Zechariah · chapter 7 · verse 13
Zechariah 7:13 in Kannada
ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Aaga aadadde nandare--avanu koogalu avaru kelade idda prakaara avaru koogalu naanu kelade iddenendu sainyagala kartanu heluttaane.idallade avaru ariyada ellaa janaangagalolage avarannu suntara gaaliyinda chadarisibittenu. Heege avara hinde deshavu naashavaayitu; haaduhoguvavanoo tirugikolluvavanoo illade hodaru. Ramyavaada deshavannu haalaagi maadidaru.
Zechariah 7:13 in English
- King James Version (KJV)
- Therefore it is come to pass, [that] as he cried, and they would not hear; so they cried, and I would not hear, saith the LORD of hosts:
- World English Bible (WEB)
- It has come to pass that, as he called and they refused to listen, so they will call and I will not listen,” said the LORD of Armies;
- American Standard Version (ASV)
- And it is come to pass that, as he cried, and they would not hear, so they shall cry, and I will not hear, said Jehovah of hosts;
- Bible in Basic English (BBE)
- And it came about that as they would not give ear to his voice, so I would not give ear to their voice, says the Lord of armies:
- Darby Translation (DBY)
- And it came to pass, like as he called, and they would not hear, so they called, and I would not hear, saith Jehovah of hosts;
- Webster's Bible (WBS)
- Therefore it is come to pass, [that] as he cried, and they would not hear; so they cried, and I would not hear, saith the LORD of hosts:
- Young's Literal Translation (YLT)
- And it cometh to pass, as He called, And they have not hearkened, So do they call, and I do not hearken, Said Jehovah of Hosts.
Read in context
- 11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- 12ಹೌದು, ಅವರು ನ್ಯಾಯಪ್ರಮಾಣ ವನ್ನೂ ಸೈನ್ಯಗಳ ಕರ್ತನು ತನ್ನ ಆತ್ಮದ ಮುಖಾಂತರ ಪೂರ್ವದ ಪ್ರವಾದಿಗಳ ಕೈಯಿಂದ ಕಳುಹಿಸಿದ ವಾಕ್ಯ ಗಳನ್ನೂ ಕೇಳದ ಹಾಗೆ ತಮ್ಮ ಹೃದಯಗಳನ್ನು ವಜ್ರದ ಕಲ್ಲಿನಂತೆ ಮಾಡಿಕೊಂಡರು. ಆದದರಿಂದ ಸೈನ್ಯಗಳ ಕರ್ತನಿಂದ ಮಹಾರೋಷವು ಬಂತು.
- 13ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
- 14ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
Cross references
- Proverbs 1:24–28 ಜ್ಞಾನೋಕ್ತಿಗಳು 1:24–28ನಾನು ಕರೆದಾಗ ನೀವು ತಿರಸ್ಕರಿಸಿದ್ದಕ್ಕಾಗಿಯೂ ನಾನು ನನ್ನ ಕೈಚಾಚಿದಾಗ ಯಾವ ಮನುಷ್ಯನು ಗಮನಿಸದೆ ಇದ್ದದ್ದಕ್ಕಾಗಿಯೂ ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ ನಿಮ್ಮ ಆಪತ್ತಿನಲ್ಲಿ ನಿಮಗೆ ಹೆದರಿಕೆ ಬರುವಾಗ ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು. ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Jeremiah 14:12 ಯೆರೆಮೀಯ 14:12ಅವರು ಉಪವಾಸ ಮಾಡಿದಾಗ್ಯೂ ನಾನು ಅವರ ಮೊರೆಯನ್ನು ಕೇಳುವದಿಲ್ಲ; ಅವರು ದಹನಬಲಿಗಳನ್ನೂ ಕಾಣಿಕೆಗಳನ್ನೂ ಅರ್ಪಿಸಿದಾಗ್ಯೂ ನಾನು ಅವರನ್ನು ಅಂಗೀಕರಿಸುವದಿಲ್ಲ; ಆದರೆ ನಾನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ ಎಂದು ಹೇಳಿದನು.
