Zechariah · chapter 6 · verse 5
Zechariah 6:5 in Kannada
ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
Dootanu nanage uttarakottu heliddenandare--ivu aakaashagala naalku aatmagalu; ivu samasta bhoomiya kartana munde nintallinda horatubandave.
Zechariah 6:5 in English
- King James Version (KJV)
- And the angel answered and said unto me, These [are] the four spirits of the heavens, which go forth from standing before the Lord of all the earth.
- World English Bible (WEB)
- The angel answered me, “These are the four winds of the sky, which go out from standing before the Lord of all the earth.
- American Standard Version (ASV)
- And the angel answered and said unto me, These are the four winds of heaven, which go forth from standing before the Lord of all the earth.
- Bible in Basic English (BBE)
- And the angel, answering, said to me, These go out to the four winds of heaven from their place before the Lord of all the earth.
- Darby Translation (DBY)
- And the angel answered and said unto me, These are the four spirits of the heavens, which go forth from standing before the Lord of all the earth.
- Webster's Bible (WBS)
- And the angel answered and said to me, These [are] the four spirits of the heavens, which go forth from standing before the Lord of all the earth.
- Young's Literal Translation (YLT)
- And the messenger answereth and saith unto me, 'These [are] four spirits of the heavens coming forth from presenting themselves before the Lord of the whole earth.
Read in context
- 3ಮೂರನೇ ರಥಕ್ಕೆ ಬಿಳಿ ಕುದುರೆಗಳು; ನಾಲ್ಕನೇ ರಥಕ್ಕೆ ಕಪಿಲ ವರ್ಣದ ಕುದುರೆಗಳು.
- 4ಆಗ ನಾನು ಉತ್ತರ ಕೊಟ್ಟು ನನ್ನ ಸಂಗಡ ಮಾತನಾಡಿದ ದೂತನಿಗೆ--ನನ್ನ ಒಡೆಯನೇ, ಇದೇನು ಅಂದೆನು.
- 5ದೂತನು ನನಗೆ ಉತ್ತರಕೊಟ್ಟು ಹೇಳಿದ್ದೇನಂದರೆ--ಇವು ಆಕಾಶಗಳ ನಾಲ್ಕು ಆತ್ಮಗಳು; ಇವು ಸಮಸ್ತ ಭೂಮಿಯ ಕರ್ತನ ಮುಂದೆ ನಿಂತಲ್ಲಿಂದ ಹೊರಟುಬಂದವೆ.
- 6ಆ ಕಪ್ಪು ಕುದುರೆಗಳು ಉತ್ತರ ದೇಶಕ್ಕೆ ಹೊರಡುತ್ತವೆ; ಬಿಳಿಯವುಗಳು ಇವುಗಳ ಹಿಂದೆ ಹೊರಡುತ್ತವೆ; ಚುಕ್ಕೆಗಳಿದ್ದವುಗಳು ದಕ್ಷಿಣ ದೇಶಕ್ಕೆ ಹೊರಡುತ್ತವೆ.
- 7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
Cross references
- Ezekiel 10:9–19 ಯೆಹೆಜ್ಕೇಲನು 10:9–19ನಾನು ನೋಡಿದಾಗ ಇಗೋ, ಒಬ್ಬೊಬ್ಬ ಕೆರೂ ಬಿಯನ ಬಳಿಯಲ್ಲಿ ಒಂದು ಚಕ್ರ, ಈ ಪ್ರಕಾರ ಕೆರೂಬಿಯರ ಬಳಿಯಲ್ಲಿ ನಾಲ್ಕು ಚಕ್ರಗಳಿದ್ದವು; ಆ ಚಕ್ರಗಳ ವರ್ಣವು ಪೀತರತ್ನದ ಹಾಗೆ ಇತ್ತು. ಅವುಗಳ ಆಕಾರವು ನಾಲ್ಕಕ್ಕೂ ಒಂದೇ ರೂಪ ವಿತ್ತು; ಚಕ್ರದಲ್ಲಿ ಚಕ್ರವು ಇದ್ದ ಹಾಗೆ ಇದ್ದವು. ಅವು ಹೋಗುತ್ತಿರುವಾಗ ಅವುಗಳು ನಾಲ್ಕು ಕಡೆಗಳಲ್ಲೂ ಹೋಗುತ್ತಿದ್ದವು. ಹೋಗುವಾಗ ತಿರುಗಿ ಕೊಳ್ಳಲಿಲ್ಲ. ಆದರೆ ಅವುಗಳ ತಲೆ ಯಾವ ಸ್ಥಳವನ್ನು ನೋಡುತ್ತಿತ್ತೋ ಅಲ್ಲಿಗೆ ಅದರ ಹಿಂದೆಯೇ ಹೋದವು, ಹೋಗುವಾಗ ತಿರುಗಲಿಲ್ಲ. ಅವುಗಳ ಪೂರ್ತಿ ದೇಹವು, ಬೆನ್ನುಗಳು, ಕೈಗಳು, ರೆಕ್ಕೆಗಳು, ಮತ್ತು ಚಕ್ರಗಳು, ಇವುಗಳಿಗೆ ಸುತ್ತಲೂ ಕಣ್ಣುಗಳು ಇದ್ದವು. ಅಲ್ಲಿ ನಾಲ್ಕೂ ಚಕ್ರಗಳ ಮೇಲೂ ಇದ್ದವು. ಚಕ್ರಗಳೋ ಅವುಗಳಿಗೆ ನಾನು ಕೇಳುವ ಹಾಗೆ ಓ ಚಕ್ರಗಳೇ ಎಂದು ಕೂಗಲ್ಪಟ್ಟಿತು. ಒಬ್ಬೊಬ್ಬ ನಿಗೆ ನಾಲ್ಕು ಮುಖಗಳಿದ್ದವು, ಮೊದಲನೆಯ ಮುಖವು ಕೆರೂಬಿಯನ ಮುಖ, ಎರಡನೆಯ ಮುಖವು ಮನು ಷ್ಯನ ಮುಖ ಮೂರನೆಯದು ಸಿಂಹದ ಮುಖ ಮತ್ತು ನಾಲ್ಕನೆಯದು ಹದ್ದಿನ ಮುಖಗಳಾಗಿದ್ದವು. ಆಗ ಕೆರೂಬಿಯರು ಮೇಲಕ್ಕೆತ್ತಲ್ಪಟ್ಟರು. ನಾನು ಕೆಬಾರ್ ನದಿಯ ಬಳಿಯಲ್ಲಿ ನೋಡಿದ ಜೀವಿಯು ಇದೇ. ಕೆರೂಬಿಯರು ಹೋದಾಗ, ಚಕ್ರಗಳು ಅವರ ಸಂಗಡ ಹೋದವು. ಕೆರೂಬಿಯರು ಭೂಮಿಯನ್ನು ಬಿಟ್ಟು ಮೇಲೇರುವಾಗ ತಮ್ಮ ರೆಕ್ಕೆಗಳನ್ನು ಚಾಚಿದಾಗ, ಅವರ ಚಕ್ರಗಳು ಪಕ್ಕಕ್ಕೆ ತಿರುಗಲಿಲ್ಲ. ಅವು ನಿಂತಾಗ ಇವೂ ನಿಂತವು. ಅವು ಎತ್ತಲ್ಪಟ್ಟಾಗ ಇವೂ ಅವುಗಳ ಸಂಗಡ ಎತ್ತಲ್ಪಟ್ಟವು; ಯಾಕಂದರೆ ಇವುಗಳಲ್ಲಿ ಆ ಜೀವಿಗಳ ಆತ್ಮವು ಇತ್ತು. ಆಗ ಕರ್ತನ ಮಹಿಮೆಯು ಆಲಯದ ಹೊಸ್ತಿಲನ್ನು ಬಿಟ್ಟು ಕೆರೂಬಿಯರ ಮೇಲೆ ನಿಂತಿತು. ಕೆರೂಬಿಯರು ತಮ್ಮ ರೆಕ್ಕೆಗಳನ್ನು ಎತ್ತಿ ಕೊಂಡು ನಾನು ನೋಡುವಾಗಲೇ ಭೂಮಿಯನ್ನು ಬಿಟ್ಟು ಮೇಲೆಕ್ಕೇರಿ ಹೋದರು. ಅವು ಹೊರಟಾಗ ಚಕ್ರಗಳೂ ಅವರ ಸಂಗಡ ಇದ್ದವು, ಅವರು ಕರ್ತನ ಆಲಯದ ಮೂಡಣ ಬಾಗಲಿನ ದ್ವಾರದ ಬಳಿಯಲ್ಲಿ ನಿಂತಿದ್ದರು. ಮತ್ತು ಇಸ್ರಾಯೇಲಿನ ದೇವರ ಮಹಿ ಮೆಯು ಅವರ ಮೇಲೆ ಇತ್ತು.
