Zechariah · chapter 4 · verse 6
Zechariah 4:6 in Kannada
ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
Naanu--nanna odeyane, illa andenu. Aaga avanu uttarakottu nanage heliddenandare--jerubbaabelanige kartana vaakyavu ide--bala dindalla, shaktiyindalla, nanna aatmadindale endu sainyagala kartanu heluttaane.
Zechariah 4:6 in English
- King James Version (KJV)
- Then he answered and spake unto me, saying, This [is] the word of the LORD unto Zerubbabel, saying, Not by might, nor by power, but by my spirit, saith the LORD of hosts.
- World English Bible (WEB)
- Then he answered and spoke to me, saying, “This is the LORD’s word to Zerubbabel, saying, ‘Not by might, nor by power, but by my Spirit,’ says the LORD of Armies.
- American Standard Version (ASV)
- Then he answered and spake unto me, saying, This is the word of Jehovah unto Zerubbabel, saying, Not by might, nor by power, but by my Spirit, saith Jehovah of hosts.
- Bible in Basic English (BBE)
- This is the word of the Lord to Zerubbabel, saying, Not by force or by power, but by my spirit, says the Lord of armies.
- Darby Translation (DBY)
- And he answered and spoke unto me, saying, This is the word of Jehovah unto Zerubbabel, saying, Not by might, nor by power, but by my Spirit, saith Jehovah of hosts.
- Webster's Bible (WBS)
- Then he answered and spoke to me, saying, This [is] the word of the LORD to Zerubbabel, saying, Not by might, nor by power, but by my spirit, saith the LORD of hosts.
- Young's Literal Translation (YLT)
- And he answereth and speaketh unto me, saying: 'This [is] a word of Jehovah unto Zerubbabel, saying: Not by a force, nor by power, But — by My Spirit, said Jehovah of Hosts.
Read in context
- 4ಹೀಗೆ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ --ನನ್ನ ಒಡೆಯನೇ, ಇವೇನು ಅಂದೆನು.
- 5ಆಗ ನನ್ನ ಸಂಗಡ ಮಾತನಾಡಿದ ದೂತನು ಉತ್ತರ ಕೊಟ್ಟು ನನಗೆ--ಇವೇನೆಂದು ಅರಿಯುವದಿಲ್ಲವೋ ಅಂದನು.
- 6ನಾನು--ನನ್ನ ಒಡೆಯನೇ, ಇಲ್ಲ ಅಂದೆನು. ಆಗ ಅವನು ಉತ್ತರಕೊಟ್ಟು ನನಗೆ ಹೇಳಿದ್ದೇನಂದರೆ--ಜೆರುಬ್ಬಾಬೆಲನಿಗೆ ಕರ್ತನ ವಾಕ್ಯವು ಇದೇ--ಬಲ ದಿಂದಲ್ಲ, ಶಕ್ತಿಯಿಂದಲ್ಲ, ನನ್ನ ಆತ್ಮದಿಂದಲೇ ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- 7ಓ ಮಹಾ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬೈಲಾಗುವಿ; ಅದಕ್ಕೆ--ಕೃಪೆಯೇ, ಕೃಪೆಯೇ ಎಂದು ಅರ್ಭಟಗಳ ಸಂಗಡ ಮುಖ್ಯ ಕಲ್ಲನ್ನು ಅವನು ಹೊರಗೆ ತರುವನು.
- 8ಇದಲ್ಲದೆ ಕರ್ತನ ವಾಕ್ಯವು ನನಗೆ ಉಂಟಾಯಿತು. ಹೇಗಂದರೆ--
Cross references
- 2 Chronicles 32:7–8 2 ಪೂರ್ವಕಾಲವೃತ್ತಾಂತ 32:7–8ಬಲಗೊಳ್ಳಿರಿ; ಧೈರ್ಯ ವಾಗಿರ್ರಿ; ಅಶ್ಶೂರಿನ ಅರಸನ ನಿಮಿತ್ತವೂ ಅವನ ಸಂಗಡ ಕೂಡಿರುವ ಮಹಾಗುಂಪಿನ ನಿಮಿತ್ತವೂ ಭಯ ಪಡಬೇಡಿರಿ; ಹೆದರಬೇಡಿರಿ. ಯಾಕಂದರೆ ಅವನ ಸಂಗಡ ಇರುವವರಿಗಿಂತ ನಮ್ಮ ಸಂಗಡ ಅನೇಕರು ಇದ್ದಾರೆ. ಅವನ ಸಂಗಡ ಮಾಂಸದ ತೋಳು; ಆದರೆ ನಮ್ಮ ಸಂಗಡ ನಮಗೆ ಸಹಾಯ ಕೊಡುವದಕ್ಕೂ ನಮ್ಮ ಯುದ್ಧಗಳನ್ನು ನಡಿಸುವದಕ್ಕೂ ನಮ್ಮ ದೇವರಾದ ಕರ್ತನು ತಾನೇ ಇದ್ದಾನೆ ಎಂದು ಹೇಳಿದನು. ಆದ ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಆತುಕೊಂಡರು.
