೆ--ದೀಪಸ್ತಂಭದ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ಇರುವ ಈ ಎರಡು ಇಪ್ಪೇಮರಗಳು ಏನು ಅಂದೆನು.
- 12ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
Cross references
- Job 8:7 ಯೋಬನು 8:7ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
- 1 Corinthians 1:28–29 1 ಕೊರಿಂಥದವರಿಗೆ 1:28–29ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ. ಹೀಗಿರಲು ಆತನ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
- Matthew 13:31–33 ಮತ್ತಾಯನು 13:31–33ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಮನುಷ್ಯನು ತಕ್ಕೊಂಡು ಹೋಗಿ ತನ್ನ ಹೊಲದಲ್ಲಿ ಬಿತ್ತಿದ್ದ ಸಾಸಿವೆ ಕಾಳಿಗೆ ಪರಲೋಕರಾಜ್ಯವು ಹೋಲಿಕೆಯಾಗಿದೆ. ಅದು ಎಲ್ಲಾ ಬೀಜಗಳಿಗಿಂತಲೂ ಚಿಕ್ಕದಾದದ್ದೇ ನಿಜ; ಆದರೆ ಅದು ಬೆಳೆದಾಗ ಎಲ್ಲಾ ಸಸಿಗಳಿಗಿಂತಲೂ ದೊಡ್ಡದಾಗಿ ಮರವಾಯಿತು. ಹೀಗೆ ಆಕಾಶದ ಪಕ್ಷಿಗಳು ಬಂದು ಅದರ ಕೊಂಬೆಗಳಲ್ಲಿ ವಾಸಮಾಡುತ್ತವೆ. ಆತನು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದ್ದೇನಂದರೆ--ಒಬ್ಬ ಸ್ತ್ರೀಯು ಹುಳಿಯನ್ನು ತಕ್ಕೊಂಡು ಮೂರು ಸೇರು ಹಿಟ್ಟೆಲ್ಲಾ ಹುಳಿಯಾಗುವ ತನಕ ಅದರಲ್ಲಿ ಅಡಗಿಸಿಟ್ಟ ಹುಳಿಗೆ ಪರಲೋಕ ರಾಜ್ಯವು ಹೋಲಿಕೆಯಾಗಿದೆ.
- 2 Chronicles 16:9 2 ಪೂರ್ವಕಾಲವೃತ್ತಾಂತ 16:9ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು.
- Haggai 2:3 ಹಗ್ಗಾಯ 2:3ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ?
- Proverbs 15:3 ಜ್ಞಾನೋಕ್ತಿಗಳು 15:3ಕೆಟ್ಟವರನ್ನು ಒಳ್ಳೆಯವರನ್ನು ನೋಡುತ್ತಾ ಕರ್ತನ ಕಣ್ಣುಗಳು ಪ್ರತಿಯೊಂದು ಸ್ಥಳ ದಲ್ಲಿವೆ.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Revelation 5:6 ಪ್ರಕಟನೆ 5:6ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ
- Zechariah 3:9 ಜೆಕರ್ಯ 3:9ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- Amos 7:7–8 ಆಮೋಸ 7:7–8ಆತನು ನನಗೆ ಹೀಗೆ ತೋರಿಸಿದನು; ಇಗೋ, ಕರ್ತನು ನೂಲು ಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಮಟ್ಟ ಇತ್ತು. ಕರ್ತನು ನನಗೆ--ಆಮೋಸನೇ, ಏನನ್ನು ನೋಡುತ್ತಿರುವೆ ಎಂದಾಗ ನಾನು--ನೂಲುಗುಂಡು ಎನ್ನಲು ಕರ್ತನು ಹೇಳಿದ್ದೇನಂದರೆ--ಇಗೋ, ನಾನು ನನ್ನ ಜನರಾದ ಇಸ್ರಾಯೇಲ್ಯರ ಮಧ್ಯದಲ್ಲಿ ನೂಲು ಗುಂಡನ್ನು ಇಡುತ್ತೇನೆ; ಇನ್ನು ಮೇಲೆ ಅವರನ್ನು ದಾಟಿಹೋಗುವದಿಲ್ಲ.
- Isaiah 66:14 ಯೆಶಾಯ 66:14ನೀವು ಅದನ್ನು ನೋಡುವಾಗ ನಿಮ್ಮ ಹೃದಯವು ಸಂತೋಷಿಸುವದು, ನಿಮ್ಮ ಎಲುಬು ಗಳು ಹಸಿರು ಪಲ್ಯದ ಹಾಗೆ ಚಿಗುರುವವು; ಕರ್ತನ ಕೈ ಆತನ ಸೇವಕನ ಕಡೆಗೂ ಆತನ ರೌದ್ರವು ಆತನ ಶತ್ರುಗಳ ಕಡೆಗೂ ಕಾಣಬರುವದು.
- Luke 15:5–10 ಲೂಕನು 15:5–10ಅವನು ಆ ಕುರಿಯನ್ನು ಕಂಡುಕೊಂಡ ಮೇಲೆ ಸಂತೋಷ ಪಡುತ್ತಾ ಅದನ್ನು ತನ್ನ ಹೆಗಲುಗಳ ಮೇಲೆ ಹೊತ್ತು ಕೊಳ್ಳುವನು. ಆಮೇಲೆ ಅವನು ಮನೆಗೆ ಬಂದು ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ;ಯಾಕಂದರೆ ಕಳೆದುಹೋದ ನನ್ನ ಕುರಿಯನ್ನು ನಾನು ಕಂಡು ಕೊಂಡೆನು ಅನ್ನುವನು. ಆದರಂತೆಯೇ ಮಾನಸಾಂತ ರಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ನೀತಿವಂತರಿಗಿಂತ ಮಾನಸಾಂತರಪಡುವ ಒಬ್ಬಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು. ಯಾವ ಸ್ತ್ರೀಯು ತನ್ನಲ್ಲಿ ಹತ್ತು ಬೆಳ್ಳಿಯ ನಾಣ್ಯಗಳಿರಲಾಗಿ ಒಂದು ನಾಣ್ಯವನ್ನು ಕಳೆದುಕೊಂಡರೆ ದೀಪಹಚ್ಚಿ ಮನೆಯನ್ನು ಗುಡಿಸಿ ಅವಳು ಅದನ್ನು ಕಂಡುಕೊಳ್ಳುವ ವರೆಗೆ ಜಾಗ್ರತೆಯಿಂದ ಹುಡುಕುವ ದಿಲ್ಲವೇ? ಅವಳು ಅದನ್ನು ಕಂಡುಕೊಂಡ ಮೇಲೆ ತನ್ನ ಸ್ನೇಹಿತರನ್ನೂ ನೆರೆಯವರನ್ನೂ ಒಟ್ಟಾಗಿ ಕರೆದು ಅವರಿಗೆ--ನನ್ನ ಸಂಗಡ ಸಂತೋಷಪಡಿರಿ; ಯಾಕಂ ದರೆ ನಾನು ಕಳಕೊಂಡಿದ್ದ ನಾಣ್ಯವನ್ನು ಕಂಡುಕೊಂಡೆನು ಅನ್ನುವಳು. ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.