Zechariah · chapter 7 · verse 9
Zechariah 7:9 in Kannada
ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
Nijavaada nyaayavannu teerisiri; obbarigobbaru krupeyannoo kanikaravannoo torisiri;
Zechariah 7:9 in English
- King James Version (KJV)
- Thus speaketh the LORD of hosts, saying, Execute true judgment, and shew mercy and compassions every man to his brother:
- World English Bible (WEB)
- “Thus has the LORD of Armies spoken, saying, ‘Execute true judgment, and show kindness and compassion every man to his brother.
- American Standard Version (ASV)
- Thus hath Jehovah of hosts spoken, saying, Execute true judgment, and show kindness and compassion every man to his brother;
- Bible in Basic English (BBE)
- This is what the Lord of armies has said: Let your judging be upright and done in good faith, let every man have mercy and pity for his brother:
- Darby Translation (DBY)
- Thus speaketh Jehovah of hosts, saying, Execute true judgment, and shew loving-kindness and mercies one to another,
- Webster's Bible (WBS)
- Thus speaketh the LORD of hosts, saying, Execute true judgment, and show mercy and compassions every man to his brother:
- Young's Literal Translation (YLT)
- 'Thus spake Jehovah of Hosts, saying: True judgment judge ye, And kindness and mercy do one with another.
Read in context
- 7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
- 8ಇದಲ್ಲದೆ ಕರ್ತನ ವಾಕ್ಯವು ಜೆಕರ್ಯನಿಗೆ ಉಂಟಾಗಿ ಹೇಳಿದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಮಾತನಾಡಿ ಹೇಳುತ್ತಾನೆ--
- 9ನಿಜವಾದ ನ್ಯಾಯವನ್ನು ತೀರಿಸಿರಿ; ಒಬ್ಬರಿಗೊಬ್ಬರು ಕೃಪೆಯನ್ನೂ ಕನಿಕರವನ್ನೂ ತೋರಿಸಿರಿ;
- 10ವಿಧವೆಗೂ ದಿಕ್ಕಿಲ್ಲದವನಿಗೂ ಅನ್ಯ ನಿಗೂ ಬಡವನಿಗೂ ಬಲಾತ್ಕಾರ ಮಾಡಬೇಡಿರಿ; ಯಾರೂ ತನ್ನ ಹೃದಯದಲ್ಲಿ ತನ್ನ ಸಹೋದರನ ಮೇಲೆ ಕೆಟ್ಟದ್ದನ್ನು ಕಲ್ಪಿಸದೆ ಇರಲಿ ಎಂಬದು.
- 11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
Cross references
- Micah 6:8 ಮೀಕ 6:8ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Psalm 82:2–4 ಕೀರ್ತನೆಗಳು 82:2–4ಎಷ್ಟರ ವರೆಗೂ ಅನ್ಯಾಯವಾಗಿ ತೀರ್ಪುಮಾಡಿ ದುಷ್ಟ ರಿಗೆ ಮುಖದಾಕ್ಷಿಣ್ಯ ಮಾಡುವಿರಿ? ಸೆಲಾ. ದರಿದ್ರ ನನ್ನೂ ದಿಕ್ಕಿಲ್ಲದವನನ್ನೂ ಕಾಪಾಡಿ ದೀನನಿಗೂ ಬಡವ ನಿಗೂ ನೀತಿಯನ್ನು ಮಾಡಿರಿ. ದರಿದ್ರನನ್ನೂ ಬಡವ ನನ್ನೂ ದುಷ್ಟರ ಕೈಯಿಂದ ಬಿಡಿಸಿರಿ.
- Proverbs 21:3 ಜ್ಞಾನೋಕ್ತಿಗಳು 21:3ಯಜ್ಞಕ್ಕಿಂತ ನೀತಿನ್ಯಾಯಗಳನ್ನು ನಡಿಸುವದು ಕರ್ತ ನಿಗೆ ಎಷ್ಟೋ ಮೆಚ್ಚಿಕೆಯಾಗಿದೆ.