- Hebrews 1:14 ಇಬ್ರಿಯರಿಗೆ 1:14ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿ ಸಲ್ಪಟ್ಟ ಊಳಿಗದ ಆತ್ಮಗಳಲ್ಲವೋ?
- Hebrews 1:7 ಇಬ್ರಿಯರಿಗೆ 1:7ದೂತರ ವಿಷಯ ದಲ್ಲಿ ಆತನು ಹೇಳುವದೇನಂದರೆ--ದೇವರು ತನ್ನ ದೂತರನ್ನು ಆತ್ಮಗಳಾಗಿಯೂ ತನ್ನ ಸೇವಕರನ್ನು ಅಗ್ನಿಜ್ವಾಲೆಯನ್ನಾಗಿಯೂ ಮಾಡುತ್ತಾನೆ ಎಂಬದು.
- Ezekiel 37:9 ಯೆಹೆಜ್ಕೇಲನು 37:9ಆಮೇಲೆ ಆತನು ನನಗೆ ಹೇಳಿದ್ದೇನಂದರೆ--ಪ್ರವಾ ದಿಸು, ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯ ಪುತ್ರನೇ, ಆ ಉಸಿರಿಗೆ ಹೇಳು--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತ ಶರೀರಗಳು ಬದುಕುವಂತೆ ಅದರ ಮೇಲೆ ಸುಳಿ,
- Revelation 7:1 ಪ್ರಕಟನೆ 7:1ಇವುಗಳಾದ ಮೇಲೆ ನಾಲ್ಕು ಮಂದಿ ದೂತರು ಭೂಮಿಯ ನಾಲ್ಕು ಮೂಲೆ ಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿ ಗಳನ್ನು ಹಿಡಿದಿರುವದನ್ನು ನಾನು ಕಂಡೆನು.
- Psalm 104:3–4 ಕೀರ್ತನೆಗಳು 104:3–4ಆತನು ನೀರುಗಳಲ್ಲಿ ತನ್ನ ಉಪ್ಪರಿಗೆಗಳ ತೊಲೆಗಳನ್ನು ಇರಿಸುತ್ತಾನೆ; ಮೋಡಗಳನ್ನು ತನ್ನ ರಥವಾಗಿ ಮಾಡು ತ್ತಾನೆ. ಗಾಳಿಯ ರೆಕ್ಕೆಗಳ ಮೇಲೆ ನಡೆದು ಹೋಗು ತ್ತಾನೆ. ಆತನು ತನ್ನ ದೂತರನ್ನು ಆತ್ಮಗಳನ್ನಾಗಿಯೂ ಉರಿಯುವ ಬೆಂಕಿಯನ್ನು ತನ್ನ ಸೇವಕರನ್ನಾಗಿಯೂ ಮಾಡುತ್ತಾನೆ.
