Zechariah · chapter 5 · verse 1
Zechariah 5:1 in Kannada
ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
Aaga naanu tirigikondu nanna kannu galannetti nodalu igo, haaruva surali.
Zechariah 5:1 in English
- King James Version (KJV)
- Then I turned, and lifted up mine eyes, and looked, and behold a flying roll.
- World English Bible (WEB)
- Then again I lifted up my eyes and saw, and behold, a flying scroll.
- American Standard Version (ASV)
- Then again I lifted up mine eyes, and saw, and, behold, a flying roll.
- Bible in Basic English (BBE)
- Then again lifting up my eyes I saw a roll in flight through the air.
- Darby Translation (DBY)
- And I lifted up mine eyes again, and saw, and behold, a flying roll.
- Webster's Bible (WBS)
- Then I turned, and lifted up my eyes, and looked, and behold a flying roll.
- Young's Literal Translation (YLT)
- And I turn back, and lift up mine eyes, and look, and lo, a flying roll.
Read in context
- 1ಆಗ ನಾನು ತಿರಿಗಿಕೊಂಡು ನನ್ನ ಕಣ್ಣು ಗಳನ್ನೆತ್ತಿ ನೋಡಲು ಇಗೋ, ಹಾರುವ ಸುರಳಿ.
- 2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
- 3ಆಗ ಅವನು ನನಗೆ ಹೇಳಿದ್ದೇನಂದರೆ--ದೇಶದ ಮೇಲೆಲ್ಲಾ ಹೊರಡುವ ಶಾಪವು ಇದೇ; ಕಳ್ಳತನ ಮಾಡುವವರೆಲ್ಲರು ಈ ದಿಕ್ಕಿನ ಪ್ರಕಾರ ತೆಗೆದುಹಾಕಲ್ಪಡುವರು; ಆಣೆ ಇಡುವವರೆಲ್ಲರು ಆ ಕಡೆ ಅದರ ಪ್ರಕಾರ ತೆಗೆದುಹಾಕಲ್ಪಡುವರು.
Cross references
- Zechariah 5:2 ಜೆಕರ್ಯ 5:2ಆಗ ಅವನು ನನಗೆ--ಏನು ನೋಡುತ್ತೀ ಅಂದಾಗ ನಾನು--ಹಾರುವ ಸುರಳಿಯನ್ನು ನೋಡು ತ್ತೇನೆ; ಅದರ ಉದ್ದವು ಇಪ್ಪತ್ತು ಮೊಳಗಳಾಗಿಯೂ ಅದರ ಅಗಲವು ಹತ್ತು ಮೊಳಗಳಾಗಿಯೂ ಇದೆ ಅಂದೆನು.
- Ezekiel 2:9–10 ಯೆಹೆಜ್ಕೇಲನು 2:9–10ನಾನು ನೋಡಿದಾಗ ಇಗೋ, ಅದರಲ್ಲಿ ಒಂದು ಪುಸ್ತಕದ ಸುರಳಿ ಇತ್ತು.ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ. ಆತನು ಅದನ್ನು ನನ್ನ ಮುಂದೆ ಹರಡಿದನು; ಅದರ ಒಳಗಡೆಯೂ ಹೊರಗಡೆಯೂ ಬರಹವು ಇತ್ತು. ಆ ಬರಹವೇನಂದರೆ--ಗೋಳಾಟವೂ ಮೂಲುಗುವಿಕೆಯೂ ಸಂಕಟಗಳೂ ಇವೆ ಎಂಬದೇ.