- Jeremiah 7:5 ಯೆರೆಮೀಯ 7:5ನೀವು ನಿಮ್ಮ ಮಾರ್ಗಗಳನ್ನೂ ನಿಮ್ಮ ಕ್ರಿಯೆಗಳನ್ನೂ ಪೂರ್ಣವಾಗಿ ನೆಟ್ಟಗೆ ಮಾಡಿ ಮನುಷ್ಯನಿಗೂ ಅವನ ನೆರೆಯವನಿಗೂ ಪೂರ್ಣವಾಗಿ ನ್ಯಾಯನಡಿಸಿ
- Luke 11:42 ಲೂಕನು 11:42ಆದರೆ ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಮರುಗಪತ್ರೆ ಸದಾಪು ಸಕಲ ವಿಧವಾದ ಸೊಪ್ಪುಗಳಲ್ಲಿ ದಶಮಭಾಗವನ್ನು ಕೊಟ್ಟು ನ್ಯಾಯತೀರ್ಪನ್ನೂ ದೇವರಪ್ರೀತಿಯನ್ನೂ ಲಕ್ಷಿಸದೆ ಹೋಗುತ್ತೀರಿ. ಇವುಗಳನ್ನು ತಪ್ಪದೆ ಮಾಡಿ ಬೇರೆಯವು ಗಳನ್ನು ಬಿಡದೆ ಮಾಡಬೇಕಾಗಿತ್ತು.
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- Deuteronomy 10:18–19 ಧರ್ಮೋಪದೇಶಕಾಂಡ 10:18–19ಆತನು ತಂದೆ ಇಲ್ಲದವರಿಗೂ ವಿಧವೆ ಯರಿಗೂ ನ್ಯಾಯತೀರಿಸುತ್ತಾನೆ; ಪರದೇಶಿಯನ್ನು ಪ್ರೀತಿಮಾಡಿ ಅನ್ನ ವಸ್ತ್ರ ಕೊಡುತ್ತಾನೆ. ಹೀಗಿರುವ ದರಿಂದ ನೀವು ಪರದೇಶಿಯನ್ನು ಪ್ರೀತಿಮಾಡಬೇಕು; ಯಾಕಂದರೆ ನೀವು ಐಗುಪ್ತದಲ್ಲಿ ಪರದೇಶಿಗಳಾಗಿದ್ದಿರಿ.
- James 2:13–17 ಯಾಕೋಬನು 2:13–17ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ. ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆ ಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವದೋ? ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಬಟ್ಟೆಯೂ ಆ ದಿನದ ಆಹಾರವೂ ಇಲ್ಲದಿರುವಾಗ ನಿಮ್ಮಲ್ಲಿ ಒಬ್ಬನು ಅವರಿಗೆ ದೇಹಕ್ಕೆ ಬೇಕಾದವುಗಳನ್ನು ಕೊಡದೆ--ಸಮಾಧಾನದಿಂದ ಹೋಗಿರಿ, ಬೆಂಕಿಕಾಯಿಸಿಕೊಳ್ಳಿರಿ, ಹೊಟ್ಟೆತುಂಬಿಸಿ ಕೊಳ್ಳಿರಿ ಎಂದು ಹೇಳಿದರೆ ಪ್ರಯೋಜನವೇನು? ಹಾಗೆಯೇ ಕ್ರಿಯೆಗಳಿಲ್ಲದಿದ್ದರೆ ನಂಬಿಕೆಯು ಒಂಟಿಯಾಗಿದ್ದು ಸತ್ತದ್ದಾಗಿದೆ.
