Zechariah · chapter 4 · verse 14
Zechariah 4:14 in Kannada
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
Naanu--nanna odeyane, illa andenu. Aaga avanu--samasta bhoomiya kartana baliyalli nilluva ibbaru abhishekisalpattavaru ivare andanu.
Zechariah 4:14 in English
- King James Version (KJV)
- Then said he, These [are] the two anointed ones, that stand by the Lord of the whole earth.
- World English Bible (WEB)
- Then he said, “These are the two anointed ones who stand by the Lord of the whole earth.”
- American Standard Version (ASV)
- Then said he, These are the two anointed ones, that stand by the Lord of the whole earth.
- Bible in Basic English (BBE)
- And he said, These are the two sons of oil, whose place is by the Lord of all the earth.
- Darby Translation (DBY)
- And he said, These are the two sons of oil, that stand before the Lord of the whole earth.
- Webster's Bible (WBS)
- Then said he, These [are] the two anointed ones, that stand by the LORD of the whole earth.
- Young's Literal Translation (YLT)
- And he saith, 'These [are] the two sons of the oil, who are standing by the Lord of the whole earth.'
Read in context
- 12ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಈ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
- 13ಅವನು ನನಗೆ--ಇವು ಏನೆಂದು ಅರಿಯು ವದಿಲ್ಲವೋ ಅಂದನು.ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
- 14ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು--ಸಮಸ್ತ ಭೂಮಿಯ ಕರ್ತನ ಬಳಿಯಲ್ಲಿ ನಿಲ್ಲುವ ಇಬ್ಬರು ಅಭಿಷೇಕಿಸಲ್ಪಟ್ಟವರು ಇವರೇ ಅಂದನು.
Cross references
- Revelation 11:4 ಪ್ರಕಟನೆ 11:4ಭೂಲೋಕದ ದೇವರ ಮುಂದೆ ನಿಂತಿರುವ ಎರಡು ಎಣ್ಣೆಯ ಮರಗಳೂ ಎರಡು ದೀಪಸ್ತಂಭಗಳೂ ಇವರೇ.
- Isaiah 61:1–3 ಯೆಶಾಯ 61:1–3ದೇವರಾದ ಕರ್ತನ ಆತ್ಮವು ನನ್ನ ಮೇಲೆ ಅದೆ; ದೀನರಿಗೆ ಶುಭಸಮಾಚಾರವನ್ನು ಸಾರುವದಕ್ಕೆ ಕರ್ತನು ನನ್ನನ್ನು ಅಭಿಷೇಕಿಸಿದ್ದಾನೆ; ಮುರಿದ ಹೃದಯವುಳ್ಳವರನ್ನು ಕಟ್ಟುವದಕ್ಕೂ ಸೆರೆಯವರಿಗೆ ಬಿಡುಗಡೆಯನ್ನು ಬಂಧಿಸಲ್ಪಟ್ಟವರಿಗೆ ಸೆರೆಮನೆಯ ಕದ ತೆರೆಯುವದನ್ನು ಪ್ರಸಿದ್ಧಿ ಮಾಡುವದಕ್ಕೂ ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
- Daniel 9:24–26 ದಾನಿಯೇಲನು 9:24–26ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ. ಆದದರಿಂದ ನೀನು ತಿಳಿಯಬೇಕಾದದ್ದು ಏನಂದರೆ --ಯೆರೂಸಲೇಮನ್ನು ತಿರಿಗಿ ಸ್ಥಾಪಿಸಿ ಕಟ್ಟಲು ಆಜ್ಞೆ ಹೊರಡುವದು ಮೊದಲುಗೊಂಡು ಅಭಿಷಿಕ್ತನಾದ (ಮೆಸ್ಸೀಯನ) ಪ್ರಭುವಿನ ವರೆಗೂ ಏಳು ವಾರಗಳು ಕಳೆಯಬೇಕು. ಅದು ಪುನಃ ಸ್ಥಾಪಿಸಲ್ಪಟ್ಟು ಅರವತ್ತೆರಡು ವಾರಗಳು ಇರುವದು. ಅದಕ್ಕೆ ಬೀದಿಯೂ ಗೋಡೆ ಗಳೂ ಕಷ್ಟಕಾಲದಲ್ಲಿ ಕಟ್ಟಲ್ಪಡುವದು. ಅರವತ್ತೆರಡು ವಾರಗಳಾದ ಮೇಲೆ ಮೆಸ್ಸೀಯನು ಛೇದಿಸಲ್ಪಡುವನು. ಆದರೆ ತನಗೆ ಅಲ್ಲ; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪರಿಶುದ್ಧ ಸ್ಥಳವನ್ನೂ ನಾಶಮಾಡುವರು. ಪ್ರಳಯದಿಂದ ಅದು ಅಂತ್ಯವಾಗುವದು. ಅಂತ್ಯದ ವರೆಗೂ ಯುದ್ಧವಾಗಿ ನಾಶನಗಳು ಸಂಭವಿಸುವವು.ಅವನು ಒಂದು ವಾರಕ್ಕಾಗಿ ಬಹಳ ಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು. ವಾರದ ಮಧ್ಯದಲ್ಲಿ ಯಜ್ಞವನ್ನೂ ಅರ್ಪಣೆಯನ್ನೂ ನಿಲ್ಲಿಸುವನು. ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬರುವನು, ನಿಶ್ಚಿತ ಪ್ರಳಯವು ಅವನನ್ನು ಮುಳುಗಿಸುವ ತನಕ ಹಾಳು ಮಾಡುವನು.