- Jeremiah 11:11 ಯೆರೆಮೀಯ 11:11ಆದದರಿಂದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಅವರು ತಪ್ಪಿಸಿಕೊಳ್ಳ ಲಾರದ ಕೇಡನ್ನು ಅವರ ಮೇಲೆ ತರುವೆನು; ಅವರು ನನ್ನನ್ನು ಕೂಗಿದರೂ ನಾನು ಅದನ್ನು ಕೇಳುವದಿಲ್ಲ,
- Micah 3:4 ಮೀಕ 3:4ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
- Psalm 81:8–12 ಕೀರ್ತನೆಗಳು 81:8–12ಓ ನನ್ನ ಜನರೇ, ಕೇಳಿರಿ; ಓ ಇಸ್ರಾಯೇಲೇ, ನೀನು ನನ್ನನ್ನು ಕೇಳಿದರೆ ನಾನು ನಿನಗೆ ಸಾಕ್ಷಿ ಕೊಡು ವೆನು. ನಿನ್ನಲ್ಲಿ ಅನ್ಯದೇವರು ಇರಬಾರದು; ಪರ ದೇವರಿಗೆ ಅಡ್ಡಬೀಳಬಾರದು. ಐಗುಪ್ತದೇಶದಿಂದ ನಿನ್ನನ್ನು ಹೊರಗೆ ತಂದ ನಿನ್ನ ದೇವರಾದ ಕರ್ತನು ನಾನೇ; ನಿನ್ನ ಬಾಯನ್ನು ಅಗಲವಾಗಿ ತೆರೆ; ಆಗ ನಾನು ಅದನ್ನು ತುಂಬಿಸುವೆನು. ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ. ಆದದರಿಂದ ಅವರ ಹೃದಯದ ದುರಾಶೆಗೆ ಅವರನ್ನು ನಾನು ಒಪ್ಪಿಸಿದೆನು; ಅವರು ತಮ್ಮ ಆಲೋಚನೆಗಳಲ್ಲಿ ನಡೆದುಕೊಂಡರು.
- James 4:3 ಯಾಕೋಬನು 4:3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.
- Luke 19:42–44 ಲೂಕನು 19:42–44ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ. ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು. ಇದಲ್ಲದೆ ಅವರು ನಿನ್ನನ್ನೂ ನಿನ್ನೊಳ ಗಿರುವ ನಿನ್ನ ಮಕ್ಕಳನ್ನೂ ನೆಲಸಮ ಮಾಡುವರು; ಮತ್ತು ನಿನ್ನಲ್ಲಿ ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಇರದಂತೆ ಮಾಡುವರು; ಯಾಕಂದರೆ ನಿನ್ನನ್ನು ಸಂಧಿಸಿದ ಸಮಯವನ್ನು ನೀನು ತಿಳುಕೊಳ್ಳಲಿಲ್ಲ ಅಂದನು.
- Proverbs 28:9 ಜ್ಞಾನೋಕ್ತಿಗಳು 28:9ನ್ಯಾಯಪ್ರಮಾಣವನ್ನು ಕೇಳದೆ ತನ್ನ ಕಿವಿಯನ್ನು ತಿರುಗಿಸಿಕೊಳ್ಳುವವನ ಪ್ರಾರ್ಥನೆಯು ಅಸಹ್ಯ.
- Jeremiah 6:16–17 ಯೆರೆಮೀಯ 6:16–17ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು. ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- Matthew 25:11–12 ಮತ್ತಾಯನು 25:11–12ಇದಾದ ಮೇಲೆ ಆ ಬೇರೆ ಕನ್ಯೆಯರು ಸಹ ಬಂದು--ಕರ್ತನೇ, ಕರ್ತನೇ, ನಮಗೆ ಬಾಗಲನ್ನು ತೆರೆ ಅಂದರು. ಆದರೆ ಅವನು ಪ್ರತ್ಯುತ್ತರವಾಗಿ--ನಿಮ್ಮನ್ನು ಅರಿ ಯೆನು ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Ezekiel 14:3 ಯೆಹೆಜ್ಕೇಲನು 14:3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?