- 2 Corinthians 10:4–5 2 ಕೊರಿಂಥದವರಿಗೆ 10:4–5(ನಾವು ಉಪಯೋಗಿಸುವ ಯುದ್ಧಾಯುಧಗಳು ಶರೀರ ಸಂಬಂಧವಾದ ಆಯುಧ ಗಳಲ್ಲ; ಅವು ದೇವರ ಮೂಲಕ ಬಲವಾಗಿದ್ದು ಬಲ ವಾದ ಕೋಟೆಗಳನ್ನು ಕೆಡವಿಹಾಕುವಂಥವುಗಳಾಗಿವೆ). ನಾವು ಊಹೆಗಳನ್ನು ದೇವಜ್ಞಾನವನ್ನೂ ವಿರೋಧಿ ಸುವದಕ್ಕೆ ಏರಿಸಲ್ಪಟ್ಟಿರುವ ಉನ್ನತವಾದವುಗಳೆಲ್ಲವನ್ನೂ ಕೆಡವಿಹಾಕಿ ಎಲ್ಲಾ ಯೋಚನೆಗಳನ್ನು ಕ್ರಿಸ್ತನಿಗೆ ವಿಧೇಯವಾಗುವಂತೆ ಸೆರೆಹಿಡಿದು
- 1 Corinthians 2:4–5 1 ಕೊರಿಂಥದವರಿಗೆ 2:4–5ನನ್ನ ಬೋಧನೆಯಲ್ಲಿಯೂ ಪ್ರಸಂಗದಲ್ಲಿಯೂ ಮನವೊಲಿಸುವ ಮನುಷ್ಯಜ್ಞಾನ ವಾಕ್ಯಗಳನ್ನು ನಾನು ಪ್ರಯೋಗಿಸದೆ ಆತ್ಮನ ಬಲವನ್ನು ತೋರ್ಪಡಿಸುವ ವಾಕ್ಯಗಳನ್ನೇ ಪ್ರಯೋಗಿಸಿದೆನು. ಹೀಗೆ ನಿಮ್ಮ ನಂಬಿಕೆಯು ಮನುಷ್ಯಜ್ಞಾನವನ್ನು ಆಧಾರ ಮಾಡಿಕೊಂಡಿರದೆ ದೇವರ ಶಕ್ತಿಯನ್ನೇ ಆಧಾರ ಮಾಡಿಕೊಂಡಿರಬೇಕು.
- Psalm 33:16 ಕೀರ್ತನೆಗಳು 33:16ಯಾವ ಅರಸನೂ ಅಧಿಕವಾದ ಸೈನ್ಯದಿಂದ ರಕ್ಷಿಸಲ್ಪಡುವದಿಲ್ಲ. ಪರಾಕ್ರಮ ಶಾಲಿಯು ಅಧಿಕಶಕ್ತಿಯಿಂದ ಬಿಡಿಸಲ್ಪಡುವದಿಲ್ಲ.
- Isaiah 11:2–4 ಯೆಶಾಯ 11:2–4ಅವನ ಮೇಲೆ ಜ್ಞಾನ ವಿವೇಕ ದಾಯಕ ಆತ್ಮ, ಆಲೋಚನಾ ಪರಾಕ್ರಮದ ಆತ್ಮ,ತಿಳುವಳಿಕೆಯ ಆತ್ಮ ಕರ್ತನ ಭಯದ ಆತ್ಮ, ಅಂತೂ ಕರ್ತನ ಆತ್ಮನು ನೆಲೆಯಾಗುವನು; ಕರ್ತನ ಭಯ ದಲ್ಲಿ ಅವನಿಗೆ ಸೂಕ್ಷ್ಮ ತಿಳುವಳಿಕೆಯು ಉಂಟಾ ಗುವದು; ಅವನು ಕಣ್ಣಿಗೆ ಕಂಡಂತೆ ತೀರ್ಪುಮಾಡು ವದಿಲ್ಲ, ಇಲ್ಲವೆ ತನ್ನ ಕಿವಿಗಳ ಕೇಳ್ವಿಕೆಯ ಪ್ರಕಾರ ತೀರ್ಪುಮಾಡನು; ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
- Psalm 20:6–8 ಕೀರ್ತನೆಗಳು 20:6–8ಕರ್ತನು ತನ್ನ ಅಭಿಷಕ್ತನನ್ನು ರಕ್ಷಿಸುತ್ತಾ ನೆಂದೂ ತನ್ನ ಪರಿಶುದ್ಧ ಪರಲೋಕದೊಳಗಿಂದ ತನ್ನ ಬಲಗೈಯ ರಕ್ಷಣಕರವಾದ ಪರಾಕ್ರಮದಿಂದ ಅವನಿಗೆ ಉತ್ತರ ಕೊಡುವನೆಂದೂ ಈಗ ನಾನು ಬಲ್ಲೆನು. ಕೆಲವರು ರಥಗಳಲ್ಲಿಯೂ ಕೆಲವರು ಕುದುರೆಗಳ ಲ್ಲಿಯೂ ಭರವಸವಿಡುತ್ತಾರೆ; ಆದರೆ ನಾವು ನಮ್ಮ ದೇವರಾದ ಕರ್ತನ ಹೆಸರನ್ನು ಜ್ಞಾಪಕಮಾಡುತ್ತೇವೆ. ಅವರು ಬೊಗ್ಗಿ ಬೀಳುತ್ತಾರೆ; ಆದರೆ ನಾವು ಎದ್ದು ನಿಂತುಕೊಳ್ಳುತ್ತೇವೆ.ಕರ್ತನೇ, ರಕ್ಷಿಸು; ನಾವು ಕರೆ ಯುವಾಗ ಅರಸನು ನಮಗೆ ಉತ್ತರ ಕೊಡಲಿ.
- Psalm 33:20–21 ಕೀರ್ತನೆಗಳು 33:20–21ನಮ್ಮ ಪ್ರಾಣವು ಕರ್ತನಿಗಾಗಿ ಕಾದುಕೊಳ್ಳುತ್ತದೆ; ನಮ್ಮ ಸಹಾಯವೂ ಗುರಾಣಿಯೂ ಆತನೇ. ಆತನಲ್ಲಿ ನಮ್ಮ ಹೃದಯವು ಸಂತೋಷಿಸುತ್ತದೆ; ನಾವು ಆತನ ಪರಿಶುದ್ಧವಾದ ಹೆಸರಿನಲ್ಲಿ ಭರಸವಿಟ್ಟಿದ್ದೇವೆ.ನಾವು ನಿನ್ನನ್ನು ನಿರೀಕ್ಷಿಸುವ ಪ್ರಕಾರ ಓ ಕರ್ತನೇ, ನಿನ್ನ ಕೃಪೆಯು ನಮ್ಮ ಮೇಲೆ ಇರಲಿ.
- Hosea 1:7 ಹೋಶೇಯ 1:7ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
- Psalm 44:3–7 ಕೀರ್ತನೆಗಳು 44:3–7ಅವರು ತಮ್ಮ ಕತ್ತಿಯಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರನ್ನು ರಕ್ಷಿಸಲಿಲ್ಲ; ಆದರೆ ನಿನ್ನ ಬಲಗೈಯೂ ತೋಳೂ ನಿನ್ನ ಮುಖದ ಪ್ರಕಾಶವೂ ಇವುಗಳೇ ಅವರನ್ನು ರಕ್ಷಿಸಿದವು; ನಿನ್ನ ಒಲುಮೆ ಅವರಿಗಿತ್ತಲ್ಲಾ. ಓ ದೇವರೇ, ನೀನೇ ನನ್ನ ಅರಸನು; ಯಾಕೋಬ ನಿಗೆ ಬಿಡುಗಡೆಗಳನ್ನು ಆಜ್ಞಾಪಿಸು. ನಿನ್ನಿಂದ ನಮ್ಮ ವೈರಿಗಳನ್ನು ದೊಬ್ಬುವೆವು; ನಿನ್ನ ಹೆಸರಿನಲ್ಲಿ ನಮ್ಮ ಎದುರಾಳಿಗಳನ್ನು ತುಳಿಯುವೆವು. ನಾನು ನನ್ನ ಬಿಲ್ಲಿ ನಲ್ಲಿ ಭರವಸವಿಡುವದಿಲ್ಲ. ನನ್ನ ಕತ್ತಿಯು ನನ್ನನ್ನು ರಕ್ಷಿಸುವದಿಲ್ಲ. ನೀನು ನಮ್ಮ ವೈರಿಗಳಿಂದ ನಮ್ಮನ್ನು ರಕ್ಷಿಸಿದಿ; ನಮ್ಮನ್ನು ಹಗೆಮಾಡಿದವರನ್ನು ನಾಚಿಕೆ ಪಡಿಸಿದಿ.