- 2 Chronicles 18:18–19 2 ಪೂರ್ವಕಾಲವೃತ್ತಾಂತ 18:18–19ಅದಕ್ಕೆ ವಿಾಕಾಯೆಹುವು ಹೇಳಿದ್ದೇನಂದರೆ--ಕರ್ತನ ವಾಕ್ಯ ವನ್ನು ಕೇಳು. ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರು ವದನ್ನೂ ನಾನು ಕಂಡೆನು. ಆಗ ಕರ್ತನು--ಇಸ್ರಾ ಯೇಲಿನ ಅರಸನಾದ ಅಹಾಬನು ಹೋಗಿ ರಾಮೋತ್ ಗಿಲ್ಯಾದಿನಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
- Daniel 7:10 ದಾನಿಯೇಲನು 7:10ಆತನ ಸನ್ನಿಧಾನದಿಂದ ಅಗ್ನಿಪ್ರವಾಹವು ಹೊರಟು ಬಂದಿತು; ಸಹಸ್ರ ಸಹಸ್ರ ವಾಗಿ ಆತನಿಗೆ ಸೇವೆಮಾಡಿದರು. ಲಕ್ಷೋಪಲಕ್ಷ ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ಕೂತು ಕೊಂಡರು. ಮತ್ತು ಪುಸ್ತಕಗಳು ತೆರೆಯಲ್ಪಟ್ಟವು.
- 1 Kings 22:19 1 ಅರಸುಗಳು 22:19ವಿಾಕಾಯೆಹುವು--ಆದದರಿಂದ ಕರ್ತನ ವಾಕ್ಯವನ್ನು ಕೇಳು--ಕರ್ತನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡಿರುವದನ್ನೂ ಆಕಾಶದ ಸಮಸ್ತ ಸೈನ್ಯವು ಆತನ ಬಲಪಾರ್ಶ್ವದಲ್ಲಿಯೂ ಎಡಪಾರ್ಶ್ವದಲ್ಲಿಯೂ ನಿಂತಿರುವದನ್ನೂ ನೋಡಿದೆನು ಅಂದನು.
- Zechariah 1:10–11 ಜೆಕರ್ಯ 1:10–11ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
- Matthew 24:31 ಮತ್ತಾಯನು 24:31ತರುವಾಯ ಆತನು ತನ್ನ ದೂತರನ್ನು ತುತೂರಿಯ ಮಹಾಶಬ್ದದೊಂದಿಗೆ ಕಳುಹಿಸುವನು; ಆಗ ಅವರು ಆತನಿಂದ ಆಯಲ್ಪಟ್ಟವರನ್ನು ನಾಲ್ಕು ದಿಕ್ಕುಗಳಿಂದ ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಒಟ್ಟುಗೂಡಿಸುವರು.
- Ezekiel 1:5–28 ಯೆಹೆಜ್ಕೇಲನು 1:5–28ಅದರ ಮಧ್ಯದೊಳಗಿಂದ ನಾಲ್ಕು ಜೀವಿಗಳ ರೂಪವು ಹೊರ ಟಿತು. ಅವುಗಳ ಆಕಾರವೇನಂದರೆ--ಅವುಗಳಿಗೆ ಮನುಷ್ಯನ ರೂಪವಿತ್ತು. ಪ್ರತಿಯೊಂದಕ್ಕೂ ನಾಲ್ಕು ಮುಖಗಳು ನಾಲ್ಕು ರೆಕ್ಕೆಗಳು ಇದ್ದವು. ಅವುಗಳ ಕಾಲುಗಳು ನೆಟ್ಟಗಿದ್ದವು; ಅವುಗಳ ಅಂಗಾಲು ಕರುವಿನ ಪಾದದ ಹಾಗಿದ್ದು ಹಿತ್ತಾಳೆಗೆ ಮೆರುಗು