- Isaiah 8:1 ಯೆಶಾಯ 8:1ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
- Revelation 10:8–11 ಪ್ರಕಟನೆ 10:8–11ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತನಾಡಿ--ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ತೆರೆದಿದ್ದ ಆ ಚಿಕ್ಕ ಪುಸ್ತಕವನ್ನು ತೆಗೆದುಕೋ ಎಂದು ಹೇಳಿತು. ನಾನು ಆ ದೂತನ ಬಳಿಗೆ ಹೋಗಿ ಅವನಿಗೆ--ಆ ಚಿಕ್ಕ ಪುಸ್ತಕವನ್ನು ನನಗೆ ಕೊಡು ಎಂದು ಹೇಳಲು ಅವನು ನನಗೆ--ನೀನು ಇದನ್ನು ತೆಗೆದು ಕೊಂಡು ತಿಂದುಬಿಡು, ಇದು ನಿನ್ನ ಹೊಟ್ಟೆಯನ್ನು ಕಹಿಯಾಗುವಂತೆ ಮಾಡುವದು, ಆದರೆ ನಿನ್ನ ಬಾಯಲ್ಲಿ ಅದು ಜೇನಿನಂತೆ ಸಿಹಿಯಾಗಿರುವದು ಎಂದು ಹೇಳಿ ದನು ಆಗ ನಾನು ಆ ಚಿಕ್ಕ ಪುಸ್ತಕವನ್ನು ಆ ದೂತನ ಕೈಯಿಂದ ತೆಗೆದುಕೊಂಡು ತಿಂದುಬಿಟ್ಟೆನು. ಅದು ನನ್ನ ಬಾಯಲ್ಲಿ ಜೇನಿನಂತೆ ಸಿಹಿಯಾಗಿತ್ತು; ಅದನ್ನು ತಿಂದ ಕೂಡಲೆ ನನ್ನ ಹೊಟ್ಟೆಯು ಕಹಿ ಯಾಯಿತು.ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು. ಅವನು ನನಗೆ--ನೀನು ಅನೇಕ ಪ್ರಜೆ, ಜನಾಂಗ, ಭಾಷೆ ಮತ್ತು ರಾಜರುಗಳ ಮುಂದೆ ತಿರಿಗಿ ಪ್ರವಾದಿಸತಕ್ಕದ್ದು ಎಂದು ಹೇಳಿದನು.
- Revelation 5:1–14 ಪ್ರಕಟನೆ 5:1–14ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು. ಇದಲ್ಲದೆ ಬಲಿಷ್ಠನಾದ ಒಬ್ಬ ದೂತನು--ಈ ಪುಸ್ತಕವನ್ನು ತೆರೆಯುವದಕ್ಕೂ ಇದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯಾವನು ಯೋಗ್ಯನು ಎಂದು ಮಹಾಶಬ್ದದಿಂದ ಸಾರುವದನ್ನು ಕಂಡೆನು. ಆ ಪುಸ್ತಕವನ್ನು ತೆರೆಯುವದಕ್ಕಾದರೂ ಅದರೊಳಗೆ ನೋಡುವದಕ್ಕಾದರೂ ಪರಲೋಕದಲ್ಲಿಯಾಗಲಿ ಭೂಮಿಯಲ್ಲಿಯಾಗಲಿ ಭೂಮಿಯ ಕೆಳಗಾಗಲಿ ಯಾವನಿಗೂ ಶಕ್ತಿಯಿರಲಿಲ್ಲ. ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು. ಆಗ ಹಿರಿಯರಲ್ಲಿ ಒಬ್ಬನು ನನಗೆ--ಅಳಬೇಡ; ಅಗೋ, ಯೂದಾ ಗೋತ್ರದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಆ ಪುಸ್ತಕವನ್ನು ತೆರೆಯುವದಕ್ಕೂ ಅದರ ಏಳು ಮುದ್ರೆ ಗಳನ್ನು ಬಿಚ್ಚುವದಕ್ಕೂ ಜಯಹೊಂದಿದ್ದಾನೆ ಎಂದು ಹೇಳಿದನು. ನಾನು ನೋಡಲಾಗಿ ಇಗೋ, ಸಿಂಹಾಸ ನದ ಮತ್ತು ನಾಲ್ಕು ಜೀವಿಗಳ ಮಧ್ಯದಲ್ಲಿಯೂ ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ವಧಿಸಲ್ಪಟ್ಟಂತೆ ನಿಂತಿರುವದನ್ನು ಕಂಡೆನು; ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮ ಆತನು ಬಂದು ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯೊಳಗಿಂದ ಆ ಪುಸ್ತಕ ವನ್ನು ತೆಗೆದುಕೊಂಡನು. ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು. ಅವರು ಹೊಸ ಹಾಡನ್ನು ಹಾಡುತ್ತಾ--ನೀನು ಪುಸ್ತಕವನ್ನು ತೆಗೆದುಕೊಳ್ಳುವದಕ್ಕೂ ಅದರ ಮುದ್ರೆಗಳನ್ನು ಬಿಚ್ಚುವದಕ್ಕೂ ಯೋಗ್ಯ ನಾಗಿದ್ದೀ; ಯಾಕಂದರೆ ನೀನು ವಧಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳ ವರಿಂದ ನಮ್ಮನ್ನು ದೇವರಿಗಾಗಿ ವಿಮೋಚಿಸಿದ್ದೀ; ನಮ್ಮನ್ನು ನಮ್ಮ ದೇವರಿಗೊಸ್ಕರ ರಾಜರನ್ನಾಗಿಯೂ ಯಾಜಕರನ್ನಾ ಗಿಯೂ ಮಾಡಿದ್ದೀ; ನಾವು ಭೂಮಿಯ ಮೇಲೆ ಆಳುವೆವು ಎಂದು ಹೇಳಿದರು. ಇದಲ್ಲದೆ ನಾನು ನೋಡಲಾಗಿ ಸಿಂಹಾಸನದ, ಜೀವಿಗಳ ಮತ್ತು ಹಿರಿಯರ ಸುತ್ತಲು ಬಹುಮಂದಿ ದೂತರ ಶಬ್ದವನ್ನು ಕೇಳಿದೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿ ಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು. ಅವರು--ವಧಿತನಾದ ಕುರಿಮರಿಯು ಬಲ ಐಶ್ವರ್ಯ ಜ್ಞಾನ ಸಾಮರ್ಥ್ಯ ಮಾನಪ್ರಭಾವ ಸ್ತೋತ್ರಗಳನ್ನು ಹೊಂದುವದಕ್ಕೆ ಯೋಗ್ಯನು ಎಂದು ಮಹಾಶಬ್ದದಿಂದ ಹೇಳಿದರು. ಇದಲ್ಲದೆ ಆಕಾಶ ದಲ್ಲಿಯೂ ಭೂಮಿಯ ಮೇಲೆಯೂ ಭೂಮಿಯ ಕೆಳಗೂ ಸಮುದ್ರದಲ್ಲಿಯೂ ಅವುಗಳಲ್ಲಿರುವ ಎಲ್ಲಾ ಸೃಷ್ಟಿಗಳೂ--ಸಿಂಹಾಸನಾಸೀನನಾಗಿರುವಾತನಿಗೂ ಕುರಿಮರಿಯಾದಾತನಿಗೂ ಸ್ತೋತ್ರಮಾನ ಪ್ರಭಾವ ಬಲವು ಯುಗಯುಗಾಂತರಗಳಲ್ಲಿಯೂ ಇರಲಿ ಎಂದು ಹೇಳುವದನ್ನು ನಾನು ಕೇಳಿದೆನು.ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು. ಆಗ ನಾಲ್ಕು ಜೀವಿಗಳು--ಆಮೆನ್ ಅಂದವು; ಇಪ್ಪತ್ತನಾಲ್ಕು ಮಂದಿ ಹಿರಿಯರು ಅಡ್ಡ ಬಿದ್ದು ಯುಗಯುಗಾಂತರಗಳಲ್ಲಿ ಜೀವಿಸುವಾತನನ್ನು ಆರಾಧಿಸಿದರು.