- Zechariah 3:1–7 ಜೆಕರ್ಯ 3:1–7ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು. ಆಗ ಕರ್ತನ ದೂತನು ಸೈತಾನನಿಗೆ--ಸೈತಾನನೇ, ಕರ್ತನು ನಿನ್ನನ್ನು ಗದರಿಸಲಿ; ಹೌದು, ಯೆರೂಸಲೇಮನ್ನು ಆದುಕೊಂಡ ಕರ್ತನು ನಿನ್ನನ್ನು ಗದರಿಸಲಿ; ಅದು ಬೆಂಕಿಯೊಳಗಿಂದ ಎಳೆದ ಕೊಳ್ಳೆಯಾಗಿದೆಯಲ್ಲವೋ ಅಂದನು. ಯೆಹೋಶು ವನು ಮೈಲಿಗೆಯಾದ ವಸ್ತ್ರಗಳನ್ನು ತೊಟ್ಟುಕೊಂಡವ ನಾಗಿ ದೂತನ ಮುಂದೆ ನಿಂತನು. ಆಗ ಅವನು ಉತ್ತರಕೊಟ್ಟು ತನ್ನ ಮುಂದೆ ನಿಂತವರಿಗೆ--ಇವನ ಮೇಲಿನಿಂದ ಮೈಲಿಗೆಯಾದ ವಸ್ತ್ರಗಳನ್ನು ತೆಗೆದು ಹಾಕಿರಿ ಅಂದನು. ಅವನಿಗೆ--ಇಗೋ, ನಿನ್ನ ಅಕ್ರಮವು ನಿನ್ನನ್ನು ಬಿಟ್ಟುಹೋಗುವಂತೆ ಮಾಡಿದ್ದೇನೆ; ಬದಲು ವಸ್ತ್ರಗಳನ್ನು ನಿನಗೆ ತೊಡಿಸುವೆನು ಅಂದನು. ಆಗ ನಾನು--ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಡಿರಿ ಅಂದೆನು. ಆಗ ಅವರು ಅವನ ತಲೆಯ ಮೇಲೆ ಶುದ್ಧ ಮುಂಡಾಸವನ್ನು ಇಟ್ಟು ಅವನಿಗೆ ನಿಲು ವಂಗಿಗಳನ್ನು ತೊಡಿಸಿದರು; ಕರ್ತನ ದೂತನು ಪಕ್ಕ ದಲ್ಲಿ ನಿಂತಿದ್ದನು. ಆಗ ಕರ್ತನ ದೂತನು ಯೆಹೋ ಶುವನಿಗೆ ಸಾಕ್ಷಿ ಕೊಟ್ಟದ್ದೇನಂದರೆ-- ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಮಾರ್ಗಗಳಲ್ಲಿ ನಡೆದು ನನ್ನ ಆಜ್ಞೆಯನ್ನು ಕೈಕೋ, ಆಗ ನೀನು ನನ್ನ ಮನೆಗೂ ನ್ಯಾಯತೀರಿಸಿ ನನ್ನ ಅಂಗಳಗಳನ್ನೂ ಕಾಯುವಿ; ಇಲ್ಲಿ ನಿಂತವರ ಬಳಿಯಲ್ಲಿ ನಡೆದಾಡುವ ನಿನಗೆ ಸ್ಥಳಗಳನ್ನು ಕೊಡುವೆನು.