ಕೊಟ್ಟ ಬಣ್ಣದ ಹಾಗೆ ಅವು ಥಳಥಳಿಸುತ್ತಿದ್ದವು. ಅವುಗಳಿಗೆ ರೆಕ್ಕೆಗಳ ಕೆಳಗೆ ಅವುಗಳ ನಾಲ್ಕು ಪಕ್ಕೆಗಳ ಮೇಲೆ ಮನುಷ್ಯನ ಕೈಗಳು ಇದ್ದವು; ಮತ್ತು ಆ ನಾಲ್ಕಕ್ಕೂ ಮುಖಗಳು, ರೆಕ್ಕೆಗಳು ಇದ್ದವು. ಅವುಗಳ ರೆಕ್ಕೆಗಳು ಒಂದಕ್ಕೊಂದು ಜೋಡಿಸಲ್ಪಟ್ಟು ಅವು ಹೋಗುವಾಗ ತಿರುಗಿಕೊಳ್ಳದೆ ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು. ಅವು ಗಳ ಮುಖಗಳ ರೂಪದ ಪ್ರಕಾರ ಅವು ನಾಲ್ಕು ಜೀವಿಗಳು ಮನುಷ್ಯನ ರೂಪದ ಮುಖವನ್ನು ಹೊಂದಿದ್ದವು; ಬಲಗಡೆಯಲ್ಲಿ ಸಿಂಹದ ಮುಖವೂ ಎಡಗಡೆ ಯಲ್ಲಿ ಎತ್ತಿನ ಮುಖವೂ ಆ ನಾಲ್ಕಕ್ಕೆ ಹದ್ದಿನ ಮುಖವೂ ಇತ್ತು. ಅವುಗಳ ಮುಖಗಳು ಹೀಗಿದ್ದವು; ಅವುಗಳ ರೆಕ್ಕೆಗಳು ಮೇಲಕ್ಕೆ ಚಾಚಲ್ಪಟ್ಟು ಪ್ರತಿಯೊಂದಕ್ಕೂ ಎರಡು ರೆಕ್ಕೆಗಳಿದ್ದು ಒಂದಕ್ಕೊಂದು ಅಂಟಿಕೊಂಡಿದ್ದವು; ಮಿಕ್ಕ ಎರಡು ಅವುಗಳ ದೇಹವನ್ನು ಮುಚ್ಚಿಕೊಂಡಿದ್ದವು. ಅವು ಪ್ರತಿಯೊಂದು ನೆಟ್ಟಗೆ ಮುಂದಕ್ಕೆ ಹೋದವು; ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಹೋದವು; ಹೋಗುವಾಗ ಅವು ತಿರುಗಿಕೊಳ್ಳಲಿಲ್ಲ. ಅವುಗಳ ರೂಪವು ಜೀವಿಸುವ ಪ್ರಾಣಿಗಳ ಹಾಗಿದ್ದು ಅವುಗಳ ಆಕಾರವು ಉರಿಯುವ ಬೆಂಕಿಯ ಕೆಂಡ ಗಳಂತೆಯೂ ದೀಪಗಳ ಹಾಗೆಯೂ ಇದ್ದು ಅದು ಜೀವಿಗಳ ಮಧ್ಯದಲ್ಲಿ ಮೇಲೆಯೂ ಕೆಳಗೂ ಹೋಗು ತ್ತಿತ್ತು. ಆ ಬೆಂಕಿಯು ಪ್ರಕಾಶಮಾನವಾಗಿತ್ತು. ಆ ಬೆಂಕಿಯೊಳಗಿಂದ ಮಿಂಚುಗಳು ಹೊರಡುತ್ತಿದ್ದವು. ಆ ಜೀವಿಗಳು ಮಿಂಚಿನ ಹಾಗೆ ಓಡುತ್ತಾ ತಿರುಗಾ ಡುತ್ತಾ ಇದ್ದವು. ಆಗ ನಾನು ಆ ಜೀವಿಗಳನ್ನು ನೋಡಲಾಗಿ ಇಗೋ, ಜೀವಿಗಳಿಂದ ಭೂಮಿಯ ಮೇಲೆ ಒಂದು ಚಕ್ರವು ನಾಲ್ಕು ಮುಖಗಳುಳ್ಳದ್ದಾಗಿ ರುವದನ್ನು ನೋಡಿದೆನು. ಆ ಚಕ್ರಗಳ ಆಕಾರವೂ ಅವುಗಳ ಕೆಲಸವೂ ಪೀತರತ್ನ ವರ್ಣದ ಹಾಗಿದೆ. ಆ ನಾಲ್ಕಕ್ಕೆ ಒಂದೇ ರೂಪವಿದ್ದು ಅವುಗಳ ಆಕಾರವೂ ಅವುಗಳ ಕೆಲಸವೂ ಚಕ್ರದ ಮಧ್ಯದೊಳಗೆ ಚಕ್ರವು ಇದ್ದ ಹಾಗಿತ್ತು. ಅವು ಹೋಗುವಾಗ ತಮ್ಮ ನಾಲ್ಕು ಪಕ್ಕೆಗಳ ಮೇಲೆ ಹೋದವು, ಅವು ಹೋಗುವಾಗ ಹಿಂತಿರುಗಲಿಲ್ಲ. ಅವುಗಳ ಚಕ್ರಗಳು ಎತ್ತರವಾ ಗಿಯೂ ಭಯಂಕರ ವಾಗಿಯೂ ಇದ್ದವು; ಆ ನಾಲ್ಕು ಚಕ್ರಗಳ ಸುತ್ತಲೂ ಕಣ್ಣುಗಳಿದ್ದವು. ಆ ಜೀವಿಗಳು ಹೋಗುವಾಗ ಆ ಚಕ್ರಗಳು ಅವುಗಳ ಬಳಿಯಲ್ಲೇ ಹೋದವು; ಆ ಜೀವಿಗಳು ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಮೇಲಕ್ಕೆ ಎತ್ತಲ್ಪಟ್ಟವು. ಆತ್ಮನು ಎಲ್ಲಿಗೆ ಹೋಗುವದಕ್ಕಿದ್ದನೋ ಅಲ್ಲಿಗೆ ಅವುಗಳು ಹೋದವು; ಆ ಸ್ಥಳಕ್ಕೆ ಅವುಗಳ ಆತ್ಮವು ಹೋಗಬೇಕೆಂದಿತ್ತು; ಚಕ್ರಗಳು ಸಹ ಅವುಗಳಿಗೆದು ರಾಗಿ ಮೇಲಕ್ಕೆ ಎತ್ತಲ್ಪ ಟ್ಟವು; ಚಕ್ರಗಳಲ್ಲಿ ಆ ಜೀವಿಯ ಆತ್ಮವು ಇತ್ತು. ಅವುಗಳು ಹೋಗುವಾಗ ಇವುಗಳೂ ಹೋದವು; ಅವುಗಳು ನಿಲ್ಲುವಾಗ ಇವುಗಳೂ ನಿಂತವು; ಭೂಮಿಯಿಂದ ಮೇಲಕ್ಕೆ ಎತ್ತಲ್ಪಡುವಾಗ ಚಕ್ರಗಳು ಅವುಗಳ ಸಂಗಡ ಎತ್ತಲ್ಪಟ್ಟವು; ಆ ಜೀವಿಯ ಆತ್ಮನು ಆ ಚಕ್ರಗಳಲ್ಲಿ ಇತ್ತು. ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು). ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು. ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು. ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು. ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು. ಆತನ ನಡುವು ಕಾಣಿಸುವಂತೆ ಮೇಲೆಯೂ ಒಳಗೂ ಸುತ್ತಲೂ ಬೆಂಕಿಯಂತೆ ಇರುವ ಸುಂದರವಾದ ಒಂದು ಬಣ್ಣದ ರೂಪವು ಇರುವದನ್ನು ನಾನು ನೋಡಿದೆನು; ಆತನ ನಡುವು ಕಾಣಿಸುವಂತೆ ಕೆಳಗೆ ಬೆಂಕಿಯ ಹಾಗೆ ಅದರ ಸುತ್ತಲೂ ಪ್ರಕಾಶವಿರುವದನ್ನು ನೋಡಿದೆನು.ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು. ಮಳೆ ಬೀಳುವ ದಿನದಲ್ಲಿ ಮೇಘ ದೊಳಗೆ ಬಿಲ್ಲು ಹೇಗೆ ಕಾಣಿಸಲ್ಪಡುವದೋ ಹಾಗೆಯೇ ಅದರ ಸುತ್ತ ಆ ಪ್ರಕಾಶವು ಕಾಣಿಸಿತು. ಇದೇ ಕರ್ತನ ಮಹಿಮೆಯ ರೂಪದ ದರ್ಶನವಾಗಿತ್ತು. ಅದನ್ನು ನಾನು ನೋಡಿದಾಗ ನನ್ನ ಮುಖವನ್ನು ಕೆಳಗೆಮಾಡಿ ಬಿದ್ದೆನು. ಆಗ ಮಾತನಾಡುವ ಒಬ್ಬನ ಸ್ವರವನ್ನು ಕೇಳಿದೆನು.