- Jeremiah 36:27–32 ಯೆರೆಮೀಯ 36:27–32ಆಗ ಅರಸನು ಆ ಸುರಳಿಯನ್ನೂ ಬಾರೂಕನು ಯೆರೆವಿಾಯನ ಬಾಯಿಂದ ಬರೆದಿದ್ದ ವಾಕ್ಯಗಳನ್ನೂ ಸುಟ್ಟಮೇಲೆ ಕರ್ತನ ವಾಕ್ಯವು ಯೆರೆವಿಾಯನಿಗೆ ಉಂಟಾಗಿ ಹೇಳಿದ್ದೇನಂದರೆ-- ನೀನು ಮತ್ತೊಂದು ಸುರಳಿಯನ್ನು ತಕ್ಕೊಂಡು ಯೆಹೂದದ ಅರಸನಾದ ಯೆಹೋಯಾಕೀಮನು ಸುಟ್ಟ ಮೊದಲನೆಯ ಸುರಳಿ ಯಲ್ಲಿದ್ದ ಮುಂಚಿನ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಯೆಹೂದದ ಅರಸನಾದ ಯೆಹೋಯಾಕೀಮನಿಗೆ ನೀನು ಹೇಳತಕ್ಕದ್ದೇನಂದರೆ--ಕರ್ತನು ಹೀಗೆ ಹೇಳು ತ್ತಾನೆ--ಬಾಬೆಲಿನ ಅರಸನು ನಿಶ್ಚಯವಾಗಿ ಬಂದು ಈ ದೇಶವನ್ನು ನಾಶಮಾಡಿ ಮನುಷ್ಯರನ್ನೂ ಪ್ರಾಣ ಗಳನ್ನೂ ಅದರೊಳಗಿಂದ ಹಾಳು ಮಾಡುವದು ಖಂಡಿತ ಎಂದು ಇದರಲ್ಲಿ ಯಾಕೆ ಬರೆದಿದ್ದೀ ಎಂದು ಹೇಳಿ ನೀನು ಈ ಸುರಳಿಯನ್ನು ಸುಟ್ಟಿದ್ದೀ. ಆದದರಿಂದ ಯೆಹೂದದ ಅರಸನಾದ ಯೆಹೋಯಾಕೀಮನನ್ನು ಕುರಿತು ಕರ್ತನು ಹೇಳುವದೇನಂದರೆ--ದಾವೀದನ ಸಿಂಹಾಸನದಲ್ಲಿ ಕೂತುಕೊಳ್ಳುವವನು ಅವನಿಗೆ ಇರು ವದಿಲ್ಲ; ಅವನ ಹೆಣವು ಹಗಲಿನಲ್ಲಿ ಬಿಸಲಿಗೂ ರಾತ್ರಿಯಲ್ಲಿ ಹಿಮಕ್ಕೂ ಬಿಸಾಡಲ್ಪಡುವದು. ಅವ ನನ್ನೂ ಅವನ ಸಂತಾನವನ್ನೂ ಸೇವಕರನ್ನೂ ಅವರ ಅಕ್ರಮಕ್ಕಾಗಿ ದಂಡಿಸುವೆನು; ಅವರ ಮೇಲೆಯೂ ಯೆರೂಸಲೇಮಿನ ನಿವಾಸಿಗಳ ಮೇಲೆಯೂ ಯೆಹೂದದ ಮನುಷ್ಯರ ಮೇಲೆಯೂ ನಾನು ಅವರಿಗೆ ವಿರೋಧವಾಗಿ ಮಾತಾಡಿದಂಥ ಅವರು ಕಿವಿಗೊಡ ದಂಥ ಕೇಡನ್ನೆಲ್ಲಾ ಬರಮಾಡುವೆನು.ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು. ಆಗ ಯೆರೆವಿಾ ಯನು ಮತ್ತೊಂದು ಸುರಳಿಯನ್ನು ತಕ್ಕೊಂಡು ನೇರೀಯನ ಮಗನಾದ ಲೇಖಕನಾದ ಬಾರೂಕನಿಗೆ ಕೊಟ್ಟನು; ಇವನು ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಪುಸ್ತಕದ ವಾಕ್ಯಗಳನ್ನೆಲ್ಲಾ ಯೆರೆವಿಾಯನ ಬಾಯಿಂದ ಬಂದ ಹಾಗೆ ಬರೆದನು; ಇದಲ್ಲದೆ ಅವುಗಳ ಹಾಗಿರುವ ಅನೇಕ ವಾಕ್ಯಗಳು ಅವುಗಳ ಸಂಗಡ ಕೂಡಿಸಲ್ಪಟ್ಟವು.
- Revelation 10:2 ಪ್ರಕಟನೆ 10:2ತೆರೆದಿದ್ದ ಒಂದು ಚಿಕ್ಕ ಪುಸ್ತಕವು ಅವನ ಕೈಯಲ್ಲಿ ಇತ್ತು; ಅವನು ತನ್ನ ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು
- Jeremiah 36:1–6 ಯೆರೆಮೀಯ 36:1–6ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ಆದದ್ದೇನಂದರೆ--ಯೆರೆವಿಾಯ ನಿಗೆ ಕರ್ತನಿಂದ ಈ ವಾಕ್ಯ ಉಂಟಾಯಿತು, ಯಾವ ದಂದರೆ-- ಪುಸ್ತಕದ ಸುರಳಿಯನ್ನು ತಕ್ಕೊಂಡು ನಾನು ಇಸ್ರಾಯೇಲಿಗೂ ಯೆಹೂದಕ್ಕೂ ಎಲ್ಲಾ ಜನಾಂಗ ಗಳಿಗೂ ವಿರೋಧವಾಗಿ ನಿನ್ನ ಸಂಗಡ ಮಾತಾಡಿ ದಂದಿನಿಂದ ಯೋಷೀಯನ ದಿನಗಳು ಮೊದಲು ಗೊಂಡು ಈ ದಿನದ ವರೆಗೂ ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಅದರಲ್ಲಿ ಬರೆ. ಒಂದು ವೇಳೆ ಯೆಹೂ ದದ ಮನೆತನದವರು ನಾನು ಅವರಿಗೆ ಮಾಡುವದಕ್ಕೆ ನೆನಸುವ ಕೇಡನ್ನೆಲ್ಲಾ ಕೇಳಿ ನಾನು ಅವರ ಅಕ್ರಮವನ್ನೂ ಪಾಪವನ್ನೂ ಮನ್ನಿಸುವ ಹಾಗೆ ತಮ್ಮ ತಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ತಿರುಗಿಕೊಂಡಾರು ಅಂದನು. ಆಗ ಯೆರೆವಿಾಯನು ನೇರೀಯನ ಮಗನಾದ ಬಾರೂಕನನ್ನು ಕರೆದನು; ಬಾರೂಕನು ಯೆರೆವಿಾಯನ ಬಾಯಿಂದ ಕರ್ತನು ಅವನಿಗೆ ಹೇಳಿದ್ದ ಮಾತು ಗಳನ್ನೆಲ್ಲಾ ಕೇಳಿ ಪುಸ್ತಕದ ಸುರಳಿಯಲ್ಲಿ ಬರೆ ದನು. ಆಮೇಲೆ ಯೆರೆವಿಾಯನು ಬಾರೂಕನಿಗೆ ಆಜ್ಞಾಪಿ ಸಿದ್ದೇನಂದರೆ--ನಾನು ಸೆರೆಯಲ್ಲಿಡಲ್ಪಟ್ಟಿದ್ದೇನೆ, ಕರ್ತನ ಆಲಯಕ್ಕೆ ಹೋಗಲಾರೆನು. ಆದದರಿಂದ ನೀನು ಹೋಗಿ ನನ್ನ ಬಾಯಿಂದ ಕೇಳಿ ನೀನು ಬರೆದ ಸುರಳಿಯಲ್ಲಿ ಕರ್ತನ ಆಲಯದೊಳಗೆ ಉಪವಾಸದ ದಿವಸದಲ್ಲಿ ಕರ್ತನ ವಾಕ್ಯಗಳನ್ನು ಜನರಿಗೆ ಕೇಳುವಂತೆ ಓದಿ ಹೇಳು ಮತ್ತು ತಮ್ಮ ಪಟ್ಟಣಗಳಿಂದ ಬರುವ ಯೆಹೂದದವರೆಲ್ಲರೂ ಕೇಳುವಂತೆಯೂ ಅವುಗಳನ್ನು ಓದಿ ಹೇಳಬೇಕು.
- Jeremiah 36:20–24 ಯೆರೆಮೀಯ 36:20–24ಆಮೇಲೆ ಅವರು ಅರಸನ ಬಳಿಗೆ ಅಂಗಳಕ್ಕೆ ಹೋದರು; ಆದರೆ ಆ ಸುರಳಿಯನ್ನು ಲೇಖಕನಾದ ಎಲೀಷಾಮನ ಕೊಠಡಿಯಲ್ಲಿ ಇಟ್ಟುಬಿಟ್ಟರು; ಅರಸನಿಗೆ ಆ ವಾಕ್ಯಗಳನ್ನೆಲ್ಲಾ ಹೇಳಿದರು. ಆಗ ಅರಸನು ಆ ಸುರಳಿಯನ್ನು ತಕ್ಕೊಂಡು ಬರುವ ಹಾಗೆ ಯೆಹೂದಿಯನ್ನು ಕಳುಹಿಸಿದನು; ಅವನು ಅದನ್ನು ಲೇಖಕನಾದ ಎಲೀಷಾಮನ ಕೊಠಡಿಯೊಳಗಿಂದ ತೆಗೆದುಕೊಂಡನು; ಯೆಹೂದಿಯು ಅದನ್ನು ಅರಸನ ಮತ್ತು ಅವನ ಬಳಿಯಲ್ಲಿ ನಿಂತ ಎಲ್ಲಾ ಪ್ರಧಾನ ರಿಗೂ ಓದಿ ಹೇಳಿದನು. ಆಗ ಒಂಭತ್ತನೇ ತಿಂಗಳಲ್ಲಿ ಅರಸನು ಚಳಿಗಾಲದ ಮನೆಯಲ್ಲಿ ಕೂತುಕೊಂಡಿದ್ದನು; ಅವನ ಮುಂದೆ ಅಗ್ಗಿಷ್ಟಿಕೆಯಲ್ಲಿ ಬೆಂಕಿ ಉರಿಯುತ್ತಿತ್ತು. ಆಗ ಆದದ್ದೇನಂದರೆ--ಯೆಹೂದಿಯು ಮೂರು ನಾಲ್ಕು ಪುಟಗಳನ್ನು ಓದಿದ ಮೇಲೆ ಅದನ್ನು ಚೂರಿ ಯಿಂದ ಕೊಯ್ದು ಅಗ್ಗಿಷ್ಟಿಕೆಯಲ್ಲಿದ್ದ ಬೆಂಕಿಯೊಳಗೆ ಸುರಳಿಯನ್ನೆಲ್ಲಾ ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಸುಟ್ಟು ಹೋಗುವ ವರೆಗೂ ಹಾಕಿಬಿಟ್ಟನು. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.