- Exodus 40:15 ವಿಮೋಚನಕಾಂಡ 40:15ಅವರ ತಂದೆಯನ್ನು ಅಭಿಷೇಕಿಸಿದ ಪ್ರಕಾರ ಅವರು ನನಗೆ ಯಾಜಕ ಸೇವೆಯನ್ನು ಮಾಡುವ ಹಾಗೆ ಅವ ರನ್ನೂ ನೀನು ಅಭಿಷೇಕಿಸು. ಅವರ ಅಭಿಷೇಕವು ನಿಶ್ಚಯವಾಗಿದ್ದು ಅವರ ಸಂತತಿಗಳಲ್ಲಿ ನಿತ್ಯವಾದ ಯಾಜಕತ್ವವಾಗಿರುವದು ಎಂದು ಹೇಳಿದನು.
- Zechariah 6:13 ಜೆಕರ್ಯ 6:13ಹೌದು, ಆತನು ಕರ್ತನ ದೇವಾಲಯವನ್ನು ಕಟ್ಟು ವನು; ಆತನು ಮಹಿಮೆಯನ್ನು ಧರಿಸುವನು; ಕೂತು ಕೊಂಡು ತನ್ನ ಸಿಂಹಾಸನದಲ್ಲಿ ಆಳುವನು, ತನ್ನ ಸಿಂಹಾಸನದಲ್ಲಿ ಯಾಜಕನಾಗಿರುವನು; ಸಮಾಧಾನದ ಆಲೋಚನೆ ಅವರಿಬ್ಬರೊಳಗೆ ಇರುವದು.
- Hebrews 1:8–9 ಇಬ್ರಿಯರಿಗೆ 1:8–9ಮಗನ ವಿಷಯದಲ್ಲಿಯಾದರೋ--ಓ ದೇವರೇ, ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವದು; ನೀತಿದಂಡವೇ ನಿನ್ನ ರಾಜದಂಡವಾಗಿದೆ. ನೀನು ನೀತಿಯನ್ನು ಪ್ರೀತಿಸಿದ್ದೀ, ದುಷ್ಠತನವನ್ನು ದ್ವೇಷಿಸಿದ್ದೀ; ಆದದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಮಿಗಿಲಾಗಿ ಆನಂದದ ತೈಲದಿಂದ ಅಭಿಷೇಕಿಸಿದ್ದಾನೆಂತಲೂ
- Exodus 29:7 ವಿಮೋಚನಕಾಂಡ 29:7ಅಭಿಷೇಕಿಸುವ ಎಣ್ಣೆಯನ್ನು ತೆಗೆದು ಕೊಂಡು ಅವನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಬೇಕು.
- Micah 4:13 ಮೀಕ 4:13ಚೀಯೋನಿನ ಕುಮಾರ್ತೆಯೇ; ಎದ್ದು ತುಳಿ. ನಿನ್ನ ಕೊಂಬನ್ನು ಕಬ್ಬಿಣವಾಗಿಯೂ ನಿನ್ನ ಗೊರಸೆಗಳನ್ನು ತಾಮ್ರವಾಗಿಯೂ ಮಾಡುವೆನು. ನೀನು ಅನೇಕ ಜನಗಳನ್ನು ಪುಡಿಪುಡಿಮಾಡುವಿ; ಮತ್ತು ಅವರ ಲಾಭವನ್ನು ಕರ್ತನಿಗೂ ಅವರ ಸಂಪತ್ತನ್ನು ಸಮಸ್ತ ಭೂಮಿಯ ಕರ್ತನಿಗೂ ಪ್ರತಿಷ್ಠೆ ಮಾಡುವೆನು.
- 1 Samuel 16:1 1 ಸಮುವೇಲನು 16:1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.
- Joshua 3:11 ಯೆಹೋಶುವ 3:11ಇಗೋ, ಸಮಸ್ತ ಭೂಮಿಗೆ ಕರ್ತನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದೆ ಯೊರ್ದನನ್ನು ದಾಟಿಹೋಗುವದು.
- Deuteronomy 10:8 ಧರ್ಮೋಪದೇಶಕಾಂಡ 10:8ಆ ಕಾಲದಲ್ಲಿ ಕರ್ತನು ಲೇವಿಗೋತ್ರವನ್ನು ಕರ್ತನ ಒಡಂಬಡಿಕೆಯ ಮಂಜೂಷವನ್ನು ಹೊರು ವದಕ್ಕೂ ಕರ್ತನ ಮುಂದೆ ನಿಂತುಕೊಂಡು ಆತನಿಗೆ ಸೇವೆಮಾಡಿ ಆತನ ಹೆಸರಿನಲ್ಲಿ ಆಶೀರ್ವದಿಸುವ ದಕ್ಕೂ ಈ ದಿನದ ವರೆಗೂ ಪ್ರತ್ಯೇಕಿಸಿದನು.