- Haggai 2:2–5 ಹಗ್ಗಾಯ 2:2–5ಯೆಹೂದದ ಅಧಿಪತಿಯಾದ ಶೆಯಲ್ತೀ ಯೇಲನ ಮಗನಾದ ಜೆರುಬ್ಬಾಬೆಲನಿಗೂ ಪ್ರಧಾನ ಯಾಜಕನಾದ ಯೆಹೋಚಾದಾಕನ ಮಗನಾದ ಯೆಹೋಶುವನಿಗೂ ಜನರಲ್ಲಿ ಉಳಿದವರಿಗೂ ನೀನು ಹೇಳತಕ್ಕದ್ದೇನಂದರೆ-- ಈ ಆಲಯವನ್ನು ಅದರ ಪೂರ್ವದ ಮಹಿಮೆಯಲ್ಲಿ ನೋಡಿದವರೊಳಗೆ ಉಳಿದ ವರು ನಿಮ್ಮಲ್ಲಿ ಯಾರು? ಈಗ ಅದನ್ನು ಹೇಗೆ ನೋಡು ತ್ತೀರಿ? ಇದು ನಿಮ್ಮ ಕಣ್ಣುಗಳಿಗೆ ಅದರ ಹೋಲಿಕೆಯು ಏನೂ ಇಲ್ಲದ ಹಾಗೆ ತೋರು ತ್ತದಲ್ಲವೋ? ಆದಾಗ್ಯೂ ಈಗ ಕರ್ತನು ಹೇಳುತ್ತಾನೆ --ಜೆರುಬ್ಬಾಬೆಲನೇ, ಬಲವಾಗಿರು; ಪ್ರಧಾನ ಯಾಜಕ ನಾದ ಯೆಹೋಚಾದಾಕನ ಮಗನಾದ ಯೆಹೋ ಶುವನೇ, ಬಲವಾಗಿರು; ದೇಶದ ಜನರೆಲ್ಲರೇ, ಬಲ ವಾಗಿರ್ರಿ ಎಂದು ಕರ್ತನು ಹೇಳುತ್ತಾನೆ; ಕೆಲಸ ಮಾಡಿರಿ; ನಾನು ನಿಮ್ಮ ಸಂಗಡ ಇದ್ದೇನೆಂದು ಸೈನ್ಯ ಗಳ ಕರ್ತನು ಹೇಳುತ್ತಾನೆ. ನೀವು ಐಗುಪ್ತದೊಳ ಗಿಂದ ಹೊರಗೆ ಬಂದಾಗ ನಾನು ನಿಮ್ಮ ಸಂಗಡ ಒಡಂಬಡಿಕೆ ಮಾಡಿದ ವಾಕ್ಯದ ಪ್ರಕಾರ ನನ್ನ ಆತ್ಮವು ನಿಮ್ಮ ಮಧ್ಯದಲ್ಲಿ ನಿಲ್ಲುತ್ತದೆ; ನೀವು ಭಯಪಡ ಬೇಡಿರಿ.
- 2 Chronicles 14:11 2 ಪೂರ್ವಕಾಲವೃತ್ತಾಂತ 14:11ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.
- Ezekiel 37:11–14 ಯೆಹೆಜ್ಕೇಲನು 37:11–14ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ; ಇಗೋ, ನಮ್ಮ ಎಲುಬುಗಳು ಒಣಗಿಸಲ್ಪಟ್ಟಿವೆ ಮತ್ತು ನಮ್ಮ ನಿರೀಕ್ಷೆಯು ಕಳೆದುಹೋಗಿದೆ; ನಾವು ಶುದ್ಧವಾಗಿ ನಮ್ಮ ಭಾಗಗಳನ್ನು ಕತ್ತರಿಸಿಕೊಂಡಿದ್ದೇವೆ ಎಂದು ಅವರು ಹೇಳುವರು. ಆದದರಿಂದ ನೀನು ಪ್ರವಾದಿಸು ಮತ್ತು ಅವರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾ ಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. ಓ ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ನನ್ನ ಆತ್ಮ ವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಮೇಲೆ ನಾನೇ ಕರ್ತನು ಮಾತನಾಡಿ ನಡೆಸಿದ್ದೇನೆಂ ದು ನೀವು ತಿಳಿಯುವಿರಿ ಎಂದು ಕರ್ತನು ಹೇಳುತ್ತಾನೆ.