- Leviticus 19:35–37 ಯಾಜಕಕಾಂಡ 19:35–37ನ್ಯಾಯವಿಚಾರಣೆ, ತೂಕ, ಅಳತೆ, ಪರಿಮಾಣ ಇವುಗಳಲ್ಲಿ ನೀವು ಅನ್ಯಾಯ ಮಾಡಬೇಡಿರಿ. ನ್ಯಾಯದತ್ರಾಸು, ನ್ಯಾಯದ ಕಲ್ಲುಗಳು, ನ್ಯಾಯದಎಫವು ಮತ್ತು ನ್ಯಾಯದಹೀನ್ ನಿಮಗಿರಬೇಕು. ಐಗುಪ್ತದೇಶದೊಳಗಿಂದ ನಿಮ್ಮನ್ನು ಹೊರಗೆ ತಂದ ನಿಮ್ಮ ದೇವರಾದ ಕರ್ತನು ನಾನೇ.ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು. ಆದದರಿಂದ ನನ್ನ ಎಲ್ಲಾ ನಿಯಮಗಳನ್ನೂ ನ್ಯಾಯ ಗಳನ್ನೂ ಕೈಕೊಂಡು ಅವುಗಳನ್ನು ಮಾಡಬೇಕು; ನಾನೇ ಕರ್ತನು ಎಂದು ಹೇಳಿದನು.
- Zechariah 7:7 ಜೆಕರ್ಯ 7:7ಯೆರೂಸಲೇಮೂ ಅದರ ಸುತ್ತಲಿನ ಪಟ್ಟಣಗಳೂ ನಿವಾಸಿಗಳುಳ್ಳ ವುಗಳಾಗಿಯೂ ಸುಖವಾಗಿಯೂ ದಕ್ಷಿಣವೂ ಬೈಲೂ ನಿವಾಸಿಗಳುಳ್ಳವುಗಳಾಗಿಯೂ ಇದ್ದಾಗ ಕರ್ತನು ಪೂರ್ವದ ಪ್ರವಾದಿಗಳ ಕೈಯಿಂದ ಕೂಗಿದ ಮಾತುಗಳು ಅವು ಅಲ್ಲವೊ? ಎಂಬದು.
- Isaiah 58:6–10 ಯೆಶಾಯ 58:6–10ನಾನು ಆದುಕೊಳ್ಳುವ ಉಪವಾಸವು ಕೇಡಿನ ಬಂಧನಗಳನ್ನು ಬಿಚ್ಚುವದೂ ಭಾರವಾದ ಹೊರೆಯನ್ನು ಬಿಚ್ಚುವದೂ ಹಿಂಸಿಸಲ್ಪಟ್ಟವರು ಬಿಡಿಸ ಲ್ಪಟ್ಟವರಾಗಿ ಹಾಕುವದೂ ಆಗಿದೆಯಲ್ಲವೋ? ನಿನ್ನ ರೊಟ್ಟಿಯನ್ನು ಹಸಿದವರಿಗೆ ಹಂಚುವದೂ ಅಲೆಯು ತ್ತಿರುವ ಬಡವರನ್ನು ನಿನ್ನ ಮನೆಗೆ ಬರಮಾಡಿ ಕೊಳ್ಳುವದೂ ಬೆತ್ತಲೆಯವರನ್ನು ಕಂಡಾಗೆಲ್ಲ ಅವರಿಗೆ ಹೊದಿಸುವದೂ ನಿನ್ನ ಸ್ವಂತ ಶರೀರದಂತಿರುವವ ನಿಗೆ ನಿನ್ನನ್ನು ಮರೆಮಾಡಿಕೊಳ್ಳದಿರುವದೂ ಇದೇ ಅಲ್ಲವೋ? ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- John 7:51 ಯೋಹಾನನು 7:51ಒಬ್ಬನನ್ನು ವಿಚಾರಿಸಿ ಅವನು ಮಾಡು ವದೇನೆಂದು ತಿಳಿದುಕೊಳ್ಳುವದಕ್ಕಿಂತ ಮುಂಚೆ ಅವ ನನ್ನು ನಮ್ಮ ನ್ಯಾಯಪ್ರಮಾಣವು ತೀರ್ಪು ಮಾಡುವ ದುಂಟೇ ಅಂದನು.